10 ಫೋರ್, 2 ಸಿಕ್ಸ್: ವಿಶ್ವ ದಾಖಲೆಯೇ ಉಡೀಸ್! – Kannada News | Fatima Sana Smashes Fastest Fifty in Women’s T20Is
ಪಾಕಿಸ್ತಾನ್ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಫಾತಿಮಾ ಸನಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಅರ್ಧಶತಕ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಅಬ್ಬರಿಸಿದ ಫಾತಿಮಾ ಸನಾ, ಕೇವಲ 15 ಎಸೆತಗಳಲ್ಲಿ 50 ರನ್ ಪೂರೈಸಿದರು. ಈ ಮೂಲಕ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಸನಾ ಇನಿಂಗ್ಸ್ನ ಮುಖ್ಯಾಂಶಗಳು:…