Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 26ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಈ ದಿನವು ಸಾಮಾಜಿಕವಾಗಿ ಬಿಡುವಿಲ್ಲದಷ್ಟು ಕೆಲಸಗಳು ಇರುತ್ತವೆ. ಸಮಾಜದ ಮುಖಂಡರಿಗೆ, ರಾಜಕಾರಣಿಗಳಿಗೆ ಮತ್ತು ಸರ್ಕಾರದಲ್ಲಿ ಉನ್ನತ ಹುದ್ದೆಯಲ್ಲಿ ಇರುವ ಅಧಿಕಾರಿಗಳಿಗೆ ಶುಭವಾದ ದಿನ ಇದಾಗಿರಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವದ ಗುಣಗಳು ಮೆಚ್ಚುಗೆಗೆ ಪಾತ್ರವಾಗಲಿವೆ. ಉದ್ಯಮಿಗಳು ಹೊಸ ಮಾರುಕಟ್ಟೆ ತಂತ್ರಗಳನ್ನು ಜಾರಿಗೆ ತರಲು ಅತ್ಯುತ್ತಮ ಸಮಯ. ಕೃಷಿಕರಿಗೆ ಸುಧಾರಿತ ತಂತ್ರಜ್ಞಾನದ ಬಳಕೆಯಿಂದ ಲಾಭ ದೊರೆಯಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಆತ್ಮವಿಶ್ವಾಸ ಬೆಳೆಸಿಕೊಳ್ಳುವಿರಿ. ಆರ್ಥಿಕವಾಗಿ ಹಳೆಯ ಹೂಡಿಕೆಗಳು ಲಾಭ ತರಲಿದ್ದು, ಹೊಸ ಆಸ್ತಿ ಖರೀದಿಯ ಯೋಜನೆ ಸಫಲವಾಗಲಿದೆ. ಮಹಿಳೆಯರು ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸಲಿದ್ದೀರಿ. ಇನ್ನು ಆರೋಗ್ಯದ ದೃಷ್ಟಿಯಿಂದ ಹೇಳುವುದಾದರೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಮತ್ತು ರಕ್ತದೊತ್ತಡದ ಬಗ್ಗೆ ಜಾಗರೂಕರಾಗಿರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಕಲಾವಿದರು, ಬರಹಗಾರರು ಮತ್ತು ಮನೋವಿಜ್ಞಾನಿಗಳಿಗೆ ಅತ್ಯಂತ ಕ್ರಿಯೇಟಿವ್ ಆ ದಿನ. ಸ್ವಂತದ್ದೊಂದು ಕ್ಲಿನಿಕ್ ಆರಂಭಿಸುವ ಸಾಧ‌್ಯತೆ ವೈದ್ಯರಿಗೆ ಇದೆ. ಇನ್ನು ಸ್ನೇಹಿತರ ಮಧ್ಯೆ ಇರುವಂಥ ಅಭಿಪ್ರಾಯ ಭೇದವನ್ನು ದೂರ ಮಾಡಿ, ಭಾವನಾತ್ಮಕ ಬಂಧಗಳನ್ನು ಬೆಸೆಯುವಲ್ಲಿ ನೀವು ಪ್ರಮುಖ ಪಾತ್ರ ವಹಿಸುವಿರಿ. ಗೃಹಿಣಿಯರಿಗೆ ಕುಟುಂಬದ ಸದಸ್ಯರ ನಡುವೆ ಸಾಮರಸ್ಯ ಮೂಡಿಸಲು ಉತ್ತಮ ಅವಕಾಶ ಸಿಗಲಿದೆ. ಸಣ್ಣ ಉದ್ಯಮಿಗಳಿಗೆ ಪಾಲುದಾರಿಕೆಯಲ್ಲಿ ನಂಬಿಕೆ ಹೆಚ್ಚಾಗಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವ ವೃದ್ಧಿಯಾಗುವ ದಿನವಿದು. ಯುವಜನತೆ ವೈಯಕ್ತಿಕ ಸಂಬಂಧಗಳಲ್ಲಿ ಹೊಸ ತಿರುವು ಕಾಣಲಿದ್ದಾರೆ. ಮಾನಸಿಕ ಶಾಂತಿಗಾಗಿ ಸಂಗೀತ ಅಥವಾ ಪ್ರಕೃತಿಯ ಒಡನಾಟದಲ್ಲಿ ಸಮಯ ಕಳೆಯುವುದು ಉತ್ತಮ. ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡವರಿಗೆ ಎಲ್ಲ ಕಡೆಯಿಂದ ಉತ್ತಮ ಮನ್ನಣೆ ದೊರೆಯಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಬೌದ್ಧಿಕ ವಿಚಾರಗಳನ್ನೇ ಚಿಂತಿಸುವವರು, ಜ್ಞಾನಾರ್ಜನೆಯಲ್ಲಿ ತೊಡಗಿರುವವರಿಗೆ ಪ್ರಗತಿಯ ದಿನ ಇದಾಗಿರಲಿದೆ. ವಕೀಲರು, ಬ್ಯಾಂಕಿಂಗ್ ಅಧಿಕಾರಿಗಳು ಮತ್ತು ಧಾರ್ಮಿಕ ಮುಖಂಡರಿಗೆ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಹಿರಿಯ ನಾಗರಿಕರಿಗೆ ಕುಟುಂಬದಲ್ಲಿ ವಿಶೇಷ ಗೌರವ ಮತ್ತು ಸಲಹೆಗಳಿಗೆ ಮೌಲ್ಯ ದೊರೆಯಲಿದೆ. ಆರ್ಥಿಕವಾಗಿ ಹೂಡಿಕೆ ಮಾಡಲು ಇದು ಪ್ರಶಸ್ತ ಸಮಯವಾಗಿದ್ದು, ಷೇರು ಮಾರುಕಟ್ಟೆಯಲ್ಲಿ ತೊಡಗಿರುವವರಿಗೆ ಲಾಭದಾಯಕ ದಿನ. ವಿದ್ಯಾರ್ಥಿಗಳು ಸಂಶೋಧನಾ ಕಾರ್ಯಗಳಲ್ಲಿ ಯಶಸ್ಸು ಕಾಣುವರು. ಮನೆಯಲ್ಲಿ ನಡೆಯುವ ಶುಭ ಕಾರ್ಯಗಳ ನಿರ್ವಹಣೆಯಲ್ಲಿ ನಿಮ್ಮ ಪಾತ್ರ ದೊಡ್ಡದಾಗಿರಲಿದೆ. ಬಡವರ ಮತ್ತು ಅಸಹಾಯಕರ ಸೇವೆಗೆ ನಿಮ್ಮ ಒಲವು ಹೆಚ್ಚಿರಲಿದ್ದು, ಸಮಾಜಮುಖಿ ಕೆಲಸಗಳಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ, ವಿಶೇಷವಾಗಿ ಪಿತ್ತಕೋಶದ ಸಮಸ್ಯೆಗಳ ಬಗ್ಗೆ ಗಮನವಿರಲಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ತಾಂತ್ರಿಕ ಪರಿಣತರು, ಸಾಫ್ಟ್‌ವೇರ್ ಇಂಜಿನಿಯರ್‌ಗಳು ಮತ್ತು ಸರ್ಕಾರಿ ಕೆಲಸಗಳನ್ನು ಗುತ್ತಿಗೆ ಪಡೆದು ಮಾಡಿಸುವಂಥ ಗುತ್ತಿಗೆದಾರರಿಗೆ ಹೊಸದಾಗಿ ಪ್ರಗತಿ ಕಂಡುಬರಲಿದೆ. ನೀವು ಪ್ರತಿನಿಧಿಸುವ ಸಮಾಜದ ಅಭಿವೃದ್ಧಿಗಾಗಿ ಆಧುನಿಕ ಯೋಜನೆಗಳನ್ನು ರೂಪಿಸುವಿರಿ. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ವ್ಯಾಪಾರದಲ್ಲಿ ಚೇತರಿಕೆ ಕಂಡುಬರಲಿದೆ. ಮಧ್ಯಮ ವರ್ಗದವರು ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗರೂಕತೆ ವಹಿಸುವುದು ಅಗತ್ಯ, ಅನಗತ್ಯ ಖರ್ಚುಗಳು ಎದುರಾಗಬಹುದು. ಕಾರ್ಮಿಕರು ಮತ್ತು ಶ್ರಮಿಕ ವರ್ಗದವರು ತಮ್ಮ ಕೆಲಸದ ಸ್ಥಳದಲ್ಲಿ ಶಿಸ್ತು ಮತ್ತು ಗೌರವ ಪಡೆಯುವರು. ಅನಿರೀಕ್ಷಿತ ತಿರುವುಗಳು ಜೀವನದಲ್ಲಿ ಹೊಸ ದಾರಿಯನ್ನು ತೋರಿಸಲಿವೆ. ಪ್ರಯಾಣದ ವೇಳೆ ಅಪರಿಚಿತ ವ್ಯಕ್ತಿಗಳ ಮೇಲೆ ಅತಿಯಾದ ನಂಬಿಕೆ ಬೇಡ. ನಿಮ್ಮ ವಿಭಿನ್ನ ಆಲೋಚನಾ ಶೈಲಿಯಿಂದಾಗಿ ಕಠಿಣ ಸಮಸ್ಯೆಗಳಿಗೆ ಸುಲಭ ಪರಿಹಾರ ದೊರೆಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಮಾಧ್ಯಮ ಪ್ರತಿನಿಧಿಗಳು, ಮಾರ್ಕೆಟಿಂಗ್ ವೃತ್ತಿಪರರು ಮತ್ತು ಸಂವಹನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಅತ್ಯಂತ ಲಾಭದಾಯಕ ದಿನ ಇದಾಗಿರಲಿದೆ. ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರಿಗೆ ಹೊಸ ಗ್ರಾಹಕರ ಸಂಪರ್ಕ ಮತ್ತು ವಹಿವಾಟು ವೃದ್ಧಿಯಾಗುವ ಎಲ್ಲ ಲಕ್ಷಣಗಳಿವೆ. ಯುವಕರು ತಾಂತ್ರಿಕ ಕೌಶಲಗಳನ್ನು ಕಲಿಯಲು ಹಣವನ್ನು ಖರ್ಚು ಮಾಡುವಿರಿ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ಸೂಚನೆ ಸಿಗಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದ್ದು, ದೀರ್ಘಕಾಲದ ಸಾಲಗಳಿಂದ ಮುಕ್ತಿ ಪಡೆಯುವ ಹಾದಿ ಸುಗಮವಾಗಲಿದೆ. ಮಾತಿನ ಚತುರತೆಯಿಂದ ಸಮಾಜದಲ್ಲಿ ನಿಮ್ಮ ಪ್ರಭಾವ ಹೆಚ್ಚಿಸಿಕೊಳ್ಳುವಿರಿ. ಆರೋಗ್ಯದ ಬಗ್ಗೆ ಹೇಳುವುದಾದರೆ, ನರಗಳ ದೌರ್ಬಲ್ಯ ಅಥವಾ ನಿದ್ರಾಹೀನತೆಯ ಸಮಸ್ಯೆ ಕಾಡಬಹುದು. ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವ ಬಗ್ಗೆ ನಿರ್ಲಕ್ಷ್ಯ ಬೇಡ. ಹೊಸ ಸ್ನೇಹ ಸಂಬಂಧಗಳು ವೃತ್ತಿ ಜೀವನಕ್ಕೆ ಸಹಕಾರಿಯಾಗಲಿವೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಸಿನಿಮಾ, ಫ್ಯಾಷನ್, ಹೋಟೆಲ್ ಉದ್ಯಮ ಮತ್ತು ಸೌಂದರ್ಯವರ್ಧಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ವೈಭವದ ದಿನ ಇದಾಗಿರಲಿದೆ. ಮಹಿಳೆಯರು ಸ್ವಾವಲಂಬಿಗಳಾಗಲು ಹೊಸ ಉದ್ಯೋಗ ಅಥವಾ ಉದ್ಯಮದ ಅವಕಾಶಗಳನ್ನು ಪಡೆಯುವರು. ಸಮಾಜದ ಗಣ್ಯ ವ್ಯಕ್ತಿಗಳೊಂದಿಗೆ ಒಡನಾಟ ಹೆಚ್ಚಾಗಲಿದ್ದು, ಇದು ನಿಮ್ಮ ವೃತ್ತಿ ಜೀವನಕ್ಕೆ ಪೂರಕವಾಗಲಿದೆ. ಪ್ರೇಮಿಗಳಿಗೆ ತಮ್ಮ ಸಂಬಂಧವನ್ನು ವಿವಾಹದ ಹಂತಕ್ಕೆ ಕೊಂಡೊಯ್ಯಲು ಮನೆಯವರ ಬೆಂಬಲ ಸಿಗಲಿದೆ. ಆರ್ಥಿಕವಾಗಿ ಸಮೃದ್ಧಿಯ ದಿನವಾಗಿದ್ದು, ಐಷಾರಾಮಿ ವಸ್ತುಗಳ ಮೇಲೆ ಹೂಡಿಕೆ ಮಾಡುವಿರಿ. ನಿಮ್ಮ ಆಕರ್ಷಕ ವ್ಯಕ್ತಿತ್ವವು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಕೇಂದ್ರಬಿಂದು ಆಗಲಿದೆ. ಮನೆಯಲ್ಲಿ ಸೃಜನಾತ್ಮಕ ಮತ್ತು ಕಲಾತ್ಮಕ ಪರಿಸರವನ್ನು ರೂಪಿಸಿಕೊಳ್ಳಲು ಪ್ರಯತ್ನಿಸಲಿದ್ದು, ಅದರಲ್ಲಿ ನೀವು ಯಶಸ್ವಿಯಾಗುವಿರಿ. ಹಾರ್ಮೋನ್ ಸಮಸ್ಯೆಗಳಿದ್ದರೆ ತಪಾಸಣೆ ಮಾಡಿಸಿಕೊಳ್ಳಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಸಂಶೋಧಕರು, ವೈದ್ಯಕೀಯ ಕ್ಷೇತ್ರದ ಪರಿಣತರು ಮತ್ತು ವಿಜ್ಞಾನಿಗಳಿಗೆ ಮಹತ್ವದ ಸಾಧನೆಯ ದಿನ ಆಗಿರಲಿದೆ. ಸಮಾಜದ ಒಳಿತಿಗಾಗಿ ಹೊಸ ಸಂಶೋಧನೆಗಳಲ್ಲಿ ತೊಡಗಿರುವವರಿಗೆ ಮನ್ನಣೆ ಸಿಗಲಿದೆ. ಆಧ್ಯಾತ್ಮಿಕ ಚಿಂತಕರಿಗೆ ಮತ್ತು ಯೋಗ ಗುರುಗಳಿಗೆ ನಿಮ್ಮನ್ನು ಅನುಸರಿಸುವಂಥ ಜನರು ಹೆಚ್ಚೆಚ್ಚು ಸೇರ್ಪಡೆ ಆಗಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಮಧ್ಯಮ ವರ್ಗದವರು ಸಣ್ಣಪುಟ್ಟ ಸಂಕಷ್ಟ ಎದುರಿಸಿದರೂ ಸ್ನೇಹಿತರು- ಸಂಬಂಧಿಗಳ ಸಮಯೋಚಿತ ಸಹಾಯದಿಂದ ಅದರಿಂದ ಹೊರಗೆ ಬರುವಿರಿ. ಒಬ್ಬರೇ ತಮ್ಮ ಗುರಿಯ ಕಡೆಗೆ ಕೆಲಸ ಮಾಡುವ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ಸತ್ಯದ ಪರವಾಗಿ ಮಾತನಾಡುವ ನಿಮ್ಮ ಗುಣವು ಮಾಧ್ಯಮ- ರಾಜಕೀಯ ಕ್ಷೇತ್ರದಲ್ಲಿ ಇರುವಂಥವರಿಗೆ ಪ್ರತಿಷ್ಠೆ ತರಲಿದೆ. ಹಳೆಯ ವೈಮನಸ್ಸು ಮರೆತು ಸಂಬಂಧಗಳನ್ನು ಸುಧಾರಿಸಿಕೊಳ್ಳಲು ಇದು ಸಕಾಲ. ಮಾನಸಿಕ ಶಾಂತಿಗಾಗಿ ಧ್ಯಾನ ಮತ್ತು ಓದಿನಲ್ಲಿ ಸಮಯ ಕಳೆಯಿರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಕಾರ್ಖಾನೆ ಮಾಲೀಕರು, ಶ್ರಮಿಕ ವರ್ಗ ಮತ್ತು ನ್ಯಾಯಾಂಗ ಇಲಾಖೆಯಲ್ಲಿ ಇರುವವರಿಗೆ ಬೆಳವಣಿಗೆಗೆ ಅನುಕೂಲವಾದ ದಿನ ಇದಾಗಿರುತ್ತದೆ. ನೀವು ಕಾರ್ಯ ನಿರ್ವಹಿಸುವ ವ್ಯವಸ್ಥೆಯ ಒಳಗೆ ಶಿಸ್ತು ಮತ್ತು ಕೆಲವು ನೀತಿ ಸಂಹಿತೆ ಜಾರಿಗೆ ತರಲು ಶ್ರಮಿಸುವಿರಿ. ಆರ್ಥಿಕ ಲಾಭವು ನಿಧಾನವಾಗಿ ಬರಬಹುದು, ಆದರೆ ಅದು ಬಹಳ ಸ್ಥಿರವಾಗಿರುತ್ತದೆ. ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ಹೊಸ ಭೂಮಿ ಅಥವಾ ಉಪಕರಣಗಳ ಖರೀದಿಯಲ್ಲಿ ಲಾಭ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮತ್ತು ಅವರ ಮಾರ್ಗದರ್ಶನ ಪಡೆಯುವುದು ಅವಶ್ಯಕ. ನ್ಯಾಯಾಲಯದ ವ್ಯವಹಾರಗಳಲ್ಲಿ ತೊಡಗಿರುವವರಿಗೆ ಇಂದು ಶುಭ ಸುದ್ದಿ ಕೇಳಿಬರಲಿದೆ. ಎನ್ ಜಿಒಗಳಲ್ಲಿ ಕಾರ್ಯ ನಿರ್ವಹಿಸುವವರು ಸಮಾಜದ ಕೆಳವರ್ಗದ ಜನರ ಅಭ್ಯುದಯಕ್ಕಾಗಿ ಪ್ರಮುಖ ಯೋಜನೆಗಳನ್ನು ರೂಪಿಸುವಿರಿ. ನಿಮ್ಮ ತಾಳ್ಮೆ ಮತ್ತು ಕಠಿಣ ಪರಿಶ್ರಮಕ್ಕೆ ಗೌರವ- ಸನ್ಮಾನದ ಮೂಲಕವಾಗಿ ಪ್ರತಿಫಲ ದೊರೆಯಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಸೈನ್ಯ, ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ, ಕ್ರೀಡಾಳುಗಳಿಗೆ ಮತ್ತು ಶಸ್ತ್ರಚಿಕಿತ್ಸಕರಿಗೆ ಅತ್ಯಂತ ಶುಭವಾದ ದಿನ ಇದಾಗಿರುತ್ತದೆ. ಕುಟುಂಬ ಸದಸ್ಯರ ಸಂಕಷ್ಟಗಳಿಗೆ ಸಹಾಯ ಮಾಡುವಲ್ಲಿ ನೀವು ಮುಂಚೂಣಿಯಲ್ಲಿರುವಿರಿ. ಯುವಕರು ಸಾಹಸಮಯ ಕೆಲಸಗಳಲ್ಲಿ ಅಥವಾ ಸ್ಪರ್ಧೆಗಳಲ್ಲಿ ಯಶಸ್ಸು ಕಾಣುವರು. ಭೂಮಿಗೆ ಸಂಬಂಧಿಸಿದ ವ್ಯವಹಾರಸ್ಥರಿಗೆ ಅಥವಾ ಸಿವಿಲ್ ಇಂಜಿನಿಯರ್‌ಗಳಿಗೆ ದೊಡ್ಡ ಲಾಭ ನಿರೀಕ್ಷಿಸಬಹುದು. ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ಅಥವಾ ರಕ್ತದಾನದಂತಹ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕೋಪವನ್ನು ಹತೋಟಿಯಲ್ಲಿಡುವುದು ನಿಮ್ಮ ಕುಟುಂಬದ ನೆಮ್ಮದಿಗೆ ಅತಿ ಮುಖ್ಯ. ಸಹೋದರರೊಂದಿಗೆ ಇದ್ದ ಆಸ್ತಿ ವಿವಾದಗಳು ಇತ್ಯರ್ಥವಾಗುವ ಹಂತಕ್ಕೆ ಬರಲಿವೆ. ಆರ್ಥಿಕವಾಗಿ ನೀವು ಬಹಳ ಸಬಲರಾಗುವ ದಿನವಿದು. ಶಸ್ತ್ರಚಿಕಿತ್ಸೆಯಂತಹ ವೈದ್ಯಕೀಯ ಕ್ಷೇತ್ರಗಳಲ್ಲಿ ಇರುವವರಿಗೆ ಉತ್ತಮ ಯಶಸ್ಸು ಸಿಗಲಿದೆ.

