‘ಡಿಕೆ ಶಿವಕುಮಾರ್ ಸಿಎಂ ಹುದ್ದೆಗೆ ಅರ್ಹರು’: ಸಾಮಾಜಿಕ ಜಾಲತಾಣದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ! – Kannada News | Next CM of Karnataka: Team DK Launches Massive Online Poster Campaign Demanding DK Shivakumar as Chief Minister
ಬೆಂಗಳೂರು, ಮೇ 27: ಕರ್ನಾಟಕ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆಯಾಗುತ್ತಿದ್ದು, ಅಧಿಕಾರ ಹಂಚಿಕೆ ಬಹುತೇಕ ಫೈನಲ್ ಆದಂತಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಮಂಗಳವಾರ ತಡರಾತ್ರಿವರೆಗೂ ಸಭೆ ನಡೆಸಿದ್ದಾರೆ. ಮಧ್ಯರಾತ್ರಿ 2 ಗಂಟೆಯವರೆಗೂ ನಡೆದ ಈ ಸಭೆಯಲ್ಲಿ ಮುಂದಿನ ರಾಜಕೀಯ ನಡೆಗಳು ಹಾಗೂ ಹೈಕಮಾಂಡ್‌ನೊಂದಿಗಿನ ಮಾತುಕತೆಗಳ ಬಗ್ಗೆ ಚರ್ಚಿಸಲಾಗಿದೆ. ಸಿಎಂ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಆಪ್ತರ ಬಳಗದಲ್ಲಿ ಆತಂಕ ಮೂಡಿಸಿದ್ದು, ರಾಜಕೀಯ ಭವಿಷ್ಯದ ಕುರಿತು ಸಿಎಂ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಅನಿರೀಕ್ಷಿತ ಬೆಳವಣಿಗೆಯಾಗಿ…