Headlines

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಸಿಲಿಂಡರ್ ಬುಕಿಂಗ್ ದಿನಗಳಲ್ಲಿ ಮಹತ್ವದ ಬದಲಾವಣೆ

ನವದೆಹಲಿ ಮಾ.9: ದೇಶದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಕಾಳಸಂತೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈಗ ಕಠಿಣ ಕ್ರಮಗಳಿಗೆ ಮುಂದಾಗಿದೆ. ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗ್ಯಾಸ್ ಸಿಲಿಂಡರ್‌ಗಳ ದಾಸ್ತಾನು (Hoarding) ಮಾಡುವುದನ್ನು ತಡೆಯಲು, ಎರಡು ಬುಕ್ಕಿಂಗ್‌ಗಳ ನಡುವಿನ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಈ ಹಿಂದೆ 55 ದಿನಗಳಿಗೊಮ್ಮೆ ಸಿಲಿಂಡರ್ ಬುಕ್ ಮಾಡುತ್ತಿದ್ದವರು, ಈಗ ಯುದ್ಧದ ಭೀತಿಯಿಂದ ಕೇವಲ 15 ದಿನಗಳಲ್ಲೇ ಬುಕ್ಕಿಂಗ್ ಮಾಡುತ್ತಿರುವುದು…

Read More

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಅತ್ಯಾಚಾರ, ಗರ್ಭಿಣಿಯಾದಾಗ ಕೃತ್ಯ ಬಹಿರಂಗ – Kannada News | Deoria Shocked as Schoolgirl’s Pregnancy Exposes Alleged Assault by Classmates

ಡಿಯೋರಿಯಾ, ಫೆಬ್ರವರಿ 04: ಎಂಟನೇ ತರಗತಿ ಬಾಲಕಿ(Girl) ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ಆಕೆಗೆ ಮಾದಕದ್ರವ್ಯ ಕೊಟ್ಟು ಅತ್ಯಾಚಾರವೆಸಗಿದ್ದಾರೆ. ವಿದ್ಯಾರ್ಥಿನಿ ಗರ್ಭಿಣಿಯಾದಾಗ ಕೃತ್ಯ ಬೆಳಕಿಗೆ ಬಂದಿದೆ. ಎರಡು ತಿಂಗಳ ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ವಯಸ್ಕ ಗರ್ಭಿಣಿಯಾಗಿದ್ದಾಳೆಂದು ದೃಢಪಟ್ಟ ನಂತರ ಈ ಭಯಾನಕ ಅಪರಾಧ ಬೆಳಕಿಗೆ ಬಂದಿದೆ. ನವೆಂಬರ್​​ನಲ್ಲಿ ಈ ಘಟನೆ ನಡೆದಿತ್ತು, ಅಂದು ಶಿಕ್ಷಕರ ಅನುಪಸ್ಥಿತಿಯ ಲಾಭ ಪಡೆದು ಆಕೆಯ ತರಗತಿಯ ಕೆಲವು ಹುಡುಗರು ಪ್ರಸಾದ್ ಎಂದು ಹೇಳಿ ಮತ್ತು…

Read More

ರಾತ್ರಿ 8 ಗಂಟೆಯಾದರೂ ಶೃಂಗೇರಿ ವಿಧಾನಸಭಾ ಕ್ಷೇತ್ರ ಮರು ಮತ ಎಣಿಕೆಯ ಅಧಿಕೃತ ಮಾಹಿತಿ ನೀಡದ ಅಧಿಕಾರಿಗಳು: ಹೈಡ್ರಾಮಾ – Kannada News | Sringeri Re counting Results: Congress MLA TD Rajegowda Wins Again; High Drama Outside IDSG College Chikkamagaluru

ಚಿಕ್ಕಮಗಳೂರು, ಮೇ 2: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಸಾಕ್ಷಿಯಾಯಿತು. ಅಂತಿಮವಾಗಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ರಾತ್ರಿ 8 ಗಂಟೆಯಾದರೂ ಫಲಿತಾಂಶದ ಅಧಿಕೃತ ಘೋಷಣೆ ಮಾಡದೇ ಇರುವುದು ಭಾರೀ ಗೊಂದಲಗಳಿಗೆ ಕಾರಣವಾಗಿದೆ. ಮತ ಎಣಿಕೆ ಕೇಂದ್ರದ ಮುಂಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ…

