ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಫಿನಾಲೆಗೆ ಇನ್ನು ಎರಡು ದಿನಗಳಷ್ಟೆ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೆವರೇಟ್ ಆಗಿದ್ದಾರೆ. ಅಶ್ವಿನಿ, ಧನುಶ್ ಅವರಿಂದ ಪ್ರತಿಸ್ಪರ್ಧೆಯೂ ಇದೆ. ವೋಟಿಂಗ್ ಲೈನ್ ಈಗಾಗಲೇ ಆರಂಭ ಆಗಿದ್ದು ಭಾನುವಾರ 10 ಗಂಟೆ ವರೆಗೂ ಇಷ್ಟದ ಸ್ಪರ್ಧಿಗಳ ಪರವಾಗಿ ಮತಗಳನ್ನು ಚಲಾಯಿಸಬಹುದಾಗಿದೆ. ಗಿಲ್ಲಿಯ ಅಭಿಮಾನಿಗಳು ಪ್ರೀತಿಯಿಂದ ಗಿಲ್ಲಿ ಪರವಾಗಿ ಮತ ಅಭಿಯಾನ ಆರಂಭಿಸಿದ್ದಾರೆ. ದಾವಣಗೆರೆಯಲ್ಲಿ ಗಿಲ್ಲಿ ಅಭಿಮಾನಿಗಳು ಪೆಂಡಾಲ್-ಮೈಕ್ ಹಾಕಿಸಿ ಗಿಲ್ಲಿ ಪರವಾಗಿ ಮತ ಯಾಚನೆ ಮಾಡಿದ್ದಾರೆ. ರಸ್ತೆಯಲ್ಲಿ ಹೋಗುವವರ ಬಳಿಯೆಲ್ಲ ಮೊಬೈಲ್ ಪಡೆದುಕೊಂಡು ಅವರಿಂದ ಮತ ಚಲಾವಣೆ ಮಾಡಿಸಿದ್ದಾರೆ. ವಿಡಿಯೋ ನೋಡಿ…
ಬೆಂಗಳೂರು, ಜನವರಿ 16: ನೂಕು ನುಗ್ಗಲು, ಕೆಲ ಪ್ರಯಾಣಿಕರ ಅಸಂಮಜಸ ವರ್ತನೆಯಂತಯ ವಿಷಯಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಬೆಂಗಳೂರಿನ ನಮ್ಮ ಮೆಟ್ರೋವೀಗ ಹೃದಯ ಸ್ಪರ್ಶಿ ಘಟನೆಯೊಂದರ ಕಾರಣಕ್ಕೆ ಸೋಶಿಯಲ್ ಮೀಡಿಯಾಗಳಲ್ಲಿ ಟ್ರೆಂಡಿಂಗ್ನಲ್ಲಿದೆ. ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಬ್ಯಾಂಗಲ್ ಫೋಟೋ ಕೇಳಿದ್ದಕ್ಕೆ ಹುಡುಗಿಯೊಬ್ಬಳು ಬಳೆಯನ್ನೇ ನೀಡಿರುವ ಘಟನೆ ನಡೆದಿದ್ದು, ಈ ಕುರಿತು ಮಹಿಳೆ ಮಾಡಿರುವ ಪೋಸ್ಟ್ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಲಕಿಯ ನಡೆಯನ್ನು ಹಲವರು ಕೊಂಡಾಂಡಿದ್ದಾರೆ.
ಮಹಿಳೆಯ ಪೋಸ್ಟ್ನಲ್ಲಿ ಏನಿದೆ?
One day, while traveling on the metro, I noticed a golden bangle on the wrist of the girl sitting next to me.
I liked it so much that I asked if I could take a photo to get a similar one made.
