ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಕಡಿಮೆಯಾಯ್ತು ಚಳಿ, ಮೋಡಕವಿದ ವಾತಾವರಣ, 7 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ – Kannada News | Karnataka Weather: Cold Eases, Rain Forecast in 7 Districts and Bengaluru
ಬೆಂಗಳೂರು, ಜನವರಿ 13: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ(Cyclone) ರೂಪುಗೊಳ್ಳುತ್ತಿದ್ದು ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ…