ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್ ಸಿಗ್ನಲ್? ದೆಹಲಿಯಲ್ಲಿ ಡಿಕೆಶಿ, ಸಿದ್ದರಾಮಯ್ಯ, ಹರಿಪ್ರಸಾದ್ ಮಹತ್ವದ ಸಭೆ – Kannada News | Karnataka Cabinet Expansion: DK Shivakumar, Siddaramaiah and BK Hariprasad Hold Key Delhi Talks Today

ದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ, ಡಿಸಿಎಂ ಹಾಗೂ ಇತರರುImage Credit source: tv9

ನವದೆಹಲಿ/ಬೆಂಗಳೂರು, ಜುಲೈ 28: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಕುರಿತು ಕಾಂಗ್ರೆಸ್ ಹೈಕಮಾಂಡ್ ಇಂದು ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar), ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತ ಅಂತಿಮ ಪಟ್ಟಿಗೆ ರೂಪುರೇಷೆ ಸಿಗುವ ನಿರೀಕ್ಷೆಯಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿ ಎರಡು ತಿಂಗಳು ಸಮೀಪಿಸುತ್ತಿದ್ದರೂ, ಸಚಿವ ಸಂಪುಟದಲ್ಲಿರುವ 20 ಖಾಲಿ ಸ್ಥಾನಗಳು ಇನ್ನೂ ಭರ್ತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಪೂರ್ಣಗೊಳಿಸುವ ಉದ್ದೇಶದಿಂದ ಕಾಂಗ್ರೆಸ್ ನಾಯಕರು ಮತ್ತೊಮ್ಮೆ ದೆಹಲಿಯಲ್ಲಿ ಸಮಾಲೋಚನೆ ನಡೆಸುತ್ತಿದ್ದಾರೆ.

ಆಗಸ್ಟ್ 6ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿರುವುದರಿಂದ, ಅದಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ರೂಪ ನೀಡುವ ಪ್ರಯತ್ನಗಳು ನಡೆಯುತ್ತಿವೆ. ಈ ಬಾರಿ ಯಾವುದೇ ನಿರ್ಧಾರವಿಲ್ಲದೆ ವಾಪಸ್ ಬಾರದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ನಿರಂತರ ಮೀಟಿಂಗ್​ಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ವೇಣುಗೋಪಾಲ್ ಜತೆ ಇಂದು ಮಹತ್ವದ ಸಭೆ

ಸೋಮವಾರ ರಾತ್ರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ನಡೆಯಬೇಕಿದ್ದ ಸಭೆ ಕೊನೆಯ ಕ್ಷಣದಲ್ಲಿ ಮುಂದೂಡಲ್ಪಟ್ಟಿದೆ. ಇದೀಗ ಮಂಗಳವಾರ ಸಭೆ ನಡೆಯಲಿದ್ದು, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.

ಈ ಸಭೆಯಲ್ಲಿ ಸಚಿವ ಸ್ಥಾನಕ್ಕೆ ಪರಿಗಣಿಸಿರುವ ಹೆಸರುಗಳ ಪಟ್ಟಿಯನ್ನು ಪರಿಶೀಲಿಸಿ, ಬಳಿಕ ಅದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಲ್ಲಿಸುವ ಸಾಧ್ಯತೆ ಇದೆ. ನಂತರ ಅಂತಿಮ ಪಟ್ಟಿಗೆ ಒಪ್ಪಿಗೆ ಪಡೆಯುವ ಪ್ರಕ್ರಿಯೆ ನಡೆಯುವ ನಿರೀಕ್ಷೆಯಿದೆ.

ಯುವ ಮುಖಗಳಿಗೆ ಮಣೆ?

ಈ ಬಾರಿ ಸಚಿವ ಸಂಪುಟದಲ್ಲಿ ‘ಹಳೆ ಬೇರು-ಹೊಸ ಚಿಗುರು’ ಸೂತ್ರ ಅನುಸರಿಸುವ ಕುರಿತು ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ. ಯುವ ನಾಯಕತ್ವಕ್ಕೆ ಹೆಚ್ಚಿನ ಅವಕಾಶ ನೀಡುವ ಬಗ್ಗೆ ಒಲವು ವ್ಯಕ್ತವಾಗಿದ್ದು, ಖಾಲಿ ಇರುವ 20 ಸಚಿವ ಸ್ಥಾನಗಳ ಪೈಕಿ 12ರಿಂದ 15 ಸ್ಥಾನಗಳಿಗೆ ಹೊಸ ಮುಖಗಳಿಗೆ ಅವಕಾಶ ದೊರೆಯುವ ಸಾಧ್ಯತೆ ಇದೆ.

ಆದರೆ ಇಲ್ಲಿ ಹೊಸ ಮುಖಗಳು ಎಂದರೆ ಕೇವಲ ಮೊದಲ ಬಾರಿಗೆ ಶಾಸಕರಾದವರು ಮಾತ್ರವಲ್ಲ. ಮೂರು ಅಥವಾ ಅದಕ್ಕಿಂತ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಾಗೂ ಆಡಳಿತಾತ್ಮಕ ಸಾಮರ್ಥ್ಯ ಹೊಂದಿರುವವರಿಗೆ ಆದ್ಯತೆ ನೀಡುವ ಸಾಧ್ಯತೆಯಿದೆ. ಇದಕ್ಕಾಗಿ ಜಾತಿ, ಪ್ರದೇಶ, ಶಿಕ್ಷಣ ಮತ್ತು ಅನುಭವ ಸೇರಿದಂತೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಪ್ರತ್ಯೇಕ ಪಟ್ಟಿಯೂ ಸಿದ್ಧವಾಗಿದೆ ಎನ್ನಲಾಗಿದೆ.

ಸಚಿವಾಕಾಂಕ್ಷಿಗಳ ಲಾಬಿ ಮುಂದುವರಿಕೆ

ದೆಹಲಿ ತಲುಪಿರುವ ಸಚಿವಾಕಾಂಕ್ಷಿ ಶಾಸಕರು ಲಾಬಿ ಮುಂದುವರಿಸಿದ್ದಾರೆ. ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ವಿಶ್ವಾಸವನ್ನು ಹಲವರು ವ್ಯಕ್ತಪಡಿಸುತ್ತಿದ್ದು, ಹೈಕಮಾಂಡ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ.

ಪ್ರಮಾಣವಚನಕ್ಕೆ ರಾಜ್ಯಪಾಲರ ಪ್ರವಾಸ ಅಡ್ಡಿ?

ಸಚಿವರ ಪಟ್ಟಿ ಅಂತಿಮಗೊಂಡರೂ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಎರಡು ದಿನಗಳ ಮಧ್ಯಪ್ರದೇಶ ಪ್ರವಾಸ ಕೈಗೊಳ್ಳಲಿದ್ದು, ಜುಲೈ 30ರವರೆಗೆ ಬೆಂಗಳೂರಿನಲ್ಲಿ ಇರುವುದಿಲ್ಲ. ಮಂಗಳವಾರ ಮಧ್ಯಾಹ್ನ ಬೆಂಗಳೂರಿನಿಂದ ಇಂದೋರ್‌ಗೆ ತೆರಳಲಿರುವ ರಾಜ್ಯಪಾಲರು, ಗುರು ಪೂರ್ಣಿಮೆಯ ಹಿನ್ನೆಲೆಯಲ್ಲಿ ಸ್ವಗೃಹಕ್ಕೆ ಭೇಟಿ ನೀಡಲಿದ್ದಾರೆ. ಜುಲೈ 30ರ ರಾತ್ರಿ ಬೆಂಗಳೂರಿಗೆ ಮರಳುವ ನಿರೀಕ್ಷೆಯಿದೆ.

ಇದನ್ನೂ ಓದಿ: ಕರ್ನಾಟಕದ ಎಲ್ಲ ಸಂಸದರ ಜೊತೆ ಡಿಕೆ ಶಿವಕುಮಾರ್ ಸಭೆ , ಏನೇನು ಚರ್ಚೆ ಆಯ್ತು? ಇಲ್ಲಿದೆ ಡಿಟೇಲ್ಸ್

ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಇಂದು ಅಥವಾ ಶೀಘ್ರದಲ್ಲೇ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಒತ್ತಿದರೆ, ರಾಜ್ಯಪಾಲರು ವಾಪಸಾದ ನಂತರ ಜುಲೈ 31ರಂದು ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸ್ಟಾರ್ ಕ್ರಿಕೆಟರ್ ಜೊತೆ ನಟಿ ಮೃಣಾಲ್ ಠಾಕೂರ್ ಡೇಟಿಂಗ್? ಹುಟ್ಟಿದೆ ವದಂತಿ – Kannada News | Are Mrunal Thakur and Yashasvi Jaiswal Dating? Viral Cafe Video Sparks Speculations

ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಅವರಿಗೆ ಇತ್ತೀಚೆಗೆ ಯಾಕೋ ಅದೃಷ್ಟ ಕೈಕೊಟ್ಟಂತೆ ಇದೆ. ಅವರ ಡೇಟಿಂಗ್ ವಿಷಯದಲ್ಲಿ ಸಾಕಷ್ಟು ವದಂತಿಗಳು ಹಬ್ಬುತ್ತಲೇ ಇವೆ. ಈ ಮೊದಲು ಅವರು ಧನುಷ್ ಜೊತೆ ಸುತ್ತುತ್ತಿದ್ದಾರೆ ಎನ್ನಲಾಗಿತ್ತು. ಅವರು ಮದುವೆ ಆಗುತ್ತಾರೆ ಎಂದು ಕೂಡ ಹೇಳಲಾಯಿತು. ಆ ಬಳಿಕ ಇಬ್ಬರ ಪ್ರೀತಿ ಬ್ರೇಕಪ್​​ನಲ್ಲಿ ಕೊನೆ ಆಯಿತು. ಈಗ ಅವರು ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹಬ್ಬಿದೆ.

ಇತ್ತೀಚೆಗೆ ವೈರಲ್ ಆದ ವಿಡಿಯೋ ಒಂದರಿಂದ ಈ ಚರ್ಚೆ ಶುರುವಾಗಿದೆ. ಇವರಿಬ್ಬರೂ ಮುಂಬೈನ ಕೆಫೆಯೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಅಭಿಮಾನಿಗಳು ಇವರ ನಡುವೆ ಪ್ರೀತಿ ಇರಬಹುದು ಎಂದು ಊಹಿಸುತ್ತಿದ್ದಾರೆ.

ಮೃಣಾಲ್ ಠಾಕೂರ್ ಅವರಿಗೆ ಈಗ 33 ವರ್ಷ ವಯಸ್ಸು. ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಅವರಿಗೆ 24 ವರ್ಷ ವಯಸ್ಸು. ಇವರಿಬ್ಬರೂ ಬಾಂದ್ರಾ ವೆಸ್ಟ್‌ನ ಬುಜೀ ಕೆಫೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ವಿಡಿಯೋದಲ್ಲಿ ಯಶಸ್ವಿ ಮೊದಲು ಕೆಫೆಯಿಂದ ಹೊರಗೆ ಬಂದಿದ್ದಾರೆ. ಮೃಣಾಲ್ ಕೆಫೆಯ ಒಳಗಡೆಯೇ ಉಳಿದುಕೊಂಡಿದ್ದಾರೆ.

ಈ ವಿಡಿಯೋ ನೋಡಿದ ನೆಟ್ಟಿಗರು ನಾನಾ ರೀತಿಯ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಇವರಿಬ್ಬರ ನಡುವೆ ಪ್ರೀತಿ ಪ್ರೇಮ ಇರಬಹುದು ಎನ್ನುತ್ತಿದ್ದಾರೆ. ಆದರೆ ಇನ್ನು ಕೆಲವರು ಇದು ಕೇವಲ ಒಂದು ಜಾಹೀರಾತು ಶೂಟಿಂಗ್ ಇರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು ಈ ರೀತಿ ಸುಖಾ ಸುಮ್ಮನೆ ಸುದ್ದಿ ಸೃಷ್ಟಿ ಮಾಡುವವರ ವಿರುದ್ಧ ಕಿಡಿಕಾರಿದ್ದಾರೆ. ಇವರಿಬ್ಬರ ನಡುವಿನ 11 ವರ್ಷಗಳ ವಯಸ್ಸಿನ ವ್ಯತ್ಯಾಸದ ಬಗ್ಗೆಯೂ ಚರ್ಚೆಯಾಗುತ್ತಿದೆ. ಆದರೆ ಈ ವದಂತಿಗಳ ಬಗ್ಗೆ ಇಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ಭಾರತದ ಸ್ಟಾರ್ ಕ್ರಿಕೆಟಿಗನ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?

ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಭಾರತ ತಂಡದ ಉದಯೋನ್ಮುಖ ತಾರೆಯಾಗಿದ್ದಾರೆ. ಅವರು ಟೀಂ ಇಂಡಿಯಾವನ್ನು ಪ್ರತಿನಿಧಿಸುತ್ತಾರೆ. ಇತ್ತೀಚೆಗೆ ಅವರು ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಆಡಿದ್ದರು. ಇನ್ನು ನಟಿ ಮೃಣಾಲ್ ವಿವಿಧ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Karnataka Weather Forecast: ಕರ್ನಾಟಕ ಹವಾಮಾನ; ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿಗೆ ಭಾರೀ ಮಳೆ ಮುನ್ಸೂಚನೆ – Kannada News | Karnataka Weather Forecast July 28: Heavy to Very Heavy Rain Alert for Udupi, Uttara Kannada, Shivamogga and Chikkamagaluru

ಬೆಂಗಳೂರು, ಜುಲೈ 28: ಕರ್ನಾಟಕದಲ್ಲಿ ಮುಂಗಾರು ಬಿರುಸುಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ (Weather Forecast) ಪ್ರಕಾರ, ಜುಲೈ 28 ಹಾಗೂ 29ರಂದು ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ ನೀಡಲಾಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್

ಕರಾವಳಿ ಕರ್ನಾಟಕದಲ್ಲಿ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲೂ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಹ ಒಂದು ಅಥವಾ ಎರಡು ಕಡೆ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ಜುಲೈ 29ಕ್ಕೂ ಕರಾವಳಿ, ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಜುಲೈ 29ರಂದೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಇನ್ನು ಬೆಳಗಾವಿ, ಧಾರವಾಡ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಾಳಿ ಬೀಸುವ ಮುನ್ಸೂಚನೆ ಇದೆ.

ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ, ಎಷ್ಟು?

ಸೋಮವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ.

  • ಕೊಲ್ಲೂರು (ಉಡುಪಿ) – 7 ಸೆಂ.ಮೀ.
  • ಆಗುಂಬೆ (ಶಿವಮೊಗ್ಗ) – 5 ಸೆಂ.ಮೀ.
  • ಮೂಡುಬಿದಿರೆ (ದಕ್ಷಿಣ ಕನ್ನಡ) – 4 ಸೆಂ.ಮೀ.
  • ಸುಳ್ಯ (ದಕ್ಷಿಣ ಕನ್ನಡ) – 4 ಸೆಂ.ಮೀ.
  • ಉಪ್ಪಿನಂಗಡಿ (ದಕ್ಷಿಣ ಕನ್ನಡ) – 4 ಸೆಂ.ಮೀ.
  • ಭಾಗಮಂಡಲ (ಕೊಡಗು) – 3 ಸೆಂ.ಮೀ.
  • ಧರ್ಮಸ್ಥಳ (ದಕ್ಷಿಣ ಕನ್ನಡ) – 3 ಸೆಂ.ಮೀ.