Read More

ಬಾಗಲಕೋಟೆ ಕಲ್ಲು ತೂರಾಟ: ಹಿಂದೂ ಯುವಕರ ಬಂಧನಕ್ಕೆ ಹೋಗಿದ್ದ ಪೊಲೀಸರನ್ನ ಅಡ್ಡಗಟ್ಟಿದ ಮಹಿಳೆಯರು – Kannada News | Bagalkote: Stone Pelting During Shivaji Jayanti Procession case; Women obstruct police who were going to arrest Hindu youth

ಬಾಗಲಕೋಟೆ, ಫೆಬ್ರವರಿ 27: ಶಿವಾಜಿ‌ ಜಯಂತಿ (Shivaji Jayanti Procession) ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣ (Stone Pelting) ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಹಿಂದೂ ಕಾರ್ಯಕರ್ತನ ಬಂಧನಕ್ಕೆ ಪೊಲೀಸರು ತೆರಳಿದ್ದ ತಳ್ಳಾಟ ನೂಕಾಟ ನಡೆದಿದೆ. ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಘಟನೆ ನಡೆದಿದೆ. ಮುತ್ತು ಮಾಗಿ ಎಂಬ ಯುವಕನನ್ನ ಕರೆದೊಯ್ಯಲು ಯತ್ನಿಸಿದ ವೇಳೆ ಪೊಲೀಸರಿಗೆ ಅಡ್ಡ ನಿಂತು ಬಂಧಿಸದಂತೆ ಜನರು ತಡೆದಿದ್ದಾರೆ. ಅಮಾಯಕರನ್ನ ಬಂಧಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಹಿಳೆಯರು ಪೊಲೀಸರ‌ನ್ನ ತರಾಟೆಗೆ ತೆಗೆದುಕೊಂಡಿದ್ದು,…

Read More

ಮೆಟ್ರೋ ಪ್ರಯಾಣಿಕರೇ ಗಮನಿಸಿ: ನೇರಳೆ ಮಾರ್ಗ ಸಂಬಂಧ ಮಹತ್ವದ ಮಾಹಿತಿ ಹಂಚಿಕೊಂಡ BMRCL

ಬೆಂಗಳೂರು, ಮೇ 31: ನಿರ್ವಹಣಾ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ, ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಗಳು ಇಂದು (ಮೇ 31) ಬೆಳಿಗ್ಗೆ 7 ಗಂಟೆಯಿಂದಲೇ ಸಂಪೂರ್ಣವಾಗಿ ಲಭ್ಯವಿರುತ್ತವೆ. ಹೀಗಾಗಿ ಪ್ರಯಾಣಿಕರು ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್​​ಸಿಎಲ್​​ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನೇರಳೆ ಮಾರ್ಗದ ಕೆಲ ನಿಲ್ದಾಣಗಳ ನಡುವೆ ಇಂದು ಸಂಚಾರ ವ್ಯತ್ಯಯದ ಬಗ್ಗೆ ಈ ಹಿಂದೆಯೇ BMRCL ಮಾಹಿತಿ ನೀಡಿತ್ತು. BMRCL ಪ್ರಕಟಣೆಯಲ್ಲಿ ಏನಿದೆ? ಸಾರ್ವಜನಿಕ ಮಾಹಿತಿ-ನಿರ್ವಹಣಾ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ,…

Read More

ಬಾಬರ್ ಆಝಂಗೆ ಮತ್ತೆ ಪಾಕ್ ತಂಡದ ನಾಯಕತ್ವ – Kannada News | Babar Azam to Replace Shan Masood as Pakistan Test Captain? PCB Eyes Return

ಪಾಕಿಸ್ತಾನ ಸೂಪರ್ ಲೀಗ್ (PSL) ಬಳಿಕ ಪಾಕಿಸ್ತಾನ ತಂಡ ಪ್ರಸ್ತತ ಬಾಂಗ್ಲಾದೇಶ ಪ್ರವಾಸದಲ್ಲಿದೆ. ಅಲ್ಲಿ ಟೆಸ್ಟ್ ಸರಣಿಯನ್ನಾಡುತ್ತಿರುವ ಪಾಕ್ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ತಂಡ ಆಡಿದ ಮೊದಲ ಪಂದ್ಯದಲ್ಲೇ ಸೋತಿದೆ. ಢಾಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ ತಂಡ 104 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಈ ಅವಮಾನಕರ ಸೋಲಿನಿಂದ ಕೆರಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಶಾನ್ ಮಸೂದ್ (Shan Masood) ಅವರನ್ನು ನಾಯಕತ್ವದಿಂದ ತೆಗೆದುಹಾಕಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಅಲ್ಲದೆ…

