ದೆಹಲಿ: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಸಾವು – Kannada News | Delhi Man’s Body Recovered From Open Jal Board Pit After Nightlong Search
ನವದೆಹಲಿ, ಫೆಬ್ರವರಿ 06: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೆಹಲಿಯ ಜನಕಪುರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಕಮಲ್ ತನ್ನ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ(Accident) ಸಂಭವಿಸಿದೆ. ವರದಿಗಳ ಪ್ರಕಾರ, ರೋಹಿಣಿಯಲ್ಲಿರುವ ತಮ್ಮ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದರು.ಕೈಲಾಸಪುರಿಯಲ್ಲಿ ವಾಸವಾಗಿದ್ದರು. ತಡರಾತ್ರಿಯಾದರೂ ಮಗ ಮನೆಗೆ ಬಾರದ್ದನ್ನು ಕಂಡು ಕುಟುಂಬದವರು ಆತಂಕಕ್ಕೊಳಗಾದರು. ಕುಟುಂಬದವರ ಪ್ರಕಾರ, ಅವರು ಇಡೀ ರಾತ್ರಿ ಜನಕಪುರಿ, ಸಾಗರ್‌ಪುರ, ವಿಕಾಸಪುರಿ ಮತ್ತು ರೋಹಿಣಿ ಸೇರಿದಂತೆ ಅರ್ಧ ಡಜನ್ ಪೊಲೀಸ್ ಠಾಣೆಗಳಿಗೆ ಭೇಟಿ…