ಲೇಖನ- ಎನ್‌.ಕೆ.ಸ್ವಾತಿ

Source link

ಚಿತ್ರದುರ್ಗ ಬಸ್ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ, ನಾಲ್ವರು ಸಾವು – Kannada News | Four Youths Killed In Bike And Tipper Accident In ajjavara at Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 25): ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ (Chikkaballapur) ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು.  ಮೃತರು ಅಜ್ಜವಾರ ಗ್ರಾಮದ ಯುವಕರಾಗಿದ್ದು, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು. ಇನ್ನು ಈ ಪೈಕಿ ನರಸಿಂಹಮೂರ್ತಿ ಹಾಗೂ ನಂದೀಶ್ ಅಣ್ಣತಮ್ಮಂದಿರು.  ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆದರೆ ವೇಗವಾಗಿ ಬರುತ್ತಿದ್ದ ಟಿಪ್ಪರ್ ಬೈಕ್‌ಗೆ ಗುದ್ದಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Chitradurga Bus Accident: ಮದುವೆಗೂ ಮುನ್ನ ಮಸಣ ಸೇರಿದ ಯುವತಿ; ತಾಯಿ-ಮಗಳು ಅಗ್ನಿಗೆ ಆಹುತಿ

ಇನ್ನು ನರಸಿಂಹ ಕೇವಲ ಆರು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದ ಎಂದು ತಿಳಿದು ಬಂದಿದೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಸೇರಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:18 pm, Thu, 25 December 25

Source link

ಕಾವ್ಯಾ ಜತೆ ಮದುವೆ ಬಗ್ಗೆ ಮನಸಾರೆ ಮಾತಾಡಿದ ಗಿಲ್ಲಿ: ಆ ಕಡೆಯಿಂದ ಬಂದ ಉತ್ತರ ಏನು? – Kannada News | Gilli Nata wants to talk marriage plans with Kavya Shaiva parents in BBK 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರ ಜೋಡಿ ತುಂಬಾ ಹೈಲೈಟ್ ಆಗಿದೆ. ಆರಂಭದಿಂದಲೂ ಅವರಿಬ್ಬರೂ ಕ್ಲೋಸ್ ಆಗಿದ್ದಾರೆ. ಕಾವ್ಯಾ (Kavya Shaiva) ಅವರನ್ನು ಪ್ರತಿ ಬಾರಿಯೂ ಗಿಲ್ಲಿ ನಟ ರೇಗಿಸುತ್ತಾರೆ. ಅವರಿಬ್ಬರಿಗೆ ಪ್ರತ್ಯೇಕ ಫ್ಯಾನ್ ಬೇಸ್ ಇದೆ. ಇಲ್ಲಿಯವರೆಗೆ ಅನೇಕ ಬಾರಿ ಅವರಿಬ್ಬರು ಮುನಿಸು ತೋರಿಸಿದ್ದರೂ ಕೂಡ ಮಾತು ಬಿಟ್ಟಿಲ್ಲ. ಒಬ್ಬರನ್ನೊಬ್ಬರು ಬಿಟ್ಟುಕೊಟ್ಟಿಲ್ಲ. ಆ ಬಾಂಧವ್ಯದ ಪರಿಣಾಮವಾಗಿ ಗಿಲ್ಲಿ (Gilli Nata) ಮನಸ್ಸಿನಲ್ಲಿ ಮದುವೆ ಬಗ್ಗೆ ಆಸೆ ಚಿಗುರಿದಂತಿದೆ. ನೇರವಾಗಿ ಅವರು ಮದುವೆ ಬಗ್ಗೆ ಎಲ್ಲರ ಎದುರು ಮಾತನಾಡಿದ್ದಾರೆ.

ಬಿಗ್ ಬಾಸ್ ಶೋನಲ್ಲಿ ಈಗ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಎಲ್ಲ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ದೊಡ್ಮನೆಗೆ ಬಂದು ಕಾಲ ಕಳೆಯುತ್ತಿದ್ದಾರೆ. ಕಾವ್ಯಾ ಶೈವ ಅವರ ಪೋಷಕರು ಬಂದಾಗ ಬೇರೆಯವರೆಲ್ಲ ಏನು ಮಾತನಾಡಬೇಕು ಎಂಬುದನ್ನು ಗಿಲ್ಲಿ ಮೊದಲೇ ಪ್ಲ್ಯಾನ್ ಮಾಡಿದ್ದಾರೆ. ಮದುವೆ ವಿಷಯವೇ ಪ್ರಸ್ತಾಪ ಆಗಬೇಕು ಎಂದು ಅವರು ಸೂಚನೆ ಕೊಟ್ಟಿದ್ದಾರೆ.

