ಕೊಪ್ಪಳ ಗ್ಯಾಂಗ್ ರೇಪ್ ಪ್ರಕರಣಕ್ಕೆ ಟ್ವಿಸ್ಟ್: ತಾಲೂಕು ವೈದ್ಯಾಧಿಕಾರಿ ವಿರುದ್ಧವೇ ದಾಖಲಾಯ್ತು ಎಫ್ಐಆರ್! – Kannada News | Koppal women harassment Case Takes Twist: FIR Filed Against Taluk Medical Officer for Alleged Evidence Tampering
ಕೊಪ್ಪಳ, ಜನವರಿ 1: ಕೊಪ್ಪಳ (Koppal) ಜಿಲ್ಲೆ ಯಲಬುರ್ಗಾದ ಮದ್ಲೂರಿನಲ್ಲಿ ನವೆಂಬರ್ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರೂ, ತಾಲೂಕು ವೈದ್ಯಾಧಿಕಾರಿಯು ಅತ್ಯಾಚಾರಿಗಳನ್ನು ರಕ್ಷಿಸಲು ಯತ್ನಿಸಿರುವುದು ಗೊತ್ತಾಗಿದೆ. ಸದ್ಯ ತಾಲೂಕು ವೈದ್ಯಾಧಿಕಾರಿ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಯಲಬುರ್ಗಾ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಶಿವಕುಮಾರ್ ಸಾಕ್ಷಿ ನಾಶಪಡಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಶಿವಕುಮಾರ್ ವಿರುದ್ಧ ಯಲಬುರ್ಗಾ ಸಿಪಿಐ ಮೌನೇಶ್ವರ್ ಮಾಲಿಪಾಟೀಲ್…