ಸಿರುಗುಪ್ಪ ಬಳಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ತಮಿಳುನಾಡಿನ ದೇಗುಲಕ್ಕೆ ಹೋಗಿ ಬರುತ್ತಿದ್ದ ಒಂದೇ ಕುಟುಂಬದ ಮೂವರು ಸಾವು – Kannada News | Fatal Car Crash Near Siruguppa: Three Family Members Killed While Returning From Tamil Nadu Temple Visit
ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿರುವುದು ಬಳ್ಳಾರಿ, ಡಿಸೆಂಬರ್ 24: ಬಳ್ಳಾರಿ (Ballari) ಜಿಲ್ಲೆ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಸೇರಿದಂತೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ತಕ್ಷಣ ಬಳ್ಳಾರಿಯ ವಿಮ್ಸ್…