Headlines

IPL 2026: ಒಂದು ಫೋಟೋಗೆ 100 ರೂ. ಕೇಳಿದ ವೈಭವ್; ವಿಡಿಯೋ ವೈರಲ್ – Kannada News | Vaibhav Suryavanshi’s Viral Selfie: Fans Offer ₹200 When He Asks ₹100! IPL Star’s Humor

ತನ್ನ ಅಬ್ಬರದ ಬ್ಯಾಟಿಂಗ್‌ ಮೂಲಕ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿಗೆ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವೈಭವ್ ಸಾರ್ವಜನಿಕವಾಗಿ ಕಾಣಿಸಿಕೊಂಡರೆ, ಅವರೊಂದಿಗೆ ಸೆಲ್ಫಿಗಾಗಿ ಮುಗಿಬೀಳುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಅಂತಹದ್ದೇ ಒಂದು ಸೆಲ್ಫಿ ಕಥೆಯ ವಿಡಿಯೋ ವೊಂದು ವೈರಲ್ ಆಗಿದೆ. ಇದರಲ್ಲಿ ವೈಭವ್, ಅಭಿಮಾನಿಗಳ ಬಳಿ ಒಂದು ಫೋಟೋಗೆ 100 ರೂ.ಗಳ ಶುಲ್ಕ ವಿಧಿಸಿದ್ದಾರೆ. ಇತ್ತ ಅಭಿಮಾನಿಗಳು ಕೂಡ ವೈಭವ್​ಗೆ 100 ರೂ. ಬದಲು 200 ರೂ. ನೀಡಲು ಮುಂದಾಗಿದ್ದಾರೆ. ಇದೀಗ ಅದರ…

Read More

BBL: ಸಿಂಗಲ್ ಬೇಡ ವಾಪಸ್ ಹೋಗು; ಬಾಬರ್ ಆಝಂಗೆ ಇದೆಂಥಾ ಅವಮಾನ! ವಿಡಿಯೋ – Kannada News | Babar Azam Humiliated by Steve Smith in BBL: Single Denied Sparks Controversy

ಕೆಲವೇ ಕೆಲವು ದಿನಗಳ ಹಿಂದೆ ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಅವರನ್ನು ಅವರ ಆಮೆಗತಿಯ ಬ್ಯಾಟಿಂಗ್​ನಿಂದಾಗಿ ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ಡಗೌಟ್​ಗೆ ವಾಪಸ್ ಕರೆಸಿಕೊಳ್ಳಲಾಗಿತ್ತು. ಇದು ಪಾಕ್ ನಾಯಕನಿಗೆ ಸಾರ್ವಕನಿಕವಾಗಿ ಸಾಕಷ್ಟು ಮುಜುಗರ ತಂದಿತ್ತು. ಇದೀಗ ಅದೇ ರೀತಿಯ ಅವಮಾನ ಪಾಕಿಸ್ತಾನದ ಮತ್ತೊಬ್ಬ ಮಾಜಿ ನಾಯಕ ಬಾಬರ್ ಆಝಂ ಬ್ಯಾಟಿಂಗ್‌ ವಿಚಾರದಲ್ಲಿ ನಡೆದಿದೆ. ಬ್ಯಾಟಿಂಗ್‌ ವೇಳೆ ಹೆಚ್ಚು ಬಾಲ್​ಗಳನ್ನು ಡಾಟ್ ಮಾಡಿ ಓವರ್​ನ ಕೊನೆಯ ಎಸೆತದಲ್ಲಿ ಸಿಂಗಲ್ ತೆಗೆದುಕೊಳ್ಳಲು ಪ್ರಯತ್ನಿಸಿದ ಬಾಬರ್​ಗೆ…

Read More

Viral: ಆಟೋ ಬಾಡಿಗೆ 150ರೂ., ಖಾತೆಗೆ ಬಂದಿದ್ದು 15 ಸಾವಿರ; ಪ್ರಯಾಣಿಕನ ಹಣವನ್ನು ಮರಳಿಸಿ ಮಾದರಿಯಾದ ಚಾಲಕ – Kannada News

ಆಟೋ ಚಾಲಕನ ಪ್ರಮಾಣಿಕತೆImage Credit source: Pinterest ಬೆಂಗಳೂರು: ಇಂದಿನ ಕಾಲದಲ್ಲಿ ಪ್ರಾಮಾಣಿಕತೆ ಎಂಬುದೇ ಇಲ್ಲ ಎಂಬ ಮಾತುಗಳ ನಡುವೆ, ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಅಪ್ಪಟ ಪ್ರಾಮಾಣಿಕತೆಯಿಂದ ಇಡೀ ಇಂಟರ್ನೆಟ್ ಜಗತ್ತಿನ ಮನ ಗೆದ್ದಿದ್ದಾನೆ. ಆಟೋ ಬಾಡಿಗೆಯಾಗಿ ಕೇವಲ 150 ರೂಪಾಯಿ ಡಿಜಿಟಲ್ ಪಾವತಿ ಮಾಡಬೇಕಿದ್ದ ಪ್ರಯಾಣಿಕನೊಬ್ಬ, ಆತುರದಲ್ಲಿ ಆಕಸ್ಮಿಕವಾಗಿ ಬರೋಬ್ಬರಿ 15,682 ರೂಪಾಯಿಗಳನ್ನು ಚಾಲಕನ ಖಾತೆಗೆ ವರ್ಗಾಯಿಸಿ ಆತಂಕಕ್ಕೊಳಗಾಗಿದ್ದನು. ಆದರೆ, ಪ್ರಯಾಣಿಕನ ತಪ್ಪು ಅರಿವಾದ ತಕ್ಷಣವೇ ಯಾವುದೇ ಹಿಂಜರಿಕೆಯಿಲ್ಲದೆ ಇಡೀ ಮೊತ್ತವನ್ನು ಪ್ರಾಮಾಣಿಕವಾಗಿ ಮರಳಿ…

Read More

T20 World Cup: ಬುಮ್ರಾರನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಅರ್ಷದೀಪ್ ಸಿಂಗ್

2026 ರ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆ ವಿರುದ್ಧ ಭಾರತ 72 ರನ್‌ಗಳ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ತಂಡದ ಸಾಂಘಿಕ ಪ್ರದರ್ಶನ ಪ್ರಮುಖವಾಗಿತ್ತು. ಇನ್ನು ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆಯುವ ಮೂಲಕ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿ ವಿಶೇಷ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದರು. ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ನಾಲ್ಕು ಓವರ್ ಬೌಲಿಂಗ್ ಮಾಡಿ ಕೇವಲ 24 ರನ್ ನೀಡಿ ಮೂರು ವಿಕೆಟ್…

Read More

ಇದುವೇ ನನ್ನ ಏಕೈಕ ಗುರಿ: ಮನದಿಂಗಿತ ಬಿಟ್ಟಿಟ್ಟ ಕೃನಾಲ್ ಪಾಂಡ್ಯ – Kannada News | Krunal Pandya Sets Sights on 2027 ODI World Cup Comeback

ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮ್ಯಾಚ್-ವಿನ್ನರ್ ಆಗಿ ಹೊರಹೊಮ್ಮುತ್ತಿರುವ ಕೃನಾಲ್ ಪಾಂಡ್ಯ, ರಾಷ್ಟ್ರೀಯ ತಂಡಕ್ಕೆ ಮರಳುವ ಇಚ್ಛೆಯನ್ನು ಬಹಿರಂಗಪಡಿಸಿದ್ದಾರೆ. 2027ರಲ್ಲಿ ಆಫ್ರಿಕಾ ಮಣ್ಣಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವುದೇ ನನ್ನ ಪರಮ ಗುರಿ ಎಂದು ಘೋಷಿಸಿರುವ ಅವರ ಈ ಹೇಳಿಕೆ ಈಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿದ ಕೃನಾಲ್ ಪಾಂಡ್ಯ, ನನಗೆ 6-7 ವಯಸ್ಸಿದ್ದಾಗಿನಿಂದಲೂ ದೇಶಕ್ಕಾಗಿ ಆಡುವ ಕನಸು ಕಂಡಿದ್ದೆ. ಆ ಕನಸು ಇಂದಿಗೂ ಬದಲಾಗಿಲ್ಲ….

