ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, KPS ಶಾಲೆಗಳ ಶೀಘ್ರ ಆರಂಭ: ಸಚಿವ ಮಧು ಬಂಗಾರಪ್ಪ ಪ್ರಮುಖ ಘೋಷಣೆ – Kannada News | Karnataka Education Reforms: Free Textbooks, Shoes, 800 KPS Schools Planned
ಶಿವಮೊಗ್ಗ, ಆ.15: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಮೊದಲ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಶಾಲಾ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ ವಿತರಣೆ ಹಾಗೂ 800 ಕೆಪಿಎಸ್ (KPS) ಶಾಲೆಗಳ ಸ್ಥಾಪನೆ ಕುರಿತು ಹಲವು ಮುಖ್ಯ ನಿರ್ಧಾರಗಳನ್ನು ಹಂಚಿಕೊಂಡರು. ರಾಜ್ಯದ ಬಹುತೇಕ…