Instead, she removed the bangle and handed it to me, saying it would be easier for… pic.twitter.com/0Z2XRHRrl5
ಮೆಟ್ರೋ ಪ್ರಯಾಣದ ವೇಳೆ ನನ್ನ ಪಕ್ಕವೇ ಕುಳಿತಿದ್ಧ ಹುಡುಗಿಯ ಕೈನಲ್ಲಿ ಚಿನ್ನದ ಬಳೆಗಳನ್ನು ಗಮನಿಸಿದೆ. ಅದು ನನಗೆ ಬಹಳ ಇಷ್ಟವಾದ ಕಾರಣ, ಅಂತಹುದ್ದೇ ಬಳೆಯನ್ನು ಮಾಡಿಸಿಕೊಳ್ಳಲು ಅದರ ಫೋಟೋ ತೆಗೆದುಕೊಳ್ಳಬಹುದೇ ಎಂದು ಆಕೆಯನ್ನು ಕೇಳಿದ್ದಷ್ಟೇ. ಆಕೆ ತನ್ನ ಕೈಗಳಲ್ಲಿದ್ದ ಬಳೆಯನ್ನೇ ತೆಗೆದು ನನಗೆ ನೀಡಿದಳು. ಇದರ ವಿನ್ಯಾಸವನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಅಕ್ಕಸಾಲಿಗನಿಗೆ ಇದು ನೆರವಾಗಬಹುದು ಎಂದಳು. ಅವಳ ನಡೆಯಿಂದ ನಾನು ಆಶ್ಚರ್ಯಕ್ಕೆ ಒಳಗಾದೆ. ಈ ವೇಳೆಗೆ, ಇದು ಬಂಗಾರದ ಬಳೆಯಲ್ಲ ಎಂದು ನಕ್ಕು ಆಕೆ ತಿಳಿಸಿದಳು. ಆಕೆಗಿರುವ ದಯಾ ಗುಣದ ನೆನಪಿಗಾಗಿ ಆ ಬಳೆಯನ್ನು ನಾನು ಸ್ವೀಕರಿಸಿದೆ. ಮೆಟ್ರೋದಲ್ಲಿನ ಎಲ್ಲ ಸನ್ನಿವೇಶಗಳೂ ಕೆಟ್ಟದಾಗಿರಲ್ಲ. ಕೆಲವು ಬಹಳ ಸುಂದರವಾಗಿರುತ್ತವೆ ಎಂದು ಮಹಿಳೆ ಬರೆದುಕೊಂಡಿದ್ದಾರೆ. ಪೋಸ್ಟ್ ಜೊತೆಗೆ ಬಳೆಯ ಫೋಟೋವನ್ನೂ ಲಗತ್ತಿಸಿದ್ದಾರೆ.
ಇನ್ನು ಮಹಿಳೆ ಮಾಡಿರುವ ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ಅಭಿಪ್ರಾಯಗಳು, ಮೆಚ್ಚುಗೆಗಳು ವ್ಯಕ್ತವಾಗಿವೆ. ಈ ಪೋಸ್ಟ್ ನನ್ನ ಮುಖದಲ್ಲಿ ನಗು ತರಿಸಿದೆ. ಆ ಹುಡುಗಿ ತುಂಬಾ ಒಳ್ಳೆಯ ಮನಸ್ಸಿನವಳು ಎಂದು ಒಬ್ಬರು ಪ್ರತಿಕ್ರಿಯಿಸಿದ್ದರೆ, ಇಂದು ಇಂಟರ್ನೆಟ್‌ನಲ್ಲಿ ನೋಡಿದ ಅತ್ಯುತ್ತಮ ವಿಷಯ ಇದು ಎಂದು ಮತ್ತೊಬ್ಬರು ಹೇಳಿದ್ದಾರೆ.
