Headlines

ಅಪಾರ್ಟ್​​ಮೆಂಟ್​​ನ 13ನೇ ಮಹಡಿಯಿಂದ ಹಾರಿದ ವ್ಯಕ್ತಿ, ಫ್ಲಾಟ್​ ಒಳಗೆ ತಾಯಿಯ ಮೃತದೇಹ ಪತ್ತೆ

ಗಾಜಿಯಾಬಾದ್, ಮಾರ್ಚ್​ 20: ಅಪಾರ್ಟ್​ಮೆಂಟ್​ನ 13ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್​​ನಲ್ಲಿ ನಡೆದಿದೆ. ಫ್ಲಾಟ್ ಒಳಗೆ ತಾಯಿಯ ಮೃತದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರಿಗೆ ಕರೆ ಮಾಡಿ ಅವರು ಫ್ಲಾಟ್‌ಗೆ ಪ್ರವೇಶಿಸಿದಾಗ, ಹಾಸಿಗೆಯ ಮೇಲೆ ಬಿದ್ದಿದ್ದ ಅವರ ತಾಯಿಯ ಶವ ಕಂಡುಬಂದಿದೆ. ಮಹಾಗುಣಪುರಂ ಸೊಸೈಟಿಯ ವಸತಿ ಸಂಕೀರ್ಣದಿಂದ 13 ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಜಿಗಿದ ಬಗ್ಗೆ ಕರೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಅವರು ಹತ್ತಿರದ ಖಾಸಗಿ ಆಸ್ಪತ್ರೆಗೆ…

Read More

ನಿಮ್ಹಾನ್ಸ್–ಕಿದ್ವಾಯಿ ಆಸ್ಪತ್ರೆಗಳಲ್ಲಿ 55 ರೋಗಿಗಳು ನಾಪತ್ತೆ; ಮೂವರ ಸುಳಿವೇ ಇಲ್ಲ! – Kannada News | Bengaluru: 55 Patients Vanish from NIMHANS and Kidwai, 3 Untraced

ನಿಮ್ಹಾನ್ಸ್–ಕಿದ್ವಾಯಿ ಆಸ್ಪತ್ರೆಗಳಲ್ಲಿ 55 ರೋಗಿಗಳು ನಾಪತ್ತೆ ಬೆಂಗಳೂರು, ಜನವರಿ 03: ಬೆಂಗಳೂರಿನ ಪ್ರತಿಷ್ಠಿತ ಆರೋಗ್ಯ ಸಂಸ್ಥೆಗಳಾದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (NIMHANS ) ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಗಳಿಂದ ಸಮಾಲೋಚನೆ ಮತ್ತು ಚಿಕಿತ್ಸೆಗೆ ಬಂದಿದ್ದ ಒಟ್ಟು 55 ರೋಗಿಗಳು ನಾಪತ್ತೆಯಾಗಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಸುಮಾರು 20 ತಿಂಗಳ ಅವಧಿಯಲ್ಲಿ ಈ ಎಲ್ಲಾ ರೋಗಿಗಳು ನಾಪತ್ತೆಯಾಗಿದ್ದು, ಈ ಪೈಕಿ ಇದುವರೆಗೂ ಮೂವರು ರೋಗಿಗಳ ಸುಳಿವೇ ಸಿಕ್ಕಿಲ್ಲವೆಂಬ ಮಾಹಿತಿ ಬಹಿರಂಗವಾಗಿದೆ. ಅನಿರೀಕ್ಷಿತ…

Read More

ಅಜಿತ್ ಪವಾರ್ ಅಂತ್ಯಕ್ರಿಯೆ; ಕಣ್ಣೀರಿಡುತ್ತಾ ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ – Kannada News | Ajit Pawar Funeral Deputy CMs sons light the funeral pyre perform last rites

ಪುಣೆ, ಜನವರಿ 29: ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್​ಸಿಪಿ ನಾಯಕ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಇಂದು ನೆರವೇರಿದೆ. ನಿನ್ನೆ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಅವರು ಮೃತಪಟ್ಟಿದ್ದರು. ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುಣೆಯ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅವರ ಪುತ್ರರಾದ ಪಾರ್ಥ್ ಮತ್ತು ಜೇ ತಮ್ಮ ತಂದೆಯ ಅಂತ್ಯಕ್ರಿಯೆಯ ವಿಧಿ-ವಿಧಾನಗಳನ್ನು ನಡೆಸಿದರು. ಕೇಂದ್ರ ಸಚಿವ ಅಮಿತ್ ಶಾ,…

Read More

Video: ಜಮ್ಮು-ಕಾಶ್ಮೀರದ ಗಡಿಯಲ್ಲಿ ಐದು ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಶ್ರೀನಗರ, ಜನವರಿ 12: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಹಾಗೂ ನಿಯಂತ್ರಣ ರೇಖೆಯ ಬಳಿ ಡ್ರೋನ್ ಚಟುವಟಿಕೆ ಹೆಚ್ಚುತ್ತಿದೆ. ಗಣರಾಜ್ಯೋತ್ಸವಕ್ಕೂ ಮುನ್ನ ಪಾಕಿಸ್ತಾನ ಭಾರತದ ಗಡಿಗಳ ಬಳಿ ಡ್ರೋನ್ ಚಟುವಟಿಕೆಯನ್ನು ಹೆಚ್ಚಿಸಿದ್ದು, ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರವಹಿಸಿವೆ. ಭದ್ರತಾ ಸಂಸ್ಥೆಗಳ ಪ್ರಕಾರ, ಅಂತಾರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ವಿವಿಧ ಪ್ರದೇಶಗಳಲ್ಲಿ ಒಟ್ಟು ಐದು ಡ್ರೋನ್‌ಗಳು ಪತ್ತೆಯಾಗಿವೆ. ಪೂಂಚ್, ನೌಶೇರಾ, ಧರ್ಮಶಾಲಾ, ರಾಮಗಢ ಮತ್ತು ಪರಾಖ್ ಪ್ರದೇಶಗಳಲ್ಲಿ ಡ್ರೋನ್ ಕಾಣಿಸಿಕೊಂಡ ವರದಿಯಾಗಿದೆ. ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ…

Read More

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

ಮೈಸೂರು, ಮಾರ್ಚ್​ 08: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ (Vatal Nagaraj) ಪ್ರತಿಕ್ರಿಯಿಸಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳನ್ನ ಜೈಲಿಗೆ ಹಾಕುವುದಕ್ಕೆ ಆಗುತ್ತಾ?  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…

Read More

ಇರಾನ್​ನ 140 ಮಿಲಿಯನ್ ಬ್ಯಾರೆಲ್ ತೈಲವನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಂತೆ ಅಮೆರಿಕ!

ವಾಷಿಂಗ್ಟನ್, ಮಾರ್ಚ್ 21: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಾದ್ಯಂತ ಕಚ್ಚಾ ತೈಲ, ಅಡುಗೆ ಅನಿಲ ಸೇರಿದಂತೆ ತೀವ್ರ ಇಂಧನ ಬಿಕ್ಕಟ್ಟು ಎದುರಾಗಿದೆ. ಇಂಥ ಸನ್ನಿವೇಶದಲ್ಲಿ ಇದೀಗ ಅಮೆರಿಕ ಮಹತ್ವದ ಹೇಳಿಕೆ ನೀಡಿದೆ. ಸಮುದ್ರದಲ್ಲಿ ಸಿಲುಕಿರುವ, ಇರಾನ್‌ಗೆ ಸೇರಿದ 140 ಮಿಲಿಯನ್ ಬ್ಯಾರೆಲ್ ಬ್ಯಾರೆಲ್ ತೈಲವನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡಿ ಇಂಧನ ಪೂರೈಕೆಯನ್ನು ಸುಗಮಗೊಳಿಸುವುದಾಗಿ ಅಮೆರಿಕದ ಖಜಾನೆ ಸಚಿವ ಸ್ಕಾಟ್ ಬೆಸೆಂಟ್ (Scott Bessent) ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಸಂದೇಶದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಅಷ್ಟೇ ಅಲ್ಲದೆ…

Read More

ಬಸವಜಯಮೃತ್ಯುಂಜಯ ವಿರುದ್ಧ ಮಹಿಳೆ ಲೈಂಗಿಕ ದೌರ್ಜುನ್ಯ ಆರೋಪ:ಸ್ಫೋಟಕ ವಿಚಾರ ಬಿಚ್ಚಿಟ್ಟ ಕೈ ಶಾಸಕ

