2026 ರ ಟಿ20 ವಿಶ್ವಕಪ್‌ನಲ್ಲಿ ಮ್ಯಾಚ್ ಫಿಕ್ಸಿಂಗ್..! ತನಿಖೆ ಪ್ರಾರಂಭಿಸಿದ ಐಸಿಸಿ – Kannada News | T20 World Cup 2026 Match Fixing Allegations: ICC Probes Canada vs NZ Game
ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆದಿದ್ದ 2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ. ಹೀಗಾಗಿ ಇದಕ್ಕೆ ಸಂಬಂಧಿಸಿದಂತೆ ಐಸಿಸಿ (ICC) ಕೂಡ ಈಗಾಗಲೇ ತನಿಖೆ ನಡೆಸುತ್ತಿದೆ ಎಂತಲೂ ವರದಿಯಾಗಿದೆ. ವರದಿಯ ಪ್ರಕಾರ, ನ್ಯೂಜಿಲೆಂಡ್ ಹಾಗೂ ಕೆನಡಾ ನಡುವಿನ ಪಂದ್ಯದ ವೇಳೆ ಮ್ಯಾಚ್ ಫಿಕ್ಸಿಂಗ್ ನಡೆದಿದ್ದು, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಭ್ರಷ್ಟಾಚಾರ ನಿಗ್ರಹ ಘಟಕ ಈ ಪಂದ್ಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ….