2026 ರಲ್ಲಿ ಎಷ್ಟು ಪಂದ್ಯಗಳನ್ನಾಡಲಿದ್ದಾರೆ ರೋಹಿತ್, ಕೊಹ್ಲಿ? ಇಲ್ಲಿದೆ ಪೂರ್ಣ ವಿವರ – Kannada News | Team India’s Rohit Kohli ODI Schedule 2026: Road to World Cup 2027

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಟೀಂ ಇಂಡಿಯಾದ (Team India) ಇಬ್ಬರು ಸೂಪರ್​ಸ್ಟಾರ್​ಗಳಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲೂ ಮಿಂಚಿದ್ದರು. ಇದೀಗ ಇವರಿಬ್ಬರನ್ನು ಮತ್ತೆ ರಾಷ್ಟ್ರೀಯ ತಂಡದಲ್ಲಿ ನೋಡುವುದು ಯಾವಾಗ ಎಂಬ ಪ್ರಶ್ನೆ ಎಲ್ಲಾ ಅಭಿಮಾನಿಗಳ ಮನದಲ್ಲಿ ಮೂಡಿದೆ. ಆ ಪ್ರಶ್ನೆಗಳಿಗೆ ನಾವು ಉತ್ತರ ಹೇಳಲಿದ್ದೇವೆ. ಇದರ ಜೊತೆಗೆ ಈ ಇಡೀ ವರ್ಷ ಅಂದರೆ 2026 ರಲ್ಲಿ ಈ ಇಬ್ಬರು ದಿಗ್ಗಜರು ಎಷ್ಟು ಪಂದ್ಯಗಳನ್ನಾಡಿದ್ದಾರೆ? ಹಾಗೆಯೇ 2027 ರಲ್ಲಿ ನಡೆಯಲಿರುವ ವಿಶ್ವಕಪ್​ಗೂ ಮುನ್ನ ಇವರಿಬ್ಬರು ಎಷ್ಟು ಪಂದ್ಯಗಳನ್ನು ಆಡಲಿದ್ದಾರೆ? ಎಂಬುದರ ಪೂರ್ಣ ವಿವರ ಇಲ್ಲಿದೆ.

2026 ರಲ್ಲಿ ಭಾರತ ಎಷ್ಟು ಏಕದಿನ ಪಂದ್ಯಗಳನ್ನು ಆಡಲಿದೆ?

2026 ರಲ್ಲಿ, ಭಾರತ ತಂಡವು ಆರು ವಿಭಿನ್ನ ತಂಡಗಳ ವಿರುದ್ಧ ಒಟ್ಟು 18 ಏಕದಿನ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ. ಇದರಲ್ಲಿ ತವರು ಮತ್ತು ವಿದೇಶ ಸರಣಿಗಳು ಸೇರಿವೆ. ರೋಹಿತ್ ಮತ್ತು ವಿರಾಟ್ ಫಿಟ್ ಆಗಿ ಉಳಿದು ತಮ್ಮ ಫಾರ್ಮ್ ಅನ್ನು ಕಾಯ್ದುಕೊಂಡರೆ, ಈ ಪಂದ್ಯಗಳಲ್ಲಿ ಹೆಚ್ಚಿನವುಗಳಲ್ಲಿ ಆಡಲು ಅವಕಾಶ ಪಡೆಯಲಿದ್ದಾರೆ. ವಿಶ್ವಕಪ್‌ಗೆ ಮುನ್ನ ಏಕದಿನ ಪಂದ್ಯಗಳ ಸಂಖ್ಯೆ ಸೀಮಿತವಾಗಿರುವುದರಿಂದ ಈ ವರ್ಷ ಅವರಿಗೆ ವಿಶೇಷವಾಗಿರಲಿದೆ.

ರೋಹಿತ್, ವಿರಾಟ್‌ಗೆ ವಿಪುಲ ಅವಕಾಶಗಳು

ಜನವರಿ 2026 ರಲ್ಲಿ, ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ತವರು ಸರಣಿಯನ್ನು ಆಡಲಿದೆ. ಜನವರಿ 11 ರಿಂದ 18 ರವರೆಗೆ ಮೂರು ಏಕದಿನ ಪಂದ್ಯಗಳು ನಡೆಯಲಿವೆ. ಇದು ವರ್ಷದ ಆರಂಭ ಮತ್ತು ಇಬ್ಬರೂ ಅನುಭವಿ ಆಟಗಾರರಿಗೆ ತಮ್ಮ ಫಾರ್ಮ್ ಅನ್ನು ಕಾಯ್ದುಕೊಳ್ಳಲು ಉತ್ತಮ ಅವಕಾಶವಾಗಿರುತ್ತದೆ. ಇದರ ನಂತರ, ಟೀಂ ಇಂಡಿಯಾ ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಜುಲೈ 14 ರಿಂದ 19 ರವರೆಗೆ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಇದರ ನಂತರ, ಟೀಂ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಬಹುದು, ಆದರೆ ವೇಳಾಪಟ್ಟಿಯನ್ನು ಘೋಷಿಸಲಾಗಿಲ್ಲ.

ಟೀಂ ಇಂಡಿಯಾ ಅಕ್ಟೋಬರ್ 2026 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತವರು ಸರಣಿಯನ್ನು ಆಡಲಿದೆ. ಈ ಅವಧಿಯಲ್ಲಿ ಎರಡೂ ತಂಡಗಳ ನಡುವೆ ಮೂರು ಏಕದಿನ ಪಂದ್ಯಗಳು ನಡೆಯಲಿವೆ. ರೋಹಿತ್ ಮತ್ತು ವಿರಾಟ್ ಕೆರಿಬಿಯನ್ ತಂಡದ ವಿರುದ್ಧ ಅತ್ಯುತ್ತಮ ದಾಖಲೆಯನ್ನು ಹೊಂದಿದ್ದಾರೆ, ಆದ್ದರಿಂದ ಈ ಸರಣಿ ಅವರಿಗೆ ಸ್ಮರಣೀಯವಾಗಬಹುದು. ಆ ಬಳಿಕ ಟೀಂ ಇಂಡಿಯಾ ಅಕ್ಟೋಬರ್-ನವೆಂಬರ್‌ನಲ್ಲಿ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಲಾಗುತ್ತದೆ. ನಂತರ, ವರ್ಷದ ಕೊನೆಯಲ್ಲಿ, ಭಾರತ ತಂಡವು ಶ್ರೀಲಂಕಾ ವಿರುದ್ಧ ತವರು ಸರಣಿಯನ್ನು ಆಡಲಿದೆ, ಇದರಲ್ಲಿ ಮೂರು ಏಕದಿನ ಪಂದ್ಯಗಳು ಸಹ ಸೇರಿವೆ.

IND vs NZ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಯಾವಾಗ?

2025 ರಲ್ಲಿ ಮಿಂಚಿದ್ದ ಇಬ್ಬರು

2025 ರಲ್ಲಿ, ವಿರಾಟ್ ಕೊಹ್ಲಿ ಏಕದಿನ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಆಡಿದ 13 ಪಂದ್ಯಗಳಲ್ಲಿ 65.1 ರ ಸರಾಸರಿಯಲ್ಲಿ 651 ರನ್ ಕಲೆಹಾಕಿದರು. ಇದರೊಂದಿಗೆ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಇದರ ಜೊತೆಗೆ ಗೆಲುವಿನ ಪಂದ್ಯಗಳಲ್ಲಿ 18,000 ರನ್ ಗಳಿಸಿದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಯನ್ನು ಬರೆದರು. ಕೊಹ್ಲಿಯಂತೆ ರೋಹಿತ್ ಶರ್ಮಾ ಕೂಡ ಚಾಂಪಿಯನ್ಸ್ ಟ್ರೋಫಿ ಗೆಲುವಿನ ನಾಯಕತ್ವ ವಹಿಸುವುದರ ಜೊತೆಗೆ, ಆಡಿದ 14 ಏಕದಿನ ಪಂದ್ಯಗಳಲ್ಲಿ 50 ಸರಾಸರಿಯನ್ನು ಹೊಂದಿದ್ದರು ಮತ್ತು ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸ್ವಿಜರ್ಲೆಂಡ್​ ಬಾರ್​​ನಲ್ಲಿ ಬೆಂಕಿ ಅವಘಡ; ಸಾವಿನ ಸಂಖ್ಯೆ 40ಕ್ಕೆ ಏರಿಕೆ – Kannada News | Death toll rises to 40 in Switzerland bar fire accident Swiss police rule out terrorist attack

ಬರ್ನ್ (ಸ್ವಿಟ್ಜರ್ಲೆಂಡ್), ಜನವರಿ 1: ಸ್ವಿಜರ್ಲೆಂಡ್‌ನ ಐಷಾರಾಮಿ ಬಾರ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 40 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಜನರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಖಚಿತಪಡಿಸಿದ್ದಾರೆ. ಇದಲ್ಲದೆ, ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಬಾರ್ ಮತ್ತು ಲೌಂಜ್‌ನ ನೆಲಮಾಳಿಗೆಯಲ್ಲಿ ಸಂಭವಿಸಿದ ಸ್ಫೋಟವನ್ನು ಬೆಂಕಿ ಅವಘಡ ಎಂದು ಊಹಿಸಲಾಗಿದೆ, ಇದು ಭಯೋತ್ಪಾದಕ ದಾಳಿಯಲ್ಲ ಎಂದು ಸ್ವಿಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ 150ಕ್ಕೂ ಹೆಚ್ಚು ಜನರು ಬಾರ್‌ನಲ್ಲಿದ್ದರು.

ಐಷಾರಾಮಿ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಬಾರ್‌ನಲ್ಲಿ ಮಧ್ಯರಾತ್ರಿಯ ನಂತರ ಬೆಂಕಿ ಕಾಣಿಸಿಕೊಂಡಿತ್ತು. ಅಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ಅನೇಕ ಜನರು ಸೇರಿದ್ದರು. ಬೆಂಕಿಯ ನಿಖರವಾದ ಕಾರಣವನ್ನು ನಿರ್ಧರಿಸಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆದರೆ ಇದು ಭಯೋತ್ಪಾದನಾ ಕೃತ್ಯವಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Video: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ, ಹಲವು ಮಂದಿ ಸಾವು

