ಬೆಂಗಳೂರಿನ ಐಪಿಎಸ್ ಲೇಔಟ್ ವಿಲ್ಲಾದಲ್ಲಿ ಭರ್ಜರಿ ರೇವ್ ಪಾರ್ಟಿ: ಸಿಸಿಬಿ ದಾಳಿ, ಮೂವರ ಬಂಧನ! – Kannada News | Bengaluru: CCB Raids Rave Party at HSR Layout Villa, 3 Arrested
ಬೆಂಗಳೂರು, ಜುಲೈ 29: ನಗರದ ಎಚ್‌ಎಸ್‌ಆರ್ ಲೇಔಟ್‌ನ 6ನೇ ಸೆಕ್ಟರ್‌ನಲ್ಲಿರುವ ಪ್ರತಿಷ್ಠಿತ ಐಪಿಎಸ್ ಲೇಔಟ್‌ನ ‘ಸಿ-9’ ಸರ್ವಿಸ್ ವಿಲ್ಲಾದಲ್ಲಿ ಇಡೀ ರಾತ್ರಿ ನಡೆಯುತ್ತಿದ್ದ ಭರ್ಜರಿ ರೇವ್ ಪಾರ್ಟಿ (Rave Party) ಮೇಲೆ ಸಿಸಿಬಿಯ ಮಹಿಳಾ ಘಟಕದ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿಢೀರ್ ದಾಳಿ ನಡೆಸಿದ್ದಾರೆ. ಆ್ಯಪ್ ಮೂಲಕ ಯುವಕ-ಯುವತಿಯರಿಗೆ ಆಹ್ವಾನ ಪೊಲೀಸರ ರೇಡ್ ಬೆದರಿಕೆಯಿಂದ ಪಾರಾಗಲು ಐಪಿಎಸ್ ಲೇಔಟ್ ಸುರಕ್ಷಿತ ಎಂದು ಭಾವಿಸಿದ್ದ ಆಯೋಜಕರು, ‘ಅಮಿಗೋಸ್’ ಆ್ಯಪ್ ಮೂಲಕ ಯುವಕ-ಯುವತಿಯರನ್ನು ಆಹ್ವಾನಿಸಿದ್ದರು. ಪಾರ್ಟಿಗೆ ಪ್ರವೇಶಿಸಲು ಯುವಕರಿಂದ…