Read More

Viral: ರಾಜೀನಾಮೆ ನೀಡಿದ್ರೂ ಕಂಪನಿ ಕೆಲಸದ ಕೊನೆಯ ದಿನವನ್ನು ದೃಢಪಡಿಸಿಲ್ಲ; ನೆಟ್ಟಿಗರಲ್ಲಿ ಸಲಹೆ ಕೇಳಿದ ಉದ್ಯೋಗಿ – Kannada News | Company hasn’t formally responded to resignation email; Employee posts seeking advice from netizens

ಕೆಲಸದ ಸ್ಥಳಗಳಲ್ಲಿ ಉದ್ಯೋಗಿಗಳು (employee) ಅನುಭವಿಸುವ ಒತ್ತಡ ಹೇಳಲಾಗದು. ಕೆಲ ಕಂಪನಿಗಳು ರಾಜೀನಾಮೆ ನೀಡುವ ಸಂದರ್ಭದಲ್ಲೂ ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ರಾಜೀನಾಮೆ ನೀಡಿ ಒಂದೂವರೆ ತಿಂಗಳಾದರೂ ಕಂಪನಿಯು ತನ್ನ ಕೆಲಸದ ಕೊನೆಯ ದಿನವನ್ನು ಔಪಚಾರಿಕವಾಗಿ ದೃಢಪಡಿಸಿಲ್ಲ. ಹೊಸ ಸಂಸ್ಥೆಯಲ್ಲಿ ಕೆಲಸಕ್ಕೆ ಸೇರುವ ದಿನಾಂಕ ಹತ್ತಿರ ಬರುತ್ತಿದೆ. ಆದರೆ ಈ ಕಂಪನಿಯ ವಿಳಂಬವು ತಮ್ಮನ್ನು ಆತಂಕಕ್ಕೆ ದೂಡಿದೆ ಎಂದು ಉದ್ಯೋಗಿ ಎಂದು ಹೇಳಿದ್ದಾರೆ. ಈ ಪೋಸ್ಟ್ ಸದ್ಯ ವೈರಲ್ ಆಗಿದ್ದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಡೆವಲಪರ್ಸ್ ಇಂಡಿಯಾ (r/developersIndia)…

Read More

Hindu Rituals: ಅಧಿಕ ಮಾಸದ ಹುಣ್ಣಿಮೆ; ಆರ್ಥಿಕ ಸಮೃದ್ಧಿ ಮತ್ತು ಯಶಸ್ಸಿಗಾಗಿ ವಿಶೇಷ ಆಚರಣೆ ಇಲ್ಲಿದೆ

ಹಿಂದೂ ಸಂಪ್ರದಾಯದಲ್ಲಿ ಅಧಿಕ ಮಾಸಕ್ಕೆ ಅತ್ಯಂತ ವಿಶೇಷವಾದ ಆಧ್ಯಾತ್ಮಿಕ ಮಹತ್ವವಿದೆ. ಈ ಮಾಸವನ್ನು ವಿಷ್ಣುವಿಗೆ ಸಮರ್ಪಿತವಾದ ‘ಪುರುಷೋತ್ತಮ ಮಾಸ’ ಎಂದೂ ಕರೆಯಲಾಗುತ್ತದೆ. ಭಕ್ತರ ನಂಬಿಕೆಯ ಪ್ರಕಾರ, ಅಧಿಕ ಮಾಸದಲ್ಲಿ ಮಾಡುವ ಪೂಜೆ, ಜಪ ಮತ್ತು ದಾನಗಳು ಸಾಮಾನ್ಯ ದಿನಗಳಿಗಿಂತ ನೂರು ಪಟ್ಟು ಹೆಚ್ಚು ಪುಣ್ಯ ಫಲಗಳನ್ನು ನೀಡುತ್ತವೆ ಎಂಬ ನಂಬಿಕೆಯಿದೆ. ವಿಶೇಷವಾಗಿ, ಈ ಮಾಸದ ಹುಣ್ಣಿಮೆಯ ದಿನದಂದು ಲಕ್ಷ್ಮಿ-ನಾರಾಯಣರನ್ನು ಪೂಜಿಸುವುದರಿಂದ ಆರ್ಥಿಕ ಸ್ಥಿರತೆ ಮತ್ತು ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ. ಸಮುದ್ರ ಮಂಥನದ ಸಮಯದಲ್ಲಿ ಲಕ್ಷ್ಮಿ ದೇವಿಯೊಂದಿಗೆ ಸಮುದ್ರದ…

Read More

ಪ್ರೇಯಸಿ ಜೊತೆ ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ – Kannada News | 15 year old boy hangs from high tension wire demanding marriage to girlfriend