ನೆಲಮಂಗಲ, ಜನವರಿ 16: ಚಾಲಕನ ನಿಯಂತ್ರಣ ತಪ್ಪಿ KSRTCಬಸ್ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡ ಎಂಬಂತೆ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹಾಲು (Milk) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ತಿಳಿದ ವಿಚಾರ. ಬಾಲ್ಯದಿಂದಲೂ, ಹಾಲು ಕುಡಿಯುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ, ಮೂಳೆಗಳು ಗಟ್ಟಿಯಾಗುತ್ತದೆ ಮತ್ತು ದೌರ್ಬಲ್ಯವನ್ನು ನಿವಾರಿಸುತ್ತದೆ ಎಂದು ಕೇಳಿರುತ್ತೇವೆ, ಓದಿರುತ್ತೇವೆ. ಹಾಲಿನಲ್ಲಿ ದೇಹದ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುವ ಅನೇಕ ಅಗತ್ಯ ಪೋಷಕಾಂಶಗಳಿವೆ. ಅದಕ್ಕಾಗಿಯೇ ಇದನ್ನು ದೈನಂದಿನ ಆಹಾರದ ಪ್ರಮುಖ ಭಾಗವೆಂದು ಪರಿಗಣಿಸಲಾಗಿದೆ. ಆದರೆ ಬದಲಾಗುತ್ತಿರುವ ಜೀವನಶೈಲಿ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ವಿಚಾರಗಳ ಬಗ್ಗೆ ತಿಳಿಯುವುದು ಅನಿವಾರ್ಯವಾಗಿದೆ. ಹೌದು, ನಾವು ತಿಳಿದಿರುವಂತೆ ಹಾಲು ಎಲ್ಲರಿಗೂ ಒಳ್ಳೆಯದಲ್ಲ, ಅದು ನಿಜವಾಗಿಯೂ ಪ್ರಯೋಜನಕಾರಿಯೇ ಎಂಬ ಪ್ರಶ್ನೆ ಕೂಡ ಉದ್ಭವಿಸುತ್ತದೆ. ಇಂತಹ ಗೊಂದಲಗಳಿಗೆ ಉತ್ತರ ಈ ಸ್ಟೋರಿಯಲ್ಲಿದೆ.
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಹಾಲು ಕುಡಿದ ನಂತರ ಜೀರ್ಣಕಾರಿ ಸಮಸ್ಯೆಗಳು ಕಂಡು ಬಂದಿರುವುದನ್ನು ಕೇಳಿರಬಹುದು ಅಥವಾ ನಿಮಗೂ ಈ ಅನುಭವವಾಗಿರಬಹುದು. ಇನ್ನು ಕೆಲವರಲ್ಲಿ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬಂದಿರಬಹುದು. ಹಾಗಾಗಿ ಹಾಲು ಎಲ್ಲರ ಮೇಲೆ ಒಂದೇ ರೀತಿಯ ಪರಿಣಾಮವನ್ನು ಬೀರುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗುತ್ತದೆ.
ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕರಾದ ಪ್ರೊಫೆಸರ್ ಡಾ. ಸುಭಾಷ್ ಗಿರಿ ಅವರು ಹೇಳುವ ಪ್ರಕಾರ, ಹಾಲು ಎಲ್ಲರ ದೇಹಕ್ಕೂ ಸರಿಹೊಂದುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಲ್ಯಾಕ್ಟೋಸ್ ಅಸಹಿಷ್ಣುತೆ. ಈ ಸ್ಥಿತಿಯಿರುವ ಜನರಲ್ಲಿ ಲ್ಯಾಕ್ಟೇಸ್ ಕಿಣ್ವ ಕಡಿಮೆ ಮಟ್ಟದಲ್ಲಿರುವುದರಿಂದ ಹಾಲನ್ನು ಜೀರ್ಣಿಸಿಕೊಳ್ಳಲು ತೊಂದರೆಯಾಗುತ್ತದೆ. ಇದು ಗ್ಯಾಸ್, ಹೊಟ್ಟೆ ನೋವು ಮತ್ತು ಅತಿಸಾರದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಕೆಲವರಿಗೆ ಹಾಲಿನ ಅಲರ್ಜಿ ಅಥವಾ ಲೋಳೆ ಅಥವಾ ಕಫದ ಸಮಸ್ಯೆ ಕೂಡ ಕಂಡುಬರುತ್ತದೆ. ಇದು ಶೀತ ಸಂಬಂಧಿತ ಅಥವಾ ಉಸಿರಾಟದ ಸಮಸ್ಯೆಗಳನ್ನು ಇನ್ನಷ್ಟು ಹದಗೆಡಿಸುತ್ತದೆ. ಜೊತೆಗೆ ಜೀರ್ಣಕ್ರಿಯೆ ಸಮಸ್ಯೆ ಇರುವವರಿಗೂ ಇದು ಒಳ್ಳೆಯದಲ್ಲ. ಕೆಲವರಲ್ಲಿ, ಹಾಲು ಸೇವನೆಯಿಂದ ಚರ್ಮ ಸಂಬಂಧಿತ ಸಮಸ್ಯೆಗಳು ಉಂಟಾಗಬಹುದು. ಅದರಲ್ಲಿಯೂ ಎಣ್ಣೆಯುಕ್ತ ಚರ್ಮ ಇರುವವರಿಗೆ, ಮೊಡವೆಗಳಿಂದ ಬಳಲುತ್ತಿರುವವರಿಗೆ ಒಳ್ಳೆಯದಲ್ಲ.
ಹಾಲು ಕುಡಿಯುವುದರಿಂದಾಗುವ ಸಮಸ್ಯೆಗಳನ್ನು ತಡೆಯಲು ಮೊಸರು, ಮಜ್ಜಿಗೆ ಅಥವಾ ಲ್ಯಾಕ್ಟೋಸ್ ಮುಕ್ತ ಹಾಲನ್ನು ಸೇವಿಸಬಹುದು, ಇವು ಜೀರ್ಣಿಸಿಕೊಳ್ಳಲು ಸುಲಭ. ಚರ್ಮ ಅಥವಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ, ವೈದ್ಯರು ಅಥವಾ ಪೌಷ್ಟಿಕತಜ್ಞರನ್ನು ಸಂಪರ್ಕಿಸುವುದು ಉತ್ತಮ.
ಗದಗ, (ಜನವರಿ 16): ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದನಿಧಿ (Lakkundi Gold Treasure )ಪತ್ತೆ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ (Lakkundi Gold Excavation) ಕಾರ್ಯ ಶುರುವಾಗಿದೆ. ಇಂದು (ಜನವರಿ 16) ಕೋಟೆ ವೀರಭದ್ರೇಶ್ವರ ದೇಗುಲದ ಮುಂದೆ ನಡೆದ ಮೊದಲ ದಿನದ ಉತ್ಖನನ ಅಂತ್ಯವಾಗಿದೆ. ಸುಮಾರು 20 ಕಾರ್ಮಿಕರಿಂದ ದೇಗುಲ ಬಳಿ ಉತ್ಖನನ ನಡೆದಿದ್ದು, 10 ರಿಂದ 12 ಇಂಚಿನಷ್ಟು ಮಣ್ಣು ಅಗೆದು ಜಾಗವನ್ನು ಸ್ವಚಗೊಳಿಸಲಾಗಿದೆ. ಇನ್ನು ಮೊದಲ ದಿನ ಉತ್ಖನನ ಹೇಗಿತ್ತು? ಮುಂದೇನು ಎನ್ನುವುದನ್ನು ಅಧಿಕಾರಿಯೊಬ್ಬರು ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.
ಬಳ್ಳಾರಿ, ಜನವರಿ 16: ಬಳ್ಳಾರಿ ಬ್ಯಾನರ್ ಗಲಾಟೆ (Bellari Riots)ಬಿಜೆಪಿಗೆ ದೊಡ್ಡ ಅಸ್ತ್ರವಾಗಿದೆ. ಗುಂಡೇಟಿಗೆ ಓರ್ವ ಕಾರ್ಯಕರ್ತ ಸಾವನ್ನಪ್ಪಿರುವ ವಿಚಾರವನ್ನೇ ಮುಂದಿಟ್ಕೊಂಡು ಸರ್ಕಾರದ ವಿರುದ್ಧ ಸಮರಕ್ಕೆ ರೆಡ್ಡಿ ಮತ್ತು ಶ್ರೀರಾಮುಲು ಸಜ್ಜಾಗಿದ್ದಾರೆ. ಹೀಗಾಗಿ ನಗರದಲ್ಲಿ ನಾಳೆ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಈ ಬೆನ್ನಲ್ಲೇ ಇದೀಗ ಮದ್ಯ ಮಾರಾಟ ನಿಷೇಧ (liquor ban) ಮಾಡಿ ಬಳ್ಳಾರಿ ಡಿಸಿ ನಾಗೇಂದ್ರ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಬಳ್ಳಾರಿ ಗಲಭೆ ಖಂಡಿಸಿ ನಾಳೆ ಬಳ್ಳಾರಿಯಲ್ಲಿ ಬಿಜೆಪಿಯಿಂದ ಪ್ರತಿಭಟನಾ ಸಮಾವೇಶ ಹಿನ್ನೆಲೆ ನಗರದಲ್ಲಿ ಇಂದು ರಾತ್ರಿ 10 ಗಂಟೆಯಿಂದ ನಾಡಿದ್ದು ಅಂದರೆ ಜನವರಿ 18ರ ಬೆಳಗ್ಗೆ 6 ಗಂಟೆವರೆಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿರ್ಬಂಧಿಸಿ ಬಳ್ಳಾರಿ ಡಿಸಿ ನಾಗೇಂದ್ರ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲೇನಿದೆ?
ಜನವರಿ 1ರಂದು ಶ್ರೀ ವಾಲ್ಮೀಕಿ ಮಹರ್ಷಿರವರ ಪುತ್ಥಳಿ ಅನಾವರಣ ಕಾರ್ಯಕ್ರಮದ ನಿಮಿತ್ತ ಹಾಕಿದ್ದ ಬ್ಯಾನರ್ ವಿಷಯವಾಗಿ ಗುಂಪು ಘರ್ಷಣೆ ನಡೆದಿದ್ದು, ಈ ಸಂಬಂಧ ಜನವರಿ 17ರಂದು ಬೆಳಿಗ್ಗೆ 10:30 ಗಂಟೆಗೆ ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಇತರೇ ಪ್ರಮುಖ ರಾಜ್ಯ ನಾಯಕರು ಹಾಗೂ ಜಿಲ್ಲಾ ನಾಯಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಬಳ್ಳಾರಿ ನಗರದ ಎಪಿಎಂಸಿ ಕೃಷಿ ಮಾರುಕಟ್ಟೆಯ ಆವರಣದಲ್ಲಿರುವ ಕವರ್ಡ್ ಯಾಕ್ಷನ್ ಪ್ಲಾಟ್ ಫಾರಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಪ್ರತಿಭಟನಾ ಸಭೆಯು ಶಾಂತ ರೀತಿಯಿಂದ ನಡೆಯುವ ಸಲುವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದ್ದು, ಈ ಬಂದೋಬಸ್ತ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜನವರಿ 17ರಂದು ಬೆಳಿಗ್ಗೆ 06 ಗಂಟೆಯಿಂದ ಜನವರಿ 18 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯದಂಗಡಿ, ಬಾರ್, ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಗಳಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆ ಮಾಡದಂತೆ ಮತ್ತು ಮದ್ಯದಂಗಡಿಗಳನ್ನು ಬಳ್ಳಾರಿ ನಗರದಾದ್ಯಂತ ಮುಚ್ಚುವಂತೆ ನಿಷೇಧಾಜ್ಞೆ ಹೊರಡಿಸುವಂತೆ ಕೋರಲಾಗಿದೆ.
ನವದೆಹಲಿ, (ಜನವರಿ 16): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟ (Karnataka Power Tussle) ಮುಂದುವರೆದಿದೆ. ಸಿಎಂ ಆಗಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಸದ್ಯ ದೆಹಲಿಯಲ್ಲಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ(Rahul Gandhi) ಭೇಟಿ ಮಾಡಿ ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ, ಇದರ ನಡುವೆ ಸಚಿವ ಕೆಜೆ ಜಾರ್ಜ್ (KJ George) ಸದ್ದಿಲ್ಲದೇ ಇಂದು (ಜನವರಿ 16)ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು, ಸಂಚಲನ ಮೂಡಿಸಿದೆ.