ಭಾರೀ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಜನರು ನದಿ-ಹಳ್ಳಗಳ ಸಮೀಪ ಅನಗತ್ಯವಾಗಿ ಹೋಗದಿರುವುದು ಹಾಗೂ ಬಿರುಗಾಳಿ ಇರುವ ಸಂದರ್ಭಗಳಲ್ಲಿ ಮರಗಳು ಮತ್ತು ದುರ್ಬಲ ಕಟ್ಟಡಗಳ ಬಳಿ ನಿಲ್ಲದಿರುವುದು ಸುರಕ್ಷಿತ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Today Horoscope July 28, 2026: Subrahmanya and Hanuman Blessings for All 12 Zodiac Signs

ಇಂದು 2026ರ ಜುಲೈ 28, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸದ ಶುಕ್ಲ ಪಕ್ಷದ ಚತುರ್ದಶಿ, ಪೂರ್ವಾಷಾಢ ನಕ್ಷತ್ರ ಆಗಿದ್ದು, ರಾಹುಕಾಲವು ಮಧ್ಯಾಹ್ನ 3:35 ರಿಂದ ಸಂಜೆ 5:10 ರವರೆಗೆ ಇರುತ್ತದೆ. ಶುಭಕಾಲವು ಬೆಳಿಗ್ಗೆ 10:50 ರಿಂದ ಮಧ್ಯಾಹ್ನ 12:26 ರವರೆಗೆ ಇರುತ್ತದೆ. ಈ ದಿನ ಸುಬ್ರಮಣ್ಯ ಮತ್ತು ಹನುಮನ ಆರಾಧನೆಗೆ ವಿಶೇಷ ಮಹತ್ವವಿದೆ. ಕುಜ ದೋಷ, ಸಂತಾನ ಸಮಸ್ಯೆಗಳು, ಕಣ್ಣು ಮತ್ತು ಚರ್ಮದ ಸಮಸ್ಯೆಗಳಿಗೆ ಈ ದಿನದ ಆರಾಧನೆ ಪರಿಹಾರ ನೀಡುತ್ತದೆ. ನಾಳೆ ಗುರು ಪೌರ್ಣಿಮಾ ಇರುವ ಕಾರಣ, ಇಂದು ಸಂಕಲ್ಪ ಕೈಗೊಳ್ಳಲು ಉತ್ತಮ ದಿನವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದು, ಮೇಷಾದಿ 12 ರಾಶಿಗಳ ದಿನ ಭವಿಷ್ಯವನ್ನು ವಿವರಿಸಿದ್ದಾರೆ.

Source link

ದಿನ ಭವಿಷ್ಯ: ಈ ರಾಶಿಯವರಿಗೆ ಆಪ್ತರೇ ದುಷ್ಕೃತ್ಯಕ್ಕೆ ಪ್ರಚೋದಿಸುವ ಸಾಧ್ಯತೆ, ಹುಷಾರ್! – Kannada News | Daily Horoscope for July 28, 2026: Zodiac Predictions for All 12 Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುಷ್ಯಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಉತ್ತೆರಾಷಾಢ, ಯೋಗ : ಆಯುಷ್ಮಾನ್, ಕರಣ : ಭದ್ರ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:35 – 17:12, ಯಮಗಂಡ ಕಾಲ 09:16 – 10:51, ಗುಳಿಕ ಕಾಲ 12:26 – 14:01

ಮೇಷ ರಾಶಿ: ನೀವು ಇಂದು ಸ್ನೇಹಿತನ ನಂಬಿಕೆಯ ಯಾರಿಗೋ ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಅನ್ಯರ ಚಿಂತೆ ನಿಮಗೆ ಬೇಡ. ಬಾಕಿ ಇರುವ ಕೆಲಸದ ಬಗ್ಗೆ ಹೆಚ್ಚು ಗಮನವಿರಲಿ. ದಿನವನ್ನು ಮುಂದೆ ಹಾಕುವುದು ಬೇಡ. ಇಂದು ನಿಮ್ಮ ಕಡೆಯಿಂದ ದೊಡ್ಡ ತಪ್ಪು ಆಗದಂತೆ ನೋಡಿಕೊಳ್ಳಿ. ಶಾರೀರಿಕ ಆಯಾಸವನ್ನು ವಿಶ್ರಾಂತಿಯಿಂದ ದೂರವಗಿಸಿ. ದುಡುಕುವ ಸನ್ನಿವೇಶದಲ್ಲಿ ಸುಮ್ಮನಿದ್ದುಬಿಡುವುದು ಉತ್ತಮ. ಯಾವ ಕೆಲಸ ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ.

ವೃಷಭ ರಾಶಿ: ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಹಣದ ಬಗ್ಗೆ ಬಹಳ ಚಿಂತಾಕ್ರಾಂತರಾಗಿದ್ದು ಅದನ್ನು ಸ್ನೇಹಿತರು ಮನಗಂಡು ಸಹಾಯ ಮಾಡುವರು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳುವುದು ಸ್ವಾರಸ್ಯಕರವಾಗಿ ಇರದು. ನಿಮ್ಮ ತಂದೆಯ ಮಾತು ನಿಮಗೆ ಅಸಹ್ಯವಾದರೂ ಅದನ್ನು ತಮಾಷೆಯಾಗಿ ತೆಗೆದುಕೊಂಡು ಸುಮ್ಮನಾಗುವಿರಿ. ನೀವು ಹನಿಮ್ಮ ಆವಿಷ್ಕಾರಕ್ಕೆ ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳಬಹುದು.

ಮಿಥುನ ರಾಶಿ: ಹದಗೆಟ್ಟ ಆರೋಗ್ಯದಲ್ಲಿ ಅಲ್ಪ ಮಟ್ಟಿನ ಚೇತರಿಗೆ ಕಾಣಿಸುವುದು. ಉದ್ಯಮಿಗಳಾಗಿರುವ ನಿಮಗೆ ಉದ್ಯಮದಲ್ಲಿ ಉಂಟಾದ ಸಣ್ಣ ಬದಲಾವಣೆಯಿಂದ ಕೆಲವು ಕೆಲಸಗಾರರು ಬಿಟ್ಟು ಹೋಗಬಹುದು.‌ ಸಂಗಾತಿಯನ್ನು ಟೀಕಿಸುತ್ತ ಇರುವಿರಿ. ರಾಜಕಾರಣಿಗಳು ತುರ್ತು ಕಾರ್ಯಪ್ರವೃತ್ತರಾಗಬೇಕಾಗುವುದು. ವಾಹನ ಖರೀದಿಗೆ ನೀವು ಮುಂದಾಗುವಿರಿ. ನಿಮ್ಮ ದ್ವಂದ್ವ ನೀತಿಯು ಮನೆಯವರಿಗೆ ಕಷ್ಟವಾಗುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ.

ಕರ್ಕಾಟಕ ರಾಶಿ: ನೀವು ಇಂದು ದೂರದ ಪ್ರಯಾಣವನ್ನು ಮಾಡಲು ಸಾಧ್ಯವಾಗದು. ಯಾರ ಬಳಿ ಏನನ್ನು ಮಾತನಾಡುತ್ತಿದ್ದೇನೆ ಎಂಬ ಜ್ಞಾನವಿರಲಿ. ಕೆಲವು ಪದಗಳೂ ನಿಮ್ಮ ಜೊತೆ ವೈಮನಸ್ಯವನ್ನು ತರುವುದು. ಹೊಸ ಉದ್ಯೋಗವನ್ನು ಹುಡುಕುವ ಭರದಲ್ಲಿ ಮೋಸಕ್ಕೆ ಸಿಲುಕಿಕೊಳ್ಳಬಹುದು. ನಿಮ್ಮ ಕರ್ತವ್ಯವನ್ನು ಮರೆಯದೇ ನಿಭಾಯಿಸಲು ಪ್ರಯತ್ನಿಸಿ. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ.

ಸಿಂಹ ರಾಶಿ: ಎಲ್ಲ ಕಡೆಯಿಂದ ನೀವು ಭಯದ ವಾತಾವರಣದಲ್ಲಿ ಇಂದು ಇರಲಿದ್ದೀರಿ. ನಿಮ್ಮ ವೃತ್ತಿಯ ಬಗ್ಗೆ ಯಾರ ಬಳಿಯೂ ಹೇಳಿಕೊಳ್ಳವುದು ಬೇಡ. ಅಸ್ಖಲಿತ ಮಾತುಗಾರಿಕೆಯಿಂದ ಶಿರೋವೇದನೆ. ನಿಮ್ಮ ವೇತನವನ್ನು ತಿಳಿದು ಆಡಿಕೊಳ್ಳಬಹುದು. ಕಾರ್ಯದ ನಿಮಿತ್ತ ಓಡಾಟದಿಂದ ಆಯಾಸವಾಗಬಹುದು. ಸಮಸ್ಯೆಯನ್ನು ಸರಳ ಮಾಡಿಕೊಂಡು ಬಗೆಹರಿಸಿಕೊಳ್ಳಿ. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಸಾಹಸ ಪ್ರವೃತ್ತಿ ಒಳ್ಳೆಯದಲ್ಲ.