ಪ್ರತಾಪ್‌ಗಢ, ಫೆಬ್ರವರಿ 6: ಪ್ರತಾಪಗಢದಲ್ಲಿ 15 ವರ್ಷದ ಬಾಲಕನೊಬ್ಬ ತಾನು ಪ್ರೀತಿಸಿದ ಹುಡುಗಿಯ ಜೊತೆ ಮದುವೆ (Wedding) ಮಾಡಿಸುವುದಾದರೆ ಮಾತ್ರ ಕೆಳಗೆ ಇಳಿಯುತ್ತೇನೆ ಎಂದು ಹೈ-ವೋಲ್ಟೇಜ್ ವಿದ್ಯುತ್ ತಂತಿಯನ್ನು ಹಿಡಿದು ನೇತಾಡುತ್ತಿದ್ದ. ಒಲೀಸರು ಆತ ಇಷ್ಟಪಟ್ಟ ಹುಡುಗಿಯ ಜೊತೆ ಮದುವೆ ಮಾಡಿಸುವುದಾಗಿ ಮನವೊಲಿಸಿದ ನಂತರ ಆತ ಕೆಳಗೆ ಇಳಿಯಲು ಒಪ್ಪಿಕೊಂಡ. ಕೊನೆಗೆ ಏಣಿಯನ್ನು ಹಾಕಿ ಅವನನ್ನು ಸುರಕ್ಷಿತವಾಗಿ ಕೆಳಗೆ ತರಲಾಯಿತು. 40 ನಿಮಿಷಗಳ ಕಾಲ ಆತ ವಿದ್ಯುತ್ ತಂತಿ ಹಿಡಿದು ನೇತಾಡುತ್ತಿದ್ದ. ಕೆಳಗೆ ಬಂದ ತಕ್ಷಣ ಆತ…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಶಾಸಕ ಟಿಡಿ ರಾಜೇಗೌಡಗೆ ಗೆಲುವು – Kannada News | Sringeri Postal Ballot Recount: Congress MLA TD Rajegowda Declared Winner

ಚಿಕ್ಕಮಗಳೂರು, ಮೇ 02: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಆ ಮೂಲಕ ಎದುರಾಗಿದ್ದ ದೊಡ್ಡ ಅಗ್ನಿಪರೀಕ್ಷೆಯಲ್ಲೂ ಜಯಗಳಿಸಿದ್ದಾರೆ. ಸದ್ಯ ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗದಲ್ಲಿ ಸಂಭ್ರಮಾಚರಣೆ ಜೋರಾಗಿದ್ದು, ಶಾಸಕ ಟಿ.ಡಿ.ರಾಜೇಗೌಡ ಪರ ಕಾರ್ಯಕರ್ತರು  ಘೋಷಣೆ ಕೂಗಿ, ಹೂವಿನ ಮಳೆ ಸುರಿಸಿದು ಹರ್ಷ ವ್ಯಕ್ತಪಡಿಸಿದರು. ಹೈಕೋರ್ಟ್ ಆದೇಶದ ಮೇರೆಗೆ ಇಂದು ಚಿಕ್ಕಮಗಳೂರು…

Read More

ಬೆಂಗಳೂರಿನಲ್ಲಿ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ ಅಬ್ದುಲ್​​ಗೆ ಚಪ್ಪಲಿ ಏಟು

ಬೆಂಗಳೂರು, ಮಾ.26: ನೆಲಮಂಗಲ ತಾಲೂಕಿನ ಬೇಗೂರು ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರೊಬ್ಬರು ವಿದ್ಯಾರ್ಥಿನಿಯೊಬ್ಬಳಿಗೆ ತರಗತಿಯಲ್ಲೇ ಪ್ರಪೋಸ್ ಮಾಡಿರುವ ಘಟನೆ ನಡೆದಿದೆ. ಪ್ರಾಧ್ಯಾಪಕ ಅಬ್ದುಲ್ ಎಂಬಾತ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರೀತಿ ನಿವೇದನೆ ಮಾಡಿದ್ದಾನೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಪ್ರಾಂಶುಪಾಲರೊಂದಿಗೆ ಮಾತನಾಡುವಂತೆ ತಿಳಿಸಿದ್ದಾಳೆ. ಈ ಘಟನೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್‌ನನ್ನು ಕಾಲೇಜು ಆವರಣದಲ್ಲಿ ಅಟ್ಟಾಡಿಸಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಬ್ದುಲ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಪ್ರಸ್ತುತ ಪ್ರಾಧ್ಯಾಪಕ ಅಬ್ದುಲ್ ತಲೆಮರೆಸಿಕೊಂಡಿದ್ದು, ನೆಲಮಂಗಲ ಗ್ರಾಮಾಂತರ ಪೊಲೀಸರು…

Read More