‘ಗಿಲ್ಲಿ ಯಾವ ಥರದ ಹುಡುಗ ಅಂತ ಕೇಳಿ. ಕಾವ್ಯಾಗೆ ಮದುವೆ ಮಾಡಬೇಕು ಅಂತ ಇದ್ದೀರಂತೆ ಹೌದಾ ಎಂಬಿತ್ಯಾದಿ ಪ್ರಶ್ನೆಗಳನ್ನು ಕಾವ್ಯಾ ಅವರ ಪೋಷಕರಿಗೆ ಬೇರೆಯವರೆಲ್ಲ ಕೇಳಬೇಕು’ ಎಂದು ಗಿಲ್ಲಿ ಹೇಳಿದ್ದಾರೆ. ‘ನಾಳೆ ನಿಶ್ಚಿತಾರ್ಥಕ್ಕೆ ಯಾರು ಬರುತ್ತಾರೋ ಏನೋ.. ಮದುವೆ ಮಾತುಕಥೆಗೆ ಯಾರು ಬರುತ್ತಾರೋ’ ಎಂದು ಗಿಲ್ಲಿ ಕಾವ್ಯನ ರೇಗಿಸಿದರು. ‘ರಾಖಿ ತೆಗೆದುಕೊಂಡು ಬರಬಹುದು. ರಕ್ಷಾ ಬಂಧನ ಆಗಬಹುದು’ ಎಂದು ಕಾವ್ಯಾ ಅವರು ತಿರುಗೇಟು ನೀಡಿದರು. ಅವರಿಬ್ಬರ ನಡುವಿನ ಸಂಭಾಷಣೆ ಫನ್ನಿ ಆಗಿತ್ತು.

ಗಿಲ್ಲಿ ನಟ ಅವರು ಎಲ್ಲರಿಗೂ ಇಷ್ಟ ಆಗುತ್ತಿದ್ದಾರೆ. ಕಾವ್ಯಾ ತಾಯಿ ಕೂಡ ಗಿಲ್ಲಿ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಮಗಳಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ‘ಗಿಲ್ಲಿಯನ್ನು ಎಂದಿಗೂ ಬಿಟ್ಟುಕೊಡಬೇಡ, ಅವನು ನಿನ್ನನ್ನು ಯಾವಾಗಲೂ ಬಿಟ್ಟುಕೊಟ್ಟಿಲ್ಲ. ಅವನು ಹಣ್ಣು, ಮೊಟ್ಟೆ ಕೇಳಿದರೆ ಕೊಡು’ ಎಂದು ಕಾವ್ಯಾ ತಾಯಿ ಸಾವಿತ್ರಿ ಅವರು ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯೊಳಗೆ ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ

ಈ ವಾರ ಬಿಗ್ ಬಾಸ್ ಮನೆಗೆ ಬರುವ ಕುಟುಂಬದವರು ಮಾಡುವ ಆಯ್ಕೆಯ ಆಧಾರದ ಮೇಲೆ ಕ್ಯಾಪ್ಟನ್ ಯಾರು ಎಂಬುದು ನಿರ್ಧಾರ ಆಗುತ್ತದೆ. ಈಗಾಗಲೇ ಗಿಲ್ಲಿಗೆ ನಾಲ್ಕು ವೋಟ್ ಸಿಕ್ಕಿದೆ. ಅವರೇ ಕ್ಯಾಪ್ಟನ್ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕು. ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಧ್ರುವಂತ್ ಮನೆಯವರಿಗೆ ಗಿಲ್ಲಿ ಆಟ ಬಹಳ ಇಷ್ಟ ಆಗಿದೆ. ಪ್ರೇಕ್ಷಕರಿಗೂ ಗಿಲ್ಲಿ ಕಂಡರೆ ಸಖತ್ ಇಷ್ಟ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ – Kannada News | One Dies Several injured after nitrogen gas blast in front of mysuru palace

ಮೈಸೂರು, (ಡಿಸೆಂಬರ್ 25): ನೈಟ್ರೋಜನ್ ಗ್ಯಾಸ್ ಸ್ಫೋಟಗೊಂಡು (Nitrogen Gas Blast) ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ (Mysuru Palace) ಮುಂಭಾಗದಲ್ಲಿ ನಡೆದಿದೆ. ಇಂದು (ಡಿಸೆಂಬರ್ 25) ರಾತ್ರಿ ಪ್ಯಾಲೆಸ್ ಮುಂಭಾಗ ಬಲೂನ್​ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಇದರ ತೀವ್ರತೆ ಎಷ್ಟಿತ್ತು ಎಂದರೆ ಸಿಲಿಂಡರ್​ ಛಿದ್ರ ಛೀದ್ರವಾಗಿದೆ. ಸ್ಥಳಕ್ಕೆ ಕೆ ಆರ್​ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು,ಈ ಸ್ಫೋಟಕ ಸಾಂಸ್ಕೃತಿಕ ನಗರಿ ಜನ ಬೆಚ್ಚಿಬಿದ್ದಿದ್ದಾರೆ.

ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ತೀವ್ರತೆಗೆ ಓರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

Source link

ಚುಮು ಚುಮು ಚಳಿ: ಪಂಚಾಯ್ತಿಯೊಳಗೆ ನುಗ್ಗಿ PDO ಚೇರ್ ಮೇಲೆ ಮಲಗಿದ ಶ್ವಾನ – Kannada News | Street dog Sleeps On PDO chair In Examba Gram Panchayat Office video Goes viral

ಬೀದರ್, ಡಿಸೆಂಬರ್ 25): ಜಿಲ್ಲೆಯ ಔರಾದ್ ತಾಲ್ಲೂಕಿನ ‌ಏಕಂಬ ಗ್ರಾಮ ಪಂಚಾಯಿತಿ (Examba Gram Panchayat) ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು (Street dog) ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್​​ ಮೇಲೆ ಆಯಾ ಮಲಗಿದೆ. ಸಿಬ್ಬಂದಿ ಬೆಳಗ್ಗೆ ಪಂಚಾಯಿತಿ ಕಚೇರಿ ಬಾಗಿಲು ಓಪನ್ ಮಾಡಿ ಹೋಗಿದ್ದಾರೆ. ಯಾರು ಇಲ್ಲದಿದ್ದರಿಂದ ಶ್ವಾನ, ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯ್ತಿ ಕಚೇರಿಯೊಳಗೆ ನುಗ್ಗಿ ಪಿಡಿಓ ಕುರ್ಚಿ ಏರಿ ಆಯಾಗಿ ಮಲಗಿಕೊಂಡಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಗ್ರಾಮ ಪಂಚಾಯಿತಿ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಡಿಸಿ, ತಹಶೀಲ್ದಾರ್ ಡೋಂಟ್ ಕೇರ್: ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು – Kannada News | Villegers theft Chicken And Egg From Farm over smell at Gadag

ರಮೇಶ್ ಬಿ. ಜವಳಗೇರಾ |

Updated on:Dec 25, 2025 | 9:29 PM

Share

ಕೋಳಿಫಾರಂ ದುವಾರ್ಸನೆಯಿಂದ ಬೇಸತ್ತು ಕೋಳಿ, ಮೊಟ್ಟೆಗಳನ್ನು ಕದ್ದೊಯ್ದಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದಲ್ಲಿ ನಡೆದಿದೆ.
ಕೋಳಿಫಾರಂ​​ನಿಂದ ಬರುತ್ತಿದ್ದ ದುವಾರ್ಸನೆಯಿಂದ ಉಣಚಗೇರಿ ಗ್ರಾಮಸ್ಥರು ರೋಸಿ ಹೋಗಿದ್ದರು. ಹೀಗಾಗಿ ಗ್ರಾಮದಿಂದ ಕೋಳಿಫಾರಂ ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್​ಗೆ ಮನವಿ ಮಾಡಿದ್ದಾರೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಜನರು ತಾಳ್ಮೆಯ ಕಟ್ಟೆ ಹೊಡೆದಿದ್ದು, ಗ್ರಾಮಸ್ಥರೇ ಕೋಳಿಫಾರಂಗೆ ನುಗ್ಗಿ ಕೋಳಿ, ಮೊಟ್ಟೆ ಕದ್ದುಕೊಂಡು ಹೋಗಿದ್ದಾರೆ. ಇದರಿಂದ ಮಾಲೀಕ ಕಂಗಾಲಾಗಿದ್ದಾನೆ.