ಕನ್ಯಾ ರಾಶಿ: ನಿಮ್ಮ ಅತಿಯಾದ ಸಲುಗೆಯು ದ್ವೇಷಕ್ಕೆ ಕಾರಣವೂ ಆಗಬಹುದು. ನಿಮ್ಮ ದಾಂಪತ್ಯದ‌ ಪ್ರಕರಣವು ನ್ಯಾಯಾಲಯದ ಮಟ್ಟದ ವರೆಗೆ ತಲುಪಬಹುದು. ಅಧ್ಯಾತ್ಮದ ವಿಚಾರಗಳನ್ನು ಚರ್ಚಿಸುವಿರಿ. ಇನ್ನೊಬ್ಬರ ಬಗ್ಗೆ ತೋರುವ ಸಹಾನುಭೂತಿಯು ಬೇರೆಯವರಿಗೆ ಇಷ್ಟವಾಗುವುದು. ನಿಮ್ಮ ಸಂಗಾತಿಗೆ ಒತ್ತಡಕ್ಕೆ ಇಂದಿನ ಕಾರ್ಯವನ್ನು ಮಾಡಬೇಕಾಗುವುದು. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು. ಖ್ಯಾತಿಯನ್ನು ಪಡೆಯುವ ಆಸೆಯಾಗುವುದು.

ತುಲಾ ರಾಶಿ: ನಿಮ್ಮನ್ನು ಇಷ್ಟಪಡುವವರ ಜೊತೆ ನೀವು ಕೆಲವು ಸಮಯವಿರಬೇಕಾಗುತ್ತದೆ. ನಿಮ್ಮ ಯೋಚನೆಗಳಿಗೆ ಸಂಗಾತಿಯಿಂದ ಬೆಂಬಲ ಸಿಗಬಹುದು. ಅದರ ಅಭಿವೃದ್ಧಿಗೆ ಹೆಚ್ಚಿನ ಪ್ರಯತ್ನವೇ ಆಗಬೇಕಾದೀತು. ಉದ್ಯೋಗದಲ್ಲಿ ಭಡ್ತಿ ಸಿಗುವ ವಿಚಾರವು ನಿಮಗೆ ಸ್ನೇಹಿತರಿಂದ ತಿಳಿಯಲಿದೆ. ಯಾರ ಬಗೆಗಿನ‌ ತೀರ್ಮಾನವನ್ನೂ ಏಕಪಕ್ಷೀಯವಾಗಿ ತೆಗೆದುಕೊಳ್ಳುವುದು ಬೇಡ. ಸುಳ್ಳನ್ನು ಹೇಳುವುದು ಗೊತ್ತಾದೀತು. ದಿನಸಿ ವಸ್ತುಗಳ ಖರೀದಿಯಲ್ಲಿ ಮೋಸವಾಗಲಿದೆ.

ವೃಶ್ಚಿಕ ರಾಶಿ: ಇಂದು ಅಪರಿಚಿತ ಕರೆಗಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ಸಂಪೂರ್ಣ ಮಾಹಿತಿಯ ಜೊತೆ ಕೆಲಸಕ್ಕೆ ಮುಂದುವರಿಯಿರಿ. ವ್ಯವಹಾರದಲ್ಲಿ ನಿಮಗೆ ತಿಳಿವಳಿಕೆ ಕೊರತೆ ಎಂದು ಗೊತ್ತಾಗಬಹುದು. ಸಂಗಾತಿಯ ಕಾರಣದಿಂದ ನಿಮಗೂ ಗೌರವ ಸಿಗಲಿದೆ. ವಿವಾಹಜೀವನದ ಚಿಂತೆ ನಿಮ್ಮನ್ನು ಕಾಡಬಹುದು. ಮಹಿಳೆಯ ಕಾರಣದಿಂದ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆಪ್ತರ ಮೇಲೆ‌ ಅಪನಂಬಿಕೆ ಇಟ್ಟು ಎಲ್ಲವೂ ಹಾಳಾಗುವುದು.

ಧನು ರಾಶಿ: ನಿಮಗೆ ಇಷ್ಟವಿಲ್ಲದ ವಿಚಾರದಲ್ಲಿ ಚರ್ಚೆ ನಾಡೆಯುವುದು. ಅದನ್ನು ನಿಮಗೆ ಸಹಿಸಲಾಗದು. ಅಧರ್ಮ ಮಾರ್ಗದಲ್ಲಿ ನಡೆಯುವ ಮನಸ್ಸು ಮಾಡುವಿರಿ. ಖರ್ಚು ಹೆಚ್ಚಾಗಬಹುದು. ವಾಹನದ ದುರಸ್ತಿಯ ಕಾರಣ ಆದಾಯಕ್ಕೆ ತೊಂದರೆ. ಹಳೆಯ ಪ್ರೇಮವು ನಿಮ್ಮನ್ನು ಕಾಡಬಹುದು. ಸಂಗಾತಿಯನ್ನು ಪ್ರೀತಿಸುವಿರಿ. ನಿಮ್ಮ ವಿವಾಹ ನಿಶ್ಚಯದಿಂದ ಸಂತಸ‌ ಹೊರಗಿನ ಆಹಾರದಿಂದ ಸಂತೋಷವಾಗಬಹುದು. ಯಾವ ಸಂದರ್ಭದಲ್ಲೊಯೂ ಉದ್ವೇಗಕ್ಕೆ ಒಳಗಾಗುವುದು ಬೇಡ.

ಮಕರ ರಾಶಿ: ಮಾನಸಿಕ ಒತ್ತಡವು ನಿಮ್ಮ ನಿದ್ರಾಭಂಗಕ್ಕೆ ಕಾರಣವಾಗಲಿದೆ‌. ನಿಮಗೆ ಬರಬೇಕಾದ ಹಣವು ಬರಲಿದೆ. ಹಣದಿಂದ ಎಲ್ಲವೂ ಅಸಾಧ್ಯ ಎಂದು ತಿಳಿದು ಹಣದ ಮೋಹವು ಕಡಿಮೆ ಆದೀತು. ಉದ್ವೇಗದಲ್ಲಿ ಏನ್ನಾದರೂ ಹೇಳಿ ಬಿಡುವಿರಿ. ಆಪ್ತರಿಗೆ ಧನಸಹಾಯ ಮಾಡಬೇಕಾದೀತು. ಅನ್ಯರನ್ನು ಹಾಸ್ಯ ಮಾಡಬಹುದು. ದ್ರವ ಪದಾರ್ಥದ‌ ಮಾರಟದಿಂದ ಲಾಭ. ನಿಮ್ಮ ಕುಂದುಕೊರೆತಗಳ ಬಗ್ಗೆ ಲಕ್ಷ್ಯ ವಹಿಸಿ. ಪ್ರಭಾವಿ ವ್ಯಕ್ತಿಗಳಿಂದ ತೊಂದರೆಯು ದೂರಾಗಬಹುದು. ನಿಮಗೆ ಹಿಡಿಸದ ವಿಚಾರದಲ್ಲಿ ಪ್ರಯತ್ನವನ್ನು ಮುಂದುವರಿಸುವುದು ಯೋಗ್ಯವಾಗದು.

