Headlines

ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ – Kannada News | Illegal Resorts and Homestays Seized and Demolished in Koppal

ಕೊಪ್ಪಳ, ಫೆಬ್ರವರಿ 28: ಅಕ್ರಮ ರೆಸಾರ್ಟ್‌ಗಳ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಇವುಗಳ ವಿರುದ್ಧ ಕೊಪ್ಪಳ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಕಾರ್ಯಾಚರಣೆ ನಡೆಸಿ ಹಲವು ಅನಧಿಕೃತ ರೆಸಾರ್ಟ್‌ಗಳನ್ನು ಸೀಜ್ ಮಾಡಲಾಗಿದ್ದು, ಕೊಪ್ಪಳ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 49 ಮತ್ತು ಗಂಗಾವತಿ ಪ್ರದೇಶದಲ್ಲಿ 87 ಅನಧಿಕೃತ ರೆಸಾರ್ಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 5 ರೆಸಾರ್ಟ್‌ಗಳನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ತೆರವುಗೊಳಿಸಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕೆ ಅವಕಾಶ ನೀಡದ ರೈಲ್ವೆ ಇಲಾಖೆ: ಸಿಡಿದೆದ್ದೆ ಕರವೇ – Kannada News | Railway Department not allowing Kannada in Railway Promotion Exam: Karnataka Rakshana Vedike sparks

ಬೆಂಗಳೂರು, ಮೇ 06: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ಇತ್ತೀಚೆಗೆ ಹೊರಡಿಸಿರುವ ಎಲ್​ಡಿಸಿಇ ಪ್ರಮೋಷನ್ ಪರೀಕ್ಷೆಗಳ ಅಧಿಸೂಚನೆಯಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ನೋಟಿಫಿಕೇಶನ್​​ ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಲಾಗಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಅಂದರೆ, ರಾಜ್ಯಾದ್ಯಂತ ರೈಲುಗಳನ್ನು ಸಂಚಾರ ‌ಮಾಡಲು ಬಿಡುವುದಿಲ್ಲ. ರಾಜ್ಯದ ಎಲ್ಲಾ ರೈಲ್ವೆ…

Read More

ಹೊಸ ರೂಲ್ಸ್​: ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಸೂಚನೆ – Kannada News | Chamarajanagar: Mahadeshwara Betta Bans Night Padyatra After Deadly Leopard Incident

ಚಾಮರಾಜನಗರ, ಜನವರಿ 23: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಚಿರತೆ (Leopard) ದಾಳಿಗೆ ಭಕ್ತ (Devotees) ಪ್ರವೀಣ್ ಬಲಿ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಪಾದಯಾತ್ರಿಗಳಿಗೆ ಹೊಸ ನಿಯಮ ಜಾರಿ ಮಾಡಿದೆ. ಇನ್ಮುಂದೆ ರಾತ್ರಿ ವೇಳೆ ಬೆಟ್ಟಕ್ಕೆ ಪಾದಯಾತ್ರೆಗೆ ನಿರ್ಬಂಧ ಹೇರಲಾಗಿದೆ. ಕಾಡುಪ್ರಾಣಿಗಳ ಕಾಟ ಹಿನ್ನೆಲೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆ ನಿರ್ಬಂಧಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಘಟನೆ ಹಿನ್ನೆಲೆ …

Read More

ಪ್ರಧಾನಿ ಮೋದಿ ಜೊತೆ ಟ್ರಂಪ್ ಮಾಡಿಕೊಂಡ ವ್ಯಾಪಾರ ಒಪ್ಪಂದದ 7 ಹೈಲೈಟ್ಸ್ ಇಲ್ಲಿವೆ – Kannada News | PM Modi and Donald Trump announce India US trade deal Key Highlights

ನವದೆಹಲಿ, ಫೆಬ್ರವರಿ 3: ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಭಾರತೀಯ ಸರಕುಗಳ ಮೇಲೆ ಶೇ. 50ರಷ್ಟು ಸುಂಕವನ್ನು ವಿಧಿಸಿದ ನಂತರ ನಿನ್ನೆ (ಸೋಮವಾರ) ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್‌ನಲ್ಲಿ ಘೋಷಿಸಿದ ಈ ವ್ಯಾಪಾರ ಒಪ್ಪಂದವು ಹಲವಾರು ಅಂಶಗಳನ್ನು ಒಳಗೊಂಡಿದೆ. ಆದರೆ, ಟ್ರಂಪ್ ಘೋಷಿಸಿದ ಈ ಅಂಶಗಳ ಬಗ್ಗೆ ಭಾರತ ಸರ್ಕಾರ ಇನ್ನೂ ಸರಿಯಾದ ಸ್ಪಷ್ಟನೆ ನೀಡಿಲ್ಲ. ಕೇವಲ ವ್ಯಾಪಾರ…

Read More

ಹೊಸ ವರ್ಷಕ್ಕೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​: ಪ್ರಾಯೋಗಿಕ ಪರೀಕ್ಷೆಗಳಿಗೆ ಹೊಸ ರೂಲ್ಸ್​​​ ತಂದ ಇಲಾಖೆ – Kannada News | 2nd PUC Practical Exams Live Web Streamed by KSEAB for Transparency and Monitoring

