ತಮ್ಮದೇ ಯುಪಿಐ ಸ್ಕ್ಯಾನರ್ ನೀಡಿ ಹಣ ಜೇಬಿಗಿಳಿಸ್ತಾರೆ ಬಿಎಂಟಿಸಿ ಕೆಲ ಕಂಡಕ್ಟರ್ಗಳು! ನಿಗಮಕ್ಕೆ ಲಕ್ಷಾಂತರ ರೂ. ನಷ್ಟ – Kannada News | BMTC Conductors Use Personal UPI Scanners to Pocket Cash, Corporation Suffers Huge Loss
ಬೆಂಗಳೂರು, ಜನವರಿ 20: ಬಿಎಂಟಿಸಿ (BMTC) ಬಸ್ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ನಿಗಮವು ಯುಪಿಐ ಸ್ಕ್ಯಾನರ್ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್ಗಳು ಬಿಎಂಟಿಸಿ ಬಸ್ನಲ್ಲಿರುವ ಯುಪಿಐ ಸ್ಕ್ಯಾನರ್ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್ ಅಕೌಂಟ್ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕನ್ನಡ ಬಾರದವರಿಗೆ ತಮ್ಮ ಮೊಬೈಲ್ ಯುಪಿಐ ಸ್ಕ್ಯಾನರ್ ನೀಡಿ ಹಣ ಪೀಕಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ. ತನಿಖೆಯಲ್ಲಿ ಬಯಲಾಯ್ತು ಬಿಎಂಟಿಸಿ ಬಸ್ ಕಂಡಕ್ಟರ್ಗಳ ಕಳ್ಳಾಟ…