ಕುಂಭ ರಾಶಿ: ನಿಮಗೆ ನಿಮ್ಮ ದಿನ ನಿತ್ಯದ ಕೆಲಸಗಳೇ ಮುಖ್ಯವಾಗಿ ಉಳಿದವು ನಗಣ್ಯವೆನಿಸೀತು. ಮೋಜಿನಲ್ಲಿ ಹಣವನ್ನು ಕಳೆದುಕೊಳ್ಳುವಿರಿ. ವೃತ್ತಿಯನ್ನು ಬದಲಿಸುವ ಆಲೋಚನೆಯನ್ನು ಮನೆಯಲ್ಲಿ ಹಂಚಿಕೊಳ್ಳುವಿರಿ.‌ ಗೃಹನಿರ್ಮಾಣಕ್ಕೆ ಚಾಲನೆ ಸಿಗುವುದು. ಹಿತಶತ್ರುಗಳ ಬಗ್ಗೆ ಜಾಗೃತರಾಗಿರುವಿರಿ. ನಿಮ್ಮ ಕೆಲಸವು ನ್ಯಾಯ ಸಮ್ಮತವಾಗಿ ಇರಿ. ನೀವು ಕಾಲ್ಪನಿಕ ಪ್ರಪಂಚಕ್ಕೆ ಪ್ರಯಾಣಿಸುವಿರಿ. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. ಪುಣ್ಯಾತ್ಮರ ಸಂಗ ಅನಿರೀಕ್ಷಿತವಾಗಿ ಸಿಗುವುದು.

ಮೀನ ರಾಶಿ: ಇಂದು ನಿಮ್ಮ ಮಕ್ಕಳ ಜೀವನವನ್ನು ಕಂಡು ಖೇದವಾಗುವುದು. ಯಾರ ಜೊತೆಗೂ ವಿವಾದವನ್ನು ಮಾಡಲು ಹೋಗಬೇಡಿ. ನೀವು ಇಂದು ನಿಯಮಕ್ಕೆ ಬದ್ಧರಾಗಿ ಕಾರ್ಯವನ್ನು ಮಾಡುವಿರಿ. ಸ್ವತಂತ್ರ ಆಲೋಚನೆಗಳು ನಿಮಗೆ ಖುಷಿ ಕೊಡುವುದು. ಕಲಾವಿದರಿಗೆ ಹಲವು ಕಡೆಗಳಿಂದ ಒತ್ತಡ. ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಹಿರಿಯರ ಚಿಂತನೆ ನಡೆಸುವಿರಿ. ವ್ಯಾವಹಾರಿಕ ಮಾತುಗಳನ್ನು ಬಿಟ್ಟು ಬೇರೆ ಮಾತನಾಡಲು ಸಂಯಮವಿರದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಬೇಕು.

ಲೋಹಿತ್ ಹೆಬ್ಬಾರ್-8762924271 (what’s app only)

Published On – 1:01 am, Tue, 28 July 26

Source link

ಸಿಜೆಪಿ ಎಚ್ಚರಿಕೆ ಬೆನ್ನಲ್ಲೇ ಪ್ರತಿಭಟನಾರರ ಮೇಲಿನ ಕೇಸ್ ಹಿಂಪಡೆಯುವುದಾಗಿ ಬಿಹಾರ ಸರ್ಕಾರ ಘೋಷಣೆ – Kannada News | Bihar Announces to Withdraw Of Cases Against Students Protesters after CJP Warning

ಪಾಟ್ನಾ, ಜುಲೈ 27: ನೀಟ್ (NEET-UG) ಪರೀಕ್ಷೆಯ ಅಕ್ರಮಗಳು ಮತ್ತು ಇತರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ತಕ್ಷಣವೇ ಹಿಂಪಡೆಯಲಾಗುವುದು ಎಂದು ಬಿಹಾರ ಸರ್ಕಾರ ಘೋಷಿಸಿದೆ. ಇದರ ಜೊತೆಗೆ, ಪ್ರತಿಭಟನೆಯ ವೇಳೆ ವಶಕ್ಕೆ ಪಡೆಯಲಾದ ಅಥವಾ ಬಂಧಿಸಲಾದ ವ್ಯಕ್ತಿಗಳನ್ನು ತಕ್ಷಣವೇ ಬಿಡುಗಡೆ ಮಾಡಲಾಗುವುದು. ಮುಂದಿನ ದಿನಗಳಲ್ಲೂ ಅವರ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಬಿಹಾರ ಸರ್ಕಾರ ಇಂದು ರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

“ಜುಲೈ 26ರ ಸಂಜೆ 6 ಗಂಟೆಗೆ ಮುಂಚಿತವಾಗಿ ಈ ಪ್ರತಿಭಟನೆಗಳಲ್ಲಿ ಭಾಗವಹಿಸಿದ ಕಾರಣಕ್ಕಾಗಿ ವ್ಯಕ್ತಿಗಳ ವಿರುದ್ಧ ದಾಖಲಾಗಿರುವ ಎಲ್ಲಾ ಚಾಲ್ತಿಯಲ್ಲಿರುವ ಎಫ್‌ಐಆರ್‌ಗಳು, ಕ್ರಿಮಿನಲ್ ದೂರುಗಳು ಅಥವಾ ಶೋಕಾಸ್ ನೋಟಿಸ್‌ಗಳನ್ನು ಹಿಂಪಡೆಯುವ ಕಾನೂನು ಪ್ರಕ್ರಿಯೆಯನ್ನು ತಕ್ಷಣವೇ ಪ್ರಾರಂಭಿಸಲಾಗುವುದು” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಬಿಹಾರದಾದ್ಯಂತ ಸುಮಾರು 700 ಜನರ ಬಂಧನ:

ನೀಟ್ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ರಾಜ್ಯವ್ಯಾಪಿ ಬಂದ್‌ ಜಾರಿಗೆ ತರಲು ಯತ್ನಿಸಿದ 694 ಜನರನ್ನು ಕಳೆದ ವಾರ ವಶಕ್ಕೆ ಪಡೆಯಲಾಗಿತ್ತು ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ 339 ಜನರು ಅಪ್ರಾಪ್ತರು ಮತ್ತು ವಿದ್ಯಾರ್ಥಿಗಳಾಗಿದ್ದು, ವಯಸ್ಸಿನ ಪರಿಶೀಲನೆಯ ನಂತರ ಅವರನ್ನು ಬಿಡುಗಡೆ ಮಾಡಲಾಗಿತ್ತು. ಈ ಮಧ್ಯೆ, ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಉಳಿದ 355 ಬಂಧಿತರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿತ್ತು.

ಇದನ್ನೂ ಓದಿ: ಕೇಸ್​ಗಳನ್ನು ಹಿಂಪಡೆಯದಿದ್ದರೆ ನಾಳೆಯಿಂದ ಮತ್ತೆ ಪ್ರತಿಭಟನೆ; ಕೇಂದ್ರ ಸರ್ಕಾರಕ್ಕೆ ಸಿಜೆಪಿ ಎಚ್ಚರಿಕೆ

ಜುಲೈ 25ರಂದು ನಡೆದ ಬಂದ್ ವೇಳೆ ನಡೆದ ಘರ್ಷಣೆಯಲ್ಲಿ 91 ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಬಿಹಾರ ಪೊಲೀಸರು ಮಾಹಿತಿ ನೀಡಿದ್ದಾರೆ. 13 ಜನಸಾಮಾನ್ಯರಿಗೂ ಗಾಯಗಳಾಗಿದ್ದವು. ಪ್ರತಿಭಟನಾಕಾರರು ಸರ್ಕಾರದ 13 ವಾಹನಗಳನ್ನು ಜಖಂಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಜೆಪಿ ಎಚ್ಚರಿಕೆ:

“ಆತ್ಮೀಯ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೇ, ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೊಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದದ ಸಂಪೂರ್ಣ ಉಲ್ಲಂಘನೆಯಾಗುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಬಿಹಾರ ಮತ್ತು ಬಂಗಾಳದಲ್ಲಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ನೂರಾರು ಜನರಿಗೆ ಕಿರುಕುಳ ನೀಡಲಾಗುತ್ತಿದೆ. ದೆಹಲಿಯಲ್ಲಿ ಪ್ರತಿಭಟನಾಕಾರರಿಗೆ ಅಗತ್ಯ ನೆರವು ನೀಡುತ್ತಿದ್ದ ಸ್ವಯಂಸೇವಕರನ್ನು ವಶಕ್ಕೆ ಪಡೆಯುತ್ತಿರುವ ಬಗ್ಗೆ ಹಲವು ವರದಿಗಳು ಬರುತ್ತಿವೆ” ಎಂದು ಅಶುತೋಶ್ ರಾಂಕಾ ಹೇಳಿದ್ದರು.