ಬೆಂಗಳೂರು, ಜ.2: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈ ವರ್ಷ ದ್ವಿತೀಯ ಪಿಯು ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಗಳಿಗೆ ವೆಬ್-ಸ್ಟ್ರೀಮಿಂಗ್ ಕಡ್ಡಾಯಗೊಳಿಸಿದೆ. ಪರೀಕ್ಷೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮವನ್ನು ಕೆಎಸ್‌ಇಎಬಿ ತಂದಿದೆ. ಈ ಹೊಸ ವ್ಯವಸ್ಥೆಯನ್ನು ತರುವ ಮೂಲಕ ವಿದ್ಯಾರ್ಥಿಗಳಿಗೆ ಅಂಕದಲ್ಲಿ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳುತ್ತದೆ. ಪರೀಕ್ಷಾ ಕೇಂದ್ರದಲ್ಲಿ ನಡೆಯುವ ಎಲ್ಲಾ ಚಟುವಟಿಕೆಯನ್ನು ರಿಯಲ್​​​ ಟೈಮ್​​ನಲ್ಲಿ ಲೈವ್​​ ಸ್ಟ್ರೀಮ್​​​​ ಮಾಡಲಾಗುತ್ತದೆ. ಕಳೆದ ವರ್ಷ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ್ದರೂ, ಥಿಯರಿ ಪರೀಕ್ಷೆಯಲ್ಲಿ…

Read More

ಹಳಿಗಳ ಮೇಲೆ ಓಡೋ ಲಕ್ಸುರಿ ಹೋಟೆಲ್!: ವೈರಲ್ ಆಯ್ತು ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್ ‘ಫಸ್ಟ್ ಎಸಿ’ ಲುಕ್ – Kannada News | Star Hotel Luxury on Rails: Vande Bharat Sleeper First AC Interiors Revealed

ಬೆಂಗಳೂರು, ಜೂ.20: ಭಾರತೀಯ ರೈಲ್ವೆಯ ಪ್ರಯಾಣಿಕರಿಗೆ ಇನ್ಮುಂದೆ ರಾತ್ರಿ ಪ್ರಯಾಣದ ವೇಳೆ ಸ್ಟಾರ್ ಹೋಟೆಲ್‌ಗಳ ಅನುಭವ ಸಿಗಲಿದೆ. ಮುಂಬೈ ಮತ್ತು ಬೆಂಗಳೂರು ಐಟಿ ಹಬ್‌ಗಳನ್ನು ಸಂಪರ್ಕಿಸುವ ಮುಂಬರುವ ‘ವಂದೇ ಭಾರತ್ ಸ್ಲೀಪರ್’ ರೈಲಿನ ಮೊದಲ ದರ್ಜೆ ಎಸಿ (First AC) ಕೋಚ್‌ನ ಅತ್ಯಾಕರ್ಷಕ ಒಳಾಂಗಣ ವಿನ್ಯಾಸದ (Interiors) ವಿಡಿಯೋ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಸಾಂಪ್ರದಾಯಿಕ ರೈಲುಗಳ ಇಕ್ಕಟ್ಟಾದ ಬರ್ತ್‌ಗಳು ಹಾಗೂ ಸೌಲಭ್ಯ ರಹಿತ ಶೌಚಾಲಯಗಳ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸಿ, ವಿಶ್ವದರ್ಜೆಯ ವಿನ್ಯಾಸದೊಂದಿಗೆ ಈ ಕೋಚ್‌ಗಳನ್ನು ಸಿದ್ಧಪಡಿಸಲಾಗಿದೆ….

Read More

ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಒಂಟಿ ಸಲಗ; ಸಿನಿಮೀಯ ರೀತಿಯಲ್ಲಿ ಆನೆ ರಕ್ಷಣೆ!

ಹುಣಸೂರು, ಮಾ.19: ಆಹಾರ ಮತ್ತು ನೀರು ಅರಸಿ ನಾಡಿಗೆ ಬಂದಿದ್ದ ಒಂಟಿ ಸಲಗವೊಂದು ವಾಪಸ್ ಕಾಡಿಗೆ ಹೋಗುವ ಸಂಭ್ರಮದಲ್ಲಿ ರೈಲ್ವೆ ಬ್ಯಾರಿಕೇಡ್‌ಗಳ ನಡುವೆ ಸಿಲುಕಿ ಹಾಕಿಕೊಂಡು ಅಕ್ಷರಶಃ ಮರಣಯಾತನೆ ಅನುಭವಿಸಿದ ಘಟನೆ ಉಡುವೆಪುರ ಗ್ರಾಮದ ಬಳಿ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಹೊರಬಂದಿದ್ದ ಈ ಒಂಟಿ ಸಲಗ, ಹಸಿವಿನಿಂದಾಗಿ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದ ರೈತರ ಜಮೀನುಗಳಿಗೆ ನುಗ್ಗಿತ್ತು. ಬೆಳ್ಳಂಬೆಳಿಗ್ಗೆ ಜಮೀನಿನಲ್ಲಿ ಆನೆಯನ್ನು ಕಂಡ ರೈತರು ಭಯದಿಂದ ಜೋರಾಗಿ ಕೂಗಾಡಿದ್ದಾರೆ. ಜನರ ಚೀರಾಟ ಮತ್ತು ವಾಹನಗಳ ಹಾರ್ನ್…

