Video: ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ – Kannada News | A little boy sang a bhajan of Lord Krishna, video goes viral
ಮುದ್ದು ಮಕ್ಕಳ (little kids) ಆಟ-ತುಂಟಾಟಗಳನ್ನು ನೋಡುವುದೇ ಚಂದ. ಪುಟಾಣಿಗಳ ಬಾಯಲ್ಲಿ ತೊದಲು ನುಡಿ, ಹಾಡುಗಳನ್ನು ಕೇಳಿದರೆ ಮನಸ್ಸಿನ ನೋವೆಲ್ಲಾ ಮರೆಯಾಗುತ್ತದೆ. ಈ ಪುಟಾಣಿಗಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟಾಣಿಯೊಂದು ಅಚ್ಯುತಂ ಕೇಶವಂ ಕೃಷ್ಣ ದಾಮೋದರಂ ಸ್ತೋತ್ರವನ್ನು ಭಕ್ತಿಭಾವದಿಂದ ಹಾಡಿದೆ. ಮುದ್ದು ಕಂದನ ಕಂಠಸಿರಿಯಲ್ಲಿ ಮೂಡಿಬಂದ ಈ ಭಜನಾ ಹಾಡಿಗೆ ನೆಟ್ಟಿಗರು ಮನಸೋತಿದ್ದಾರೆ. ಮಣಿಕರ್ಣಿಕ ಕಟೋಚ್ (Manikarnika Katoch) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ದೇವರ ಕೋಣೆಯಲ್ಲಿ…