ತಮ್ಮ ಹೆಸರು ಬದಲಿಸಿದ್ದೇಕೆ ಅಕ್ಷಯ್ ಕುಮಾರ್? ಕಾರಣ ವಿವರಿಸಿದ ನಟ – Kannada News | Why Akshay Kumar changed his name from Rajiv to Akshay

ಅಕ್ಷಯ್ ಕುಮಾರ್ (Akshay Kumar) ಬಾಲಿವುಡ್​ನ ಸ್ಟಾರ್ ನಟರುಗಳಲ್ಲಿ ಒಬ್ಬರು. ಈಗಲೂ ಅತ್ಯಂತ ಬ್ಯುಸಿ ಸ್ಟಾರ್ ನಟರೆಂದರು ಅದು ಅಕ್ಷಯ್ ಕುಮಾರ್. ವರ್ಷಕ್ಕೆ ಐದು ಆರು ಸಿನಿಮಾಗಳಲ್ಲಿ ಅವರು ನಟಿಸುತ್ತಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರಿಗೆ ದೊಡ್ಡ ಯಶಸ್ಸು ದೊರೆತಿಲ್ಲವಾದರೂ ಅವರಿಗೆ ಬೇಡಿಕೆ ಏನೂ ಕಡಿಮೆ ಆಗಿಲ್ಲ. ಯಾವುದೇ ಗಾಡ್​ಫಾದರ್​​ಗಳಿಲ್ಲದೆ ಚಿತ್ರರಂಗಕ್ಕೆ ಬಂದ ಅಕ್ಷಯ್ ಕುಮಾರ್, ಸ್ಟಾರ್ ನಟರಾಗಿ ಬೆಳೆದು ನಿಂತಿದ್ದಾರೆ. ಅಂದಹಾಗೆ ಅಕ್ಷಯ್ ಕುಮಾರ್ ಅವರ ನಿಜ ಹೆಸರು ಅದಲ್ಲ ಬದಲಿಗೆ ಅವರ ಹೆಸರು ರಾಜೀವ್ ಎಂದಾಗಿತ್ತು. ಆದರೆ ಅದು ಬದಲಾಗಿದ್ದು ಹೇಗೆ ಗೊತ್ತೆ?

ಬಹುತೇಕರಿಗೆ ಗೊತ್ತಿರುವಂತೆ ಅಕ್ಷಯ್ ಕುಮಾರ್ ಅವರು ಮಾರ್ಷಲ್ ಆರ್ಟ್ಸ್ ಟೀಚರ್ ಆಗಿದ್ದರು. ಸಮರ ಕಲೆಗಳ ಬಗ್ಗೆ ವಿಪರೀತ ಆಸಕ್ತಿ ಇದ್ದ ಅಕ್ಷಯ್, ವಿದ್ಯಾರ್ಥಿಗಳಿಗೆ ಸಮರ ಕಲೆಗಳನ್ನು ಕಲಿಸುತ್ತಿದ್ದರು. ಆಗ ಅವರ ಹೆಸರು ರಾಜೀವ್ ಹರಿ ಓಂ ಭಾಟಿಯಾ ಎಂದಾಗಿತ್ತು. ಅಕ್ಷಯ್ ಅವರಿಗೆ ಒಂದು ಹಿಂದಿ ಸಿನಿಮಾನಲ್ಲಿ ನಟಿಸುವ ಅವಕಾಶ ದೊರೆತಿತು, ಅದು ಬಹಳ ಸಣ್ಣ ಪಾತ್ರ. ಸಿನಿಮಾನಲ್ಲಿ ನಾಯಕಿಗೆ ಅಕ್ಷಯ್ ಸಮರ ಕಲೆ ಕಲಿಸಬೇಕಿತ್ತು.

ಇದನ್ನೂ ಓದಿ:‘ಇದು ಸಮಾಜಕ್ಕೂ ಅಪಾಯಕಾರಿ’; ಅಕ್ಷಯ್ ಕುಮಾರ್ ವಿಡಿಯೋ ಬಗ್ಗೆ ಕೋರ್ಟ್ ಕಳವಳ

ಅದಾಗಲೇ ಸಿನಿಮಾಕ್ಕೆ ಬರುವ ಮನಸ್ಸು ಮಾಡಿದ್ದ ಅಕ್ಷಯ್ ಅವರು ಪಾತ್ರದಲ್ಲಿ ನಟಿಸಲು ಒಪ್ಪಿಕೊಂಡರು. ಬರೋಬ್ಬರಿ ಎಂಟು ಸೆಕೆಂಡುಗಳಷ್ಟೆ ಅವರು ತೆರೆ ಮೇಲೆ ಕಾಣಿಸಿಕೊಳ್ಳುವ ಪಾತ್ರ ಅದು. ಸಿನಿಮಾದ ಹೆಸರು ‘ಆಜ್’. ಮಹೇಶ್ ಭಟ್ ಅವರು ಆ ಸಿನಿಮಾದ ನಿರ್ದೇಶಕ. ಸಿನಿಮಾದ ನಾಯಕನ ಪಾತ್ರದಲ್ಲಿ ನಟಿಸಿದ್ದು ಆಗಿನ ಸ್ಟಾರ್ ನಟರಲ್ಲಿ ಒಬ್ಬರಾದ ಕುಮಾರ್ ಗೌರವ್. ಆ ಸಿನಿಮಾನಲ್ಲಿ ನಾಯಕನ ಪಾತ್ರ ಹೆಸರು ಅಕ್ಷಯ್ ಎಂದಿತ್ತು.

ಅಕ್ಷಯ್ ಅವರಿಗೆ ಕುಮಾರ್ ಗೌರವ್ ಮೇಲೆ ಅಭಿಮಾನ ಇತ್ತು. ‘ನನಗೆ ಸಿನಿಮಾನಲ್ಲಿ ಬರುವ ಆಸೆ ಇದೆ, ನಾನು ನಟಿಸಿದ ಮೊದಲ ಸಿನಿಮಾನಲ್ಲಿ ನಾಯಕನ ಹೆಸರು ಅಕ್ಷಯ್ ಹಾಗಾಗಿ ನಾನು ಅದೇ ಹೆಸರು ಇಟ್ಟುಕೊಳ್ಳುತ್ತೇನೆ ಎಂದುಕೊಂಡು ತಮ್ಮ ಹೆಸರನ್ನು ತಾವೇ ಅಕ್ಷಯ್ ಎಂದು ಬದಲಾಯಿಸಿಕೊಂಡರಂತೆ ಅಕ್ಷಯ್ ಕುಮಾರ್.