ನವದೆಹಲಿಯ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿಯವರನ್ನ ಭೇಟಿ ಮಾಡಿ ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ. ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಡಿಕೆ ಶಿವಕುಮಾರ್ ಸಾಕಷ್ಟು ಬಾರಿ ಯತ್ನಿಸಿ ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಆದ್ರೆ, ಇದೀಗ ಏಕಾಏಕಿ ರಾಹುಲ್, ಜಾರ್ಜ್ ಭೇಟಿಗೆ ಸಮಯ ಕೊಟ್ಟಿರುವುದು ಕಾಂಗ್ರೆಸ್‌ನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಈ ಹಿಂದೆಯೂ ಸಹ ಇದೇ ನಾಯಕತ್ವ ಬದಲಾವಣೆ ಸಂಬಂಧ ಬಣ ಬಡಿದಾಟ ತೀವ್ರ ಸ್ವರೂಪಕ್ಕೆ ಹೋಗಿದ್ದಾಗ ಜಾರ್ಜ್, ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ದರಾಮಯ್ಯನ ಜತೆ ಮಾತುಕತೆ ನಡೆಸಿದ ಬಳಿಕ ಡಿಕೆಶಿಯನ್ನು ಭೇಟಿ ಮಾಡಿದ್ದರು. ಈ ಮೂಲಕ ಸದ್ಯಕ್ಕೆ ಸೈಲೆಂಟ್ ಇರಿ ಎಂದು ಮನವೊಲಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತದೇ ಜಾರ್ಜ್ ದಿಢೀರ್ ರಾಹುಲ್ ಗಾಂಧಿ ಭೇಟಿ ಮಾಡಿ ಬಂದಿರುವುದು ಸಾಕಷ್ಟು ಕುತೂಹಲಕ್ಕೆ ಕಾರತಣವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ಒಂಬತ್ತನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ (RCB vs Gujarat Giants) ನಡುವೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್ನಲ್ಲಿ ಇದುವರೆಗೆ 2 ಪಂದ್ಯಗಳನ್ನಾಡಿರುವ ಆರ್‌ಸಿಬಿ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದ್ದರೆ, ಇತ್ತ ಗುಜರಾತ್ ಜೈಂಟ್ಸ್ ಕೂಡ ತನ್ನ ಮೂರನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಗಳವೂ ಹೊರಬಿದ್ದಿದ್ದು, ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಟಗಾರ್ತಿಯರೇ ಈ ಪಂದ್ಯದಲ್ಲಿ ಆಡಲಿದ್ದಾರೆ.
ಟಾಸ್ ಗೆದ್ದ ಗುಜರಾತ್
ಮೇಲೆ ಹೇಳಿದಂತೆ ಟಾಸ್ ಗೆದ್ದ ಗುಜರಾತ್ ನಾಯಕಿ ಬೆತ್ ಮೂನಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಆದ್ದರಿಂದ, ಮಂಧಾನ ನೇತೃತ್ವದ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಈ ಆವೃತ್ತಿಯಲ್ಲಿ ಆರ್‌ಸಿಬಿ ಇದೇ ಮೊದಲ ಬಾರಿಗೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಇದು ಮಾತ್ರವಲ್ಲದೆ ಇಂದಿನ ಪಂದ್ಯ ಆರ್‌ಸಿಬಿ vs ಮಾಜಿ ಆರ್‌ಸಿಬಿ ಆಟಗಾರ್ತಿಯರ ನಡುವೆ ಕದನವಾಗಿದೆ. ಏಕೆಂದರೆ ಗುಜರಾತ್ ಜೈಂಟ್ಸ್ ತಂಡದಲ್ಲಿ ನಾಲ್ವರು ಮಾಜಿ ಆರ್‌ಸಿಬಿ ಆಟಗಾರ್ತಿಯರಿದ್ದಾರೆ. ಅವರಲ್ಲಿ ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್, ಕನಿಕಾ ಅಹುಜಾ, ರೇಣುಕಾ ಸಿಂಗ್ ಠಾಕೂರ್ ಸೇರಿದ್ದಾರೆ. ಈ ನಾಲ್ವರು ಮಾತ್ರವಲ್ಲದೆ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಕೂಡ ಗುಜರಾತ್ ತಂಡದಲ್ಲಿ ಆಡುತ್ತಿದ್ದಾರೆ.
ಮುಂಬೈ, ಜನವರಿ 16: 25 ವರ್ಷಗಳ ನಂತರ ಮುಂಬೈ ನಾಗರಿಕ ಸಂಸ್ಥೆಯಾದ ಬಿಎಂಸಿ ಮೇಲೆ ಠಾಕ್ರೆ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC Elections) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು ಭಾರಿ ಗೆಲುವು ಕಂಡಿದೆ. ಗುರುವಾರ ಬಿಎಂಸಿ ಚುನಾವಣೆ ನಡೆದಿತ್ತು. ಭಾರತದ ಆರ್ಥಿಕ ರಾಜಧಾನಿಯಾಗಿರುವ ಮುಂಬೈ ಅನೇಕ ಉದ್ಯಮಿಗಳು, ಸೆಲಬ್ರಿಟಿಗಳು, ರಾಜಕಾರಣಿಗಳ ವಾಸ ಸ್ಥಾನ. ಇದು ಭಾರತದ ಅತ್ಯಂತ ಶ್ರೀಮಂತ ಮತ್ತು ಪ್ರಭಾವಿ ಕಾರ್ಪೋರೇಷನ್ ಆಗಿದೆ. ಬಿಎಂಸಿ ಸೇರಿದಂತೆ ಮಹಾರಾಷ್ಟ್ರದಾದ್ಯಂತ 29 ನಾಗರಿಕ ಸಂಸ್ಥೆಗಳಲ್ಲಿ ಮತದಾನ ನಡೆದಿತ್ತು. ಬಹುತೇಕ ಅನೇಕ ಕಡೆ ಬಿಜೆಪಿ ಈ ಬಾರಿ ಗೆಲುವಿನ ನಗು ಬೀರಿರುವುದು ವಿಶೇಷ. ಇದು ಮಹಾರಾಷ್ಟ್ರದಲ್ಲಿ ಶಿವಸೇನೆಯ ಪತನದ ಸಂಕೇತವಾಗಿದೆ.
