ಇದೇನ್ ರೇಸಿಂಗಾ! ಅಗರ ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್ – Kannada News | Rash Driving on Agara Flyover Bengaluru, Biker Narrowly Escapes in Shocking Near Miss

ಬೆಂಗಳೂರು, ಫೆಬ್ರವರಿ 3: ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಮತ್ತು ಕೋರಮಂಗಲವನ್ನು ಸಂಪರ್ಕಿಸುವ ಅಗರ ಫ್ಲೈಓವರ್ ಮೇಲೆ ಇತ್ತೀಚೆಗೆ ನಡೆದ ಅತಿವೇಗದ ಮತ್ತು ಅಜಾಗರೂಕ ಕಾರು ಚಾಲನೆಯ ದೃಶ್ಯವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಒಂದು ಕಾರನ್ನು ಅತಿವೇಗದಿಂದ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಲಾಗಿದ್ದು, ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರು ಚಾಲಕನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ಘಟನೆ ನಡೆದಿದೆ. ಈ ಘಟನೆಯ ದೃಶ್ಯವು ಹಿಂಬದಿಯಲ್ಲಿ ಬರುತ್ತಿದ್ದ ಇನ್ನೊಂದು ಕಾರಿನ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಕರ್ನಾಟಕದ ಇನ್ನಷ್ಟು…

Read More

ಧ್ರುವಂತ್​ಗೆ ಸೀಸನ್ ಚಪ್ಪಾಳೆ ಬದಲು ವಾರದ ಚಪ್ಪಾಳೆ; ನಿರ್ಧಾರ ಬದಲಿಸಿದ ಬಿಗ್ ಬಾಸ್ – Kannada News | Colors Kannada Deletes Dhruvanth Season Kicchana Chappale post after audience backlash

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸುದೀಪ್ ಅವರು ಕಿಚ್ಚನ ಚಪ್ಪಾಳೆ (Kicchana Chappale) ನೀಡುತ್ತಾರೆ. ಪ್ರತಿ ವಾರ ಚೆನ್ನಾಗಿ ಆಟ ಆಡಿದ ಸ್ಪರ್ಧಿಗೆ ಈ ಗೌರವ ಸಿಗುತ್ತದೆ. ಆದರೆ ಇದೇ ಮೊದಲ ಬಾರಿಗೆ ಕಿಚ್ಚ ಸುದೀಪ್ ಅವರು ಇಡೀ ಸೀಸನ್​ನ ಆಟವನ್ನು ಪರಿಗಣಿಸಿ ಧ್ರುವಂತ್ ಅವರಿಗೆ ಚಪ್ಪಾಳೆ ನೀಡಿದ್ದರು. ಆದರೆ ಅವರ ಈ ನಿರ್ಧಾರಕ್ಕೆ ವೀಕ್ಷಕರಿಂದ ವಿರೋಧ ವ್ಯಕ್ತವಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗಿತ್ತು. ಅದರ ಪರಿಣಾಮವಾಗಿ ಬಿಗ್ ಬಾಸ್ (BBK 12) ಆಯೋಜಕರು ನಿರ್ಧಾರ ಬದಲಾಯಿಸಿದ್ದಾರೆ….

Read More

ದೇಶದಲ್ಲೇ ಮೊದಲ ಬಾರಿ 182 ಕೋಟಿ ಮೌಲ್ಯದ ಕ್ಯಾಪ್ಟಗನ್ ವಶಕ್ಕೆ; ಏನಿದು ಜಿಹಾದಿ ಡ್ರಗ್? – Kannada News | Ncb seizes jihadi drugs captagon worth rs 182 crore under operation ragepill says amit shah

ನವದೆಹಲಿ, ಮೇ 16: ಭಾರತದಲ್ಲಿ ಮೊದಲ ಬಾರಿಗೆ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) 182 ಕೋಟಿ ಮೌಲ್ಯದ ಕ್ಯಾಪ್ಟಗನ್ ಟ್ಯಾಬ್ಲೆಟ್​​ಗಳನ್ನು ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಈ ಡ್ರಗ್ಸ್ ಅನ್ನು ಪಶ್ಚಿಮ ಏಷ್ಯಾಕ್ಕೆ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಆಪರೇಷನ್ ರೇಜ್​ಪಿಲ್ (Operation Ragepill) ಅಡಿಯಲ್ಲಿ ಈ ಡ್ರಗ್ಸ್​ ಸಾಗಾಟವನ್ನು ತಡೆಹಿಡಿಯಲಾಗಿದೆ ಎಂದು ಅಮಿತ್ ಶಾ ಎಕ್ಸ್​​ನಲ್ಲಿ ಮಾಹಿತಿ ನೀಡಿದ್ದಾರೆ. ಮುಂದ್ರಾ ಬಂದರು ಮತ್ತು ದೆಹಲಿಯ ನೆಬ್…

