Headlines

ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು, ನಾಲ್ವರಿಗೆ ಗಾಯ – Kannada News | Hubballi House Distribution Event Marred by Cutout Collapse, Four Hospitalised

ಹುಬ್ಬಳ್ಳಿ, ಜನವರಿ 24: ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣಗೊಂಡಿರುವ 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಅವಘಡ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಅವುಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ…

Read More

PBKS vs LSG: ಪ್ರಿಯಾಂಶ್-ಕನೋಲಿ ರೌದ್ರಾವತಾರಕ್ಕೆ ಆರ್​ಸಿಬಿಯ ದಾಖಲೆಗಳೆಲ್ಲ ಧ್ವಂಸ

ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ದಾಖಲೆಯ 254 ರನ್ ಕಲೆಹಾಕಿತು. ತಂಡದ ಪರ ಪ್ರಿಯಾಂಶ್ ಆರ್ಯ ಹಾಗೂ ಕೂಪರ್ ಕನೋಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ಎರಡನೇ ವಿಕೆಟ್​ಗೆ ಕೇವಲ 81 ಎಸೆತಗಳಲ್ಲಿ ದಾಖಲೆಯ 181 ರನ್​ಗಳ ಜೊತೆಯಾಟವನ್ನಾಡಿದರು. ಈ ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪ್ರಿಯಾಂಶ್ 37 ಎಸೆತಗಳಲ್ಲಿ 93 ರನ್​ಗಳ ಇನ್ನಿಂಗ್ಸ್…

Read More

ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ! ಮುತ್ತು, ಹವಳ, ನೀಲಮಣಿ ಸೇರಿ ಏನೇನು ಸಿಕ್ತು? ಇಲ್ಲಿದೆ ನೋಡಿ – Kannada News | Ancient Treasure Unearthed Again in Lakkundi Village, Gadag: Pearls, Coral, Blue Sapphire and Rare Artifacts Found

ಗದಗ, ಜನವರಿ 13: ಅರ್ಧ ಕೆಜಿ ಚಿನ್ನಾಭರಣಗಳ ನಿಧಿ ಸಿಕ್ಕಿ ರಾಜ್ಯವೇ ಕುತೂಹಲದಿಂದ ನೋಡುವಂತಾಗಿರುವ ಗದಗದ ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು ಪತ್ತೆಯಾಗಿವೆ. ಗ್ರಾಮದ ಬಸಪ್ಪ ಬಡಿಗೇರ ಎಂಬವರಿಗೆ ಮುತ್ತು, ಹವಳ, ನೀಲಮಣಿ, ಸ್ಫಟಿಕ, ಬಿಳಿ ಹವಳ, ಕರಿಪುಕ್ಕಾ ಸೇರಿದಂತೆ ಹಲವು ವಸ್ತುಗಳುಳ್ಳ ನಿಧಿ ದೊರೆತಿದೆ. ಬಸಪ್ಪ ಬಡಿಗೇರ ಗ್ರಾಮದಲ್ಲಿ ಹಲವು ವರ್ಷಗಳಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಾಮಾನ್ಯವಾಗಿ ಮಳೆ ಬಂದ ನಂತರ ಗ್ರಾಮದಲ್ಲಿ ಶೋಧ ಮಾಡುತ್ತಾರೆ. ಈ ಹಿಂದೆ ಸಾಕಷ್ಟು ಪುರಾತನ ಕಾಲದ ವಸ್ತುಗಳು…

Read More

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್ – Kannada News | Karnataka Voter List Revision: Election Officer Anbukumar Shares Important Updates

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್Image Credit source: tv9 kannada ಬೆಂಗಳೂರು, ಮೇ 15: ರಾಜ್ಯದಲ್ಲಿ (Karnataka) ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ (Voter List Revision) ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದೆ. ಜೂನ್​​ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ…

Read More

ಮೈಸೂರು ಹುಡುಗನ ಮದುವೆ ಆಗಿದ್ದ ಈ ನಟಿಗೆ ಈಗ ಪಾಕ್ ಪ್ರಜೆಯ ಮದುವೆ ಆಗೋ ಆಸೆ – Kannada News | Rakhi Sawant’s Love Life Drama: From Mysore Marriage to Pakistani Actor Wish