ಇದನ್ನೂ ಓದಿ: ಪ್ರತಿಭಟನಾಕಾರರ ಕಾನೂನು ನೆರವಿಗೆ ಸಿಜೆಪಿಯಿಂದ ವೆಬ್​ಸೈಟ್ ಆರಂಭ; 1 ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್

“ಪ್ರತಿಭಟನಾಕಾರರ ಮೇಲಿನ ಎಲ್ಲಾ ಎಫ್‌ಐಆರ್‌ಗಳನ್ನು ತಕ್ಷಣವೇ ಹಿಂಪಡೆಯಬೇಕು, ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಬೇಕು. ನಮ್ಮ ಒಪ್ಪಂದದಂತೆ ದೆಹಲಿ ಪೊಲೀಸರು ಅಥವಾ ಕೇಂದ್ರ ತನಿಖಾ ಸಂಸ್ಥೆಗಳು ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳ ಪೊಲೀಸರು ಭವಿಷ್ಯದಲ್ಲಿ ಯಾವುದೇ ಎಫ್‌ಐಆರ್ ದಾಖಲಿಸಬಾರದು ಎಂದು ನಾವು ಆಗ್ರಹಿಸುತ್ತೇವೆ. ಅದಕ್ಕೆ ತಪ್ಪಿದರೆ ನಾವು ಮತ್ತೆ ಧರಣಿ ಕುಳಿತುಕೊಳ್ಳಲು ನಿರ್ಧರಿಸಬೇಕಾಗುತ್ತದೆ. ಕಾನೂನು ಪ್ರಕರಣಗಳಿಗೆ ಸಂಬಂಧಿಸಿದ ಲಿಖಿತ ಒಪ್ಪಂದದ ಪ್ರತಿ ಹಾಗೂ ಭಾರತ ಸರ್ಕಾರದೊಂದಿಗಿನ ಕಾಲಮಿತಿಯ ವಿವರಗಳನ್ನು ನಾಳೆಯೊಳಗೆ ನಮಗೆ ತಲುಪಿಸಬೇಕೆಂದು ನಾವು ಆಗ್ರಹಿಸುತ್ತೇವೆ” ಎಂದು ಅವರು ಬರೆದಿದ್ದರು. ಅದರ ಬೆನ್ನಲ್ಲೇ ಬಿಹಾರ ಸರ್ಕಾರದ ಈ ನಿರ್ಧಾರ ತೆಗೆದುಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಡ್ರ್ಯಾಗನ್’ ಶೂಟಿಂಗ್ ವೇಳೆ ಜೂ. ಎನ್​ಟಿಆರ್​ ಭುಜಕ್ಕೆ ಗಾಯ; 2 ತಿಂಗಳು ವಿಶ್ರಾಂತಿ ಅಗತ್ಯ – Kannada News | Jr NTR sustains Shoulder Injury on Prashanth Neel Dragon sets advised rest

ನಟ ಜೂನಿಯರ್ ಎನ್‌ಟಿಆರ್ (Jr NTR) ಅವರಿಗೆ ಶೂಟಿಂಗ್ ವೇಳೆ ಭುಜಕ್ಕೆ ಗಾಯವಾಗಿದ್ದು (Shoulder Injury), ವೈದ್ಯರು ಅವರಿಗೆ 6ರಿಂದ 8 ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಅವರು ಆ್ಯಕ್ಷನ್-ಕಟ್ ಹೇಳುತ್ತಿರುವ ಬಹುನಿರೀಕ್ಷಿತ ‘ಡ್ರ್ಯಾಗನ್’ (Dragon) ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಜೂ. ಎನ್​ಟಿಆರ್ ಅವರಿಗೆ ಗಾಯ ಆಗಿದೆ ಎಂಬ ವಿಷಯ ತಿಳಿದು ಅಭಿಮಾನಿಗಳಿಗೆ ಗಾಬರಿ ಆಗಿತ್ತು. ಆದರೆ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಅವರ ಟೀಮ್ ಹೇಳಿದೆ.

ಜೂನಿಯರ್ ಎನ್​ಟಿಆರ್ ಹೆಲ್ತ್ ಅಪ್​ಡೇಟ್:

ಸಂಜೆಯ ವೇಳೆಗೆ ನಡೆದ ಈ ಅಪಘಾತದ ನಂತರ ಜೂನಿಯರ್ ಎನ್‌ಟಿಆರ್ ಅವರನ್ನು ತಕ್ಷಣವೇ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಡಾ. ಜೆ. ಮಧುಸೂದನ್ ರಾವ್ ಹಾಗೂ ಡಾ. ಆರ್.ಎ. ಪೂರ್ಣಚಂದ್ರ ತೇಜಸ್ವಿ ಅವರನ್ನೊಳಗೊಂಡ ವೈದ್ಯರ ತಂಡವು ನಟನಿಗೆ ಸಂಪೂರ್ಣ ತಪಾಸಣೆ ನಡೆಸಿದ್ದು, ಬೇಗನೆ ಗುಣಮುಖರಾಗಲು ಕನಿಷ್ಠ 6ರಿಂದ 8 ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವುದು ಅಗತ್ಯ ಎಂದು ತಿಳಿಸಿದೆ.

ಅಭಿಮಾನಿಗಳಿಗೆ ಧೈರ್ಯ ಹೇಳಿದ ತಂಡ:

ಜೂ. ಎನ್‌ಟಿಆರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಮೂಡದಂತೆ ಚಿತ್ರತಂಡ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ‘ಜೂನಿಯರ್ ಎನ್‌ಟಿಆರ್ ಅವರಿಗೆ ಸಂಜೆ ಶೂಟಿಂಗ್ ವೇಳೆ ಭುಜಕ್ಕೆ ಗಾಯವಾಗಿರುವುದು ವಿಷಾದನೀಯ. ವೈದ್ಯರ ತಂಡ ತಪಾಸಣೆ ನಡೆಸಿದ್ದು, ಅವರು ಸಂಪೂರ್ಣ ಗುಣಮುಖರಾಗಲು 6ರಿಂದ 8 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ. ಆತಂಕಪಡುವ ಅಗತ್ಯವಿಲ್ಲ, ಅವರು ವೈದ್ಯರ ಸೂಕ್ತ ಉಸ್ತುವಾರಿಯಲ್ಲಿದ್ದಾರೆ’ ಎಂದು ತಿಳಿಸಲಾಗಿದೆ.

ಬಾಲಕೃಷ್ಣ ಅವರಿಗೂ ಕಾಲಿಗೆ ಗಾಯವಾಗಿತ್ತು:

ಇತ್ತೀಚೆಗಷ್ಟೇ ಹಿರಿಯ ನಟ ನಂದಮೂರಿ ಬಾಲಕೃಷ್ಣ ಅವರು ಕೂಡ ತಮ್ಮ ಹೊಸ ಸಿನಿಮಾದ ಶೂಟಿಂಗ್ ವೇಳೆ ಕಾಲಿಗೆ ಗಾಯಮಾಡಿಕೊಂಡಿದ್ದರು. ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಕೃಷ್ಣ ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಇದೀಗ ಎನ್‌ಟಿಆರ್ ಕೂಡ ಕೆಲವು ವಾರಗಳ ಕಾಲ ಸಿನಿಮಾದ ಕೆಲಸಗಳಿಂದ ದೂರ ಉಳಿದು ವಿಶ್ರಾಂತಿ ಪಡೆಯಲಿದ್ದಾರೆ.