ಕ್ರಾನ್ಸ್-ಮೊಂಟಾನಾ ರೆಸಾರ್ಟ್ ಅಂತಾರಾಷ್ಟ್ರೀಯ ಸ್ಕೀ ಮತ್ತು ಗಾಲ್ಫ್ ಸ್ಥಳವೆಂದು ಪ್ರಸಿದ್ಧವಾಗಿದೆ. ರಾತ್ರೋರಾತ್ರಿ ಅದರ ಜನದಟ್ಟಣೆಯ ಲೆ ಕಾನ್ಸ್ಟೆಲೇಷನ್ ಬಾರ್ ಮೋಜು ಮಸ್ತಿಯಿಂದ ಸ್ವಿಜರ್ಲೆಂಡ್‌ನ ಅತ್ಯಂತ ಕೆಟ್ಟ ದುರಂತಗಳಲ್ಲಿ ಒಂದಾಗಿ ಮಾರ್ಪಟ್ಟಿದೆ. ಮೃತರಾದ 40 ಜನರನ್ನು ಗುರುತಿಸಲು ಮತ್ತು ಅವರ ಕುಟುಂಬಗಳಿಗೆ ತಿಳಿಸಲು ಕೆಲಸ ನಡೆಯುತ್ತಿದೆ.

ಈ ಘಟನೆ ನಡೆಯುತ್ತಿದ್ದಂತೆ ವಿವಿಧ ದೇಶಗಳ ಕೆಲವರು ಸೇರಿದಂತೆ ಮೃತರಿಗೆ ಸಹಾಯ ಮಾಡಲು ಹೆಲಿಕಾಪ್ಟರ್‌ಗಳು ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಬಾರ್‌ಮೇಡ್ ಬಾಟಲಿಯಲ್ಲಿ ಮೇಣದಬತ್ತಿಯನ್ನು ಹೊತ್ತಿಸಿ ಇಟ್ಟಿದ್ದರು, ಅದರಿಂದ ಮರದ ಸೀಲಿಂಗ್‌ಗೆ ಬೆಂಕಿ ಹೊತ್ತಿತು. ಬೆಂಕಿಯ ಜ್ವಾಲೆಗಳು ಬೇಗನೆ ಹರಡಿ ಸೀಲಿಂಗ್ ಅನ್ನು ಆವರಿಸಿದವು ಎನ್ನಲಾಗಿದೆ. ಆದರೆ, ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ – Kannada News | Ram Fighting Competition in Andhra Pradesh ahead of New Year

ಹೈದರಾಬಾದ್, ಜನವರಿ 1: ಇಂದು ಹೊಸ ವರ್ಷದ (New Year Celebration) ಆಚರಣೆಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಪಂಗುಲೂರು ಮಂಡಲದ ರೇಣಿಂಗವರಂ ಗ್ರಾಮದಲ್ಲಿ ನಡೆದ ಸಾಂಪ್ರದಾಯಿಕ ಟಗರು ಸ್ಪರ್ಧೆಗಳು ಪ್ರೇಕ್ಷಕರನ್ನು ವಿಶೇಷವಾಗಿ ಆಕರ್ಷಿಸಿದವು. ನೆರೆಯ ಹಳ್ಳಿಗಳಿಂದ ಹಾಗೂ ಪ್ರಕಾಶಂ, ಬಾಪಟ್ಲ ಮತ್ತು ಮಾರ್ಕಪುರಂ ಜಿಲ್ಲೆಗಳಿಂದ ಸುಮಾರು 41 ಜೋಡಿ ಟಗರುಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಈ ಅಪರೂಪದ ಟಗರು ಕಾಳಗ ನೋಡಲು ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದರು.

ತೆಲುಗು ದೇಶಂ ಪಕ್ಷದ ನಾಯಕ ಬೋರೆಡ್ಡಿ ಓಬುಲ್ ರೆಡ್ಡಿ ಅವರ ಮೇಲ್ವಿಚಾರಣೆಯಲ್ಲಿ ಈ ಸ್ಪರ್ಧೆಗಳು ನಡೆದವು. ಈ ಸ್ಪರ್ಧೆಗಳ ಮುಖ್ಯ ಉದ್ದೇಶ ಗ್ರಾಮೀಣ ಕ್ರೀಡೆಗಳನ್ನು ಉತ್ತೇಜಿಸುವುದು ಮತ್ತು ಹಬ್ಬದ ಸಮಯದಲ್ಲಿ ಜನರಲ್ಲಿ ಏಕತೆಯನ್ನು ತೋರಿಸುವುದು. ಸಂಕ್ರಾಂತಿ ಮತ್ತು ದಸರಾ ಹಬ್ಬಗಳಲ್ಲಿ ಮತ್ತು ಹಳ್ಳಿ ಜಾತ್ರೆಗಳಲ್ಲಿ ಇಲ್ಲಿ ಗೂಳಿ ಓಟದ ಜೊತೆಗೆ ಟಗರು ಸ್ಪರ್ಧೆಗಳನ್ನು ನಡೆಸುವುದು ವಾಡಿಕೆ. ಪ್ರಾಣಿ ಹಿಂಸೆ ನಿಷೇಧಿಸಿರುವುದರಿಂದ ಕೆಲವು ಪ್ರದೇಶಗಳಲ್ಲಿ ಮಾತ್ರ ವಿಶೇಷ ಅನುಮತಿಯೊಂದಿಗೆ ಇದನ್ನು ನಡೆಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah says budget preparations will begin from January itself: Amid power sharing

