ಕ್ಷಮೆ ಕೇಳುವುದಿಲ್ಲ, ಕಾಂಗ್ರೆಸ್​​​​​ ನಿಯಮವನ್ನು ಉಲ್ಲಂಘಿಸಿಲ್ಲ: ಈ ವಿಚಾರದಲ್ಲಿ ಕೇಂದ್ರವನ್ನು ಬೆಂಬಲಿಸುವೆ ಎಂದ ಶಶಿ ತರೂರ್ – Kannada News | Tharoor Defends ‘Operation Sindoor’ Stance Against Congress, Prioritizes India

ದೆಹಲಿ, ಜ.24: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ‘ಆಪರೇಷನ್ ಸಿಂಧೂರ್’ (Operation Sindoor) ಗೆ ಸಂಬಂಧಿಸಿದಂತೆ ತಮ್ಮ ನಿಲುವಿನ ಬಗ್ಗೆ ಯಾವುದೇ ವಿಷಾದವಿಲ್ಲ (Unapologetic) ಎಂದು ಹೇಳಿದ್ದಾರೆ. ಈ ಕುರಿತು ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವನ್ನು ಉಲ್ಲಂಘಿಸಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. 2025ರ ಮೇ ತಿಂಗಳಲ್ಲಿ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನದ ವಿರುದ್ಧ ನಡೆಸಿದ ಮಿಲಿಟರಿ ಕಾರ್ಯಾಚರಣೆ ಬಗ್ಗೆ ಶಶಿ ತರೂರ್ ಅವರು ಸಮರ್ಥಿಸಿಕೊಂಡಿದ್ದರು, ಅವರ ಈ ನಿಲುವಿನ…

Read More

CSK vs SRH: ತವರಿನ ಕೊನೆಯ ಪಂದ್ಯದಲ್ಲೂ ಕಣಕ್ಕಿಳಿಯದ ಧೋನಿ; ನಾಯಕ ರುತುರಾಜ್ ಹೇಳಿದ್ದೇನು? – Kannada News | IPL 2026: MS Dhoni Misses CSK vs SRH; Gaikwad Confirms Injury, Hopes for Return

ಐಪಿಎಲ್ 2026 ರ 63 ನೇ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯ ಸಿಎಸ್​ಕೆಯ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ನಡೆಯುತ್ತಿದೆ. ಇದು ತವರಿನಲ್ಲಿ ಸಿಎಸ್​ಕೆ ತಂಡದ ಕೊನೆಯ ಪಂದ್ಯವಾಗಿದೆ. ಈ ಪಂದ್ಯದ ಬಳಿಕ ಈ ಆವೃತ್ತಿಯಲ್ಲಿ ಸಿಎಸ್​ಕೆ ಈ ಮೈದಾನದಲ್ಲಿ ಯಾವುದೇ ಪಂದ್ಯವನ್ನು ಆಡುವುದಿಲ್ಲ. ಹೀಗಾಗಿ ಸಿಎಸ್​ಕೆ ತಂಡದ ಜೀವಾಳ ಎನಿಸಿಕೊಂಡಿರುವ ಮಾಜಿ ನಾಯಕ ಎಂಎಸ್ ಧೋನಿ ಈ ಪಂದ್ಯದಲ್ಲಾದರೂ ಆಡುತ್ತಾರಾ ಎಂದು ಕಾದು ಕುಳಿತಿದ್ದರು. ಆದರೆ…

Read More

ಗರ್ಭಿಣಿ ಸೊಸೆಯನ್ನು ಮಾವ ಕೊಂದಿದ್ಯಾಕೆ ಗೊತ್ತಾ? ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿ! – Kannada News | Raichur Murder: Father in Law Kills Pregnant Daughter in Law

ಗರ್ಭಿಣಿ ಸೊಸೆಯನ್ನು ಮಾವ ಕೊಂದಿದ್ಯಾಕೆ ಗೊತ್ತಾ? ರಾಯಚೂರು, ಜನವರಿ 30: ಜಿಲ್ಲೆಯ ಸಿರವಾರ ತಾಲ್ಲೂಕಿನ ಚಿಕ್ಕ ಹಣಗಿ ಗ್ರಾಮದಲ್ಲಿ ಗರ್ಭಿಣಿ ಸೊಸೆಯನ್ನು ಕತ್ತು ಸೀಳಿ ಕೊಲೆಗೈದ (Pregnant Daughter-in-Law Murdered)  ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಘಟನೆ ನಿನ್ನೆ (ಜನವರಿ 29) ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೀಗ ಹೊಸ ತಿರುವು ಸಿಕ್ಕಿದೆ. ಆರಂಭದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಮಾವ ಸಿದ್ದಪ್ಪ ನಾಲ್ಕು ತಿಂಗಳ ಗರ್ಭಿಣಿ ಸೊಸೆ ರೇಖಾರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಖಾಕಿ ತನಿಖೆಯಲ್ಲಿ ಈ…

Read More

ಏಕಕಾಲದಲ್ಲಿ ಭಾರತದ 2 ಟಿ20 ತಂಡಗಳನ್ನು ಕಣಕ್ಕಿಳಿಸಲಿದೆ ಬಿಸಿಸಿಐ – Kannada News | BCCI Plans Dual T20 Teams for India: Boosts Player Development and Opportunities Post IPL 2026