ಅಕ್ಷಯ್ ಕುಮಾರ್ ಪ್ರಸ್ತುತ ‘ವೆಲ್​​ಕಮ್​ ಟು ಜಂಗಲ್’, ‘ಭೂತ್ ಬಂಗ್ಲಾ’, ‘ಹೈವಾನ್’, ‘ಜಾಲಿ ಎಲ್​​ಎಲ್​​ಬಿ 4’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಕೆಲ ಸಿನಿಮಾಗಳ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಒಂದು ರಿಯಾಲಿಟಿ ಶೋ ಸಹ ನಡೆಸಿಕೊಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪುರುಷರು ರಾತ್ರಿ ಮಲಗುವ ಮುನ್ನ ಕಡ್ಡಾಯವಾಗಿ 2 ಹುರಿದ ಖರ್ಜೂರ ಸೇವನೆ ಮಾಡಬೇಕು ಯಾಕೆ ಗೊತ್ತಾ? – Kannada News | Health Benefits of Dates: What Experts Say

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿಯೇ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅದಲ್ಲದೆ ಈ ಸಮಯದಲ್ಲಿ, ಆಹಾರ ಪದ್ಧತಿಯೂ ಬದಲಾಗುವುದರಿಂದ ಈ ಋತುವಿನಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಒಣ ಹಣ್ಣುಗಳ ಸೇವನೆ ಮಾಡುವುದು ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾದದ್ದು ಖರ್ಜೂರ (Dates). ಇದನ್ನು ಹುರಿದು ಸೇವನೆ ಮಾಡುವುದರಿಂದ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆಯುರ್ವೇದದಲ್ಲಿಯೂ ಇದನ್ನು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಾಗಾದರೆ ಹುರಿದ ಖರ್ಜೂರ ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ, ಇದನ್ನು ಯಾವ ಸಮಯದಲ್ಲಿ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ದೆಹಲಿಯ ಆಯುರ್ವೇದ ತಜ್ಞ ಡಾ. ಚಂಚಲ್ ಶರ್ಮಾ ಅವರು ಹೇಳುವ ಪ್ರಕಾರ, ಸಾಮಾನ್ಯವಾಗಿ ಹುರಿದ ಖರ್ಜೂರವು ದೇಹವನ್ನು ಬೆಚ್ಚಗಿಡಲು ಸಹಾಯ ಮಾಡುತ್ತದೆ. ಅದರಲ್ಲಿಯೂ ಈ ರೀತಿಯ ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸಿದಾಗ, ನಿಮ್ಮ ಫಲವತ್ತತೆ ಸುಧಾರಿಸುತ್ತದೆ ಮತ್ತು ಹಾರ್ಮೋನುಗಳು ಸಮತೋಲನದಲ್ಲಿರುತ್ತವೆ. ಖರ್ಜೂರವು ಕಬ್ಬಿಣ ಮತ್ತು ಖನಿಜಗಳಂತಹ ವಿವಿಧ ಪೋಷಕಾಂಶಗಳನ್ನು ಹೊಂದಿರುವುದರಿಂದ ದೇಹದಲ್ಲಿ ಹಾರ್ಮೋನ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇವುಗಳ ಸೇವನೆ ಮಹಿಳೆಯರಿಗೂ ಪ್ರಯೋಜನಕಾರಿಯಾಗಿದೆ, ಏಕೆಂದರೆ ಇದರ ಸೇವನೆ ಅಂಡೋತ್ಪತ್ತಿಗೆ ಸಹಾಯ ಮಾಡುವ ಮೂಲಕ ಗರ್ಭಧಾರಣೆಯನ್ನು ಸುಲಭಗೊಳಿಸುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲೇಕೆ ಖರ್ಜೂರವನ್ನು ಹೆಚ್ಚೆಚ್ಚು ಸೇವನೆ ಮಾಡಬೇಕು? ಇದರ ಹಿಂದಿದೆ ಮಹತ್ವದ ಕಾರಣ

ಪುರುಷರ ಫಲವತ್ತತೆಯನ್ನು ಸುಧಾರಿಸುತ್ತದೆ

ಡಾ. ಚಂಚಲ್ ಅವರು ಹೇಳುವ ಪ್ರಕಾರ ಹುರಿದ ಖರ್ಜೂರವನ್ನು ತಿನ್ನುವುದರಿಂದ ಪುರುಷರ ಫಲವತ್ತತೆ ಸುಧಾರಿಸುತ್ತದೆ. ಇದು ವೀರ್ಯದ ಗುಣಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಬಂಜೆತನದ ಅಪಾಯವನ್ನು ಕಡಿಮೆ ಮಾಡುತ್ತದೆ. ದೇಹವು ರಾತ್ರಿಯಲ್ಲಿ ತನ್ನನ್ನು ತಾನೇ ಸರಿಪಡಿಸಿಕೊಳ್ಳುವುದರಿಂದ ರಾತ್ರಿ ಮಲಗುವ ಮೊದಲು ಹುರಿದ ಖರ್ಜೂರವನ್ನು ತಿನ್ನಬೇಕು. ಮಲಗುವ ಮೊದಲು ನೀವು ಇವುಗಳನ್ನು ಸ್ವಲ್ಪ ಬೆಚ್ಚಗಿನ ಹಾಲಿನೊಂದಿಗೆ ಅಥವಾ ಹುರಿದು ಆ ಬಳಿಕ ಸೇವನೆ ಮಾಡಬಹುದು.

ಯಾರಿಗೆ ಒಳ್ಳೆಯದಲ್ಲ?

ಹೊಟ್ಟೆ ನೋವು, ಪಿತ್ತಜನಕಾಂಗದ ಕಾಯಿಲೆ ಅಥವಾ ಅನಿಯಂತ್ರಿತ ಮಧುಮೇಹ ಇರುವವರು ಹುರಿದ ಖರ್ಜೂರವನ್ನು ತಿನ್ನಬಾರದು ಎಂದು ಡಾ. ಚಂಚಲ್ ಹೇಳುತ್ತಾರೆ. ಏಕೆಂದರೆ ಅದು ಅವರ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಈ ಯಾವುದೇ ಸಮಸ್ಯೆಗಳು ಇಲ್ಲದಿದ್ದರೆ ಮಾತ್ರ ನೀವು ಹುರಿದ ಖರ್ಜೂರವನ್ನು ತಿನ್ನಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇಶಿ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅಬ್ಬರ; ಭಾರತ ತಂಡಕ್ಕೆ ಆಯ್ಕೆ ಯಾವಾಗ? – Kannada News | Devdutt Padikkal’s Vijay Hazare Century Spree: Is an India Call Up Next?

ಕಳೆದ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಕೆಲವೇ ಕೆಲವು ಇನ್ನಿಂಗ್ಸ್​ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕನ್ನಡಿಗ ದೇವದತ್ ಪಡಿಕ್ಕಲ್‌, ಇದೀಗ ದೇಶಿ ಅಂಗಳದಲ್ಲಿ ಶತಕಗಳ ಮಳೆ ಸುರಿಸುತ್ತಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ಮೊದಲ ಪಂದ್ಯದಲ್ಲಿ 147 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದ ಪಡಿಕ್ಕಲ್, ಕರ್ನಾಟಕ ತಂಡ ದಾಖಲೆಯ ಮೊತ್ತವನ್ನು ಬೆನ್ನಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದೀಗ ಈ ಟೂರ್ನಿಯ ಎರಡನೇ ಪಂದ್ಯದಲ್ಲೂ ಮಿಂಚಿರುವ ದೇವದತ್ ಸತತ ಎರಡನೇ ಶತಕ ಸಿಡಿಸಿದ್ದಾರೆ. ಜಾರ್ಖಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 118 ಎಸೆತಗಳಲ್ಲಿ 147 ರನ್ ಬಾರಿಸಿದ್ದ ಪಡಿಕ್ಕಲ್ ಇದೀಗ ಕೇರಳ ವಿರುದ್ಧದ ಪಂದ್ಯದಲ್ಲಿ 116 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಕೇರಳ ವಿರುದ್ಧದ ಈ ಪಂದ್ಯದಲ್ಲಿ 137 ಎಸೆತಗಳನ್ನು ಎದುರಿಸಿದ ಪಡಿಕ್ಕಲ್ 3 ಸಿಕ್ಸರ್‌ಗಳು ಮತ್ತು 12 ಬೌಂಡರಿಗಳ ಸಹಿತ 124 ರನ್ ಬಾರಿಸಿದ್ದಾರೆ.