ಬೆಂಗಳೂರು, ಜನವರಿ 01: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಪಟ್ಟದ ಪೈಟ್​​ ಮಧ್ಯೆ ಸಿಎಂ ಸಿದ್ದರಾಮಯ್ಯ 2026-27ರ ರಾಜ್ಯ ಬಜೆಟ್ ಮಂಡಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಬಜೆಟ್ ಮಂಡನೆಗೆ ಸಿದ್ಧತೆಗಳು ನಡೆಯುತ್ತಿವೆ. ಜನವರಿಯಲ್ಲಿ ಬಜೆಟ್ ಸಿದ್ಧತೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು – Kannada News | Another Hindu man attacked with weapons and set on fire by mob in Bangladesh

ಢಾಕಾ, ಜನವರಿ 1: ಬಾಂಗ್ಲಾದೇಶದ ಹಿಂದೂ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ದಾಳಿ ಮಾಡಿ ಬೆಂಕಿ ಹಚ್ಚಿದೆ. ಇದರಿಂದ ಆತ ತೀವ್ರವಾಗಿ ಗಾಯಗೊಂಡಿದ್ದಾನೆ. ಇದು ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ಮೇಲೆ ನಡೆದ ಮತ್ತೊಂದು ಆತಂಕಕಾರಿ ದಾಳಿಯಾಗಿದೆ. ಡಿಸೆಂಬರ್ 31ರಂದು ಶರಿಯತ್‌ಪುರ ಜಿಲ್ಲೆಯಲ್ಲಿ ಈ ಭಯಾನಕ ಘಟನೆ ನಡೆದಿದ್ದು, ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಹೆಚ್ಚುತ್ತಿರುವ ದ್ವೇಷವು ಆತಂಕಕಾರಿಯಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು 50 ವರ್ಷದ ಖೋಕೋನ್ ದಾಸ್ ಎಂದು ಗುರುತಿಸಲಾಗಿದೆ. ಅವರು ಮನೆಗೆ ಹಿಂತಿರುಗುತ್ತಿದ್ದಾಗ ದಾಳಿಕೋರರ ಗುಂಪೊಂದು ಅವರ ಮೇಲೆ ದಾಳಿ ಮಾಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ – Kannada News | Abhishek of Lord Neelkanthvarni performed by baps during New Year Celebration

ನವದೆಹಲಿ, ಜನವರಿ 1: 2026ರ ಹೊಸ ವರ್ಷದ ಪ್ರಯುಕ್ತ ಬಿಎಪಿಎಸ್ (BAPS)  ಸ್ವಾಮಿನಾರಾಯಣ ಸಂಸ್ಥೆಯು ಪ್ರಪಂಚದಾದ್ಯಂತದ ಭಕ್ತರಿಗೆ ತನ್ನ ಆತ್ಮೀಯ ಶುಭಾಶಯಗಳನ್ನು ಕೋರಿದೆ. ಈ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಶಾಂತಿ, ಸಮೃದ್ಧಿ, ಆರೋಗ್ಯ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಯಿಂದ ತುಂಬಿದ ವರ್ಷವಾಗಲಿ ಎಂದು ಸಂಸ್ಥೆಯು ಹಾರೈಸಿದೆ. ಬಿಎಪಿಎಸ್ ಆಧ್ಯಾತ್ಮಿಕ ಗುರು ಮಹಾಂತ ಸ್ವಾಮಿ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ ಈ ಹೊಸ ವರ್ಷವು ಭಕ್ತರ ಜೀವನವನ್ನು ದೈವಿಕ ಆಶೀರ್ವಾದ, ಆಂತರಿಕ ಶಕ್ತಿ ಮತ್ತು ಸಂತೋಷದಿಂದ ತುಂಬಲಿ ಎಂದು ನಾವು ಪ್ರಾರ್ಥಿಸುತ್ತೇವೆ ಎಂದು ಬಿಎಪಿಎಸ್ ಹೇಳಿದೆ. ಹೊಸ ವರ್ಷದ ಸಂದರ್ಭದಲ್ಲಿ ಬಿಎಪಿಎಸ್ ಸಂಸ್ಥೆಯು ಭಗವಾನ್ ನೀಲಕಂಠವರ್ಣಿ ಸ್ವಾಮಿಯ ಅಭಿಷೇಕ ದರ್ಶನವನ್ನು ಭಕ್ತರೊಂದಿಗೆ ಹಂಚಿಕೊಂಡಿದೆ.