Published on: Dec 25, 2025 09:27 PM

Source link

KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ 410 ರನ್‌ಗಳ ಭರ್ಜರಿ ಜಯ – Kannada News | KSCA Under 14th Cricket: Bengaluru vidyaniketan School Wins 410 runs Against carmel school

ಬೆಂಗಳೂರು, (ಡಿಸೆಂಬರ್ 25): 2025-26ನೇ ಸಾಲಿನ ಕೆ.ಎಸ್.ಸಿ.ಎ (KSCA) ಬಿ.ಟಿ.ಆರ್ 14 ವರ್ಷದೊಳಗಿನವರ ಎರಡನೇ ಡಿವಿಷನ್ ಕ್ರಿಕೆಟ್ ಪಂದ್ಯದಲ್ಲಿ ಬೆಂಗಳೂರಿನ ವಿದ್ಯಾನಿಕೇತನ ಶಾಲೆ (Bengaluru vidyaniketan School) ಭರ್ಜರಿ ಜಯಗಳಿಸಿದೆ. ವ್ಯೊಮ್ ನಾಯ್ಡು ಅದ್ಭುತ ದ್ವಿಶತಕದ ನೆರವಿನಿಂದ ವಿದ್ಯಾನಿಕೇತನ ಶಾಲೆಯು, ಬೆಂಗಳೂರಿನ ಕಾರ್ಮೆಲ್ ಶಾಲೆ (carmel school) (B-70) ವಿರುದ್ಧ 410 ರನ್‌ಗಳ ಬೃಹತ್ ಮೊತ್ತದ ಜಯ ದಾಖಲಿಸಿದೆ.

ಬೆಂಗಳೂರು ನಗರದ ಸರ್ ಎಂ. ವಿಶ್ವೇಶ್ವರಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MVIT-2) ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವಿದ್ಯಾನಿಕೇತನ ಶಾಲೆ,  ನಿಗದಿತ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 504 ರನ್‌ ಪೇರಿಸಿತು.  ವಿದ್ಯಾನಿಕೇತನ ಪರವಾಗಿ ವ್ಯೊಮ್ ನಾಯ್ಡು 150 ಎಸೆತಗಳಲ್ಲಿ  47 ಬೌಂಡರಿಗಳ ಮೂಲಕ  ಬರೋಬ್ಬರಿ 283 ರನ್‌ ಬಾರಿಸಿ ಮಿಂಚಿದರು.

ಈ ಬೃಹತ್ ಮೊತ್ತದ ಗುರಿಯನ್ನು ಬೆನ್ನಟ್ಟಿದ ಬೆಂಗಳುರಿನ ಕಾರ್ಮೆಲ್ ಶಾಲೆ ಕೇವಲ 20.5 ಓವರ್‌ಗಳಲ್ಲಿ  94 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 410 ರನ್​​​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ವಿದ್ಯಾನಿಕೇತನ ಶಾಲೆ ಭಾರಿ ಅಂತರದ ಜಯವನ್ನು ತನ್ನದಾಗಿಸಿಕೊಂಡಿದೆ. ಈ ಅಮೋಘ ಪ್ರದರ್ಶನ ನೀಡುವ ಮೂಲಕ ವ್ಯೊಮ್ ನಾಯ್ಡು ಅವರು ಪ್ರಸ್ತುತ ಕೆ.ಎಸ್.ಸಿ.ಎ ಬಿ.ಟಿ.ಆರ್ ಶೀಲ್ಡ್‌ ಟೂರ್ನಿಯಲ್ಲಿ ಅತ್ಯಂತ ಭರವಸೆಯ ಯುವ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್ – Kannada News | Shivarajkumar condemns fans bad comments on Vijayalakshmi Darshan

ಸೋಶಿಯಲ್ ಮೀಡಿಯಾದಲ್ಲಿ ಕೆಲವು ಕಿಡಿಗೇಡಿಗಳು ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ದೂರು ನೀಡಿದ್ದಾರೆ. ಈ ಮೊದಲು ನಟಿ ರಮ್ಯಾಗೆ ಇದೇ ರೀತಿ ಕೆಟ್ಟ ಕಮೆಂಟ್ ಬಂದಿತ್ತು. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವರಾಜ್​ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಫ್ಯಾನ್ಸ್ ವಾರ್ ನಿಲ್ಲಿಸಬೇಕು. ಇದನ್ನು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಎಲ್ಲ ಅಭಿಮಾನಿಗಳಲ್ಲೂ ನಾನು ಕೇಳಿಕೊಳ್ಳುತ್ತೇನೆ. ಒಬ್ಬರಿಂದ ಇನ್ನೊಬ್ಬರಿಗೆ ಆ ಕಿಡಿ ಹಾರಬಾರದು. ಅದು ತುಂಬಾ ಅಪಾಯಕಾರಿ. ಅಂಥ ಕಮೆಂಟ್ ಮಾಡಿದರೆ ಪೊಲೀಸ್ ಕೇಸ್ ಆಗುತ್ತದೆ. ಯಾಕೆ ಇದೆಲ್ಲ. ಎಲ್ಲರಿಗೂ ಫ್ಯಾಮಿಲಿ ಇರುತ್ತದೆ. ಯಾವ ಹೆಣ್ಣಿನ ಬಗ್ಗೆ ಆದರೂ ಕೆಟ್ಟ ಕಮೆಂಟ್ ಮಾಡುವುದು ತಪ್ಪು. ಮಹಿಳೆಯರನ್ನು ಗೌರವಿಸಬೇಕು’ ಎಂದು ಶಿವರಾಜ್​​ಕುಮಾರ್ (Shivarajkumar) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಗ್ ಬಾಸ್ ಧರ್ಮ ಕೀರ್ತಿರಾಜ್ ನಟನೆಯ 25ನೇ ಸಿನಿಮಾ ‘ನಯನ ಮನೋಹರ’ – Kannada News | Dharma Keerthiraj starrer 25th Movie Nayana Manohara title and teaser launch

ನಟ ಧರ್ಮ ಕೀರ್ತಿರಾಜ್ (Dharma Keerthiraj) ಅವರು ಬಿಗ್ ಬಾಸ್ ಶೋ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಹಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗ ಅವರು 25ನೇ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ‘ನಯನ ಮನೋಹರ’ (Nayana Manohara) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಟೈಟಲ್ ಅನಾವರಣ ಆಯಿತು. ಜೊತೆಗೆ ಟೀಸರ್ ಕೂಡ ಬಿಡುಗಡೆ ಮಾಡಲಾಗಿದೆ. ಯುಬಿ ಸಿಟಿಯ ಮ್ಯಾರಿಯಟ್ ಅಪಾರ್ಟ್‌ಮೆಂಟ್ಸ್‌ನಲ್ಲಿ ಈ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಅನುಷ್ ಸಿದ್ದಪ್ಪ ಅವರು ‘ಎಕ್ಸ್ಕ್ವಿಸಿಟ್ ಎಂಟರ್‌ಟೈನ್‌ಮೆಂಟ್ಸ್’ ಮೂಲಕ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಪುನೀತ್ ಕೆಜಿಆರ್ ಅವರು ‘ನಯನ ಮನೋಹರ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ತಮ್ಮದೇ ‘ಲಾಸ್ಟ್ ಬೆಂಚ್ ವಂಡರ್ಸ್ ಸಿನ್ಸ್ 1990’ ಎಂಬ ತಂಡದೊಂದಿಗೆ ಅವರು ಈ ಸಿನಿಮಾ ಮಾತ್ತಿದ್ದಾರೆ. ‘ಇದು ನಿಮ್ಮನ್ನು ನಿಮಗೆ ಪರಿಚಯಿಸುವ ಸುಂದರ ಕಾವ್ಯ’ ಎಂಬ ಟ್ಯಾಗ್​ಲೈನ್ ಈ ಸಿನಿಮಾಗೆ ಇದೆ. ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಉಪೇಂದ್ರ ಹಾಗೂ ವಿನೋದ್ ಪ್ರಭಾಕರ್ ಅವರು ಅತಿಥಿಗಳಾಗಿ ಆಗಮಿಸಿದ್ದರು.

ವೇದಿಕೆಯಲ್ಲಿ ಧರ್ಮ ಕೀರ್ತಿರಾಜ್ ಅವರು ಮಾತನಾಡಿದರು. ‘ಅಪ್ಪ, ಅಮ್ಮ, ಅಕ್ಕ ಬಂದಿರುವುದು ನನಗೆ ಶಕ್ತಿ ತಂದಿದೆ. 25ನೇ ಸಿನಿಮಾ ಒಂದು ಮೈಲಿಗಲ್ಲು. ಮುಖ್ಯವಾದ ಹೀರೋ ಅಂದರೆ ನಿರ್ಮಾಪಕರು. ನನ್ನ ಅದೃಷ್ಟಕ್ಕೆ ಅವರೇ ಕಾರಣ. ನಿರ್ದೇಶಕರು ಕಥೆ ಹೇಳಿದಾಗ ಬಹಳ ಸಂತೋಷ ಆಯಿತು. 3 ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತೇನೆ’ ಎಂದು ಧರ್ಮ ಕೀರ್ತಿರಾಜ್ ಮಾಹಿತಿ ನೀಡಿದರು.