ದೇವದತ್ ಪಡಿಕ್ಕಲ್ ಇಷ್ಟೊಂದು ಉತ್ತಮ ಫಾರ್ಮ್‌ನಲ್ಲಿರುವುದು ಇದೇ ಮೊದಲಲ್ಲ. ಈ ಎಡಗೈ ಬ್ಯಾಟ್ಸ್‌ಮನ್ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಭಾರತದ ಅತ್ಯುತ್ತಮ ಬ್ಯಾಟ್ಸ್‌ಮನ್ ಎಂಬುದನ್ನು ಅವರ ಅಂಕಿ ಅಂಶಗಳೇ ಹೇಳುತ್ತವೆ. ಪಡಿಕ್ಕಲ್ ಕೇವಲ 34 ಇನ್ನಿಂಗ್ಸ್‌ಗಳಲ್ಲಿ 11 ಶತಕಗಳು ಮತ್ತು 12 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದರರ್ಥ ಅವರು ಬಹುತೇಕ ಎಲ್ಲಾ ಪಂದ್ಯಗಳಲ್ಲಿ ಶತಕ ಅಥವಾ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ.

ಲಿಸ್ಟ್ ಎ ಕ್ರಿಕೆಟ್​ನಲ್ಲಿ 34 ಇನ್ನಿಂಗ್ಸ್‌ಗಳನ್ನಾಡಿರುವ ಪಡಿಕ್ಕಲ್ 82 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 2342 ರನ್ ಗಳಿಸಿದ್ದಾರೆ. ಪಡಿಕ್ಕಲ್ ಅವರ ಸ್ಟ್ರೈಕ್ ರೇಟ್ ಕೂಡ 92 ಕ್ಕಿಂತ ಹೆಚ್ಚಾಗಿದೆ. ಈ ರೀತಿಯ ಅಂಕಿಅಂಶಗಳ ಹೊರತಾಗಿಯೂ, ಪಡಿಕ್ಕಲ್‌ಗೆ ಟೀಂ ಇಂಡಿಯಾ ಏಕದಿನ ತಂಡದಲ್ಲಿ ಆಡುವ ಅವಕಾಶ ಸಿಕ್ಕಿಲ್ಲ.

ಪಡಿಕ್ಕಲ್‌ ಇಲ್ಲಿಯವರೆಗೆ ಭಾರತ ತಂಡದ ಪರ ಎರಡು ಟೆಸ್ಟ್ ಮತ್ತು ಎರಡು ಟಿ20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ ಒಂದು ಅರ್ಧಶತಕ ಸೇರಿದಂತೆ 30 ಸರಾಸರಿಯಲ್ಲಿ 90 ರನ್ ಗಳಿಸಿರುವ ಪಡಿಕ್ಕಲ್ ಟಿ20ಯಲ್ಲಿ 19 ರ ಸರಾಸರಿಯಲ್ಲಿ 38 ರನ್ ಗಳಿಸಿದ್ದಾರೆ. ಆದಾಗ್ಯೂ ಪಡಿಕ್ಕಲ್ ಅವರಿಗೆ ಇನ್ನೂ ಪೂರ್ಣ ಅವಕಾಶ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ.

2025 ರ ವರ್ಷ ದೇವದತ್ ಪಡಿಕ್ಕಲ್ ಅವರಿಗೆ ವಿಶೇಷವಾಗಿತ್ತು. ಕಳೆದ ಆವೃತ್ತಿಯ ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್-ಫೈನಲ್ ಮತ್ತು ಸೆಮಿಫೈನಲ್‌ಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದ ಪಡಿಕ್ಕಲ್, ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿ 309 ರನ್ ಬಾರಿಸಿದ್ದರು, ಈಗ ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಭೀತುಪಡಿಸಿರುವ ಪಡಿಕ್ಕಲ್​ಗೆ ಭಾರತ ತಂಡದಲ್ಲಿ ಯಾವಾಗ ಅವಕಾಶ ಸಿಗಲಿದೆ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ.

Published On – 6:20 pm, Fri, 26 December 25

Source link

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ, ಕಾರ್ಯಕರ್ತರಿಂದ ನ್ಯಾಯಾಲಯದೆದುರು ಪ್ರತಿಭಟನೆ – Kannada News | Unnao case survivor family and activists protest at court police ask them to leave

ನವದೆಹಲಿ, ಡಿಸೆಂಬರ್ 26: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕುಲದೀಪ್ ಸಿಂಗ್ ಸೆಂಗಾರ್ (Kuldeep Singh Sengar) ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ನ್ಯಾಯಾಲಯದ ಆದೇಶವನ್ನು ಪ್ರತಿಭಟಿಸಲು ಇಂದು ದೆಹಲಿ ಹೈಕೋರ್ಟ್ ಹೊರಗೆ ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಜಮಾಯಿಸಿತ್ತು. ತಕ್ಷಣ ಅವರನ್ನು ಆ ಸ್ಥಳದಿಂದ ಆಚೆ ಹೋಗುವಂತೆ ಪೊಲೀಸರು ಎಚ್ಚರಿಕೆ ನೀಡಿದರು.

ದೆಹಲಿ ಹೈಕೋರ್ಟ್ ಹೊರಗೆ ಪ್ರತಿಭಟನಾಕಾರರನ್ನು ಪ್ರತಿಭಟನೆ ನಡೆಸದಂತೆ ತಡೆಯಲಾಯಿತು. ಇದರಿಂದ ನ್ಯಾಯಾಲಯದ ಭದ್ರತೆಯೊಂದಿಗೆ ಕೆಲಕಾಲ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದರು. ನ್ಯಾಯಾಲಯದ ಗೇಟ್‌ನಲ್ಲಿ ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದು ಭದ್ರತಾ ಸಿಬ್ಬಂದಿ ಅವರಿಗೆ ತಿಳಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಾವಿನಲ್ಲೂ ಒಂದಾದ ಜೀವದ ಗೆಳತಿಯರು: ಸುಟ್ಟು ಕರಕಲಾದ ನವ್ಯ-ಮಾನಸಳ ಗೆಳೆತನ ಬಿಚ್ಚಿಟ್ಟು ಕಣ್ಣೀರಿಟ್ಟ ತಂದೆ – Kannada News | Chitradurga Bus Accident: father Manjappa reveals Hassan Navya And Manasa Friendship