ಭಾರತದಲ್ಲಿ ಐಪಿಎಲ್ (IPL) ಆರಂಭವಾದ ಬಳಿಕ ಕ್ರಿಕೆಟ್​ನಲ್ಲಿ ಕ್ರಾಂತಿ ಶುರುವಾಯಿತು. ಇದರ ಪರಿಣಾಮವಾಗಿ ದೇಶದಲ್ಲಿ ಸಾಕಷ್ಟು ಪ್ರತಿಭೆಗಳು ಹುಟ್ಟಿಕೊಂಡಿವೆ. ಹೀಗಾಗಿಯೇ ಟೀಂ ಇಂಡಿಯಾ, ಐಸಿಸಿ (ICC) ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್‌ ಪಟ್ಟವನ್ನು ಅಲಂಕರಿಸುತ್ತಿದೆ. ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯಲು ಸಾಕಷ್ಟು ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಸಾಕಷ್ಟು ಪ್ರತಿಭೆಗಳು ಬೆಂಚ್ ಮೇಲೆಯೇ ಕಾಲ ಕಳೆಯುತ್ತಿವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ (BCCI), ಎರಡು ಟಿ20 ತಂಡಗಳನ್ನು ಏಕಕಾಲದಲ್ಲಿ ಕಣಕ್ಕಿಳಿಸಲು ಸಜ್ಜಾಗುದೆ. ಬಿಸಿಸಿಐ ಇದಕ್ಕಾಗಿ…

Read More

ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ಕನ್ನಡ ಚಿತ್ರರಂಗದಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ನಟ ನಿರಂಜನ್ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಬಾರ್ ಒಂದರಲ್ಲಿ ನಡೆದ ಕಿರಿಕ್​ ಮಿತಿ ಮೀರಿದ್ದು, ಬಿಯರ್ ಬಾಟಲಿಯಿಂದ ನಟನ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಮಾರ್ಚ್ 28ರಂದು ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್ ಅಭಿನಯದ ‘ಒಡೆಯ’ (2019) ಸಿನಿಮಾದಲ್ಲಿ ನಿರಂಜನ್ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಸಹೋದರನ ಪಾತ್ರದಲ್ಲಿ ಅವರು ಕಾಣಿಸಿಕೊಂಡರು. ಈ ಪಾತ್ರ ಅವರ…

Read More

ಐಪಿಒಗೆ ಮುನ್ನ ಫ್ಲಿಪ್​ಕಾರ್ಟ್ ಗ್ರೂಪ್ ಸಿಎಫ್​ಒ ಸ್ಥಾನ ಬಿಟ್ಟ ಶ್ರೀರಾಮ್ ವೆಂಕಟರಾಮ್

ನವದೆಹಲಿ, ಮಾರ್ಚ್ 20: ಅಮೆರಿಕದ ಎಂಎನ್​ಸಿ ಕಂಪನಿಯಾದ ವಾಲ್ಮಾರ್ಟ್​ನ ಒಡೆತನದ ಫ್ಲಿಪ್​ಕಾರ್ಟ್ ಸಂಸ್ಥೆಯ (Flipkart) ಎಕ್ಸಿಕ್ಯೂಟಿವ್ ಸ್ಥಾನಪಲ್ಲಟವಾಗುತ್ತಿದೆ. ಫ್ಲಿಪ್​ಕಾರ್ಟ್ ಗ್ರೂಪ್ ಚೀಫ್ ಫೈನಾನ್ಷಿಯಲ್ ಆಫೀಸರ್ ಸ್ಥಾನದಿಂದ ಶ್ರೀರಾಮ್ ವೆಂಕಟರಾಮ್ (Sriram Venkatram) ಅವರು ಕೆಳಗಿಳಿಯಲಿದ್ದಾರೆ. ಭಾರತದ ಅತಿದೊಡ್ಡ ಇಕಾಮರ್ಸ್ ಕಂಪನಿಗಳಲ್ಲಿ ಒಂದೆನಿಸಿರುವ ಫ್ಲಿಪ್​ಕಾರ್ಟ್ ಈ ಸಂಗತಿಯನ್ನು ಶುಕ್ರವಾರ ಪ್ರಕಟಿಸಿದೆ. ಶ್ರೀರಾಮ್ ವೆಂಕಟರಾಮ್ ಅವರು 2015ರಲ್ಲಿ ಫ್ಲಿಪ್​ಕಾರ್ಟ್ ಸೇರಿದ್ದರು. ಹಲವು ಮುಂಚೂಣಿ ಹುದ್ದೆಗಳನ್ನು ನಿಭಾಯಿಸುತ್ತಾ ಹೋಗಿದ್ದ ಅವರು 2018ರಲ್ಲಿ ಗ್ರೂಪ್​ನ ಸಿಎಫ್​ಒ ಆಗಿ ಕಂಪನಿಯ ಹಣಕಾಸು ವಿಭಾಗದ ಚುಕ್ಕಾಣಿ…

