SIR ವಿಚಾರಣೆಗೆ ಹಾಜರಾಗಲು ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಸಮನ್ಸ್ – Kannada News | Team India Cricketer Mohammed Shami summoned for SIR
ದೇಶದ ಹಲವು ರಾಜ್ಯಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪರಿಷ್ಕರಣೆಯ ಭಾಗವಾಗಿ ಇದೀಗ ವಿಚಾರಣೆಗೆ ಹಾಜರಾಗುವಂತೆ ಟೀಮ್ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಅವರ ಸಹೋದರ ಮೊಹಮ್ಮದ್ ಕೈಫ್ ಅವರಿಗೆ ಚುನಾವಣಾ ಆಯೋಗ ಸಮನ್ಸ್ ಜಾರಿ ಮಾಡಿದೆ. ದಕ್ಷಿಣ ಕೋಲ್ಕತ್ತಾದ ಜಾದವ್‌ಪುರ ಪ್ರದೇಶದ ಕರ್ತ್ಜು ನಗರ ಶಾಲೆಯಿಂದ ಸೋಮವಾರ ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದ್ದು, ಸಹಾಯಕ ಚುನಾವಣಾ ನೋಂದಣಿ ಅಧಿಕಾರಿ (AERO) ಮುಂದೆ ಹಾಜರಾಗುವಂತೆ ಶಮಿ ಮತ್ತು ಅವರ ತಮ್ಮನಿಗೆ ಸೂಚಿಸಲಾಗಿದೆ….