ಹಾಸನ, (ಡಿಸೆಂಬರ್ 26): ಚಿತ್ರದುರ್ಗ (Chitradruga) ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ (Bus Incident)  ಒಟ್ಟು 7 ಮಂದಿ ಪ್ರಾಣ ಕಳೆದುಕೊಂಡಿದ್ದು, ಸದಾ ಜೊತೆಯಲ್ಲೇ ಇರುತ್ತಿದ್ದ ಹಾಸನದ (Hassan) ಚನ್ನರಾಯಪಟ್ಟಣ ಮೂಲದ ನವ್ಯ ಹಾಗೂ ಮಾನಸ ಸಹ ಸುಟ್ಟು ಕರಕಲಾಗಿದ್ದಾರೆ. ಇದರೊಂದಿಗೆ ಕುಚಿಕು ಗೆಳೆಯರು ಸಾವಿನಲ್ಲೂ ಜೊತೆಯಾಗಿದ್ದಾರೆ. ಇನ್ನು ಮೃತ ಮಗಳು ನವ್ಯ ತಂದೆ ಮಂಜಪ್ಪ ಮಾತನಾಡಿ, ನಿನ್ನೆ ಬೆಳಿಗ್ಗೆ7 ಗಂಟೆಗೆ ನಮಗೆ ವಿಷಯ ತಿಳಿಯಿತು ಅವರು ಮಾನಸ, ನವ್ಯ, ಮಿಲನ ಮೂರು ಜನರು ಹೋಗಿದ್ರು. ಅದರಲ್ಲಿ ಮಿಲನ ಬದುಕಿದ್ದರಿಂದ ನಮಗೆ ಫೋನ್ ಮಾಡಿ ಹೇಳಿದರು. ಹೋಗಿ ನೋಡಿದಾಗ ನಮ್ಮ ಮಗಳು ಹಾಗೂ ಮಾನಸ ಸಂಪೂರ್ಣ ಸುಟ್ಟು ಹೋಗಿದ್ದರು. ನಮ್ಮ ಮಗಳು ಕೂತಿದ್ದ ಸೀಟ್ ಸಮೀಪಕ್ಕೇ ಲಾರಿ ಡಿಕ್ಕಿಯಾಗಿದೆ. ಅವರು ಅದರೊಳಗೇ ಜ್ಞಾನ ತಪ್ಪಿದಾರೆ. ಹಾಗಾಗಿ ಅಲ್ಲೇ ಸುಟ್ಟು ಹೋಗಿದಾರೆ. ಮೃತದೇಹ ಕಂಡು ಹಿಡಿಯಲು ಆಗದ ರೀತಿ ಆಗಿತ್ತು ಎಂದು ಬಿಕ್ಕಿ ಬಿಕ್ಕಿ ಹತ್ತರು.

ನವ್ಯ-ಮಾನಸದ ಸ್ನೇಹ ಹೇಗಿತ್ತು?

ಇನ್ನು ಮಂಜಪ್ಪ ಅವರು ನವ್ಯ ಹಾಗೂ ಮಾನಸ ಸ್ನೇಹದ ಬಗ್ಗೆ ಎಳೆ ಎಳೆಯಾಗಿ ಬಿಟ್ಟಿದ್ದಾರೆ. ಮಾನಸ ಹಾಗೂ ನವ್ಯ ಒಂದೇ ರೀತಿಯ ಬಟ್ಟೆ ತೆಗೆದುಕೊಳ್ಳುತ್ತಿದ್ದರು. ಒಂದೇ‌ ರೀತಿಯ ಜ್ಯುವೆಲರಿ ಹಾಕಿಕೊಳ್ಳುತ್ತಿದ್ದರು. ಇಬ್ಬರು ಓದಿದ್ದು ಒಂದೇ ಕಾಲೇಜು. ಒಟ್ಟಿಗೆ ಒಂದೇ ಕಡೆ ಕೆಲಸ ಮಾಡುತಿದ್ದರು. ಒಂದೇ ತಟ್ಟೆಯಲ್ಲಿ ಅನ್ನ ತಿನ್ನೋರು. ಎಲ್ಲಿಗೆ ಹೋಗಲಿ ಊರಿಗೆ ಬರಲಿ ಒಟ್ಟಿಗೆ ಓಡಾಡೋರು. ಅವರಿಬ್ಬರು ಒಟ್ಟಿಗೆ ಇದ್ದದ್ದು ನಮಗೂ ಧೈರ್ಯ ಇತ್ತು. ಆದರೆ ದೇವರು ಈ ರೀತಿ ಅನ್ಯಾಯ ಮಾಡಿಬಿಟ್ಟ. ಎರಡು ವರ್ಷದಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ಇದ್ದರು. ಜೊತೆಯಲ್ಲೆ ಇದ್ದರು ಈ ಜೊತೆಯಾಗೆ ನಮ್ಮನ್ನ ಬಿಟ್ಟು ಹೋದ್ರು ಎಂದು ಕಣ್ಣೀರಿಟ್ಟರು.

ಇದನ್ನೂ ನೋಡಿ: ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ನವ್ಯಳ ಮದ್ವೆ ಫಿಕ್ಸ್ ಆಗಿತ್ತು


ಚಿತ್ರದುರ್ಗ ಪೊಲೀಸರು ತುಂಬಾ ಸಹಾಯ ಮಾಡಿದ್ರು. ಘಟನೆ ಸಂಭವಿಸುವ ಮುನ್ನ ರಾತ್ರಿ 8 ಗಂಟೆಗೆ ಬಸ್ ಹತ್ತಿದಾಗ ಅರ್ಧ ಗಂಟೆ ಮಾತಾಡಿದ್ದಳು.ಆದ್ರೆ, ಬೆಳಿಗ್ಗೆ ಫೋನ್ ಮಾಡಿದ್ರೆ ಸ್ಚಿಚ್ ಆಫ್ ಆಗಿತ್ತು. ಏಪ್ರಿಲ್ 28-29ಕ್ಕೆ ನವ್ಯಳ ಮದುವೆ ನಿಶ್ಚಯ ಮಾಡಿದ್ದು, ಎಲ್ಲಾ ತಯಾರಿ ಮಾಡಿದ್ದೆವು. ಮಂಟಪ ಸಹ ಬುಕ್ ಮಾಡಲಾಗಿತ್ತಿ. ಅಲ್ಲದೇ ಜನವರಿ 25ಕ್ಕೆ ಬೆಂಗಳೂರಿನಲ್ಲಿ ಎಂಗೇಜ್ಮೆಂಟ್ ಕೂಡ ಮಾಡಬೇಕಿತ್ತು ಸರ್ ಎಂದು ಮಗಳನ್ನು ನೆನೆದು ಗೋಳಾಡಿದರು.

