ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್ ಭರಿಸಲಾಗದೆ ವಿವೇಕಾನಂದ ಕುಟುಂಬ ಕಂಗಾಲು – Kannada News | Hubballi Incident: Dalit Leaders Demand Justice and Payment of Hospital Bills for Maanya Family
ಹುಬ್ಬಳ್ಳಿ, ಡಿಸೆಂಬರ್ 23: ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 2 ದಿನ ಕಳೆದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕುಟುಂಬ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂತ್ರಸ್ತ ಕುಟುಂಬವು ಆಸ್ಪತ್ರೆ ಬಿಲ್ ಪಾವತಿಸಲು ಪರದಾಡುವಂತ್ತಾಗಿದೆ. ಡಿಸಿ ಸೇರಿದಂತೆ ಅಧಿಕಾರಿಗಳು ಕುಟುಂಬಕ್ಕೆ ನೆರವು ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪ ಕೇಳಿಬಂದಿದೆ….