ಇದನ್ನೂ ಓದಿ: ಅಂದು ಬಾಡಿ ಶೇಮಿಂಗ್ ಎದುರಿಸಿದ್ದ ಜೂ. ಎನ್‌ಟಿಆರ್; ಈಗ ಕಟ್ಟುಮಸ್ತಾದ ಫೋಟೋ ವೈರಲ್

‘ಡ್ರ್ಯಾಗನ್’ ಸಿನಿಮಾ ತೆರೆಕಾಣಲು ಇನ್ನೂ ಸುಮಾರು 10 ತಿಂಗಳ ಕಾಲಾವಕಾಶ ಇರುವುದರಿಂದ, ಈ ಬ್ರೇಕ್‌ನಿಂದ ಸಿನಿಮಾದ ಒಟ್ಟಾರೆ ಕೆಲಸಗಳಿಗೆ ದೊಡ್ಡ ಮಟ್ಟದ ಅಡಚಣೆಯಾಗುವುದಿಲ್ಲ ಎನ್ನಲಾಗಿದೆ. ಈ ಬಿಡುವಿನ ಸಮಯದಲ್ಲಿ ಜೂ. ಎನ್‌ಟಿಆರ್ ಅವರು ಹೊಸ ಕಥೆಗಳನ್ನು ಕೇಳಲು ಹಾಗೂ ವಿಶ್ರಾಂತಿ ಪಡೆಯಲು ಸಮಯ ಮೀಸಲಿಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

CWG 2026: ವೇಟ್‌ಲಿಫ್ಟಿಂಗ್‌ನಲ್ಲೇ ಭಾರತಕ್ಕೆ 5ನೇ ಪದಕ; ಕಂಚು ಗೆದ್ದ ಬಿಂದಿಯಾರಾಣಿ – Kannada News | Bindyarani Devi Claims Bronze in 2026 CWG Weightlifting: India’s 6th Medal!

ಇದು ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಲಭಿಸಿದ ಐದನೇ ಪದಕವಾಗಿದೆ. ಬಿಂದಿಯಾರಾಣಿ ದೇವಿ ಅವರಿಗೂ ಮೊದಲು ಜ್ಞಾನೇಶ್ವರಿ ಯಾದವ್ 53 ಕೆಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ, ಮೀರಾಬಾಯಿ ಚಾನು ಚಿನ್ನದ ಪದಕ, ರಿಷಿಕಾಂತ ಸಿಂಗ್ ಚಾನ್‌ಬಮ್ ಬೆಳ್ಳಿ ಪದಕ, ರಾಜ ಮುತ್ತುಪಾಂಡಿ ಬೆಳ್ಳಿ ಪದಕ, ಝಂಡು ಕುಮಾರ್ ಕಂಚಿನ ಪದಕ ಗೆದ್ದಿದ್ದರು(PC-PTI).

Source link

ಕೇಸ್​ಗಳನ್ನು ಹಿಂಪಡೆಯದಿದ್ದರೆ ನಾಳೆಯಿಂದ ಮತ್ತೆ ಪ್ರತಿಭಟನೆ; ಕೇಂದ್ರ ಸರ್ಕಾರಕ್ಕೆ ಸಿಜೆಪಿ ಎಚ್ಚರಿಕೆ – Kannada News | CJP warns of fresh protests from Tomorrow if cases against protesters not withdrawn

ನವದೆಹಲಿ, ಜುಲೈ 27: ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲಿನ ಎಫ್‌ಐಆರ್‌ಗಳನ್ನು ಹಿಂಪಡೆಯುವ ಬೇಡಿಕೆ ಈಡೇರದಿದ್ದರೆ ಹೊಸದಾಗಿ ಮತ್ತೆ ಪ್ರತಿಭಟನೆ ಆರಂಭಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಸಿದೆ. ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ, ದೆಹಲಿಯಲ್ಲೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ ಹೇಳಿದ್ದಾರೆ. ಕೇಂದ್ರ ಸರ್ಕಾರ ಸಂಧಾನದ ಮಾತುಕತೆಯ ವೇಳೆ ಭರವಸೆ ನೀಡಿದಂತೆ ಪ್ರತಿಭಟನಾಕಾರರ ಮೇಲೆ ಯಾವುದೇ ಎಫ್​ಐಆರ್​ ಹಾಕದಿದ್ದರೆ ಮಾತ್ರ ಪ್ರತಿಭಟನೆಯನ್ನು ನಿಲ್ಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ಚಳವಳಿಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿಗಳ ಗುಂಪಿನ ಪ್ರಮುಖ ಬೇಡಿಕೆಗಳಲ್ಲೊಂದಾದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಬಾರದು ಎಂಬ ಒಪ್ಪಂದವನ್ನು ಸರ್ಕಾರ ಉಲ್ಲಂಘಿಸಿದೆ ಎಂದು ಸಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

“ಆತ್ಮೀಯ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೇ, ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೊಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದದ ಸಂಪೂರ್ಣ ಉಲ್ಲಂಘನೆಯಾಗುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಬಿಹಾರ ಮತ್ತು ಬಂಗಾಳದಲ್ಲಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ನೂರಾರು ಜನರಿಗೆ ಕಿರುಕುಳ ನೀಡಲಾಗುತ್ತಿದೆ. ದೆಹಲಿಯಲ್ಲಿ ಪ್ರತಿಭಟನಾಕಾರರಿಗೆ ಅಗತ್ಯ ನೆರವು ನೀಡುತ್ತಿದ್ದ ಸ್ವಯಂಸೇವಕರನ್ನು ವಶಕ್ಕೆ ಪಡೆಯುತ್ತಿರುವ ಬಗ್ಗೆ ಹಲವು ವರದಿಗಳು ಬರುತ್ತಿವೆ” ಎಂದು ಅಶುತೋಶ್ ರಾಂಕಾ ಸಾಮಾಜಿಕ ಜಾಲತಾಣ ಎಕ್ಸ್​​ನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾಕಾರರ ಕಾನೂನು ನೆರವಿಗೆ ಸಿಜೆಪಿಯಿಂದ ವೆಬ್​ಸೈಟ್ ಆರಂಭ; 1 ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್

“ಪ್ರತಿಭಟನಾಕಾರರ ಮೇಲಿನ ಎಲ್ಲಾ ಎಫ್‌ಐಆರ್‌ಗಳನ್ನು ತಕ್ಷಣವೇ ಹಿಂಪಡೆಯಬೇಕು, ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಬೇಕು. ನಮ್ಮ ಒಪ್ಪಂದದಂತೆ ದೆಹಲಿ ಪೊಲೀಸರು ಅಥವಾ ಕೇಂದ್ರ ತನಿಖಾ ಸಂಸ್ಥೆಗಳು ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳ ಪೊಲೀಸರು ಭವಿಷ್ಯದಲ್ಲಿ ಯಾವುದೇ ಎಫ್‌ಐಆರ್ ದಾಖಲಿಸಬಾರದು ಎಂದು ನಾವು ಆಗ್ರಹಿಸುತ್ತೇವೆ. ಅದಕ್ಕೆ ತಪ್ಪಿದರೆ ನಾವು ಮತ್ತೆ ಧರಣಿ ಕುಳಿತುಕೊಳ್ಳಲು ನಿರ್ಧರಿಸಬೇಕಾಗುತ್ತದೆ. ಕಾನೂನು ಪ್ರಕರಣಗಳಿಗೆ ಸಂಬಂಧಿಸಿದ ಲಿಖಿತ ಒಪ್ಪಂದದ ಪ್ರತಿ ಹಾಗೂ ಭಾರತ ಸರ್ಕಾರದೊಂದಿಗಿನ ಕಾಲಮಿತಿಯ ವಿವರಗಳನ್ನು ನಾಳೆಯೊಳಗೆ ನಮಗೆ ತಲುಪಿಸಬೇಕೆಂದು ನಾವು ಆಗ್ರಹಿಸುತ್ತೇವೆ” ಎಂದು ಅವರು ಬರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚೀನಾದಿಂದ ಭಾರತಕ್ಕೆ ಟಿಬಿಎಂ ಆಘಾತ; ಮಹತ್ವದ ಪ್ರಾಜೆಕ್ಟ್​ಗಳಿಗೆ ತೊಡರುಗಾಲು; ಭಾರತದ ಹೊಸ ಮಾಸ್ಟರ್ ಪ್ಲಾನ್ – Kannada News | India’s master plan to get rid off China dependency after TBM shock

