ಹಳೆಯ ದಾಖಲೆ ಧೂಳೀಪಟ… ವೈಭವ್ ಈಗ ‘ಸಿಕ್ಸರ್ ಸುಲ್ತಾನ್’
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ಯುವ ಎಡಗೈ ದಾಂಡಿಗ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಸರದಾರ ಅಭಿಷೇಕ್ ಶರ್ಮಾ ಹೆಸರಿನಲ್ಲಿದ್ದ ಅಮೋಘ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL) ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 21 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್…