ಗದಗದಲ್ಲಿ ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರ! – Kannada News | Barbers Refuse to Serve Dalits; Government Opens Salon in Singatalur Village, Gadag
ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭImage Credit source: Google ಗದಗ, ಫೆಬ್ರವರಿ 28: ದಲಿತರಿಗೆ ಕ್ಷೌರ ಸೇವೆ ನೀಡಲು ನಿರಾಕರಿಸಿದ ಹಿನ್ನೆಲೆ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಸಿಂಗಟಾಲೂರ ಗ್ರಾಮದಲ್ಲಿ ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ ಮಾಡಲಾಗಿದೆ. ಸಾಮಾಜಿಕ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಆದಾಯ ಇಲಾಖೆ ಅಧಿಕಾರಿಗಳತ್ವದಲ್ಲಿ ಸಲೂನ್ ಶುರುವಾಗಿದ್ದು, ಗ್ರಾಮದಲ್ಲಿ ವರ್ಷಗಳಿಂದ ಮುಂದುವರಿದಿದ್ದ ಜಾತಿ ಆಧಾರಿತ ಭೇದಭಾವವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗ್ರಾಮದ ದೈವವಾದ ವೀರಭದ್ರೇಶ್ವರನ ಭಕ್ತರಾಗಿರುವ ಹಡಪದ ಕುಟುಂಬಗಳು ಪರಂಪರೆ…