ನಾನು ಬಾರ್ ಮುಂದೆ ನಿಂತು ಕುಡಿದು ತೂರಾಡೋದನ್ನ ನೋಡಿದ್ದಿರಾ? ಕುಡುಕ ಎಂದ ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕೆಂಡಾಮಂಡಲ – Kannada News | BJP MLC CT Ravi Hits Back at Congress For KPCC Called Drunker
ರಾಯಚೂರು, (ಜುಲೈ 27): ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ (CT Ravi) ಅವರನ್ನು ಕುಡುಕ ಎನ್ನುವ ರೀತಿ ಕೆಪಿಸಿಸಿ ಅಧಿಕೃತ ಖಾತೆಯಿಂದ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ಸಿಟಿ ರವಿ ಅವರು ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಟಿ ರವಿ, ಆ ಪಕ್ಷದ ಅಧಿಕೃತ ಸೋಶಿಯಲ್ ಮಿಡಿಯಾದಲ್ಲಿ ಕುಡುಕ ಅಂತ ಹಾಕ್ತಾರೆ ಅಂದ್ರೆ, ಆ ಪಕ್ಷ ಚರಂಡಿ ನೀರಿಗಿಂತ ಕಡೆಯಾಗಿದೆ ಅನ್ನೋದಕ್ಕೆ ಸಾಕ್ಷಿ. ನಾನು ಹೇಗೆ ಅಂತ ಎಲ್ಲರಿಗೂ ಗೊತ್ತು….