ರಾಖಿ ಸಾವಂತ್ (Rakhi Sawanth) ಅವರು ಬಾಲಿವುಡ್ ಮಂದಿಗೆ ಮಾತ್ರವಲ್ಲ ಉಳಿದ ಚಿತ್ರರಂಗದವರಿಗೂ ಪರಿಚಿತರು. ಅವರು ಸುದ್ದಿಯಲ್ಲಿರಲು ಸದಾ ಒಂದಿಲ್ಲೊಂದು ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅವರು ವಿವಾಹ, ವಿವಾಹೇತರ ಸಂಬಂಧ ಇತ್ಯಾದಿ ವಿಷಯಕ್ಕೆ ಸುದ್ದಿ ಆಗುತ್ತಿದ್ದಾರೆ. ಅವರು ಮೈಸೂರು ಹುಡುಗನ ವಿವಾಹ ಆಗಿದ್ದರು. ಆ ಬಳಿಕ ಇಬ್ಬರೂ ಬೇರೆ ಆದರು. ಈಗ ಅವರಿಗೆ ಪಾಕ್ ಹುಡುಗನ ಮದುವೆ ಆಗೋ ಆಸೆ. ರಾಖಿ ಸಾವಂತ್ ಅವರು 2019ರಲ್ಲಿ ಭಾರತ ಮೂಲದ ವಿದೇಶಿ ಪ್ರಜೆ ರಿತೇಶ್ ರಾಜ್ ಸಿಂಗ್​​ನ ಮದುವೆ…

Read More

ಸೆಲೆಬ್ರಿಟಿಗಳ ಅಹಂಕಾರಕ್ಕೆ ತೆರೆ ಹಾಕಲು ನಿರ್ಧರಿಸಿದ ಬಾಲಿವುಡ್​ನ ಖ್ಯಾತ ಹೇರ್​​​ಸ್ಟೈಲಿಸ್ಟ್ – Kannada News | Hair stylist Aalim Hakim pens against celebrities rude behavior

ಬಾಲಿವುಡ್ (Bollywood) ಚಿತ್ರರಂಗದ ಮೋಸ್ಟ್ ಡಿಮ್ಯಾಂಡಿಂಗ್ ಹೇರ್ ಸ್ಟೈಲಿಸ್ಟ್ ಎಂದರೆ ಅದು ಆಲಿಮ್ ಹಕೀಮ್. ಅವರು ಅಹಂಕಾರಿ ವರ್ತನೆ ತೋರುವ ನಟರ ತಂಡಕ್ಕೆ ಬಿಸಿ ಮುಟ್ಟಿಸಿದ್ದಾರೆ. ಚಿತ್ರರಂಗದ ತೆರೆಯ ಹಿಂದೆ ಕೆಲಸ ಮಾಡುವ ಕಲಾವಿದರನ್ನು ಗೌರವಿಸದ ನಟರು ಮತ್ತು ಅವರ ಮ್ಯಾನೇಜರ್‌ಗಳ ಜೊತೆ ಇನ್ನು ಮುಂದೆ ಕೆಲಸ ಮಾಡುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಆಲಿಮ್, ‘ಯಾವ ನಟರ ಮ್ಯಾನೇಜರ್‌ಗಳು ಚಿತ್ರತಂಡದ ಸದಸ್ಯರನ್ನು ಕೀಳಾಗಿ ಕಾಣುತ್ತಾರೋ, ಅಂತಹ ನಟರ ಸಿನಿಮಾಗಳಿಂದ…