ಕುಚಿಕು ಗೆಳೆಯರನ್ನು ಗುರುತಿಸಲು ಡಿಎನ್​ಎ ಟೆಸ್ಟ್

ನವ್ಯ ಹಾಗೂ ಮಾನಸ ಅವರ ಶವಗಳನ್ನು ಗುರುತು ಹಿಡಿಯಲು ಇಬ್ಬರ ತಂದೆ – ತಾಯಿಯನ್ನು ಕರೆಯಿಸಿದ್ದರೂ ಸಾಧ್ಯವಾಗಿಲ್ಲ.  ಕತ್ತಿನಲ್ಲಿದ್ದ ಚೈನ್ ಮೂಲಕ ಪತ್ತೆ ಮಾಡಲು ಮುಂದಾಗಿದ್ದರು . ಆದ್ರೆ, ಇಬ್ಬರೂ ಕುಚಿಕು ಸ್ನೇಹಿತರಾಗಿದ್ದರಿಂದ ಪರಸ್ಪರ ಎಕ್ಸ್​ಚೇಂಜ್ ಮಾಡಿಕೊಳ್ಳುತ್ತಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಹೀಗಾಗಿ ಪತ್ತೆ ಮಾಡಲು ಗೊಂದಲ ಸೃಷ್ಟಿ ಆಗಿದೆ.  ಹಾಗಾಗಿ,  ಅಂತಿಮವಾಗಿ ಇವರಿಬ್ಬರ ಅಸ್ಥಿಪಂಜರದ ಮೂಳೆಗಳನ್ನು ಅವರ ಸಂಬಂಧಿಕರ ರಕ್ತದ ಸ್ಯಾಂಪಲ್ ನಿಂದ ಡಿಎನ್ ಎ ಟೆಸ್ಟ್ ಮಾಡಿಸಲು ಪೊಲೀಸರು ನಿರ್ಧರಿಸಿದ್ದಾರೆ. ಡಿಎನ್ ಎ ಟೆಸ್ಟ್ ನಿಂದ ಈ ಎರಡು ಅಸ್ಥಿಪಂಜರಗಳಲ್ಲಿ ಯಾರು ನವ್ಯಾ, ಯಾರು ಮಾನಸ ಎಂಬುದು ತಿಳಿದುಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ – Kannada News | India condemns Hindu man lynching and violence against minorities in Bangladesh

ಢಾಕಾ, ಡಿಸೆಂಬರ್ 26: ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಹಿಂದೂ ಪುರುಷರ ಹತ್ಯೆಯ ಘಟನೆಗಳನ್ನು ಭಾರತ ಇಂದು ತೀವ್ರವಾಗಿ ಖಂಡಿಸಿದೆ. ಇತ್ತೀಚಿನ ಹತ್ಯೆಯಿಂದ ಭಾರತ ವಿಚಲಿತವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರ ಜವಾಬ್ದಾರಿಯುತರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. “ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ವಿರುದ್ಧ ನಿರಂತರ ದ್ವೇಷವು ಬಹಳ ಕಳವಳಕಾರಿ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂ ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಈ ಹತ್ಯೆಯ ಅಪರಾಧಿಗಳ ಸಾವಿಗೆ ನ್ಯಾಯ ದೊರಕುತ್ತದೆ ಎಂದು ನಿರೀಕ್ಷಿಸುತ್ತೇವೆ” ಎಂದು ಜೈಸ್ವಾಲ್ ಹೇಳಿದ್ದಾರೆ.

ಅಲ್ಪಸಂಖ್ಯಾತರ ಮೇಲಿನ ದಾಳಿಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರ ವಿರುದ್ಧ ಸುಮಾರು 2,900 ಹಿಂಸಾಚಾರ ಘಟನೆಗಳು ನಡೆದಿವೆ. ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಭೀಕರ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಬಾಂಗ್ಲಾದೇಶ ಹೊರಡಿಸಿದ ಸುಳ್ಳು ನಿರೂಪಣೆಯನ್ನು ತಿರಸ್ಕರಿಸಿ ನಾವು ಈ ಹಿಂದೆಯೂ ಹೇಳಿಕೆಗಳನ್ನು ನೀಡಿದ್ದೇವೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಇದು ಬಾಂಗ್ಲಾದೇಶದ 2ನೇ ವಿಮೋಚನೆ: 2024ರ ದಂಗೆಯನ್ನು ಹೊಗಳಿದ ಬಿಎನ್​ಪಿ ನಾಯಕ ತಾರಿಖ್ ರಹಮಾನ್

ಈ ತಿಂಗಳು ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯನ್ನು ಗುಂಪೊಂದು ಥಳಿಸಿ ಕೊಂದ ಎರಡು ಪ್ರತ್ಯೇಕ ಘಟನೆಗಳು ನಡೆದಿತ್ತು. ಬುಧವಾರ ತಡರಾತ್ರಿ ರಾಜ್‌ಬರಿ ಜಿಲ್ಲೆಯಲ್ಲಿ ಹಿಂದೂ ವ್ಯಕ್ತಿಯನ್ನು ಗುಂಪೊಂದು ಹೊಡೆದು ಕೊಂದಿತು. ಅಧಿಕಾರಿಗಳ ಪ್ರಕಾರ, ಈ ಹಿಂಸಾಚಾರವು ಸುಲಿಗೆಗೆ ಸಂಬಂಧಿಸಿದ ಚಟುವಟಿಕೆಗಳಿಂದ ಹುಟ್ಟಿಕೊಂಡಿದೆ ಎಂದು ಆರೋಪಿಸಲಾಗಿದೆ. ಭಾರತ ಬಾಂಗ್ಲಾದೇಶದಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಆಧಾರರಹಿತ ಧರ್ಮನಿಂದನೆಯ ಆರೋಪದ ಮೇಲೆ ಗುಂಪೊಂದು ಥಳಿಸಿ, ಬೆಂಕಿ ಹಚ್ಚಿ, ಹಿಂದೂ ವ್ಯಕ್ತಿ ದೀಪು ಚಂದ್ರ ದಾಸ್ ಅವರನ್ನು ಹತ್ಯೆ ಮಾಡಲಾಗಿತ್ತು. ಆದರೆ, ಈ ಹತ್ಯೆಯನ್ನು ಖಂಡಿಸಿದ ಭಾರತ ಈ ಕೃತ್ಯದ ಅಪರಾಧಿಗಳಿಗೆ ನ್ಯಾಯ ನೀಡಲಾಗುವುದು ಎಂದು ಜೈಸ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: Bomb Attack: ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಬಾಂಬ್ ದಾಳಿಗೆ ಒಬ್ಬ ಬಲಿ

“ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ನಿರಂತರ ದ್ವೇಷವು ಬಹಳ ಕಳವಳಕಾರಿ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂ ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ” ಎಂದು ಅವರು ಉಲ್ಲೇಖಿಸಿದ್ದಾರೆ.