ಈ ಪವಿತ್ರ ದರ್ಶನವು ಭಕ್ತರ ಹೃದಯಗಳನ್ನು ಶುದ್ಧೀಕರಿಸಬೇಕು, ಅವರ ಆಲೋಚನೆಗಳನ್ನು ಶುದ್ಧೀಕರಿಸಬೇಕು ಮತ್ತು ಭಕ್ತಿ, ಸೇವೆ ಮತ್ತು ಸತ್ಸಂಗದ ಹಾದಿಯಲ್ಲಿ ಮುಂದುವರಿಯಲು ಅವರನ್ನು ಪ್ರೇರೇಪಿಸಬೇಕು ಎಂದು ಸಂಸ್ಥೆ ಹೇಳಿದೆ. ಸಮಾಜದಲ್ಲಿ ಶಾಂತಿ, ಏಕತೆ ಮತ್ತು ನೈತಿಕ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಬಿಎಪಿಎಸ್ ಸ್ವಾಮಿನಾರಾಯಣ ಸಂಸ್ಥೆಯು ನಿರಂತರವಾಗಿ ಸೇವಾ ಕಾರ್ಯಕ್ರಮಗಳನ್ನು ನಡೆಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾಸನ: ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ; ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು – Kannada News | Hassan Accident: 3 Dead as Pickup Overturns on NH 69 Near Areseekere

ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಅಪಘಾತ

ಹಾಸನ, ಜನವರಿ 01: ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತವೊಂದು (Accident) ಸಂಭವಿಸಿದೆ. ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್​ ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಮೃತರು. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದ್ದೇನು?

ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿದೆ ಎನ್ನಲಾಗುತ್ತಿದೆ. ಘಟನೆ ವೇಳೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಹಾಸನ ಮೂಲದ ನೌಶದ್ ಎಂಬುವವರು ಗಂಭೀರ ಗಾಯಗೊಂಡಿದ್ದು, ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಕಡೂರು ಆಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಪ್ರತ್ಯೇಕ ರಸ್ತೆ ಅಪಘಾತ: ತಮ್ಮದಲ್ಲದ ತಪ್ಪಿಗೆ ಮಗು ಸೇರಿ ನಾಲ್ವರು ದಾರುಣವಾಗಿ ಸಾವು

ಇನ್ನು ತಿಮ್ಮಣ್ಣ ಮತ್ತು ಸಂಜಯ್ ಮೃತದೇಹವನ್ನು ಕಡೂರು ಸರ್ಕಾರಿ ಆಸ್ಪತ್ರೆ, ಶಬ್ಬೀರ್ ಮೃತದೇಹವನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Published On – 8:45 pm, Thu, 1 January 26

Source link

ರೀಲ್ಸ್ ಮಾಡಿ ನಗದು ಬಹುಮಾನ ಗೆಲ್ಲಿ; ‘ಕೊರಗಜ್ಜ’ ಚಿತ್ರತಂಡದಿಂದ ಆಫರ್ – Kannada News | Koragajja movie giving cash prize how to participate

ಸಿನಿಮಾ (Cinema) ತಂಡಗಳು ಪ್ರೇಕ್ಷಕರನ್ನು ಸೆಳೆಯಲು ಏನೇನೋ ಕಸರತ್ತು ಮಾಡುತ್ತವೆ. ಭರ್ಜರಿ ಪ್ರಚಾರ, ಕಾಲೇಜುಗಳಿಗೆ ಭೇಟಿ, ನಟ-ನಟಿಯರು ಆಟೋ ಓಡಿಸುವುದು ಇನ್ನೂ ಏನೇನೋ, ಇವುಗಳಲ್ಲಿ ಬಹುಮಾನ ಘೋಷಣೆಯೂ ಒಂದು. ಸಿನಿಮಾ ನೋಡಿ ಪ್ರಶ್ನೆಗೆ ಉತ್ತರಿಸಿದವರಿಗೆ ಬಹುಮಾನ ಎಂದೆಲ್ಲ ಹಿಂದೆ ಆಫರ್​​ಗಳನ್ನು ನೀಡಲಾಗುತ್ತಿತ್ತು. ಸಿನಿಮಾದ ಕ್ಯಾಸೆಟ್ ಖರೀದಿಸಿದವರಿಗೆ ಬಹುಮಾನ ನೀಡಲಾಗುತ್ತಿತ್ತು. ಈಗಲೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಆಫರ್​​ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ ಇಂಥಹುದೇ ಒಂದು ಆಫರ್ ನೀಡಿದೆ.

ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಹೊಟೆಲ್ ಹಾಲಿಡೇ ಇನ್ ನಲ್ಲಿ‌‌ ನಡೆದ ವರ್ಣ ರಂಜಿತ ಸಮಾರಂಭದಲ್ಲಿ ಬಿಗ್ ಎಫ್ ಎಮ್ 92.7 ಮತ್ತು ಇನ್ನೂ ಕೆಲವು ಆಡಿಯೋ ಪ್ಲಾಟ್ ಫಾರ್ಮ್ ಗಳಲ್ಲಿ ಹೊಸವರ್ಷಾರಂಭದ ವರ್ಣರಂಜಿತ ಕಾರ್ಯಕ್ರಮದ ನಡುವೆ ನೆರೆದ ಗಣ್ಯರ ಮತ್ತು ಪತ್ರಕರ್ತರ ಸಮ್ಮುಖದಲ್ಲ “ಸಾಂಗ್ಸ್ ಪ್ರೀಮಿಯರ್” ಎನ್ನುವ ವಿನೂತನ ಕಾರ್ಯಕ್ರಮದ ಮುಖಾಂತರ ಹಾಡು ಪ್ಲೇ ಮಾಡಲಾಯ್ತು.