ಬಾಗಲಕೋಟೆ, (ಏಪ್ರಿಲ್ 07): ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ (Basavajaya Mrutyunjaya Swamiji )ಮೇಲೆ ಲೈಂಗಿಕ ಕಿರುಕುಳ ಆರೋಪ ದಾಖಲಾಗಿದೆ. ಸ್ವಾಮೀಜಿ ತನ್ನ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕುತ್ತಿದ್ದಾರೆ ಎಂದು ಬೆಂಗಳೂರು ಮೂಲದ ಮಹಿಳೆಯ ಆರೋಪ ಮಾಡಿದ್ದಾರೆ. ಈ ಕುರಿತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ದಾಖಲು ಮಾಡಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಶಾಸಕ ಹಾಗೂ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ …

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಬೆಂಗಳೂರಿಗೆ ಬಂದೇ ಬಿಡ್ತು ಮೊದಲ ‘ಬ್ಲೂ ಲೈನ್’ ರೈಲು – Kannada News

ಬೆಂಗಳೂರು, ಜೂನ್​ 04: ಬ್ಲೂ ಲೈನ್ (Blue Line Metro) ಬೆಂಗಳೂರಿಗರ ಬಹುನಿರೀಕ್ಷಿತ ನಮ್ಮ ಮೆಟ್ರೋ ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​ಸಿಎಲ್​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬೆನ್ನಲ್ಲೇ ಕೆಂಪೇಗೌಡ ಏರ್​ಪೋರ್ಟ್ (Kempegowda International Airport)​​ ಮಾರ್ಗಕ್ಕೆ ಮೊದಲ ರೈಲು ಬಂದಿದೆ. ಇಂದು ಬೆಳಿಗ್ಗೆ ಬೈಯಪ್ಪನಹಳ್ಳಿ ಡಿಪೋಗೆ ಟ್ರೈನ್ ಸೆಟ್​ ತಲುಪಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್ ನೀಡಿದೆ. ಮುಖ್ಯಾಂಶಗಳು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್​ ಬ್ಲೂ ಲೈನ್ ಮೆಟ್ರೋ…

Read More

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ಶಿವರಾಜ್ ತಂಗಡಗಿ

ಕೊಪ್ಪಳ, (ಜನವರಿ 05): ಹಿಟ್ನಾಳ ಗ್ರಾಮದ ಬಳಿ ಹಮ್ಮಿಕೊಂಡಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿದೆ. ಹೌದು…ಇಂದು (ಜನವರಿ 05) ಕೊಪ್ಪಳದ (Koppal) ಹಿಟ್ನಾಳ ಗ್ರಾಮದಲ್ಲಿ 27 ಕೋಟಿ ರೂಪಾಯಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣ ನಡುವೆ ಸಂಘರ್ಷ ಏರ್ಪಟ್ಟಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರ ಹೆಸರು ಹಾಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಾಟ ನಡೆಸಿ,…

Read More

ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್: ಸ್ಟೇಡಿಯಂನಲ್ಲಿ ಈ ಜೋಡಿಯೇ ಹೈಲೈಟ್

ಬೆಂಗಳೂರು, ಮಾ.28: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ಮತ್ತು ಸನ್​ರೈಸರ್ಸ್ ಹೈದರಾಬಾದ್ (ಎಸ್.ಆರ್.ಹೆಚ್.) ತಂಡಗಳು ಮುಖಾಮುಖಿಯಾಗಿದೆ. ಈ ಮಹತ್ವದ ಕಾದಾಟವನ್ನು ವೀಕ್ಷಿಸಲು ಆಗಮಿಸಿದ್ದ ಸಾವಿರಾರು ಅಭಿಮಾನಿಗಳ ನಡುವೆ ಒಂದು ಅಪರೂಪದ ಜೋಡಿ ಎಲ್ಲರ ಗಮನ ಸೆಳೆದಿದೆ. ಬದ್ರಿನಾಥ್ ಮತ್ತು ಮಲ್ಲಿಕಾ ಎಂಬ ದಂಪತಿಗಳು ತಮ್ಮ ವಿಶಿಷ್ಟ ಕ್ರಿಕೆಟ್ ಅಭಿಮಾನದಿಂದಾಗಿ ಕುತೂಹಲ ಮೂಡಿಸಿದ್ದಾರೆ. ಈ ದಂಪತಿಗಳು 42 ವರ್ಷಗಳ ಸುದೀರ್ಘ ದಾಂಪತ್ಯ ಜೀವನವನ್ನು ಪೂರೈಸಿದ್ದಾರೆ. ಅವರಲ್ಲಿ…

Read More