“ಬಾಂಗ್ಲಾದೇಶದ ಜನರೊಂದಿಗೆ ನಮ್ಮ ಸಂಬಂಧಗಳನ್ನು ಬಲಪಡಿಸಲು ಭಾರತವು ಬದ್ಧವಾಗಿದೆ. ನಾವು ಬಾಂಗ್ಲಾದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬೆಂಬಲಿಸುತ್ತೇವೆ. ಬಾಂಗ್ಲಾದೇಶದಲ್ಲಿ ಮುಕ್ತ, ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಮತ್ತು ಭಾಗವಹಿಸುವ ಚುನಾವಣೆಗಳಿಗೆ ನಿರಂತರವಾಗಿ ಕರೆ ನೀಡುತ್ತಿದ್ದೇವೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹನುಮಂತನಿಗೆ ಪೂಜೆ ಮಾಡಲು ಕಿತ್ತಾಟ: 3 ಕೇಸ್​ ಬುಕ್, ವಿವಾದದ ಕೇಂದ್ರ ಬಿಂದುವಾದ ಅಂಜನಾದ್ರಿ – Kannada News | Koppal: Anjanadri Temple Dispute: Priests Clash Over Puja Rights

ಕೊಪ್ಪಳ, ಡಿಸೆಂಬರ್​ 26: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ (Anjanadri Betta). ಅದು ಹನುಮ ಹುಟ್ಟಿದ ಸ್ಥಳ. ಈ ಕ್ಷೇತ್ರಕ್ಕೆ ದೇಶ-ವಿದೇಶದಿಂದ ಭಕ್ತರು ಬರುತ್ತಾರೆ. 575 ಮೆಟ್ಟಿಲೇರಿ ಹನುಮನ ದರ್ಶನ ಪಡೆದು ಪುನೀತರಾಗುತ್ತಾರೆ. ಇದೇ ಹನುಮ ಹುಟ್ಟಿದ ನಾಡು ಇದೀಗ ವಿವಾದದ ಕೇಂದ್ರ ಬಿಂದುವಾಗಿದೆ. ಸ್ವಾಮೀಜಿಗಳಿಬ್ಬರು ಗರ್ಭಗುಡಿಯಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಖಾವಿಧಾರಿಗಳು ಬಾಯಲ್ಲಿ ಕೀಳುಮಟ್ಟದ ಪದ ಪ್ರಯೋಗವಾಗಿದೆ. ಸದ್ಯ ಪ್ರಕರಣ ಗಂಭೀರವಾಗಿದ್ದು, ಎರಡು ದಿನದ ಅವಧಿಯಲ್ಲಿ ಮೂರು ಕೇಸ್ ದಾಖಲಾಗಿವೆ.

ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ಅರ್ಚಕರ ಗಲಾಟೆ

ಈ ಅಂಜನಾದ್ರಿ ಪರ್ವತದಲ್ಲಿ ಹನುಮ ಹುಟ್ಟಿದ ಎನ್ನುವ ಪ್ರತೀತಿ ಇದೆ. ಇದೇ ಅಂಜನಾದ್ರಿ ಕಳೆದ ನಾಲ್ಕು ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿದೆ. ಅದಕ್ಕೆ ಕಾರಣ ಸ್ವಾಮೀಜಿಗಳಿಬ್ಬರ ನಡುವಿನ ಗಲಾಟೆ. ಕಳೆದ ನಾಲ್ಕು ದಿನಗಳ ಹಿಂದೆ ಹನುನ ಹುಟ್ಟಿದ ಜಾಗದಲ್ಲಿ ಅರ್ಚಕ ಮಾಹಂತ ವಿದ್ಯಾದಾಸ್ ಬಾಬಾ ಹಾಗೂ ಹಂಪಿಯ ಗೋವಿಂದಾನಂದ ಸರಸ್ವತಿ ಮಧ್ಯೆ ಪೂಜಾ ವಿಚಾರಕ್ಕೆ ಗಲಾಟೆಯಾಗಿತ್ತು. ಮಾತಿಗೆ ಮಾತು ಬೆಳದಿತ್ತು. ಒಂದು ಹಂತಕ್ಕೆ ಕೈಕೈ ಮಿಲಾಯಿಸುವ ಹಂತಕ್ಕೂ ಹೋಗಿತ್ತು.

ಇದನ್ನೂ ಓದಿ: ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್

ಯಾವಾಗ ಅಂಜನಾದ್ರಿಯಲ್ಲಿ ಗಲಾಟೆಯಾಯಿತೋ ಗೋವಿಂದಾನಂದ ಸರಸ್ವತಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ವಿದ್ಯಾದಾಸ್ ಬಾಬಾ ಸೇರಿ 10 ಜನರ ವಿರುದ್ದ ದೂರು ನೀಡಿದ್ದರು. ಇತ್ತ ವಿದ್ಯಾದಾಸ್ ಬಾಬಾ ಕೂಡ ಆನಲೈನ್​ನಲ್ಲಿ ದೂರು ದಾಖಲಿಸಿದ್ದರು. ಆದರೆ ಅದು ಅಧಿಕೃತವಾಗಿಲ್ಲ, ಈ ಮಧ್ಯೆ ಮರುದಿನ ಮತ್ತೆ ಪಂಚನಾಮೆಗೆ ಬಂದಾಗ ವಿದ್ಯಾದಾಸ್ ಬಾಬಾ ಬೆಂಬಲಿಗರು, ಗೋವಿಂದಾನಂದ ಸರಸ್ವತಿ ಮೇಲೆ ಹಲ್ಲೆ ಮಾಡಿದ್ದಾರೆ. ತಲೆಗೆ ಹೊಡೆದು ಕಬ್ಬಿಣದ ಪೈಪ್​ನಿಂದ ಹಲ್ಲೆಗೆ ಮುಂದಾಗಿದ್ದರು. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ, ಗಂಗಾವತಿ ಗ್ರಾಮೀಣ ಪೊಲೀಸರು ಹಲ್ಲೆಗೆ ಮುಂದಾಗಿದ್ದ ಐವರನ್ನು ಅರೆಸ್ಟ್ ಮಾಡಿದ್ದಾರೆ.  ವಿದ್ಯಾದಾಸ್ ಬಾಬಾ ವಿರುದ್ದ ಗೋವಿಂದಾನಂದ ಸರಸ್ವತಿ ಗ್ರಾಮೀಣ ಠಾಣೆಯಲ್ಲಿ ಮತ್ತೊಂದು ದೂರು ದಾಖಲು ಮಾಡಿದ್ದಾರೆ.

ಅರ್ಚಕ ವಿದ್ಯಾದಾಸ್ ಬಾಬಾ ವಿರುದ್ಧ ಮೂರು ಕೇಸ್

ಇನ್ನು ಪಂಚನಾಮೆಗೆ ಹೋದ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದ ಆರೋಪದಡಿ ಪೊಲೀಸರು ವಿದ್ಯಾದಾಸ್ ಬಾಬಾ ವಿರುದ್ದ ಸ್ವಯಂ ಪ್ರೇರಿತ ದೂರು ದಾಖಲು ಮಾಡಿದ್ದಾರೆ. ಎರಡು ದಿನದ ಅವಧಿಯಲ್ಲಿ ಒಟ್ಟು ಮೂರು ಕೇಸ್ ದಾಖಲಾಗಿವೆ. ಅರ್ಚಕ ವಿದ್ಯಾದಾಸ್ ಬಾಬಾ ವಿರುದ್ಧ ಮೂರು ಕೇಸ್ ದಾಖಲಾಗಿವೆ.

