Headlines

ಈ ವರ್ಷ 1 ಟ್ರಿಲಿಯನ್ ಡಾಲರ್ ರಫ್ತು ಗುರಿ ಅಸಾಧ್ಯ; ಭಾರತಕ್ಕಿರುವ ಪ್ರಮುಖ ತೊಡಕುಗಳಿವು… – Kannada News | India may miss export target of 1 trillion USD this year, know the reasons for the setback

ನವದೆಹಲಿ, ಡಿಸೆಂಬರ್ 26: ಭಾರತ ಈ ಹಣಕಾಸು ವರ್ಷದಲ್ಲಿ ಒಂದು ಟ್ರಿಲಿಯನ್ ಡಾಲರ್ ಮೊತ್ತದ ಸರಕು ಮತ್ತು ಸೇವೆಗಳನ್ನು ರಫ್ತು (export) ಮಾಡುವ ಗುರಿ ಇಟ್ಟಿತ್ತು. ಆದರೆ, ಈವರೆಗಿನ ರಫ್ತು ಅಂಕಿ ಅಂಶ ಗಮನಿಸಿದಾಗ ಮೇಲಿನ ಒಂದು ಟ್ರಿಲಿಯನ್ ಡಾಲರ್ ಗುರಿ ಮುಟ್ಟುವುದು ಬಹುತೇಕ ಅಸಾಧ್ಯದಂತೆ ಕಾಣುತ್ತಿದೆ. ಗ್ಲೋಬಲ್ ಟ್ರೇಡ್ ರಿಸರ್ಚ್ ಇನಿಷಿಯೇಟಿವ್ (ಜಿಟಿಆರ್​ಐ) ತನ್ನ ವರದಿಯೊಂದರಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ, ಭಾರತದ ರಫ್ತು ಗುರಿ ವಿಫಲವಾಗಲು ಏನು ಕಾರಣ ಎಂದು ವಿವರಿಸುವ ಪ್ರಯತ್ನ ಮಾಡಿದೆ. ಭಾರತದಲ್ಲಿ…

Read More

ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ! – Kannada News | Rare Black Leopard Sighted by Early Morning Safari Goers in Chamarajanagar

ಚಾಮರಾಜನಗರ, ಏಪ್ರಿಲ್ 27: ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಫಾರಿ ವಲಯದಲ್ಲಿ ಅಪರೂಪದ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿ ಪ್ರವಾಸಿಗರನ್ನು ಆಕರ್ಷಿಸಿದೆ. ಬೆಳ್ಳಂಬೆಳಗ್ಗೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಈ ವಿಶಿಷ್ಟ ಕರಿಚಿರತೆಯ ದರ್ಶನವಾಗಿದೆ. ಅಪರೂಪದ ಕರಿಚಿರತೆಯನ್ನು ನೋಡಿದ ಪ್ರವಾಸಿಗರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಪಿ.ಜಿ.ಪಾಳ್ಯ ಸಫಾರಿ ವಲಯದ ವನ್ಯಜೀವಿ ವೈವಿಧ್ಯತೆಗೆ ಮತ್ತಷ್ಟು ಮೆರಗು ನೀಡಿದೆ. ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳ ಭಾಗವಾಗಿರುವ ಈ ವಲಯವು ಅನೇಕ ಅಪರೂಪದ ಪ್ರಾಣಿಗಳಿಗೆ ನೆಲೆಯಾಗಿದೆ. ಕರಿಚಿರತೆಯು ಮೆಲನಿಸ್ಟಿಕ್ ಗುಣಲಕ್ಷಣಗಳನ್ನು…

Read More

ಕಾಂಗ್ರೆಸ್ ಮಹಿಳಾ ವಿರೋಧಿ ಎಂದ ಬಿಜೆಪಿ: ದೇಶದ ಮಹಿಳೆಯರ ಗೆಲುವು ಎಂದ ಕೈ; ನಾಯಕರ ಕೆಸರೆರಚಾಟ – Kannada News | Women’s Reservation Bill Defeated in Lok Sabha: karnataka BJP spark on Congress