‘ಕೊರಗಜ್ಜ’ ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಸಹ ಚಿತ್ರತಂಡ ನೀಡಿದೆ. ಚೆನ್ನಾಗಿ ರೀಲ್ಸ್ ಮಾಡಿ ಹಂಚಿಕೊಂಡು, ಅದರಲ್ಲಿ ಚಿತ್ರತಂಡ ಆಯ್ಕೆ ಮಾಡಿದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆಯಂತೆ. ಹೀಗೆಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ:‘ಮಾರ್ಕ್’ ಹಾಗೂ ‘45’ ಸಿನಿಮಾಗಳು ಒಂದು ವಾರಕ್ಕೆ ಗಳಿಸಿದ್ದು ಎಷ್ಟು?

‘ಕೊರಗಜ್ಜ’ ಸಿನಿಮಾದ ರೇಡಿಯೋ ಪಾರ್ಟರ್ನರ್ 92.7 ಬಿಗ್ ಎಫ್ ಎಮ್ ನ ದಕ್ಷಿಣ ಭಾರತದ ಮುಖ್ಯಸ್ಥ ವಿಶ್ವಾಸ್ ರವರು ಮಾತನಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಹಾಡುಗಳನ್ನು ಆರ್​​ಜೆಗಳು, ಇತರೆ ಸಿಬ್ಬಂದಿ ಎಂಜಾಯ್ ಮಾಡಿದರು. ಈ ವೇಳೆ ಮಹಿಷಾಸುರ ಯಕ್ಷಗಾನ ತುಣುಕು ಸಹ ಪ್ರದರ್ಶನವಾಯ್ತು. ಸಾಂಗ್ಸ್ ಪ್ರೀಮಿಯರ್ ಕಾರ್ಯಕ್ರಮದಲ್ಲಿ ಶರೋನ್ ಪ್ರಭಾಕರ್,ಹಿರಿಯ ನಟಿ ಭವ್ಯ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಕರ್ ಸಹ ಹಾಜರಿದ್ದರು.

ಹೆಸರೇ ಸೂಚಿಸುತ್ತಿರುವಂತೆ ‘ಕೊರಗಜ್ಜ’ ಸಿನಿಮಾ ದೈವದ ಕುರಿತಾದ ಕತೆಯನ್ನು ಒಳಗೊಂಡಿರುವ ಸಿನಿಮಾ ಆಗಿದೆ. ಸಿನಿಮಾವನ್ನು ಸುಧೀರ್ ಅತ್ತಾವರ ನಿರ್ದೇಶನ ಮಾಡಿದ್ದಾರೆ. ‘ತ್ರಿವಿಕ್ರಮ‌ ಸಿನಿಮಾಸ್’ ಮತ್ತು ‘ಸಕ್ಸಸ್ ಫಿಲ್ಮ್ಸ್’ ಬ್ಯಾನರ್ ಮೂಲಕ ‘ಕೊರಗಜ್ಜ’ ಸಿನಿಮಾ ಮೂಡಿಬರುತ್ತಿದೆ. ‘ಕೊರಗಜ್ಜ’ ಸಿನಿಮಾ ಕನ್ನಡ ಮಾತ್ರವೇ ಅಲ್ಲದೆ ಇನ್ನೂ ಕೆಲವು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

VHT 2025-26: ದೇಶಿ ಟೂರ್ನಿಯಲ್ಲಿ ಎಡಗೈ ದಾಂಡಿಗರದ್ದೇ ಪಾರುಪತ್ಯ; ಅಗ್ರಸ್ಥಾನದಲ್ಲಿ ಕನ್ನಡಿಗ – Kannada News | Vijay Hazare 2025 26: Padikkal Leads Top Run Scorers; Left Handers Dominate

ಭಾರತದ ದೇಶೀಯ ಕ್ರಿಕೆಟ್‌ನ ಅತಿದೊಡ್ಡ ಏಕದಿನ ಪಂದ್ಯಾವಳಿಯಾದ ವಿಜಯ್ ಹಜಾರೆ ಟ್ರೋಫಿಯ 2025-26 ಸೀಸನ್ ಇಲ್ಲಿಯವರೆಗೆ 4 ಸುತ್ತುಗಳನ್ನು ಮುಗಿಸಿದೆ. ಈ ಪಂದ್ಯಾವಳಿಯಲ್ಲಿ ಬ್ಯಾಟ್ಸ್‌ಮನ್‌ಗಳು ಸ್ಪಷ್ಟವಾಗಿ ಪ್ರಾಬಲ್ಯ ಸಾಧಿಸುತ್ತಿದ್ದು ರನ್​ಗಳ ಮಳೆಯೇ ಹರಿಯುತ್ತಿದೆ. ಅನೇಕ ಆಟಗಾರರು ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಭಾರತ ತಂಡದ ಕದ ತಟ್ಟುತ್ತಿದ್ದಾರೆ. ಅದರಲ್ಲೂ ಗಮನಾರ್ಹವಾಗಿ, ಎಡಗೈ ಬ್ಯಾಟ್ಸ್‌ಮನ್‌ಗಳು ಅತಿ ಹೆಚ್ಚು ರನ್ ಗಳಿಸಿದ್ದು, ಅತ್ಯಧಿಕ ರನ್ ಕಲೆಹಾಕಿದ ಅಗ್ರ ಐವರಲ್ಲಿ ಮೂವರು ಎಡಗೈ ಬ್ಯಾಟ್ಸ್‌ಮನ್‌ಗಳೇ ಸೇರಿದ್ದಾರೆ.

