IND vs AFG: ಮೊದಲ ದಿನವೇ 2 ಶತಕ, 2 ಅರ್ಧಶತಕ; ಬೃಹತ್ ಮೊತ್ತದತ್ತ ಟೀಂ ಇಂಡಿಯಾ – Kannada News
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದೆ. ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯ ಟೀಂ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ ಮೂರು ವಿಕೆಟ್ಗಳನ್ನು ಕಳೆದುಕೊಂಡು 368 ರನ್ ಕಲೆಹಾಕಿದೆ. ಮೊದಲ ದಿನದಂದು ತಂಡದ ಪರ ಎರಡು ಶತಕಗಳು ಹಾಗೂ ಎರಡು ಅರ್ಧಶತಕಗಳು ದಾಖಲಾಗಿವೆ. ಆರಂಭಿಕ ಕೆಎಲ್ ರಾಹುಲ್ ಹಾಗೂ ನಾಯಕ ಶುಭ್ಮನ್ ಗಿಲ್ ಶತಕ ಬಾರಿಸಿದರೆ,…