ವಾರ್ಷಿಕ ಬಜೆಟ್ 74,400 ಕೋಟಿ ರೂ. ಮೀರಿರುವ ಬಿಎಂಸಿಯಲ್ಲಿ 9 ವರ್ಷಗಳ ವಿಳಂಬದ ನಂತರ ನಡೆದ ಚುನಾವಣೆಯಲ್ಲಿ 227 ಸ್ಥಾನಗಳಿಗೆ 1,700 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 2017ರಲ್ಲಿ ನಡೆದ ಕೊನೆಯ ಚುನಾವಣೆಯಲ್ಲಿ, ಏಕನಾಥ್ ಶಿಂಧೆ ಮತ್ತು ಉದ್ಧವ್ ಠಾಕ್ರೆ ಒಂದಾಗಿದ್ದ ಸಂಯುಕ್ತ ಶಿವಸೇನೆ ದಶಕಗಳಿಂದ ನಿಯಂತ್ರಿಸುತ್ತಿದ್ದ ಬಿಎಂಸಿಯ ಮೇಲೆ ತನ್ನ ಹಿಡಿತವನ್ನು ಉಳಿಸಿಕೊಂಡಿತ್ತು. ಈ ಬಾರಿಯ ಚುನಾವಣೆಯಲ್ಲಿ ಅವರಿಬ್ಬರೂ ಬೇರೆ ಬೇರೆಯಾಗಿ ಅಖಾಡಕ್ಕಿಳಿದಿದ್ದರು.
ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟವು ವಿಜಯಶಾಲಿಯಾಗಿ ಹೊರಹೊಮ್ಮಿದೆ. ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ ಐತಿಹಾಸಿಕ ಸಾಧನೆಯ ನಂತರ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಪ್ರಭಾವಿ ನಾಯಕನಾಗಿ ಹೊರಹೊಮ್ಮಿದ್ದಾರೆ. ಅವರ ನಾಯಕತ್ವದಲ್ಲಿ ಬಿಜೆಪಿ 2017ರಲ್ಲಿ ತನ್ನ ಹಿಂದಿನ ಗರಿಷ್ಠ 82 ಸ್ಥಾನಗಳನ್ನು ಮೀರಿದೆ. ಇದುವರೆಗೆ ಬಿಎಂಸಿಯ 227 ವಾರ್ಡ್‌ಗಳಲ್ಲಿ 88ರಲ್ಲಿ ಬಿಜೆಪಿ ಗೆದ್ದಿದೆ ಅಥವಾ ಮುನ್ನಡೆ ಸಾಧಿಸಿದೆ. ಬಿಜೆಪಿಯ ಮಿತ್ರ ಪಕ್ಷ ಶಿವಸೇನೆ 28 ಸ್ಥಾನಗಳಲ್ಲಿ ಮುಂದಿದೆ. ಈ ಮಹಾಯುತಿ ಮೈತ್ರಿಕೂಟವು 114ರ ಅರ್ಧದಷ್ಟನ್ನು ಆರಾಮವಾಗಿ ದಾಟಿದೆ.
