ಏಷ್ಯನ್ ಗೇಮ್ಸ್ನಲ್ಲಿ ಟೀಮ್ ಇಂಡಿಯಾ ಎದುರಾಳಿ ಯಾರು? – Kannada News | Asian Games 2026: Team India Schedule
ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯ ಅಧಿಕೃತ ಡ್ರಾ ಮತ್ತು ವೇಳಾಪಟ್ಟಿ ಪ್ರಕಟವಾಗಿದೆ. ಅಗ್ರ ಶ್ರೇಯಾಂಕದ ಬಲದೊಂದಿಗೆ ಭಾರತದ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳು ನೇರವಾಗಿ ಕ್ವಾರ್ಟರ್‌ಫೈನಲ್ ಹಂತಕ್ಕೆ ಪ್ರವೇಶ ಪಡೆದಿವೆ. ಐಸಿಸಿ ಟಿ20 ಶ್ರೇಯಾಂಕದ ಆಧಾರದ ಮೇಲೆ ಭಾರತದ ಉಭಯ ತಂಡಗಳಿಗೆ ಈ ವಿಶೇಷ ಸ್ಥಾನ ಲಭಿಸಿದೆ. ಮಹಿಳಾ ವಿಭಾಗದಲ್ಲಿ ಭಾರತಕ್ಕೆ ಎದುರಾಳಿ ಯಾರು ಎಂಬುದು ಖಚಿತವಾಗಿದ್ದರೆ, ಪುರುಷರ ವಿಭಾಗದಲ್ಲಿ ಅರ್ಹತಾ ಸುತ್ತಿನ ಬಳಿಕ ಎದುರಾಳಿ ನಿರ್ಧಾರವಾಗಲಿದೆ. ಅರ್ಹತಾ…