ಜನವರಿ ತಿಂಗಳಲ್ಲಿ 8 ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ; ಇಲ್ಲಿದೆ ವೇಳಾಪಟ್ಟಿ – Kannada News | Team India Jan 2026 Schedule: NZ Series & World Cup Challenges Ahead
2025 ರ ವರ್ಷವನ್ನು ಸಿಹಿ-ಕಹಿಯೊಂದಿಗೆ ಮುಗಿಸಿರುವ ಟೀಂ ಇಂಡಿಯಾಗೆ (Team India) 2026 ರಲ್ಲಿ ಸಾಲು ಸಾಲು ಸವಾಲುಗಳು ಎದುರಾಗಲಿವೆ. ಅದರಲ್ಲಿ ಪ್ರಮುಖವಾಗಿ ಫೆಬ್ರವರಿ ತಿಂಗಳಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ (T20 World Cup 2026). ಟಿ20 ಮಾದರಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ತನ್ನ ಪಟ್ಟವನ್ನು ಉಳಿಸಿಕೊಳ್ಳುವ ಒತ್ತಡದಲ್ಲಿದೆ. ಇದು ಮಾತ್ರವಲ್ಲದೆ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಡ ಟೀಂ ಇಂಡಿಯಾಗೆ ಬಹಳ ಮುಖ್ಯವಾಗಿದೆ. ಏಕೆಂದರೆ 2023 ರಲ್ಲಿ ನಡೆದಿದ್ದ ವಿಶ್ವಕಪ್ ಫೈನಲ್ನಲ್ಲಿ…