29 ನಾಗರಿಕ ಸಂಸ್ಥೆಗಳ 893 ವಾರ್ಡ್‌ಗಳಲ್ಲಿ 2,869 ಸ್ಥಾನಗಳಿಗೆ ಗುರುವಾರ ಮತದಾನ ನಡೆಯಿತು. ಮುಂಬೈನಲ್ಲಿ 1,700 ಸೇರಿದಂತೆ 15,931 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 52.94% ಮತದಾನ ದಾಖಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಬಳಿಕ ಟಿ20 ಲೀಗ್ಗಳಲ್ಲಿ ನಿರತರಾಗಿರುವ ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಮತ್ತೊಮ್ಮೆ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದ್ದಾರೆ. ಬಿಗ್ ಬ್ಯಾಷ್ ಲೀಗ್ 2025-26 ರ 37 ನೇ ಪಂದ್ಯದಲ್ಲಿ, ಸಿಡ್ನಿ ಥಂಡರ್ ನಾಯಕ ಡೇವಿಡ್ ವಾರ್ನರ್ ಸಿಡ್ನಿ ಸಿಕ್ಸರ್ಸ್ ವಿರುದ್ಧ ಸ್ಫೋಟಕ ಶತಕ ಬಾರಿಸಿದ್ದಾರೆ.
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಥಂಡರ್ ತಂಡದ ಪರ ಅಬ್ಬರಿಸಿದ ಡೇವಿಡ್ ವಾರ್ನರ್ ಈ ಆವೃತ್ತಿಯ ಎರಡನೇ ಶತಕ ಬಾರಿಸಿದರು. ಈ ಪಂದ್ಯದಲ್ಲಿ ಡೇವಿಡ್ ವಾರ್ನರ್ 65 ಎಸೆತಗಳಲ್ಲಿ ಅಜೇಯ 110 ರನ್ ಗಳಿಸಿದರು. ಅವರ ಇನ್ನಿಂಗ್ಸ್ನಲ್ಲಿ 11 ಬೌಂಡರಿ ಮತ್ತು 4 ಸಿಕ್ಸರ್ಗಳು ಸೇರಿದ್ದವು.
ವಾರ್ನರ್ ಅವರ ಈ ಸ್ಫೋಟಕ ಶತಕದಿಂದಾಗಿ ಮೊದಲು ಬ್ಯಾಟಿಂಗ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗಳ ನಷ್ಟಕ್ಕೆ 189 ರನ್ ಗಳಿಸಿತು. ಈ ಅದ್ಭುತ ಶತಕದೊಂದಿಗೆ ವಾರ್ನರ್, ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.
ಡೇವಿಡ್ ವಾರ್ನರ್ ತಮ್ಮ 10 ನೇ ಟಿ20 ಶತಕವನ್ನು ಗಳಿಸುವ ಮೂಲಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಇದರೊಂದಿಗೆ ವಾರ್ನರ್ ಅತಿ ಹೆಚ್ಚು ಟಿ20 ಶತಕಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20ಕ್ರಿಕೆಟ್ನಲ್ಲಿ ಒಂಬತ್ತು ಶತಕಗಳನ್ನು ಬಾರಿಸಿದ್ದು ಇದೀಗ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಉಳಿದಂತೆ ವಿಂಡೀಸ್ ದಿಗ್ಗಜ ಕ್ರಿಸ್ ಗೇಲ್ 22 ಶತಕಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಕ್ ಮಾಜಿ ನಾಯಕ ಬಾಬರ್ ಆಝಂ 11 ಶತಕಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
2025-26 ರ ಬಿಗ್ ಬ್ಯಾಷ್ ಲೀಗ್ ಸೀಸನ್ನಲ್ಲಿ ಕಳಪೆ ಆರಂಭ ಪಡೆದುಕೊಂಡಿದ್ದ ಡೇವಿಡ್ ವಾರ್ನರ್, ಕಳೆದ ನಾಲ್ಕು ಪಂದ್ಯಗಳಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಇದು ಅವರ ಸತತ ನಾಲ್ಕನೇ 50 ಪ್ಲಸ್ ಇನ್ನಿಂಗ್ಸ್ ಆಗಿದೆ. ಅವರ ಹಿಂದಿನ ಮೂರು ಪಂದ್ಯಗಳಲ್ಲಿ, ಅವರು 82, 67* ಮತ್ತು ಅಜೇಯ 130 ರನ್ಗಳ ಇನ್ನಿಂಗ್ಸ್ ಆಡಿದ್ದರು.