Read More

ಬಜೆಟ್​ನಲ್ಲಿ ಜಿಎಸ್​ಟಿ ದರ ಇಳಿಕೆಗೆ ಕ್ರಮ: ಎಂಎಸ್​ಎಂಇಗಳಿಂದ ನಿರೀಕ್ಷೆ – Kannada News | Small business owners expecting GST rate cut on essential commodities in upcoming budget

ನವದೆಹಲಿ, ಜನವರಿ 26: ದಿನನಿತ್ಯ ಬಳಕೆಯ ಸರಕುಗಳ ಮೇಲೆ ಜಿಎಸ್​ಟಿ ದರಗಳನ್ನು ಮುಂಬರುವ ಬಜೆಟ್​ನಲ್ಲಿ (Union Budget) ಕಡಿಮೆ ಮಾಡಬೇಕು ಎಂದು ಸಣ್ಣ ಉದ್ದಿಮೆದಾರರು ನಿರೀಕ್ಷಿಸುತ್ತಿದ್ದಾರೆ. ಅಧಿಕ ತೆರಿಗೆಗಳು ಹಾಗೂ ಅಧಿಕ ಖರೀದಿ ವೆಚ್ಚದಿಂದಾಗಿ ತಮ್ಮ ಬ್ಯುಸಿನೆಸ್​ಗಳು ತುಸು ತೊಡಕು ಎದುರಿಸುತ್ತಿವೆ ಎಂಬುದು ಇವರ ಕೂಗು. ದಿನ ನಿತ್ಯದ ವಸ್ತುಗಳ ಮೇಲೆ ತೆರಿಗೆ ಹೆಚ್ಚು ಇರುವುದರಿಂದ ಬ್ಯುಸಿನೆಸ್ ನಡೆಸುವುದು ಕಷ್ಟವಾಗಿರುವುದು ಮಾತ್ರವಲ್ಲ, ಗ್ರಾಹಕರಿಗೂ ಹೊರೆಯಾಗುತ್ತಿದೆ ಎಂದು ಹೈದರಾಬಾದ್​ನಲ್ಲಿರುವ ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ. ಅವಶ್ಯಕ ಸರಕುಗಳ ಬೆಲೆ ಬಾರಿ…

Read More

IPL 2026: ಆರ್​ಸಿಬಿ ವೇಗಿ ರಸಿಕ್ ಸಲಾಂಗೆ 2 ವರ್ಷ ನಿಷೇಧ ಹೇರಿದ್ದ ಬಿಸಿಸಿಐ..! – Kannada News | Rasikh Salam Dar’s IPL 2026 Brilliance: RCB’s Star Bowler Overcomes Age Fraud Ban

ಹಾಲಿ ಚಾಂಪಿಯನ್ ಆರ್​ಸಿಬಿ (RCB) 2026 ರ ಐಪಿಎಲ್​ನಲ್ಲೂ (IPL 2026) ತನ್ನ ಅಮೋಘ ಪ್ರದರ್ಶನವನ್ನು ಮುಂದುವರೆಸಿದೆ. ತಂಡದ ಈ ಗೆಲುವಿನ ಓಟಕ್ಕೆ ಸಾಂಘಿಕ ಪ್ರದರ್ಶನವೇ ಪ್ರಮುಖ ಕಾರಣವಾಗಿದೆ. ಅದರಲ್ಲೂ ಭಾರತದ ಯುವ ವೇಗಿ ರಸಿಕ್ ಸಲಾಂ ದಾರ್ (Rasikh Salam Dar) ಬೌಲಿಂಗ್ ವಿಭಾಗವನ್ನು ಕೂಡಿಕೊಂಡ ಬಳಿಕ ತಂಡ ಮತ್ತಷ್ಟು ಸಮತೋಲಿತವಾಗಿ ಕಾಣಿಸಿಕೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಈ ವೇಗದ ಬೌಲರ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ, 4 ಓವರ್‌ಗಳಲ್ಲಿ ಕೇವಲ…

Read More

Tech Utility: ಭಾರತದಲ್ಲಿ ಹೈ-ಸ್ಪೀಡ್ ಇಂಟರ್ನೆಟ್ ಹೊಂದಿರುವ ಟಾಪ್ 3 ನಗರಗಳು: ಬೆಂಗಳೂರಿಗೆ ಎಷ್ಟನೇ ಸ್ಥಾನ?