Read More

Video: ಟೊಮೊಟೊ ಕೊಡಲ್ಲ ಎಂದಿದ್ದಕ್ಕೆ ಮನೆಯೊಡತಿಗೆ ಬೆದರಿಕೆ ಹಾಕಿದ ಸಾಕು ಗಿಳಿ – Kannada News | Parrot threatens owner with calling police

ಗಿಳಿ (Parrot) ಬುದ್ದಿವಂತ ಪಕ್ಷಿಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಮನುಷ್ಯರಂತೆ ಮಾತನಾಡಬಲ್ಲದು ಕೂಡ. ಹೀಗಾಗಿ ಎಲ್ಲರೂ ಈ ಗಿಳಿಯನ್ನು ಸಾಕಲು ಇಷ್ಟ ಪಡುತ್ತಾರೆ. ಆದರೆ ಇಲ್ಲೊಂದು ಸಾಕು ಗಿಳಿಯೂ ಮನೆ ಒಡತಿಗೆ (owner) ಬೆದರಿಕೆ ಹಾಕಿದೆ. ಟೊಮೊಟೊ ಕೊಡದಿದ್ದರೆ ಪೊಲೀಸರನ್ನು ಕರೆಯುತ್ತೇನೆ ಎಂದು ಹೆದರಿಸಿದೆ. ಗಿಳಿಯ ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. @aalianadim ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಮನೆಯ ಸಾಕು ಗಿಳಿಯದ್ದಾಗಿದೆ. ಪಂಜರದಲ್ಲಿರುವ ಗಿಳಿಯೂ ಮಹಿಳೆಯ ಬಳಿ ಟೊಮೆಟೊ…

Read More

NEET Exam 2026 Cancelled: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು! – Kannada News | NEET Exam Cancelled Over Paper Leak: CBI Probe Ordered for Rajasthan Paper Leak Case

ನವದೆಹಲಿ, ಮೇ 12: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಸಂಸ್ಥೆ ರದ್ದು ಮಾಡಿದೆ. ರಾಜಸ್ಥಾನದ ಸೀಕರ್​ನಲ್ಲಿ ಕೈ ಬರಹದಲ್ಲಿದ್ದ 140 ಪ್ರಶ್ನೆಗಳಿದ್ದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತು. ಇದೇ ಹಿನ್ನೆಲೆ ಈಗ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ನಿರ್ಧಾರ ಮಾಡಲಾಗಿದೆ. (ಮಾಹಿತಿ ಅಪ್ಡೇಟ್ ಆಗುತ್ತಿದೆ) ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Published On – 12:29 pm, Tue, 12…

Read More

ಬೆಂಗಳೂರು: ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ, ಸಿಗ್ನಲಲ್ಲಿ ನಿಲ್ಲಿಸಿದ್ದ ಲಾರಿಗೆ ಗುದ್ದಿದ ಮತ್ತೊಂದು ಲಾರಿ, ಚಾಲಕ ಸಾವು

ಬೆಂಗಳೂರು, ಏಪ್ರಿಲ್ 8: ಬೆಂಗಳೂರಿನ ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ಬುಧವಾರ ಮುಂಜಾನೆ ಭೀಕರ ಲಾರಿ ಅಪಘಾತ ಸಂಭವಿಸಿದೆ. ಈಚರ್ ಲಾರಿ ಚಾಲಕ ವಿಜಯ್, ಕೆ.ಆರ್. ಮಾರ್ಕೆಟ್‌ನಿಂದ ಮೈಸೂರು ರಸ್ತೆಗೆ ಬರುವ ಮಾರ್ಗದಲ್ಲಿ ವೇಗವಾಗಿ ಚಲಿಸಿ ಸರಣಿ ಅಪಘಾತಗಳನ್ನು ಎಸಗಿದ್ದಾನೆ. ಫ್ಲೈಓವರ್ ಮೇಲೆ ಮೂರು ಬಾರಿ ಇದೇ ರೀತಿ ಅಪಘಾತಗಳನ್ನು ಮಾಡಿ ಬಂದ ಈ ಲಾರಿ, ಸಿಗ್ನಲ್‌ನಲ್ಲಿ ನಿಂತಿದ್ದ ಮತ್ತೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಅಪಘಾತದ ಪರಿಣಾಮವಾಗಿ ಈಚರ್ ಲಾರಿಯ…

Read More

ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು? – Kannada News | Jana Nayagan Release Delay: Vijay Film’s Censor and Court Battle Updates

‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ಆಗಲು ಸಾಕಷ್ಟು ಅಡಚಣೆ ಉಂಟಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್​​​ನಲ್ಲಿ ಕೆವಿಎನ್ ಸಂಸ್ಥೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈಗ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಈ ಮೂಲಕ ತಂಡದ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ. ಸಿನಿಮಾ ಶೀಘ್ರವೇ ತೆರೆಗೆ ಬರುತ್ತದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ಜನವರಿ 9ರಂದು ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್ ಆಗಬೇಕಿತ್ತು. ಹೀಗಾಗಿ ಸೆನ್ಸಾರ್ ಪ್ರಮಾಣ…

Read More