Source link

ಬಂಡೆ ಬ್ಲಾಸ್ಟ್​​ನಿಂದ 4 ಚಿರತೆಗಳು ಸಾವು: ಹೋರಾಟದ ಎಚ್ಚರಿಕೆ ಕೊಟ್ಟ ST ಸೋಮಶೇಖರ್, ಖಂಡ್ರೆ ಹೇಳಿದ್ದಿಷ್ಟು – Kannada News | Bengaluru: Four Leopards Killed in Rock Blasting Incident; MLA ST Somashekhar Warns of Protest

ಬೆಂಗಳೂರು, ಜನವರಿ 01: ನಾಲ್ಕು ಚಿರತೆಗಳ (Leopard) ಮೃತದೇಹ ಛಿದ್ರ ಛಿದ್ರವಾಗಿದೆ. ಕ್ವಾರಿಯಿಂದ  ಸಿಡಿದ (Quarry Blast) ಕಲ್ಲು ನಾಲ್ಕು ಚಿರತೆಗಳ ಪ್ರಾಣ ತೆಗೆದಿದೆ. ಗರ್ಭಿಣಿ ಚಿರತೆ ಮತ್ತು ಚಿರತೆಯ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಹುಟ್ಟುವ ಮೊದಲೇ ಸತ್ತು ಹೋಗಿವೆ. ಚಿರತೆ ಕೊಂದವರ ವಿರುದ್ಧ ಯಶವಂತಪುರ ಕ್ಷೇತ್ರದ ಶಾಸಕ ಎಸ್‌.ಟಿ ಸೋಮಶೇಖರ್ ಕಿಡಿಕಾರಿದ್ದಾರೆ.

ಏನಿದು ಪ್ರಕರಣ?

ಯಶವಂತಪುರ ಕ್ಷೇತ್ರ ವ್ಯಾಪ್ತಿಗೆ ಬರುವ ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮ ಪಂಚಾಯ್ತಿ ವಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಕಲ್ಲು ಬಂಡೆ ಹೊಡೆಯಲು ಸಿಡಿಮದ್ದು ಸಿಡಿಸಲಾಗಿದ್ದು, ಕ್ವಾರಿಯಿಂದ ಸಿಡಿದ ಕಲ್ಲು ಗರ್ಭಿಣಿ ಚಿರತೆಗೆ ಬಡಿದಿದೆ. ಇದ್ರಿಂದ ಚಿರತೆ ಮೃತಪಟ್ಟಿದೆ. ಎಷ್ಟೇ ಕರೆ ಮಾಡಿದರೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಫೋನ್ ತೆಗೆಯಲಿಲ್ಲ. ಕ್ರಮ ಕೈಗೊಳ್ಳದಿದ್ದರೆ ಹೋರಾಟ ಮಾಡುವುದಾಗಿ ಶಾಸಕ ಎಸ್​​ಟಿ ಸೋಮಶೇಖರ್ ಎಚ್ಚರಿಕೆ ನೀಡಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕ್ವಾರಿ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿಲ್ಲ. ಈ ಬಗ್ಗೆ ತನಿಖೆ ಮಾಡುತ್ತೇವೆ. ಗಂಭೀರವಾಗಿ ಪರಿಗಣಿಸುತ್ತೇವೆ. ಎಸ್‌ಟಿ ಸೋಮಶೇಖರ್ ಅವರ ಆರೋಪದ ಬಗ್ಗೆ ಮಾಹಿತಿ ಬಂದಿದೆ. ನಾನು ಬೀದರ್​​ನಲ್ಲಿದ್ದೆ. ಸಾಕಷ್ಟು ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದೆ. ಅವರು ಕರೆ ಮಾಡಿದ್ದರಂತೆ. ನಾನು ಫೋನ್ ಬದಲಾಯಿಸಿದ ಕಾರಣ ನಾನು ಕರೆ ಸ್ವೀಕರಿಸಲು ಆಗಿಲ್ಲ ಎಂದರು.

