Ayyappa Swami: ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಫೋಟೋ ಇಡುವ ಮುನ್ನ ಈ ವಿಷ್ಯ ತಿಳಿದಿರಲಿ – Kannada News | Keeping Ayyappa Swamis Photo at Home: Guidelines and Benefits
“ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದೇ?” ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಹರಿಹರ ಸುತನಾದ ಅಯ್ಯಪ್ಪ ಸ್ವಾಮಿ, ಶಬರಿಮಲೆಯಲ್ಲಿ ಪೂಜಿಸಲ್ಪಡುವ ಪವಿತ್ರ ಹಿಂದೂ ದೇವರು. ಮಾಲಾಧಾರಿಗಳು ಶಬರಿಮಲೆ ಯಾತ್ರೆಗೆ ತೆರಳುವಾಗ ಕಪ್ಪು ವಸ್ತ್ರ ಧರಿಸಿ, ಚಪ್ಪಲಿ ಹಾಕದೆ, ಸಾತ್ವಿಕ ಆಹಾರ ಸೇವಿಸಿ, ನಿರಂತರ ಭಜನೆ ಮತ್ತು ಪ್ರಾರ್ಥನೆಯಲ್ಲಿ ತೊಡಗಿಕೊಂಡು ಕಠಿಣ ವ್ರತಗಳನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯಂದು ಜ್ಯೋತಿ ದರ್ಶನದೊಂದಿಗೆ…