Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ನವದೆಹಲಿ, ಮೇ 13: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷೆ ಆಸ್ಪತ್ರೆಯಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಸೋನಿಯಾ ಗಾಂಧಿ ಅವರು ದಾಖಲಾಗಿರುವ ಬಗ್ಗೆ ಆಸ್ಪತ್ರೆ ಆಡಳಿತದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. (ಮಾಹಿತಿ ಅಪ್ಡೇಟ್ ಆಗುತ್ತಿದೆ) ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…