ಮಹಿಳಾ ಮೀಸಲಾತಿ ವಿಧೇಯ (ಸಂಗ್ರಹ ಚಿತ್ರ)Image Credit source: google ಬೆಂಗಳೂರು, ಏಪ್ರಿಲ್​ 17: ನಾರಿ ಶಕ್ತಿ ವಂದನಾ ಅಧಿನಿಯಮ ಅರ್ಥಾತ್ ಮಹಿಳಾ ಮೀಸಲಾತಿ (Women’s Reservation Bill) ವಿಧೇಯಕಕ್ಕೆ ಲೋಕಸಭೆಯಲ್ಲಿ ಸೋಲಾಗಿದೆ. ಆ ಮೂಲಕ ಒಂದೆಡೆ ಎನ್​​ಡಿಎ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ಮತ್ತೊಂದೆಡೆ ಕಾಂಗ್ರೆಸ್​ ನಾಯಕರು ಸಂಭ್ರಮಿಸಿದ್ದಾರೆ. ವಿಪಕ್ಷಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ. ಇತ್ತ ಕರ್ನಾಟಕದಲ್ಲಿ (karnataka) ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರು ಕೆಸರೆರಚಾಟ ನಡೆಸಿದ್ದಾರೆ. ನಾರಿ ಶಕ್ತಿ ವಂದನಾ…

Read More

ಬೆಂಗಳೂರಿನಲ್ಲಿ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ ಅಬ್ದುಲ್​​ಗೆ ಚಪ್ಪಲಿ ಏಟು

ಬೆಂಗಳೂರು, ಮಾ.26: ನೆಲಮಂಗಲ ತಾಲೂಕಿನ ಬೇಗೂರು ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರೊಬ್ಬರು ವಿದ್ಯಾರ್ಥಿನಿಯೊಬ್ಬಳಿಗೆ ತರಗತಿಯಲ್ಲೇ ಪ್ರಪೋಸ್ ಮಾಡಿರುವ ಘಟನೆ ನಡೆದಿದೆ. ಪ್ರಾಧ್ಯಾಪಕ ಅಬ್ದುಲ್ ಎಂಬಾತ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರೀತಿ ನಿವೇದನೆ ಮಾಡಿದ್ದಾನೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಪ್ರಾಂಶುಪಾಲರೊಂದಿಗೆ ಮಾತನಾಡುವಂತೆ ತಿಳಿಸಿದ್ದಾಳೆ. ಈ ಘಟನೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್‌ನನ್ನು ಕಾಲೇಜು ಆವರಣದಲ್ಲಿ ಅಟ್ಟಾಡಿಸಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಬ್ದುಲ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಪ್ರಸ್ತುತ ಪ್ರಾಧ್ಯಾಪಕ ಅಬ್ದುಲ್ ತಲೆಮರೆಸಿಕೊಂಡಿದ್ದು, ನೆಲಮಂಗಲ ಗ್ರಾಮಾಂತರ ಪೊಲೀಸರು…

Read More

ಜಿಬಿಎ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ಪರ-ವಿರೋಧ ಚರ್ಚೆಗೆ ಕಾರಣವಾದ ಆಯೋಗದ ನಿರ್ಧಾರ – Kannada News | Election Commission to Use Ballot Papers for GBA Elections, Sparks Debate

ಬೆಂಗಳೂರು, ಜನವರಿ 19: ಚುನಾವಣಾ ಆಯೋಗವು ಜಿಬಿಎ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್‌ಗಳ ಮೂಲಕ ನಡೆಸಲು ನಿರ್ಧರಿಸಿದೆ. ಮೇ 25ರ ನಂತರ ನಡೆಯಲಿರುವ ಈ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಚುನಾವಣಾ ಆಯೋಗವು ತನ್ನದೇ ಆದ ಕಾರಣಗಳನ್ನು ನೀಡಿದ್ದು, ಬ್ಯಾಲೆಟ್ ಪೇಪರ್‌ಗಳನ್ನು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ, ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಮತಪತ್ರಗಳ ಬಳಕೆ ತಮ್ಮ ನಿರ್ಧಾರ ಎಂದು ತಿಳಿಸಿದೆ. ಆದಾಗ್ಯೂ ಈ ಕ್ರಮವು ಹೊಸ ಚರ್ಚೆಗೆ ಕಾರಣವಾಗಿದೆ….