ವಾಸುಕಿ ವೈಭವ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ನಿರ್ದೇಶಕ ಪುನೀತ್ ಕೆಜಿಆರ್ ಮಾತನಾಡಿ, ‘ಈ ಸಿನಿಮಾ ಧರ್ಮ ಕೀರ್ತಿರಾಜ್ ಅವರಿಗೆ ಗೆಲುವು ಕೊಡುತ್ತದೆ’ ಎಂದು ಆಶಾಭಾವನೆ ವ್ಯಕ್ತಪಡಿಸಿದರು. ನಾಯಕಿ ಯಾರು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ನಿರ್ದೇಶಕರು ಹೇಳಿದ್ದಾರೆ. ಈ ಚಿತ್ರತಂಡಕ್ಕೆ ಪ್ರಿಯಾಂಕಾ ಉಪೇಂದ್ರ, ವಿನೋದ್ ಪ್ರಭಾಕರ್ ಶುಭ ಹಾರೈಸಿದರು.

ಇದನ್ನೂ ಓದಿ: ಟಾಲಿವುಡ್​ಗೆ ಧರ್ಮ ಕೀರ್ತಿರಾಜ್; ಅಪ್ಸರೆಯ ಜೊತೆ ಸಿನಿಮಾ

ಪ್ರಿಯಾಂಕಾ ಉಪೇಂದ್ರ ಮಾತನಾಡಿ, ‘ಸಿನಿಮಾ 100ನೇ ದಿನ ಪ್ರದರ್ಶನ ಕಂಡು ಇದೇ ಜಾಗದಲ್ಲಿ ಸಂಭ್ರಮಿಸೋಣ. ನಿರ್ಮಾಪಕರ ಅಭಿರುಚಿ ಏನು ಎಂಬುದು ತುಣುಕುಗಳಲ್ಲಿ ಕಂಡುಬಂದಿದೆ. ಟೀಸರ್‌ನಲ್ಲಿ ಇರುವಂತೆಯೇ ಸಿನಿಮಾ ಮಾಡಿ’ ಎಂದು ಸಲಹೆ ನೀಡಿದರು. ‘ಟೀಸರ್ ಚೆನ್ನಾಗಿ ಬಂದಿದೆ. ಉತ್ತಮ ಸಿನಿಮಾ ಇದಾಗಲಿದೆ ಅಂತ ಅನಿಸಿದೆ. ಪಾತ್ರದ ಪರಿಚಯ ಚೆನ್ನಾಗಿ ಮಾಡಿದ್ದೀರಿ’ ಎಂದು ವಿನೋದ್ ಪ್ರಭಾಕರ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Infra Achievements: 2025ರಲ್ಲಿ ಭಾರತದಲ್ಲಿ ಅದೆಷ್ಟು ಮೂಲಸೌಕರ್ಯ ಯೋಜನೆಗಳು, ಮೈಲಿಗಲ್ಲುಗಳು, ಮೊದಲುಗಳು – Kannada News | Building the New India: 2025 A Year of Infrastructure Breakthroughs

ಭಾರತದ ಅಭಿವೃದ್ಧಿ ಪಥದಲ್ಲಿ 2025 ಒಂದು ಪ್ರಮುಖ ಘಟ್ಟ ಎನಿಸಿದೆ. ರೈಲು, ರಸ್ತೆ, ಆಕಾಶ, ಸಮುದ್ರ, ಡಿಜಿಟಲ್, ಹೀಗೆ ಪ್ರತೀ ಆಯಾಮದಲ್ಲೂ ಭಾರತದ ಅಭಿವೃದ್ಧಿಯಲ್ಲಿ ಗಣನೀಯ ಪ್ರಗತಿ ಕಾಣತೊಡಗಿದೆ. ಕನೆಕ್ಟಿವಿಟಿ ದಟ್ಟಗೊಂಡಿತು, ಅಂತರಗಳು ತಗ್ಗಿದವು, ಆಶೋತ್ತರಗಳು ಗಟ್ಟಿಗೊಂಡವು. ಇನ್​ಫ್ರಾಸ್ಟ್ರಕ್ಚರ್​ಗಾಗಿ ಸರ್ಕಾರದ ಬಂಡವಾಳ ಹೂಡಿಕೆ ಮೊತ್ತವು 2025-26ರ ಹಣಕಾಸು ವರ್ಷದಲ್ಲಿ 11.21 ಲಕ್ಷ ಕೋಟಿ ರೂಗೆ ಏರಿದೆ. ಇದು ಜಿಡಿಪಿಯ ಶೇ. 3.1ರಷ್ಟಾಗಿದೆ. 2047ರವರೆಗೂ ಭಾರತದ ಜಿಡಿಪಿ ಪ್ರತೀ 12-18 ತಿಂಗಳಿಗೆ ಒಂದು ಟ್ರಿಲಿಯನ್ ಡಾಲರ್​ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಆರ್ಥಿಕ ಪ್ರಗತಿಗೆ ಇನ್​ಫ್ರಾಸ್ಟ್ರಕ್ಚರ್ (Infrastructure) ಎಂಬುದು ಮಲ್ಟಿಪ್ಲಯರ್ ಅಥವಾ ಗುಣಕವಾಗಿದೆ. ಇದರ ಪರಿಣಾಮವಾಗಿ, ಈ ವರ್ಷದಿಂದಲೇ ಫಲಿತಾಂಶ ಗೋಚರವಾಗತೊಡಗಿದೆ.

ಭಾರತದ ರೈಲ್ವೆ ಜಾಲಕ್ಕೆ ಮೊದಲ ಬಾರಿಗೆ ಸೇರ್ಪಡೆಯಾದ ಮಿಝೋರಾಂ

ಮಿಝೋರಾಮ್ ರಾಜ್ಯ ಮೊತ್ತಮೊದಲ ಬಾರಿಗೆ ರೈಲ್ವೆ ಜಾಲಕ್ಕೆ ಸೇರ್ಪಡೆಯಾಗುವ ಮೂಲಕ ಹೊಸ ಇತಿಹಾಸ ರಚನೆಯಾಗಿದೆ. ಈಶಾನ್ಯ ಭಾರತಕ್ಕೆ ಇದೊಂದು ಮೈಲಿಗಲ್ಲಾಗಿದೆ. 8,000 ಕೋಟಿ ರೂಗಿಂತ ಅಧಿಕ ವೆಚ್ಚದಲ್ಲಿ 51 ಕಿಮೀ ಬೈರಾಬಿ ಮತ್ತು ಸಾಯಿರಂಗ್ ರೈಲ್ವೆ ಮಾರ್ಗವನ್ನು ನಿರ್ಮಿಸಲಾಯಿತು. ಇದರೊಂದಿಗೆ, ಮಿಜೋರಾಮ್ ರಾಜ್ಯಕ್ಕೆ ಚೊಚ್ಚಲ ರೈಲು ಸಂಪರ್ಕ ಸಿಕ್ಕಂತಾಯಿತು.

ತುರ್ತು ಸೇವೆಗಳು, ಮಿಲಿಟರಿ ಸಾಗಣೆ, ನಾಗರಿಕ ಆರೋಗ್ಯ ಸಂಪರ್ಕ, ಶಿಕ್ಷಣ ಮತ್ತು ಉದ್ಯೋಗಾವಕಾಶ ಇವೆಲ್ಲವೂ ಒಂದು ರೈಲು ಮಾರ್ಗದಿಂದಾಗಿ ಮಿಜೋರಾಮ್ ಜನರಿಗೆ ಸಿಕ್ಕಂತಾಯಿತು. 2025ರ ಸೆಪ್ಟೆಂಬರ್ 14ರಂದು ಮೊದಲ ಸರಕು ಸಾಗಣೆ ರೈಲು ಓಡಿತು. ಅಸ್ಸಾಮ್​ನಿಂದ ಐಜ್ವಾಲ್​ಗೆ 21 ಸಿಮೆಂಟ್ ಬೋಗಿಗಳು ಹೋದವು. ಈಗ ಮಿಜೋರಾಮ್​ನ ಸ್ಥಳೀಯ ಕೃಷಿ ಉತ್ಪನ್ನಗಳಾದ ಬಿದಿರು, ಹಣ್ಣು, ತರಕಾರಿ, ವಿಶೇಷ ಬೆಳೆಗಳು ರಾಷ್ಟ್ರೀಯ ಮಾರುಕಟ್ಟೆಗಳನ್ನು ರೈಲು ಮೂಲಕ ಸರಾಗವಾಗಿ ತಲುಪಲು ಸಾಧ್ಯ.