ಇನ್ನು ಅರ್ಚಕ ಮಹಾಂತ ವಿದ್ಯಾದಾಸ್ ಬಾಬಾ ವಿರುದ್ದ ಎರಡು ದಿನದ ಅವಧಿಯಲ್ಲಿ ಮೂರು ಕೇಸ್ ದಾಖಲಾಗಿದ್ದು, ಪೊಲೀಸರ ನಡೆ ಮೇಲೆ ಅನುಮಾನ ಮೂಡಿದೆ. ಇದುವರೆಗೂ ಅರ್ಚಕ ವಿದ್ಯಾದಾಸ್ ಬಾಬಾ ನೀಡಿದ ದೂರು ದಾಖಲಾಗಿಲ್ಲ, ಆದರೆ ಅಂದು ಗೋವಿಂದಾನಂದ ಸರಸ್ವತಿ ನೀಡಿದ ದೂರು ದಾಖಲಾಗಿದೆ. ಹೀಗಾಗಿ ಈ ಪ್ರಕರಣದ ಹಿಂದೆ ಏನೋ ಇದೆ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಇನ್ನು ಅದಕ್ಕೆ ಕೋರ್ಟ್ ಕೇಸ್​​ವೊಂದು ಕಾರಣವಾಯಿತಾ ಎನ್ನುವ ಅನುಮಾನವು ವ್ಯಕ್ತವಾಗುತ್ತಿದೆ.

ಕಳೆದ 2018ರಿಂದ ಅರ್ಚಕ ವಿಚಾರವಾಗಿ ಜಿಲ್ಲಾಡಳಿತ ಹಾಗೂ ವಿದ್ಯಾದಾಸ್ ಬಾಬಾ ನಡುವೆ ವ್ಯಾಜ್ಯ ಇದೆ. ಧಾರವಾಡ ಹೈಕೋರ್ಟ್​ನಲ್ಲಿ ಕೇಸ್ ನಡೆಯುತ್ತಿದೆ. ಇದೀಗ ಆ ಕೇಸ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಅಂಜನಾದ್ರಿಯಲ್ಲಿ ಯಾರು ಪೂಜೆ ಮಾಡಬೇಕು ಎನ್ನುವುದು ಇತ್ಯರ್ಥವಾಗಲಿದೆ. ಆದರೆ, ಮುಂಚೆ ಈ ಘಟನೆಗಳು ನಡೆದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಬೇಕು ಅಂತಲೇ ಕಾಣದ ಕೈಗಳು ವಿವಾದ ಸೃಷ್ಟಿ ಮಾಡತಿದೆಯಾ ಅನ್ನೋ ಅನುಮಾನ ಇದೆ. ಇದೇ ಗೋಂವಿದಾನಂದ ಸರಸ್ವತಿ ಕಿಷ್ಕಿಂಧಾ ಪ್ರದೇಶದಲ್ಲಿ ಬೃಹತ್ ಆಂಜನೇಯನ ಮೂರ್ತಿ ಸ್ಥಾಪನೆ ಮಾಡುವುದಾಗಿ ಹೇಳಿಕೊಂಡು ಓಡಾಡಿದ್ದಾರೆ. ಇಷ್ಟು ದಿನ ಬರಲಾರದ ಗೋವಿಂದಾನಂದ ಸರಸ್ವತಿ ಶ್ರೀ ದಿಢೀರ್ ಪ್ರತ್ಯಕ್ಷವಾಗಿದ್ದು ಏಕೆ ಅನ್ನೋ ಅನುಮಾನ ಹುಟ್ಟಿಕೊಂಡಿದೆ.

ಇದನ್ನೂ ಓದಿ: Koppal: ಹನುಮ‌ಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಅಣಿಯಾದ ಅಂಜನಾದ್ರಿ; ಸಿದ್ಧತೆ ಹೇಗಿದೆ?

ಒಟ್ಟಾರೆ ಅಂಜನಾದ್ರಿಯಲ್ಲಿ ತೀರ್ಪು ಬರುವ ಕೆಲವೇ ದಿನಗಳ ಮುಂಚೆ ವಿವಾದ ಸೃಷ್ಟಿಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಇದುವರೆಗೂ ಅಂಜನಾದ್ರಿ ವಿಚಾರವಾಗಿ ಯಾವುದೇ ಮಾಹಿತಿ ನೀಡಿಲ್ಲ. ಮೂರು ಕೇಸ್​ ದಾಖಲಾದ ಹಿನ್ನಲೆ ಅರ್ಚಕ ವಿದ್ಯಾದಾಸ್ ಬಾಬಾ ಸದ್ಯ ಅಂಜನಾದ್ರಿಯನ್ನು ತೊರೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 5:02 pm, Fri, 26 December 25

Source link

VHT 2025-26: ಕರುಣ್, ಪಡಿಕ್ಕಲ್ ಶತಕ; ಕರ್ನಾಟಕಕ್ಕೆ ಸತತ 2ನೇ ಜಯ – Kannada News | Vijay Hazare: Karnataka Dominates with Padikkal, Nair Centuries!

ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿ ಎಡವಿದ್ದ ಕರ್ನಾಟಕ ತಂಡ ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ತನ್ನ ಮೊದಲ ಪಂದ್ಯದಲ್ಲಿ ಬಲಿಷ್ಠ ಜಾರ್ಖಂಡ್ ನೀಡಿದ್ದ 412 ರನ್​ಗಳ ದಾಖಲೆಯ ಗುರಿಯನ್ನು ಬೆನ್ನಟ್ಟಿ ಗೆದ್ದ ಕರ್ನಾಟಕ ಇದೀಗ ತನ್ನ ಎರಡನೇ ಪಂದ್ಯದಲ್ಲಿ ಕೇರಳ ವಿರುದ್ಧ 8ವಿಕೆಟ್​ಗಳ ಸುಲಭ ಜಯ ದಾಖಲಿಸಿದೆ. ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ತಂಡದ ಗೆಲುವಿಗೆ ಕಾರಣರಾಗಿದ್ದ ದೇವದತ್ ಪಡಿಕ್ಕಲ್‌, ಈ ಪಂದ್ಯದಲ್ಲೂ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೇರಳ ತಂಡ 284 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಕೇವಲ 2 ವಿಕೆಟ್‌ಗಳನ್ನು ಕಳೆದುಕೊಂಡು ಇನ್ನು 10 ಎಸೆತಗಳು ಬಾಕಿ ಇರುವಂತೆಯೇ ಜಯ ದಾಖಲಿಸಿತು. ಕರ್ನಾಟಕ ಪರ ಮಿಂಚಿದ ಪಡಿಕ್ಕಲ್ 124 ರನ್​ಗಳ ಇನ್ನಿಂಗ್ಸ್ ಆಡಿದರೆ, ಕರುಣ್ ನಾಯರ್ ಕೂಡ ಅಜೇಯ 130 ರನ್ ಬಾರಿಸಿದರು.