ಇದನ್ನೂ ಓದಿ: ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ

ಕ್ವಾರಿಯವರು ಬ್ಲಾಸ್ಟ್ ಮಾಡಿದ್ದಾರೆ. ಕ್ವಾರಿ ಅರಣ್ಯದ ಒಳಗಡೆ ಬರುವುದಿಲ್ಲ, ಹೊರಗೆ ಬರುತ್ತೆ. ನಮ್ಮ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಬ್ಲಾಸ್ಟ್ ಮಾಡಿದ ಕಾರಣಕ್ಕಾಗಿ ಒಂದು ಚಿರತೆ ಸತ್ತಿದೆ. ಚಿರತೆ ಮರಣೋತ್ತರ ಪರೀಕ್ಷೆ ಮಾಡಿದಾಗ ಹೊಟ್ಟೆಯಲ್ಲಿ ಮರಿ ಇತ್ತು ಅಂತ ಗೊತ್ತಾಗಿದೆ. ಅದನ್ನ ಅತ್ಯಂತ ಗಂಭೀರವಾಗಿ ನಮ್ಮ ಇಲಾಖೆ ಪರಿಗಣಿಸುತ್ತೆ. ತಪ್ಪಿತಸ್ಥರ ವಿರುದ್ಧ ಈಗಾಗಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಅವರ ವಿರುದ್ಧ ಅತ್ಯಂತ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ವನ್ಯಜೀವಿ ಸಂರಕ್ಷಣೆ ನಮ್ಮ ಆದ್ಯತೆ. ವನ್ಯಜೀವಿ ಸಂರಕ್ಷಣೆ ಮಾಡಿದರೆ ಮಾತ್ರ ಪ್ರಕೃತಿಯ ಸಮತೋಲನ ಕಾಪಾಡಲು ಸಾಧ್ಯ. ನಾವು ಆ ವಿಚಾರದ ಬಗ್ಗೆ ಬಹಳ ಗಂಭೀರವಾಗಿದ್ದೇವೆ. ನಾನು ಎಸ್‌ಟಿ ಸೋಮಶೇಖರ್ ಅವರ ಜೊತೆಗೂ ಕೂಡ ಮಾತನಾಡುತ್ತೇನೆ. ಕ್ವಾರಿ ಅರಣ್ಯ ಒಳಗಡೆ ಇಲ್ಲ ಅಂತ ಮಾಹಿತಿ ಇದೆ. ಸಾಕಷ್ಟು ವರ್ಷಗಳಿಂದ ಕೆಲ ಗಣಿಗಾರಿಕೆಗಳು ನಡೆಯುತ್ತಿವೆ. ನಿಯಮಾವಳಿಯಲ್ಲಿ ಅವಕಾಶ ಇದೆ ಮಾರ್ಗಸೂಚಿಯಲ್ಲಿ ಏನಾದರೂ ಉಲ್ಲಂಘನೆ ಆಗಿದ್ದರೆ ಅತ್ಯಂತ ಕಠಿಣವಾದ ಕ್ರಮವನ್ನು ತೆಗೆದುಕೊಳ್ಳುತ್ತೆ. ಯಾರೇ ಇರಲಿ ಎಷ್ಟೇ ಒತ್ತಡ ಬರಲಿ, ಹಿಂದೆನೂ ನಾವು ಬಿಟ್ಟಿಲ್ಲ ಮುಂದೇನು ಬಿಡಲ್ಲ. ಪಾರದರ್ಶಕವಾದ ತನಿಖೆ ನಡೆಯುತ್ತದೆ ಕ್ರಮ ಆಗುತ್ತೆ. ಲೀಗಲ್ ಮೈನಿಂಗ್ ಇದ್ದರೂ ಕೂಡ ಈ ರೀತಿ ಬ್ಲಾಸ್ಟ್ ಮಾಡಲು ಅವಕಾಶವಿಲ್ಲ. ಈಗಾಗಲೇ ನಮ್ಮ ಅರಣ್ಯ ಇಲಾಖೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಎಫ್‌ಎಸ್‌ಎಲ್ ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ: ಪ್ರಭಾಷ್ ಚಂದ್ರ

ಚಿರತೆ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಷ್ ಚಂದ್ರ, ಇದು ಬೆಂಗಳೂರು ಅರ್ಬನ್ ಜಿಲ್ಲೆಯ ಮಾವಿನ ತೋಟದಲ್ಲಿ ಶುಕ್ರವಾರ ಘಟನೆ ನಡೆದಿದೆ. ಚಿರತೆ ಹೊಟ್ಟೆಯಲ್ಲಿ 3 ಮರಿಗಳಿದ್ದವು. ಮಾವಿನ ತೋಟದ ಪಕ್ಕದಲ್ಲಿ ಕ್ವಾರಿ ಇದೆ, ಆದರೆ ಚಿರತೆ ಮೃತಪಟ್ಟಿದ್ದು ಮಾವಿನ ತೋಟದಲ್ಲಿ. ಸರಿಯಾದ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಪಶು ವೈದ್ಯರು ಪರಿಶೀಲನೆ ಮಾಡಿದ್ದು, ಸ್ಯಾಂಪಲ್​​ ಸಂಗ್ರಹಿಸಿದ್ದಾರೆ. ಎಫ್​​ಎಸ್​ಎಲ್​ಗೆ ಕಳುಹಿಸಲಾಗಿದ್ದು, ವರದಿ ಬಂದ ಮೇಲೆ ನಿಖರವಾದ ಮಾಹಿತಿ ತಿಳಿಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ, ಹೆಬ್ಬುಲಿ ಕಂಡು ಭೀತಿಯಲ್ಲಿ ಗ್ರಾಮಸ್ಥರು

ವಿವಿಧ ಗ್ರಾಮಗಳ ಸರ್ವೆ ನಂಬರ್‌ಗಳಲ್ಲಿ ಕಲ್ಲು ಬಂಡೆ ಹೊಡೆಯುವ ಕ್ರಷರ್‌ಗಳನ್ನು ನಿಷೇಧಿಸಿ ಅಂತ ಅರಣ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. ಕಲ್ಲು ಬಂಡೆಯ ಹೊಡೆತಕ್ಕೆ ಪ್ರಾಣ ಕಳೆದುಕೊಂಡ ಚಿರತೆಯ ದೃಶ್ಯಗಳು ಮನಕಲಕುವಂತಿವೆ. ಇನ್ನಷ್ಟು ದುರ್ಘಟನೆಗಳು ನಡೆಯುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳುವುದು ಒಳ್ಳೆಯದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version