ವಿಶ್ವದ ಅತಿ ಎತ್ತರದ ರೈಲು ಸೇತುವೆ

ಜಮ್ಮು ಕಾಶ್ಮೀರದಲ್ಲಿ ಉಧಮ್​ಪುರ್ ಶ್ರೀನಗರ್ ಬಾರಾಮುಲ್ಲಾ ರೈಲ್ ಲಿಂಕ್ ಪ್ರಾಜೆಕ್ಟ್ ಭಾಗವಾಗಿ ಚಿನಾಬ್ ಸೇತುವೆ ನಿರ್ಮಿಸಲಾಗಿದೆ. ಇದು ವಿಶ್ವದ ಅತಿ ಎತ್ತರದ ರೈಲ್ವೆ ಬ್ರಿಡ್ಜ್ ಎನಿಸಿದೆ. ಕಠಿಣ ಸ್ಥಳದಲ್ಲಿ ಈ ಸೇತುವೆ ನಿರ್ಮಿಸಿದ್ದು ಭಾರತದ ಎಂಜಿನಿಯರಿಂಗ್ ಪರಿಣಿತಿ ಬಗ್ಗೆ ವಿಶ್ವಾಸ ಮೂಡಿಸುತ್ತದೆ.

ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ

2025ರಲ್ಲಿ ಭಾರತದ ಎಂಜಿನಿಯರಿಂಗ್ ಪರಿಣಿತಿಗೆ ದ್ಯೋತಕವೆನಿಸಿದ್ದು ಪಂಬನ್ ಬ್ರಿಡ್ಜ್. ಇದು ಭಾರತದ ಮೊದಲ ವರ್ಟಿಲ್ ಲಿಫ್ಟ್ ಸಮುದ್ರ ಸೇತುವೆ ಎನಿಸಿದೆ. ಅಮೆರಿಕದ ಗೋಲ್ಡನ್ ಗೇಟ್ ಬ್ರಿಡ್ಜ್, ಲಂಡನ್​ನ ಟವರ್ ಬ್ರಿಡ್ಜ್, ಡೆನ್ಮಾರ್ಕ್​ನ ಒರೆಸುಂಡ್ ಬ್ರಿಡ್ಜ್​ಗಳ ಸಾಲಿಗೆ ಪಂಬನ್ ಸೇತುವೆ ಸೇರುತ್ತದೆ.

ಇದನ್ನೂ ಓದಿ: ಚೀನಾ ಹೇಳೋದು ಬೇರೆ, ವಾಸ್ತವ ಬೇರೆಯಾ? 2025ರಲ್ಲಿ ಚೀನಾ ಆರ್ಥಿಕ ಬೆಳವಣಿಗೆ ಶೇ 3 ಮಾತ್ರವಾ?

ಭಾರತದ ಮೊದಲ ಕಂಟೇನರ್ ಟ್ರಾನ್ಸ್​ಶಿಪ್​ಮೆಂಟ್ ಪೋರ್ಟ್

ಈ ವರ್ಷ (2025) ವಿಳಿಂಜಮ್ ಆಳಸಮುದ್ರ ಬಂದರನ್ನು ಉದ್ಘಾಟಿಸಲಾಯಿತು. ಇದು ಕಂಟೇನರ್​ಗಳ ಟ್ರಾನ್ಸ್​ಶಿಪ್​ಮೆಂಟ್ ಪೋರ್ಟ್ ಆಗಿದೆ. ಅಂದರೆ, ಹಡಗುಗಳಿಂದ ಹಡಗುಗಳಿಗೆ ಕಂಟೇನರ್​ಗಳನ್ನು ವರ್ಗಾಯಿಸುವ ಪೋರ್ಟ್. ಇದಕ್ಕೆಂದೇ ಮುಡಿಪಾದ ಇಂಥದ್ದೊಂದು ಬಂದರು ಭಾರತದಲ್ಲಿ ಇದೇ ಮೊದಲ ಬಾರಿಗೆ ಸ್ಥಾಪನೆಯಾಗಿದೆ.

ಬಿಹಾರದಲ್ಲಿ ಮೊತ್ತ ಮೊದಲ ವಂದೇ ಮೆಟ್ರೋ

ಬಿಹಾರದಲ್ಲಿ ನಮೋ ಭಾರತ್ ರಾಪಿಡ್ ರೈಲ್ ಎಂದು ಹೆಸರಾದ ವಂದೇ ಮೆಟ್ರೋವನ್ನು ಆರಂಭಿಸಲಾಗಿದೆ. ಜಯನಗರದಿಂದ ಪಟ್ನಾಗೆ ಈ ರೈಲು ಸಂಪರ್ಕಿಸುತ್ತದೆ. ಪೂರ್ಣ ಎಸಿ ಕೋಚ್​ಗಳಿರುವ ಈ ಟ್ರೈನು ಜಯನಗರದಿಂದ ಪಾಟ್ನಾಗೆ ಕೇವಲ ಐದೂವರೆ ಗಂಟೆಯಲ್ಲಿ ತಲುಪುತ್ತದೆ.

ಜಮ್ಮು ಕಾಶ್ಮೀರದಲ್ಲಿ ಝಡ್ ಮೋರ್ ಸುರಂಗ

ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವರ್ಷ ಪ್ರಧಾನಿಗಳು ಝಡ್-ಮೋರ್ (Z-Morh) ಸುರಂಗವನ್ನು ಉದ್ಘಾಟಿಸಿದ್ದಾರೆ. ಸೋನಾಮಾರ್ಗ್​ಗೆ ಇದು ಸರ್ವಋತುವಿನಲ್ಲೂ ಸಂಪರ್ಕವನ್ನು ಖಚಿತಪಡಿಸುತ್ತದೆ. ಲಡಾಖ್ ಪ್ರದೇಶದ ಭದ್ರತೆಗೂ ಈ ಸುರಂಗ ಸಹಕಾರಿಯಾಗುತ್ತದೆ.

ಶ್ರೀನಗರ್-ಲೇಹ್ ಹೆದ್ದಾರಿಯಲ್ಲಿ ಕೆಲವೆಡೆ ಹಿಮಪಾತದ ಪ್ರದೇಶಗಳಿವೆ. ಅವುಗಳನ್ನು ತಪ್ಪಿಸಿ ಸಾಗಿ ಹೋಗಲು ಈ ಸುರಂಗ ಮಾರ್ಗ ಸಹಕಾರಿಯಾಗುತ್ತದೆ.

ಜಮ್ಮುವಿನಿಂದ ಶ್ರೀನಗರಕ್ಕೆ ಮೊದಲ ಬಾರಿಗೆ ನೇರ ರೈಲು ಸಂಪರ್ಕ

ಜಮ್ಮು ಕಾಶ್ಮೀರದಲ್ಲಿ ಈ ವರ್ಷ ಪ್ರಧಾನಗಳು ವಂದೇ ಭಾರತ್ ಎಕ್ಸ್​ಪ್ರೆಸ್ ಟ್ರೈನ್ ಅನ್ನು ಉದ್ಘಾಟನೆ ಮಾಡಿದ್ದಾರೆ. ಜಮ್ಮು ಮತ್ತು ಶ್ರೀನಗರ ಮಧ್ಯೆ ಇದೇ ಮೊದಲ ಬಾರಿಗೆ ನೇರ ರೈಲು ಸಂಪರ್ಕ ಸಿಕ್ಕಂತಾಗಿದೆ.

ಡೆಲ್ಲಿ ಮೀರತ್ ರಾಪಿಡ್ ಟ್ರಾನ್ಸಿಟ್ ಸಿಸ್ಟಂ

ದೆಹಲಿ ಮತ್ತು ಮೀರತ್ ನಡುವಿನ ರೀಜನಲ್ ರಾಪಿಡ್ ಟ್ರಾನ್ಸಿಟ್ ಸಿಸ್ಟಂ (ವೇಗದ ರೈಲು) ಪೂರ್ಣವಾಗಿ ಸಿದ್ಧವಾಗಿದೆ. ಈ ವರ್ಷ ಇದರ ಫೈನಲ್ ಸೆಕ್ಷನ್ ಉದ್ಘಾಟನೆಗೊಂಡಿತು. ದೆಹಲಿಯ ಸರಾಯ್ ಕಾಲೆ ಖಾನ್ ಸ್ಟೇಷನ್​ನಿಂದ ಮೀರತ್​ನ ಮೋದಿಪುರಂ ಸ್ಟೇಷನ್​ವರೆಗೂ 82 ಕಿಮೀ ಉದ್ದದ ರೈಲು ಮಾರ್ಗ ಇದು. ಈ ಮಾರ್ಗದಲ್ಲಿ ರೈಲು ಗಂಟೆಗೆ 180 ಕಿಮೀ ವೇಗದಲ್ಲಿ ಸಂಚರಿಸಲು ಸಾಧ್ಯವಾಗುತ್ತದೆ.

