ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?
ಚಿತ್ರದುರ್ಗ, ಮಾರ್ಚ್ 10: ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಯೋರ್ವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಮಗುವಿನ ಆರೋಗ್ಯದ ಮಾಹಿತಿ ಕೂಡ ತಮಗೆ ನೀಡಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ…