ಸಿನಿಮಾ ಆಗಲಿದೆ ಇಮ್ಮಡಿ ಪುಲಿಕೇಶಿ ಜೀವನ-ಸಾಧನೆ: ಸಿನಿಮಾ ಹೆಸರೇನು?
ಬಾಲಿವುಡ್ನಲ್ಲಿ (Bollywood) ಒಂದರ ಹಿಂದೊಂದು ಐತಿಹಾಸಿಕ ಸಿನಿಮಾಗಳು, ಜೀವನ ಆಧರಿತ ಬಯೋಪಿಕ್ ಸಿನಿಮಾಗಳು ನಿರ್ಮಾಣ ಆಗುತ್ತಲೇ ಇರುತ್ತವೆ. ಅದರಲ್ಲೂ ಇತ್ತೀಚೆಗೆ ಐತಿಹಾಸಿಕ ಮಹತ್ವವುಳ್ಳ ರಾಜರ, ಮಹಾರಾಜರ ಕತೆಗಳು ಸಿನಿಮಾಗಳಾಗುತ್ತಿವೆ. ಆದರೆ ಈ ಪದ್ಧತಿ ದಕ್ಷಿಣದಲ್ಲಿ ವಿಶೇಷವಾಗಿ ಕನ್ನಡದಲ್ಲಿ ಬಹಳ ವಿರಳ. ಎಲ್ಲೋ ಅಲ್ಲೊಂದು ಇಲ್ಲೊಂದು ಐತಿಹಾಸಿಕ ಸಿನಿಮಾಗಳು ಸೆಟ್ಟೇರುತ್ತವೆಯಷ್ಟೆ. ಅದರಲ್ಲೂ ರಾಜ-ಮಹಾರಾಜರ ಜೀವನ ಆಧರಿಸಿದ ಸಿನಿಮಾಗಳಂತೂ ಬಹಳ ವಿರಳ. ಆದರೆ ಇದೀಗ ಕನ್ನಡದ ದೊರೆ ಇಮ್ಮಡಿ ಪುಲಿಕೇಶಿ ಜೀವನ, ಸಾಹಸ, ಸಾಧನೆ ಕುರಿತು ಹೇಳುವ ಕನ್ನಡ ಸಿನಿಮಾ…