Ashes 2025: 14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..! – Kannada News | England Won 4th Ashes Test vs Australia
ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಇಂಗ್ಲೆಂಡ್ ತಂಡದ 14 ವರ್ಷಗಳ ಕನಸು ಕೊನೆಗೂ ಈಡೇರಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದಿದ್ದು 2011 ರಲ್ಲಿ. 2011 ರಲ್ಲಿ ನಡೆದ ಆ್ಯಶಸ್ ಸರಣಿಯ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 83 ರನ್‌ಗಳಿಂದ ಸೋಲಿಸಿತ್ತು. ಈ ಅಮೋಘ ಗೆಲುವಿನ…