ಬೆಂಗಳೂರು (ಏ. 04): ಇತ್ತೀಚಿನ ದಿನಗಳಲ್ಲಿ ವೇಗದ ಇಂಟರ್ನೆಟ್ (Internet) ಎಲ್ಲರಿಗೂ ಅನಿವಾರ್ಯ. ಆನ್‌ಲೈನ್ ಕ್ಲಾಸ್, ಮನೆಯಿಂದ ಕೆಲಸ ಮಾಡುವುದಾಗಲಿ ಅಥವಾ ಮನರಂಜನೆಯಾಗಲಿ, ಎಲ್ಲದಕ್ಕೂ ಹೈ-ಸ್ಪೀಡ್ ಇಂಟರ್ನೆಟ್ ಅತ್ಯಗತ್ಯ. ಭಾರತದಲ್ಲಿ, ವಿಶೇಷವಾಗಿ ಪ್ರಮುಖ ನಗರಗಳಲ್ಲಿ ಇಂಟರ್ನೆಟ್ ವೇಗವು ಸುಧಾರಿಸುತ್ತಿದೆ. ಇತ್ತೀಚಿನ ವರದಿಯ ಪ್ರಕಾರ, ದೇಶದ ಕೆಲವು ನಗರಗಳು ಇಂಟರ್ನೆಟ್ ವೇಗದ ವಿಷಯದಲ್ಲಿ ಇತರರಿಗಿಂತ ಬಹಳ ಮುಂದಿವೆ. ಓಕ್ಲಾ ವರದಿಯ ಪ್ರಕಾರ, ಚೆನ್ನೈ ಭಾರತದಲ್ಲಿ ಅತಿ ಹೆಚ್ಚು ಇಂಟರ್ನೆಟ್ ವೇಗವನ್ನು ಹೊಂದಿರುವ ನಗರವಾಗಿದೆ. ಇಲ್ಲಿನ ಸರಾಸರಿ ಮೊಬೈಲ್ ಇಂಟರ್ನೆಟ್…

Read More

50 ಲಕ್ಷ ರೂ. ದಂಡವಲ್ಲ… ಪಾಕ್ ಆಟಗಾರರನ್ನು ಬ್ಯಾನ್ ಮಾಡಿ! – Kannada News | Shahid Afridi Wants Ban Pakistan Players

T20 World Cup 2026: ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನಕ್ಕೆ ಪಾಕಿಸ್ತಾನ್ ಆಟಗಾರರಿಗೆ ಬಿಸಿ ಮುಟ್ಟಿಸಲು ಪಾಕ್ ಕ್ರಿಕೆಟ್ ಮಂಡಳಿ ಮುಂದಾಗಿದೆ. ಅದರ ಮೊದಲ ಹೆಜ್ಜೆಯಾಗಿ ಪಾಕಿಸ್ತಾನ್ ಆಟಗಾರರಿಗೆ 50 ಲಕ್ಷ ರೂ. (PKR) ದಂಡ ವಿಧಿಸಲು ಮುಂದಾಗಿದೆ. ಈ ದಂಡದ ಸುದ್ದಿ ಬೆನ್ನಲ್ಲೇ ಮಾಜಿ ನಾಯಕ ಶಾಹಿದ್ ಅಫ್ರಿದಿ ಹಿರಿಯ ಆಟಗಾರರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳಪೆ ಪ್ರದರ್ಶನ ನೀಡುತ್ತಿರುವ ಆಟಗಾರರನ್ನು ಕನಿಷ್ಠ ಎರಡು ವರ್ಷಗಳ ಕಾಲ ತಂಡದಿಂದ ಬ್ಯಾನ್ ಮಾಡಬೇಕು ಎಂದು ಅವರು…

Read More