Read More

ಏಕಾಂಗಿಯಾಗಿ ಅರ್ಧದಷ್ಟು ತಂಡವನ್ನು ಪೆವಿಲಿಯನ್​ಗಟ್ಟಿದ ಮೊಹಮ್ಮದ್ ಶಮಿ

2025-26ರ ರಣಜಿ ಟ್ರೋಫಿಯ ಎಲೈಟ್ ಗ್ರೂಪ್‌ನಲ್ಲಿ ಬಂಗಾಳ ಹಾಗೂ ಸರ್ವಿಸಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅನುಭವಿ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ತಮ್ಮ ಅತ್ಯುತ್ತಮ ಬೌಲಿಂಗ್ ದಾಳಿಯ ಮೂಲಕ ಬಂಗಾಳ ತಂಡಕ್ಕೆ ನೆರವಾಗಿದ್ದಾರೆ. ಈ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಮಾರಕ ದಾಳಿ ನಡೆಸಿದ ಶಮಿ ಏಕಾಂಗಿಯಾಗಿ ಎದುರಾಳಿ ತಂಡದ ಐವರು ಆಟಗಾರರನ್ನು ಔಟ್ ಮಾಡಿದರು. ಬಂಗಾಳ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಬಂಗಾಳ ತಂಡ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ…

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 17th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 17: ಸತತ ಮೂರು ದಿನ ಬೆಲೆ ಏರಿಕೆ ಕಂಡಿದ್ದ ಚಿನ್ನ ಇವತ್ತು ಸ್ವಲ್ಪ ತಗ್ಗಿದೆ. ಮೂರು ದಿನದಲ್ಲಿ ಹತ್ತಿರಹತ್ತಿರ 300 ರೂಗಳಷ್ಟು ಬೆಲೆ ಏರಿತ್ತು. ಇವತ್ತು ಶುಕ್ರವಾರ ಇದರ ಬೆಲೆ (Gold Rates) ಗ್ರಾಮ್​ಗೆ 125 ರೂಗಳಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತಗ್ಗಿದೆ. ಇರಾನ್ ಯುದ್ಧ ನಿಲ್ಲುವ ಆಶಯ ಸ್ವಲ್ಪ ಬಲಗೊಂಡಿರುವುದು ಇದಕ್ಕೆ ಕಾರಣವಿರಬಹುದು. ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆಯಲ್ಲೂ ಇವತ್ತು ಕಡಿಮೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು – Kannada News | Supreme Court Upholds fathers Will expelling Daughter for Marrying Outside the community

ನವದೆಹಲಿ, ಡಿಸೆಂಬರ್ 19: ಒಂದುವೇಳೆ ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು. ಇದರಲ್ಲಿ ಸುಪ್ರೀಂ ಕೋರ್ಟ್ (Supreme Court) ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಮಹತ್ವದ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್…

Read More

ಅರಣ್ಯ ಭೂಮಿ ಒತ್ತುವರಿ ಕೇಸ್: ಮಾಜಿ ಸ್ಪೀಕರ್ ರಮೇಶ್ ಕುಮಾರ್​ಗೆ ಹಿನ್ನಡೆ

ಕೋಲಾರ, ಏಪ್ರಿಲ್​ 10: ಅರಣ್ಯ ಭೂಮಿ ಒತ್ತುವರಿ (Land Encroachment) ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಗೆ ಭೂಮಿಯನ್ನು ಬಿಟ್ಟುಕೊಡುವಂತೆ ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಾಧಿಕಾರಿಗಳ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್​​ಗೆ ಹಿನ್ನಡೆಯಾಗಿದೆ. ಜೊತೆಗೆ ಅವರು ಸಲ್ಲಿಸಿದ ಮೇಲ್ಮನವಿಗೆ ಅರ್ಹತೆ ಇಲ್ಲವೆಂದು ವಜಾಗೊಳಿಸಲಾಗಿದೆ. ಅರಣ್ಯ ಇಲಾಖೆಗೆ ಭೂಮಿ ಬಿಟ್ಟುಕೊಡುವಂತೆ ಆದೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್‌ಕುಮಾರ್ ಸಲ್ಲಿಸಿದ ಮೇಲ್ಮನವಿ ಅಜಿ ವಿಚಾರಣೆ ಮಾಡಿದ ನ್ಯಾಯಾಲಯ, ಅರಣ್ಯ ಇಲಾಖೆಗೆ ಭೂಮಿ…

Read More