ನವಿ ಮುಂಬೈ ಇಂಟರ್ನ್ಯಾಷನಲ್ ಏರ್​ಪೋರ್ಟ್

ಮುಂಬೈ ಸಮೀಪ ಎರಡನೇ ಏರ್​ಪೋರ್ಟ್ ನಿರ್ಮಾಣವಾಗುತ್ತಿದೆ. ನವಿ ಮುಂಬೈ ಇಂಟರ್​ನ್ಯಾಷನಲ್ ಏರ್​ಪೋರ್ಟ್​ನ ಮೊದಲ ಹಂತದ ಉದ್ಘಾಟನೆಯಾಗಿದೆ. ಇದರೊಂದಿಗೆ, ಮುಂಬೈನ ಈಗಿರುವ ಏರ್ಪೋರ್ಟ್ ಮೇಲಿನ ಒತ್ತಡ ಕಡಿಮೆ ಆಗಲಿದೆ.

ನೌಕಾ ಮೂಲಸೌಕರ್ಯಕ್ಕೆ ದೊಡ್ಡ ವರ್ಷ 2025

ಈ ವರ್ಷವು ನೇವಲ್ ಇನ್ಫ್ರಾಸ್ಟ್ರಕ್ಚರ್​ಗೆ ಗುರುತಾಗುವಂಥ ವರ್ಷ. ಆಗಸ್ಟ್ ತಿಂಗಳಲ್ಲಿ ಐಎನ್​ಎಸ್ ಹಿಮಗಿರಿ ಮತ್ತು ಐಎನ್​ಎಸ್ ಉದಯಗಿರಿ ಎನ್ನುವ ಎರಡು ಸ್ಟೀಲ್ತ್ ಫ್ರಿಗೇಟ್​ಗಳನ್ನು ನೌಕಾಪಡೆ ಬತ್ತಳಿಕೆಗೆ ಸೇರಿಸಲಾಯಿತು.

ಇದನ್ನೂ ಓದಿ: ಬರಲಿವೆ ಹೊಸ ಏರ್ಲೈನ್ಸ್; ಶಂಖ್ ಏರ್ ಆಯ್ತು, ಈಗ ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್​ಗೂ ಸಿಕ್ಕಿತು ಎನ್​ಒಸಿ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಯೆಲ್ಲೋ ಲೈನ್ ಸರ್ವಿಸ್

ಬೆಂಗಳೂರಿನ ನಮ್ಮ ಮೆಟ್ರೋದ ಯೆಲ್ಲೋ ಲೈನ್ ಉದ್ಘಾಟನೆ ಮಾಡಲಾಯಿತು. ಆರ್​ವಿ ರೋಡ್ ಮೆಟ್ರೋ ಸ್ಟೇಷನ್​ನಿಂದ ಎಲೆಕ್ಟ್ರಾನಿಕ್ಸ್ ಸಿಟಿವರೆಗೆ ಈ ಮಾರ್ಗ ಇದೆ.

17 ಕುಗ್ರಾಮಗಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ

2025ರ ಮೇ ತಿಂಗಳಲ್ಲಿ ಛತ್ತೀಸ್​ಗಡದ ಮನಪುರ್ ಅಂಬಾಗಡ್ ಚೌಕಿ ಜಿಲ್ಲೆಯ 17 ಕುಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕೊಡಲಾಯಿತು. ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದ ಬಳಿಕ ಮೊದಲ ಬಾರಿಗೆ ಈ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಸಿಕ್ಕಿರುವುದು.

ಮಹಾರಾಷ್ಟ್ರದ ಈ ಗ್ರಾಮಕ್ಕೆ ಮೊದಲ ಬಸ್ ಸಂಪರ್ಕ

ಮಹಾರಾಷ್ಟ್ರದ ಗಡಚಿರೋಲಿ ಜಿಲ್ಲೆಯಲ್ಲಿರುವ ನಕ್ಸಲ್ ಪೀಡಿತ ಕಾಟೆಜಾರಿ ಎಂಬ ಗ್ರಾಮಕ್ಕೆ ಬಸ್ ಸಂಪರ್ಕ ಕೊಡಲಾಯಿತು. ಈ ಗ್ರಾಮಕ್ಕೆ ಬಸ್ ಹೋಗುತ್ತಿರುವುದು ಇದೇ ಮೊದಲು.

ಕೊಂಡಪಲ್ಲಿಯಲ್ಲಿ ಮೊಬೈಲ್ ನೆಟ್ವರ್ಕ್

ಛತ್ತೀಸ್​ಗಡದ ನಕ್ಸಲ್ ಪೀಡಿತ ಬಿಜಾಪುರ್ ಜಿಲ್ಲೆಯ ಕೊಂಡಪಲ್ಲಿ ಗ್ರಾಮದಲ್ಲಿ ಮೊತ್ತಮೊದಲ ಮೊಬೈಲ್ ಟವರ್ ಸ್ಥಾಪಿಸಲಾಗಿದೆ. ಇದೇ ಡಿಸೆಂಬರ್ ತಿಂಗಳಲ್ಲಿ ಇದಾಗಿದ್ದು.

ಇದನ್ನೂ ಓದಿ: ಚಂಡಮಾರುತದಿಂದ ನಲುಗಿದ ಶ್ರೀಲಂಕಾಕ್ಕೆ 4,000 ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ

ದೇಶದಲ್ಲಿವೆ 160ಕ್ಕೂ ಅಧಿಕ ವಿಮಾನ ನಿಲ್ದಾಣಗಳು

ಭಾರತದಲ್ಲಿ ಏರ್​ಪೋರ್ಟ್​ಗಳ ಸಂಖ್ಯೆ 2014ರಲ್ಲಿ 74 ಇತ್ತು. 2025ರಲ್ಲಿ ಅದು 163ಕ್ಕೆ ಏರಿದೆ. ಈ ಮಧ್ಯೆ ಭಾರತವು ವಿಶ್ವದ ಮೂರನೇ ಅತಿದೊಡ್ಡ ದೇಶೀಯ ವೈಮಾನಿಕ ಮಾರುಕಟ್ಟೆ ಎನಿಸಿದೆ.

ಶೇ. 99ರಷ್ಟು ರೈಲ್ವೆ ವಿದ್ಯುದೀಕರಣ

ಭಾರತೀಯ ರೈಲ್ವೇಸ್ ಸಂಸ್ಥೆಯು ತನ್ನ ಶೇ. 99ರಷ್ಟು ಬ್ರಾಡ್ ಗೇಜ್ ನೆಟ್ವರ್ಕ್ ಅನ್ನು ವಿದ್ಯುದೀಕರಿಸಿದೆ. 2026ಕ್ಕೆ ನೂರಕ್ಕೆ ನೂರು ಎಲೆಕ್ಟ್ರಿಫಿಕೇಶನ್ ಆಗುವ ನಿರೀಕ್ಷೆ ಇದೆ.

ಮೂರನೇ ಅತಿದೊಡ್ಡ ಮೆಟ್ರೋ ಜಾಲ

ಭಾರತದ ಮೆಟ್ರೋ ಜಾಲ 2014ರಲ್ಲಿ 248 ಕಿಮೀ ಇತ್ತು. 2025ರಲ್ಲಿ ಇದು 1,015 ಕಿಮೀಗೆ ಹೆಚ್ಚಿದೆ. ಚೀನಾ, ಅಮೆರಿಕ ನಂತರ ಭಾರತವೇ ಅತಿದೊಡ್ಡ ಮೆಟ್ರೋ ನೆಟ್ವರ್ಕ್ ಹೊಂದಿರುವುದು.

ರಸ್ತೆ ಮತ್ತು ಹೆದ್ದಾರಿ ಮೈಲಿಗಲ್ಲುಗಳು

ದೇಶದ ರಾಷ್ಟ್ರೀಯ ಹೆದ್ದಾರಿಗಳ ಉದ್ದ ಗಣನೀಯವಾಗಿ ಹೆಚ್ಚಿದೆ. 2019ರಲ್ಲಿ 1,32,499 ಕಿಮೀ ಇತ್ತು. ಈಗ ಅದು 1,46,560 ಕಿಮೀಗೆ ಹೆಚ್ಚಿದೆ. ಚತುಷ್ಪಥ ಹಾಗೂ ಇನ್ನೂ ವಿಸ್ತಾರದ ಹೆದ್ದಾರಿ ಜಾಲವು 2019ರಲ್ಲಿ 31,066 ಕಿಮೀ ಇತ್ತು. ಈಗ 43,512 ಕಿಮೀಗೆ ಹೆಚ್ಚಿದೆ. ಆರು ವರ್ಷದಲ್ಲಿ ಬಹುತೇಕ ಒಂದೂವರೆ ಪಟ್ಟು ಹೆಚ್ಚಿದೆ.

(ಮಾಹಿತಿ ಕೃಪೆ: ಪಿಐಬಿ ಪ್ರಕಟಣೆಗಳು)

Source link

Exit mobile version