ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭಾ ಆಫರ್ ನೀಡಿದ್ದ ರಾಹುಲ್ ಗಾಂಧಿ: ಬೇಡವೆಂದಿದ್ದ ಮಾಜಿ ಸಿಎಂ ಇಟ್ಟಿದ್ದು ಬೇರೆಯೇ ಬೇಡಿಕೆ!
ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಜೂನ್ 1: ರಾಜ್ಯದಲ್ಲಿ ಸಿಎಂ ಹುದ್ದೆ ಬದಲಾವಣೆಯ ಜತೆಗೆ ಸಂಪುಟ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪಿದೆ. ಸಚಿವ ಸಂಪುಟದಲ್ಲಿ ಯಾರೆಲ್ಲ ಇರಬೇಕು ಎಂಬುದು ಮತ್ತು ಇತರ ಪ್ರಮುಖ ರಾಜಕೀಯ ನಿರ್ಧಾರಗಳ ಕುರಿತು ಚರ್ಚಿಸಲು ನಿರ್ಗಮಿತ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ (DK Shivakumar) ಇಂದು (ಜೂನ್ 1) ದೆಹಲಿಗೆ ತೆರಳುತ್ತಿದ್ದಾರೆ. ಸಂಭಾವ್ಯ ಸಚಿವರ ಪಟ್ಟಿ ಅಂತಿಮಗೊಳಿಸಲು ಹೈಕಮಾಂಡ್ ನಾಯಕರೊಂದಿಗೆ…