Source link

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು? – Kannada News | Piracy problem to 45 Kannada movie producer address the issue

ಅರ್ಜುನ್ ಜನ್ಯ (Arjun Janya) ನಿರ್ದೇಶಿಸಿ, ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದ್ದು, ಅದ್ಭುತ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅರ್ಜುನ್ ಜನ್ಯ ಒಂದೊಳ್ಳೆ ಸಿನಿಮಾ ಮಾಡಿದ್ದಾರೆಂಬ ಅಭಿಪ್ರಾಯ ಎಲ್ಲೆಡೆ ಹರಿದಾಡುತ್ತಿದೆ. ಸಿನಿಮಾದ ಕಲೆಕ್ಷನ್ ಸಹ ಉತ್ತಮವಾಗಿಯೇ ಇದೆ. ಆದರೆ ಇದೀಗ ‘45’ ಸಿನಿಮಾಕ್ಕೆ ಪೈರಸಿ ಕಾಟ ಶುರುವಾಗಿದೆ. ಸಿನಿಮಾದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದು, ‘ಸಿನಿಮಾದ ನಿರ್ಮಾಪಕನಾದ ನನಗೇ ಪೈರಸಿ ಲಿಂಕುಗಳನ್ನು ಕಳಿಸಿದ್ದಾರೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Source link

ಈ ರಾಜ್ಯದ ಶಾಲೆಗಳಲ್ಲಿ ಮಕ್ಕಳು ಪ್ರತಿದಿನ ನ್ಯೂಸ್ ಪೇಪರ್ ಓದುವುದು ಕಡ್ಡಾಯ – Kannada News | Uttar Pradesh government mandates newspaper reading in schools to boost learning and reduce screen time

ನವದೆಹಲಿ, ಡಿಸೆಂಬರ್ 26: ಉತ್ತರ ಪ್ರದೇಶ (Uttar Pradesh) ಸರ್ಕಾರವು ಸರ್ಕಾರಿ ಸ್ವಾಮ್ಯದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ನ್ಯೂಸ್ ಪೇಪರ್ ಓದುವುದನ್ನು ಕಡ್ಡಾಯಗೊಳಿಸಿದೆ. ಮಕ್ಕಳಲ್ಲಿ ನಿಯಮಿತ ಓದುವ ಹವ್ಯಾಸವನ್ನು ಬೆಳೆಸಲು, ಅತಿಯಾದ ಮೊಬೈಲ್ ಸ್ಕ್ರೀನಿಂಗ್ ಸಮಯವನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳು ದೈನಂದಿನ ಶಾಲಾ ಚಟುವಟಿಕೆಗಳ ಅತ್ಯಗತ್ಯ ಭಾಗವಾಗಬೇಕು ಎಂದು ಆದೇಶಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಓದುವ ಸಂಸ್ಕೃತಿಯನ್ನು ಉತ್ತೇಜಿಸುವ ಮಾರ್ಗಗಳ ಮೇಲೆ ಕೇಂದ್ರೀಕರಿಸಿದ ನವೆಂಬರ್‌ನಲ್ಲಿ ಹೊರಡಿಸಲಾದ ಹಿಂದಿನ ಆದೇಶವನ್ನು ಈ ನಿರ್ದೇಶನವು ಅನುಸರಿಸುತ್ತದೆ.

ಸರ್ಕಾರದ ಆದೇಶದ ಪ್ರಕಾರ, ಶಾಲೆಗಳು ಬೆಳಗಿನ ಸಭೆಯಲ್ಲಿ ಪತ್ರಿಕೆ ಓದುವಿಕೆಗಾಗಿ 10 ನಿಮಿಷಗಳ ಸಮಯವನ್ನು ನಿಗದಿಪಡಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಸಂಪಾದಕೀಯ ಲೇಖನಗಳು ಮತ್ತು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮತ್ತು ಕ್ರೀಡಾಕೂಟಗಳಿಗೆ ಸಂಬಂಧಿಸಿದ ಪ್ರಮುಖ ಸಕಾರಾತ್ಮಕ ಸುದ್ದಿಗಳಿಂದ ಪ್ರಮುಖ ಅಂಶಗಳನ್ನು ಓದಬೇಕಾಗುತ್ತದೆ.

ಇದನ್ನೂ ಓದಿ: ಮೂರು ವರ್ಷಗಳಲ್ಲಿ ಮೂರು ಮದುವೆಯಾಗಿ ಜೈಲುಪಾಲಾದ ವ್ಯಕ್ತಿ

ವಿದ್ಯಾರ್ಥಿಗಳು ಡಿಜಿಟಲ್ ಸ್ವರೂಪಗಳ ಬದಲಿಗೆ ನಿಜವಾದ ನ್ಯೂಸ್ ಪೇಪರ್​​ಗಳನ್ನು ಬಳಸಬೇಕು. ಏಕೆಂದರೆ ಮುದ್ರಿತ ಪತ್ರಿಕೆಗಳನ್ನು ಓದುವುದು ಗಮನ ಮತ್ತು ಏಕಾಗ್ರತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂಬ ಉದ್ದೇಶ ಸರ್ಕಾರದ್ದು.

ನಿಯಮಿತ ಪತ್ರಿಕೆ ಓದುವಿಕೆಯು ಹಲವಾರು ಪ್ರಯೋಜನಗಳನ್ನು ಹೊಂದಿದೆ. ಏಕೆಂದರೆ, ಇದು ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ತಿಳುವಳಿಕೆಯನ್ನು ಬಲಪಡಿಸುತ್ತದೆ, ಇದು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹ ಮುಖ್ಯವಾಗಿದೆ. ಇದಲ್ಲದೆ, ಶಬ್ದಕೋಶ, ಭಾಷಾ ಶೈಲಿ ಮತ್ತು ಬರವಣಿಗೆಯ ಕೌಶಲ್ಯಗಳನ್ನು ಸಹ ಸುಧಾರಿಸಲಾಗುತ್ತದೆ.

ಇದನ್ನೂ ಓದಿ: Train Fare Hike: ಇಂದಿನಿಂದ ರೈಲು ಪ್ರಯಾಣ ದುಬಾರಿ, ಹೊಸ ಟಿಕೆಟ್ ದರಗಳ ಕುರಿತು ಇಲ್ಲಿದೆ ಮಾಹಿತಿ

ಸುಡೊಕು, ಕ್ರಾಸ್‌ವರ್ಡ್‌ಗಳು ಮತ್ತು ನ್ಯೂಸ್​ ಪೇಪರ್​​ಗಳಲ್ಲಿನ ಪದ ಆಟಗಳು ತಾರ್ಕಿಕ ಚಿಂತನೆ ಮತ್ತು ಸಮಸ್ಯೆ ಪರಿಹಾರಕ್ಕಾಗಿ ಮೆದುಳಿಗೆ ತರಬೇತಿ ನೀಡುತ್ತವೆ ಎಂದು ಆದೇಶವು ತಿಳಿಸಿದೆ. 6ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ, ಪ್ರಮುಖ ಸುದ್ದಿ ತುಣುಕುಗಳೊಂದಿಗೆ ಸ್ಕ್ರ್ಯಾಪ್‌ಬುಕ್‌ಗಳನ್ನು ನಿರ್ವಹಿಸುವುದು, ಸಂಪಾದಕೀಯಗಳ ಕುರಿತು ಸಾಪ್ತಾಹಿಕ ಚರ್ಚೆಗಳಲ್ಲಿ ಭಾಗವಹಿಸುವುದು ಮತ್ತು ಸುದ್ದಿ ವರದಿಗಳನ್ನು ವಿಶ್ಲೇಷಿಸುವುದನ್ನು ಕಡ್ಡಾಯಗೊಳಿಸುವಂತೆ ಶಾಲೆಗಳಿಗೆ ನಿರ್ದೇಶಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version