ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ – Kannada News | Raichur Homemaker Buys Refrigerator Using Gruha Lakshmi Scheme Savings, Thanks Karnataka Government
ರಾಯಚೂರು, ಜನವರಿ 3: ಗೃಹಲಕ್ಷ್ಮಿ ಯೋಜನೆಯ ನೆರವಿನಿಂದ ರಾಯಚೂರಿನಲ್ಲಿ ಗೃಹಿಣಿಯೊಬ್ಬರು ಫ್ರಿಡ್ಜ್ ಖರೀದಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಪ್ಪಲದೊಡ್ಡಿ ಗ್ರಾಮದ ನಿವಾಸಿ ಹನುಮಮ್ಮ ನಡುಲಮನಿ ಅವರು, ಸರ್ಕಾರದಿಂದ ಪ್ರತಿ ತಿಂಗಳು ದೊರೆಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ 2,000 ರೂ. ಹಣವನ್ನು ಸಂಗ್ರಹಿಸಿ ಫ್ರಿಡ್ಜ್ ಖರೀದಿಸಿದ್ದಾರೆ. ಹನುಮಮ್ಮ ಅವರು ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ ಒಟ್ಟು 23 ಕಂತುಗಳ ಹಣವನ್ನು ಪಡೆದಿದ್ದು, ಆ ಹಣವನ್ನು ಖರ್ಚು ಮಾಡದೇ ಕೂಡಿಟ್ಟಿದ್ದರು. ಈ ಮೂಲಕ ಒಟ್ಟು 17 ಸಾವಿರ ರೂಪಾಯಿ ವೆಚ್ಚದಲ್ಲಿ ಫ್ರಿಡ್ಜ್…