Read More

ನಾಳೆ SSLC ಫಲಿತಾಂಶ: ಕುಳಿತಲ್ಲೇ SSLC ರಿಸಲ್ಟ್ ಚೆಕ್​ ಮಾಡುವುದ್ಹೇಗೆ? ಇಲ್ಲಿದೆ ವಿಧಾನ – Kannada News | How To Check Karnataka SSLC Result 2026 In Online And Digilocker on April 23, here Is Steps

ಬೆಂಗಳೂರು, ( ಏಪ್ರಿಲ್ 22): ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ 1ರ ಫಲಿತಾಂಶ-2026 ನಾಳೆ (ಏಪ್ರಿಲ್ 23) ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪನವರು ಗುರುವಾರ ಮಧ್ಯಾಹ್ನ 12ಗಂಟೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಇನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ವಿದ್ಯಾರ್ಥಿಗಳು ವೆಬ್‌ಸೈಟ್, ಮೊಬೈಲ್ ಆಪ್, SMS/WhatsApp ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಅಧಿಕೃತ ವೆಬ್‌ಸೈಟ್ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕ ಫಲಿತಾಂಶ…

Read More

ತಾಯಿ ನಿಧನದ ದುಃಖದಲ್ಲೇ ಪರೀಕ್ಷೆ ಬರೆದು ಈಗ ಕರ್ನಾಟಕಕ್ಕೆ ಟಾಪರ್:ನೋವಲ್ಲೂ ಸಾಧಿಸಿದ ದಿಶಾ

ಮಂಗಳೂರು, (ಏಪ್ರಿಲ್ 09): ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1 ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಆಳ್ವಾಸ್‌ ಕಾಲೇಜಿನ ದಿಶಾ, ವಾಣಿಜ್ಯ ವಿಭಾಗದಲ್ಲಿ (ಕಾಮರ್ಸ್) 600ಕ್ಕೆ 600 ಅಂಕ ಗಳಿಸಿ ದಕ್ಷಿಣ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆ ನಡೆಯುತ್ತಿದ್ದಾಗಲೇ ತಾಯಿಯನ್ನು ಕಳೆದುಕೊಂಡು ಮನಸ್ಸಿನಲ್ಲಿ ದುಃಖ, ಕಣ್ಣಲ್ಲಿ ನೀರು ತುಂಬಿಕೊಂಡು ಧೃತಿಗೆಡದೇ ಪರೀಕ್ಷೆ ಬರೆದು ಈಗ ಕರ್ನಾಟಕದ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಈ ಮೂಲಕ ಮಾದರಿಯಾಗಿದ್ದಾಳೆ. ಇನ್ನು ದಿಶಾ ಸಾಧನೆಗೆ ಕುಟುಂಬಸ್ಥರು, ಕಾಲೇಜು ಆಡಳಿತ…

Read More

ರಾಷ್ಟ್ರೀಯ ಸಿನಿಮಾ ಅಕಾಡೆಮಿ ಪ್ರಶಸ್ತಿ ಘೋಷಣೆ: ಯಾರಿಗೆಲ್ಲ ಸಿಕ್ಕಿತು ಅವಾರ್ಡ್

ಭಾರತದ 12 ಚಿತ್ರರಂಗಗಳನ್ನು (Movie Industry) ಪ್ರತಿನಿಧಿಸುವ ಭಾರತೀಯ ರಾಷ್ಟ್ರೀಯ ಸಿನಿ ಅಕಾಡೆಮಿ ತಮ್ಮ 2026ರ ಐಎನ್​​ಸಿಎ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಭಾಷಾವಾರು ಈ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕನ್ನಡದಲ್ಲಿ ಎಲ್ಲ ಪ್ರಶಸ್ತಿಗಳನ್ನು ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ನೀಡಲಾಗಿದೆ. ‘ಕಾಂತಾರ: ಚಾಪ್ಟರ್ 1’ ಹೊರತಾಗಿ ಇನ್ಯಾವ ಕನ್ನಡ ಸಿನಿಮಾಕ್ಕೂ ಐಎನ್​​ಸಿಎ ಪ್ರಶಸ್ತಿ ಲಭಿಸಿಲ್ಲ. ಅತ್ಯುತ್ತಮ ನಟ, ನಟಿ, ನಿರ್ದೇಶಕ ಮತ್ತು ಸಿನಿಮಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಐಎನ್​​ಸಿಎ ಘೋಷಿಸಿದೆ. ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಸಿನಿಮಾ ‘ಕಾಂತಾರ: ಚಾಪ್ಟರ್ 1’,…

Read More

LSG vs GT: W,W,W,W.. ಕನ್ನಡಿಗ ಪ್ರಸಿದ್ಧ್ ದಾಳಿಗೆ ತತ್ತರಿಸಿದ ಲಕ್ನೋ

ಐಪಿಎಲ್ 2026 ರ 19 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಏಕಾನಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ 20 ಓವರ್​ಗಳಲ್ಲಿ ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಗುಜರಾತ್ ಬೌಲರ್​ಗಳ ಮಾರಕ ದಾಳಿಗೆ ತತ್ತರಿಸಿದ ಲಕ್ನೋ ಬ್ಯಾಟಿಂಗ್‌ ವಿಭಾಗಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ…

Read More

ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!