Read More

7 ರಾಜ್ಯಗಳಿಂದ 22 ರಾಜ್ಯಗಳಿಗೆ ಅಧಿಕಾರ ವ್ಯಾಪಿಸಿದ್ಹೇಗೆ? 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರ – Kannada News | With BJP set to win Bengal, how India’s political map has changed

ನವದೆಹಲಿ, (ಮೇ 05): ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ (Five State Election) ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ. ಅಸ್ಸಾಂ (Assam), ಪುದುಚೇರಿಯಲ್ಲಿಯಲ್ಲೂ ಬಿಜೆಪಿ ತನ್ನ ಹಿಡಿತವನ್ನು ಉಳಿಸಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ (West Bengal) ಭರ್ಜರಿ ವಿಜಯ ಪತಾಕೆ ಹಾರಿಸಿದ್ದು, 15 ವರ್ಷಗಳ ದೀದಿ ಆಡಳಿತಕ್ಕೆ ಬಿಜೆಪಿ ಬ್ರೇಕ್ ಹಾಕಿದೆ. ಇದರೊಂದಿಗೆ ಬಿಜೆಪಿ ತನ್ನ ಅಧಿಕಾರ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರದೊಂದಿಗೆ 7 ರಾಜ್ಯಗಳಿಂದ 22 ರಾಜ್ಯಗಳಿಗೆ…

Read More

ಪೊಲೀಸರ ಲಾಠಿಚಾರ್ಚ್​​ ಖಂಡಿಸಿ ಕಾಫಿನಾಡು ಕೊತ ಕೊತ: ಹಲವೆಡೆ ಬಂದ್​, ಪ್ರತಿಭಟನೆ – Kannada News | Chikkamagaluru Erupts in Protest Over Police Lathi Charge; Bandh in Several Areas

ಚಿಕ್ಕಮಗಳೂರು ಜಿಲ್ಲೆ ಬಹುತೇಕ ಬಂದ್​Image Credit source: Tv9 Kannada ಚಿಕ್ಕಮಗಳೂರು, ಫೆಬ್ರವರಿ 23: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು ಮತ್ತು ನಂತರದ ಲಾಠಿಚಾರ್ಜ್ ವಿಚಾರವಾಗಿ ಕಾಫಿನಾಡು ಚಿಕ್ಕಮಗಳೂರಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ, ಎನ್.ಆರ್.ಪುರ, ಮತ್ತು ಶೃಂಗೇರಿ ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಡಬಗೆರೆ ಸಂಪೂರ್ಣ ಸ್ತಬ್ಧವಾಗಿದ್ದು, ಅಂಗಡಿ ಮುಂಗಟ್ಟು ಮುಚ್ಚಿ ವರ್ತಕರು ಬಂದ್​​ ಬೆಮಬಲಿಸಿದ್ದಾರೆ. ನಿನ್ನೆ ಇಡೀ ದಿನ…

Read More

ಭೀಕರ ಅಪಘಾತ: ಪ್ರಭಾಸ್ ನಟನೆಯ ‘ಫೌಜಿ’ ಚಿತ್ರತಂಡದ ಸದಸ್ಯ ಸಾವು; ಶೂಟಿಂಗ್ ಸ್ಥಗಿತ – Kannada News | Prabhas starrer Fauzi shooting halted after crew member dies in road accident

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಅಭಿನಯದ ಬಹುನಿರೀಕ್ಷಿತ ‘ಫೌಜಿ’ ಚಿತ್ರತಂಡದಲ್ಲಿ ಭಾರಿ ದುರಂತ ಸಂಭವಿಸಿದೆ. ಚಿತ್ರೀಕರಣಕ್ಕಾಗಿ ತೆರಳುತ್ತಿದ್ದ ಚಿತ್ರತಂಡದ ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಸದಸ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯಿಂದಾಗಿ ಚಿತ್ರತಂಡಕ್ಕೆ ವಿಘ್ನ ಎದುರಾದಂತೆ ಆಗಿದೆ. ವ್ಯಕ್ತಿ ಮೃತಪಟ್ಟ ಕಾರಣದಿಂದ ‘ಫೌಜಿ’ (Fauzi) ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಹೈದರಾಬಾದ್‌ನ ಹೊರವಲಯದಲ್ಲಿರುವ ರಾಮೋಜಿ ಫಿಲ್ಮ್ ಸಿಟಿಗೆ ಚಿತ್ರೀಕರಣಕ್ಕಾಗಿ ತಂಡವು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅಬ್ದುಲ್ಲಾಪುರಮೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವಾಹನವು…

Read More