‘ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ’; ಹಾನಗಲ್‌ನಲ್ಲಿ ಮುಸ್ಲಿಂ ಸಮುದಾಯದಿಂದ ಸರ್ಕಾರಕ್ಕೆ ಮನವಿ – Kannada News
‘ಹಸುವನ್ನು ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಾವೇರಿ, ಜೂ.6: ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿಗೆ ಬ್ರೇಕ್ ಹಾಕಲು ಹಾಗೂ ಗೋಸಂರಕ್ಷಣೆಗೆ ಕಾನೂನಾತ್ಮಕ ಬಲ ತುಂಬಲು ‘ಹಸುವನ್ನು ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಮುಸ್ಲಿಂ ಸಮುದಾಯದ ನೂರಾರು ಜನರು ಹಾವೇರಿ ಜಿಲ್ಲೆಯಲ್ಲಿ ಹಠಾತ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಹಾನಗಲ್ ಪಟ್ಟಣದ ಪ್ರಮುಖ ಕೇಂದ್ರವಾದ ಎಂ.ಜೆ ಸರ್ಕಲ್‌ನಲ್ಲಿ ಜಮಾಯಿಸಿದ ಅಂಜುಮನ್-ಎ-ಇಸ್ಲಾಂ ಕಮಿಟಿಯ ಪದಾಧಿಕಾರಿಗಳು, ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ನೂರಾರು ಸಾರ್ವಜನಿಕರು ರಾಜ್ಯ…