ಬೆಂಗಳೂರು, (ಮೇ 17): ಇನ್ನೇನು ಬೇಸಿಗೆ ಕಳೆದು ಮಳೆಗಾಲ ಶುರುವಾಗಲಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಪಾಲಿಕೆಗಳ ಆಯುಕ್ತರು ಹಾಗೂ ಜಿಬಿಎ ಅಧಿಕಾರಿಗಳಿಗೆ ಮಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನೀಡಲಾಗಿದೆ. ಆದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಹೌದು..ನಗರದ ಹಲವು ಏರಿಯಾಗಳಲ್ಲಿ ಅಪಾಯಕಾರಿ ಮರಗಳು ಜನರನ್ನು ಬಲಿಪಡೆಯಲು ಕಾದು ಕುಳಿತಿವೆ. ರಾಜಾಜಿನಗರದ 13ನೇ ಮುಖ್ಯ ರಸ್ತೆಯಲ್ಲಿ ಮರದ ಕೊಂಬೆಗಳು ನೇತಾಡುತ್ತಿದ್ದು, ಯಾವಾಗ ಬೀಳುತ್ತೋ ಎನ್ನುವ ಭಯದಲ್ಲಿ ಓಡಾಡುವಂತಾಗಿದೆ. ಈ ಬಗ್ಗೆ ಸ್ಥಳೀಯರು ಸಹ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ…

Read More

ಕರುನಾಡ ಜನತೆಗೆ ಕೈ ಮುಗಿದ ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ?

ಬೆಂಗಳೂರು, (ಮೇ 28): ಬಡವರಿಗೆ ಭಾಗ್ಯಗಳ ಕೊಟ್ಟ ಸರದಾರ.. ಹಸಿದವರಿಗೆ ಅನ್ನ ನೀಡಿದ ಅನ್ನರಾಮಯ್ಯ.. ರೈತರ ಧ್ವನಿಯಾಗಿದ್ದ ರೈತರಾಮಯ್ಯ, ಕನ್ನಡ ನಾಡು ನುಡಿಗಾಗಿ ದಿಟ್ಟ ಹೆಜ್ಜೆ ಇಟ್ಟ ಕನ್ನಡ ರಾಮಯ್ಯ.. ದಾಖಲೆ ಬಜೆಟ್ ಮಂಡಿಸಿದ ಬಜೆಟ್ ರಾಮಯ್ಯ. ವಿಧಾನಸಭೆಯಲ್ಲಿ ಎದುರಾಳಿಗಳನ್ನ ಮಾತಿನಲ್ಲೇ ಕಟ್ಟಿಹಾಕುತ್ತಿದ್ದ ಸಿದ್ದರಾಮಯ್ಯ, ತಮ್ಮ ಕೆಲಸಗಳಿಂದಲೇ ನಾನಾ ಹೆಸರಿನಿಂದ ಕರೆಸಿಕೊಂಡವರು. ಇಂತಹ ಸಿದ್ದರಾಮಯ್ಯ (Siddaramaiah) ಇವತ್ತು ಮುಖ್ಯಮಂತ್ರಿ ಪದವಿಯನ್ನೇ ತ್ಯಾಗ ಮಾಡಿ ತ್ಯಾಗರಾಮಯ್ಯರಾಗಿದ್ದಾರೆ. ಎದೆಭಾರ ಮಾಡಿಕೊಂಡೇ ತನ್ನ ಆಪ್ತ ಭೈರತಿ ಸುರೇಶ್ ಕಾರು ಹತ್ತಿದ ಸಿದ್ದರಾಮಯ್ಯ,…

Read More

ಒತ್ತಡಕ್ಕೆ ಬಲಿಯಾಯಿತೇ ಮರಿ?: ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆಯ ಮರಿಯೂ ಗರ್ಭದಲ್ಲೇ ಸಾವು!

ಶಿವಮೊಗ್ಗ, ಏ.11: ಕಳೆದ ಮಾರ್ಚ್ 19 ರಂದು ತ್ಯಾವರೆಕೊಪ್ಪ ಸಫಾರಿಯಲ್ಲಿ ತರಬೇತಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ಗರ್ಭಿಣಿ ನೀರಾನೆ ಹಂಸಿನಿಯ (Hamsini Hippo) ಆರೋಗ್ಯ ತಪಾಸಣೆ ನಡೆಸುತ್ತಿದ್ದಾಗ, ಹಂಸಿನಿ ಏಕಾಏಕಿ ದಾಳಿ ಮಾಡಿ ಅವರ ಸಾವಿಗೆ ಕಾರಣವಾಗಿತ್ತು. ಈಗ ಅದೇ ನೀರಾನೆಯ ಮರಿಯು ಗರ್ಭದಲ್ಲೇ ಸಾವನ್ನಪ್ಪಿದೆ. ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಹೀಗೆ ಸರಣಿ ದುರಂತಗಳು ನಡೆಯುತ್ತಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೂಡ ಹೆಚ್ಚಿನ ತನಿಖೆಯನ್ನು…

Read More