Read More

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸಂಕಷ್ಟ: ಡಿಸೇಲ್ ಬೆಲೆ ಹೆಚ್ಚಳದಿಂದ ಪ್ರತಿ ತಿಂಗಳು 4 ಕೋಟಿ ರೂ. ಹೆಚ್ಚುವರಿ ಹೊರೆ – Kannada News

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್​ಗಳುImage Credit source: tv9 ಹುಬ್ಬಳ್ಳಿ, ಜೂನ್ 9: ಜಾಗತಿಕ ಯುದ್ಧದ ಸನ್ನಿವೇಶಗಳು ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವುದು ದೇಶದ ಆರ್ಥಿಕತೆಯ ಮೇಲೆ ಮಾತ್ರವಲ್ಲದೆ ರಾಜ್ಯದ ಸಾರ್ವಜನಿಕ ಸಾರಿಗೆ ಸಂಸ್ಥೆಗಳ ಮೇಲೂ ಪರಿಣಾಮ ಬೀರಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಕೂಡ ತೀವ್ರ ಆರ್ಥಿಕ ಆಘಾತಕ್ಕೆ ಒಳಗಾಗಿದ್ದು, ದಿನನಿತ್ಯದ ಬಸ್ ಕಾರ್ಯಾಚರಣೆ ಹಾಗೂ ನಿರ್ವಹಣೆಗೆ ಹಣ ಹೊಂದಿಸಲು ಪರದಾಡುವಂತಾಗಿದೆ. ಮುಖ್ಯಾಂಶಗಳು…

Read More

ಆ ನಿಮ್ಮ ದೇವರಿಗಿಂತ ಮೋದಿಯೇ ಉತ್ತಮ: ಮುಫ್ತಿ ಷಮಾಯಿಲ್ ನದ್ವಿಗೆ ಕುಟುಕಿದ ಜಾವೇದ್ ಅಖ್ತರ್ – Kannada News | Javed Akhtar and Mufti Shamail Nadwi debate on existence of The God

ನವದೆಹಲಿ, ಡಿಸೆಂಬರ್ 21: ಜಗತ್ತಿನ ಎಲ್ಲಾ ಧರ್ಮಗಳನ್ನು ಯಾವುದೇ ಭೇದವಿಲ್ಲದೇ ಕುಟುಕುವ ಬಾಲಿವುಡ್ ಚಿತ್ರ ಸಾಹಿತಿ, ಕವಿ ಹಾಗೂ ವಿಚಾರವಂತರಾದ ಜಾವೇದ್ ಅಖ್ತರ್ (Javed Akhtar), ಮತ್ತೊಮ್ಮೆ ದೇವರ ಅಸ್ತಿತ್ವವನ್ನು ಪ್ರಶ್ನೆ ಮಾಡಿದ್ದಾರೆ. ದಿ ಲಲ್ಲನ್​ಟಾಪ್ ಎನ್ನುವ ಯೂಟ್ಯೂಬ್ ಪೋಡ್​ಕ್ಯಾಸ್ಟ್​ನಲ್ಲಿ ಇಸ್ಲಾಮೀ ವಿದ್ವಾಂಸ ಮುಫ್ತಿ ಷಮಾಯಿಲ್ ನದ್ವಿ (Mufti Shamail Nadwi) ಮತ್ತು ಜಾವೇದ್ ಅಖ್ತರ್ ನಡುವೆ ದೇವರ ಅಸ್ತಿತ್ವ ವಿಚಾರ ಕುರಿತು ನಡೆದ ಚರ್ಚೆ ಸಾಕಷ್ಟು ಪ್ರತಿಕ್ರಿಯೆ ಪಡೆಯುತ್ತಿದೆ. ಈ ವೇಳೆ, ಅಖ್ತರ್ ಅವರು ಪ್ಯಾಲೆಸ್ಟೀನ್…

Read More

ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಮೈಸೂರು ಪೊಲೀಸರು – Kannada News | Mysuru SP Team Nabs Illegal Kerala Lottery Sellers in Periyapatna Raids

ಮೈಸೂರು, ಫೆ.12: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ವಿಶೇಷ ತಂಡ ಪತ್ತೆಹಚ್ಚಿ ಭರ್ಜರಿ ಕಾರ್ಯಾಚರಣೆ ನಡೆಸಿದೆ.ಪಿರಿಯಾಪಟ್ಟಣದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅರುಣ್ ಕುಮಾರ್ ಹಾಗೂ ಸ್ವಾಮಿ ಎಂದು ಹೇಳಲಾಗಿದೆ. ಅರುಣ್ ಕುಮಾರ್ ಪಿರಿಯಾಪಟ್ಟಣದ ವೆಂಕಟೇಶ್ವರ ವೇ ಬ್ರಿಡ್ಜ್ (Weigh Bridge) ಬಳಿ ಅಕ್ರಮವಾಗಿ ಲಾಟರಿ ಮಾರಾಟ ಮಾಡುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ. ಸ್ವಾಮಿಯನ್ನು ಪಿರಿಯಾಪಟ್ಟಣದ ಸಿಂಚನ ಹೋಟೆಲ್‌ನಲ್ಲಿ…

Read More

ಧುರಂಧರ್​ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು – Kannada News | Two Youths from the State Linked to Pakistani Suspect; Key Details Emerge

ತುಮಕೂರು, ಜೂನ್​​ 21: ಪಾಕ್​​ ಶಂಕಿತನ ಜೊತೆ ನಂಟು ಹೊಂದಿದ್ದ ರಾಜ್ಯದ ಇಬ್ಬರು ಯುವಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಧುರಂಧರ್​ ಚಿತ್ರದ ಮಾದರಿಯಲ್ಲಿ ಭಾರತದಲ್ಲಿ ಡಾನ್​​ ಸೃಷ್ಟಿಗೆ ಷಡ್ಯಂತ್ರ ನಡೆದಿತ್ತು ಎಂಬ ಬಗ್ಗೆ ಪೊಲೀಸ್​ ವಿಚಾರಣೆ ವೇಳೆ ಆರೋಪಿ ಅಲ್ಲಾಭಕ್ಷು ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ್ದಾನೆ. ಭಾರತದಲ್ಲೇ ಯುವಕರ ಟಾರ್ಗೆಟ್ ಮಾಡಿ ಹೊಸ ಸಂಚಿಗೆ ತಯಾರಿ ನಡೆದಿತ್ತು. ಅದಕ್ಕಾಗಿ ತಮಗೆ ಬೇಕಾದ ರೀತಿ ಕೆಲಸ ಮಾಡುವ ವ್ಯಕ್ತಿಗಾಗಿ ಹುಡುಕಾಟ ನಡೆದಿತ್ತು. ಅರ್ಹತೆ…

Read More

ಗಾಯಗೊಂಡ ವಿರಾಟ್ ಕೊಹ್ಲಿ; ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಔಟ್ – Kannada News

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಈಗಾಗಲೇ ಟೆಸ್ಟ್ ಹಾಗೂ ಟಿ20 ಮಾದರಿಯ ಕ್ರಿಕೆಟ್​​ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಐಪಿಎಲ್ ಹೊರತುಪಡಿಸಿ ಅವರ ಆಟ ನೋಡ ಸಿಗೋದು ಏಕದಿನ ಪಂದ್ಯಗಳಲ್ಲಿ ಮಾತ್ರ. ಅವರು ಅಪ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಬೇಕಿತ್ತು. ಆದರೆ, ಸ್ನಾಯು ಸೆಳೆತದ ಕಾರಣದಿಂದ ಈ ಸರಣಿಯಿಂದ ಹೊರ ನಡೆದಿದ್ದು, ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅಪ್ಘಾನಿಸ್ತಾನ ತಂಡ ಭಾರತಕ್ಕೆ ಆಗಮಿಸುತ್ತಿದ್ದು, ಜೂನ್ 6-10ರವರೆಗೆ ಒಂದು ಟೆಸ್ಟ್ ಪಂದ್ಯ ಆಡಲಿದೆ. ಜೂನ್ 13ರಿಂದ…

Read More