ಕೋಲ್ಕತಾದಲ್ಲಿ ಬಳಸಲಾದ ಟಿಬಿಎಂ ಯಂತ್ರದ ಚಿತ್ರImage Credit source: PTI

ನವದೆಹಲಿ, ಜುಲೈ 27: ಮೆಟ್ರೋ, ರೈಲ್ವೆ ಮತ್ತು ಹೈವೇ ಸುರಂಗ ಯೋಜನೆಗಳಲ್ಲಿ ಬಳಸಲಾಗುವ ಅತ್ಯಾಧುನಿಕ ಟನಲ್ ಬೋರಿಂಗ್ ಮೆಷಿನ್‌ಗಳ (TBM) ಪೂರೈಕೆಯಲ್ಲಿ ಚೀನಾ ಅಡ್ಡಗಾಲು ಹಾಕಿದ್ದು ಭಾರತ ಹೊಸ ಮಾಸ್ಟರ್ ಪ್ಲಾನ್ ಹಾಕಿದೆ. ಭಾರತ ಸರ್ಕಾರವು ತನ್ನ ಮೂಲಸೌಕರ್ಯ (Infrastructure) ವಲಯವನ್ನು ಚೀನಾದ ಮೇಲಿನ ಅವಲಂಬನೆಯಿಂದ ಮುಕ್ತಗೊಳಿಸಲು ಸಮರೋಪಾದಿಯ ಕೆಲಸ ಆರಂಭಿಸಿದೆ. ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರದ ದೊಡ್ಡ ದೊಡ್ಡ ಪ್ರಾಜೆಕ್ಟ್​ಗಳಲ್ಲಿ ಚೀನಾದ (China) ಯಂತ್ರೋಪಕರಣಗಳ ಬಳಕೆ ವ್ಯಾಪಕವಾಗಿದೆ. ಅವುಗಳ ರಫ್ತಿಗೆ ಚೀನಾ ಅಡ್ಡಗಾಲು ಹಾಕಿದ್ದು ಭಾರತವನ್ನು ಸ್ವಾವಲಂಬನೆಯ ದಾರಿ ಹಿಡಿಯುವಂತೆ ಮಾಡಿದೆ.

ಏನಿದು TBM ಆಘಾತ?

ಭಾರತದ ಪ್ರಮುಖ ಮೆಟ್ರೋ ಯೋಜನೆಗಳು (ಬೆಂಗಳೂರು, ಮುಂಬೈ, ಡೆಹ್ರಾಡೂನ್ ಮುಂತಾದವು) ಮತ್ತು ಹಿಮಾಲಯನ್ ಪ್ರದೇಶದ ಸುರಂಗ ಯೋಜನೆಗಳಿಗಾಗಿ ಚೀನಾದಲ್ಲಿ ತಯಾರಾದ TBM ಯಂತ್ರಗಳನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೆ, ಚೀನಾದ ರಫ್ತು ನಿರ್ಬಂಧಗಳಿಂದಾಗಿ ಈ ಸುರಂಗ ಕೊರಕ ಯಂತ್ರಗಳು ಚೀನಾದಿಂದ ಹೊರಗೆ ಬರಲೇ ಇಲ್ಲ.

ಇದರಿಂದಾಗಿ ಭಾರತದ ಹಲವು ಪ್ರಾಜೆಕ್ಟ್​ಗಳ ಕೆಲಸ ನಿಂತುಹೋಗುವ ಅಥವಾ ತೀವ್ರ ವಿಳಂಬವಾಗುವ ಭೀತಿ ಎದುರಾಯಿತು. ಈ ‘TBM ಆಘಾತ’ ಭಾರತಕ್ಕೆ ಮೂಲಸೌಕರ್ಯ ವಲಯದಲ್ಲಿ ಚೀನಾದ ಮೇಲಿನ ಅತಿಯಾದ ಅವಲಂಬನೆಯ ಅಪಾಯವನ್ನು ಮನವರಿಕೆ ಮಾಡಿಕೊಟ್ಟಿತು.

ಇದನ್ನೂ ಓದಿ: ಚೀನಾದ ಉತ್ಪನ್ನಗಳು ಇಷ್ಟು ಕಡಿಮೆ ಬೆಲೆಗೆ ಸಿಗುವುದು ಹೇಗೆ? ಚೀನೀ ಸಿಇಒವೊಬ್ಬರು ಬಿಚ್ಚಿಟ್ಟ ವಾಸ್ತವ ಇದು

ಸ್ವಾವಲಂಬನೆಗೆ ಭಾರತದ ಪ್ರಮುಖ ಕಾರ್ಯತಂತ್ರಗಳು

  1. ದೇಶೀಯವಾಗಿ ತಯಾರಿಕೆಗೆ ಉತ್ತೇಜನ: ಭಾರತವು ಈಗ ದೇಶೀಯವಾಗಿಯೇ (Indigenous) ಅತ್ಯಾಧುನಿಕ ಸುರಂಗ ಕೊರೆಯುವ ಯಂತ್ರಗಳನ್ನು (TBMs) ಹಾಗೂ ಭಾರೀ ನಿರ್ಮಾಣ ಉಪಕರಣಗಳನ್ನು ತಯಾರಿಸಲು (Local Manufacturing) ಸ್ಥಳೀಯ ಮತ್ತು ಜಾಗತಿಕ ಕಂಪನಿಗಳೊಂದಿಗೆ (ಜಪಾನ್, ಜರ್ಮನಿ) ಸಹಭಾಗಿತ್ವ ವಹಿಸುತ್ತಿದೆ.
  2. ಪೂರೈಕೆ ಸರಪಳಿ ವೈವಿಧ್ಯೀಕರಣ: ಚೀನಾದ ಕಂಪನಿಗಳಿಗೆ ಪರ್ಯಾಯವಾಗಿ ಜಪಾನ್, ಜರ್ಮನಿ ಮತ್ತು ಯುರೋಪಿಯನ್ ಒಕ್ಕೂಟದ ಪ್ರಮುಖ ಯಂತ್ರೋಪಕರಣ ತಯಾರಕ ಸಂಸ್ಥೆಗಳಿಗೆ (Diversifying Supply Chain) ಭಾರತ ಆದ್ಯತೆ ನೀಡುತ್ತಿದೆ.
  3. PLI ಯೋಜನೆಗಳು: ಭಾರೀ ಯಂತ್ರೋಪಕರಣಗಳು ಮತ್ತು ನಿರ್ಮಾಣ ಉಪಕರಣಗಳ ಸ್ಥಳೀಯ ಉತ್ಪಾದನೆಯನ್ನು ಉತ್ತೇಜಿಸಲು ಸರ್ಕಾರ ವಿಶೇಷ ಸಬ್ಸಿಡಿ ಮತ್ತು ನಿಯಮಾವಳಿಗಳ ಬೆಂಬಲ ನೀಡುತ್ತಿದೆ.
  4. ಸುರಕ್ಷತೆಯ ಪರಿಶೀಲನೆ, ಕಟ್ಟುನಿಟ್ಟಿನ ನಿಯಮ: ಮೂಲಸೌಕರ್ಯ ಯೋಜನೆಗಳಲ್ಲಿ ಬಳಸುವ ವಿದೇಶಿ ತಂತ್ರಜ್ಞಾನ ಮತ್ತು ಉಪಕರಣಗಳ ಮೇಲೆ, ಅದರಲ್ಲೂ ವಿಶೇಷವಾಗಿ ಚೀನಾದಿಂದ ಬರುವ ಯಂತ್ರಗಳ ಸಾಫ್ಟ್‌ವೇರ್ ಮತ್ತು ಹಾರ್ಡ್‌ವೇರ್‌ಗಳ ಮೇಲೆ ಕಟ್ಟುನಿಟ್ಟಿನ ಭದ್ರತಾ ತಪಾಸಣೆಗಳನ್ನು ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: ಬ್ರಹ್ಮಪುತ್ರಾ ನದಿಗೆ ಚೀನಾ ಅಡ್ಡಗಾಲು; ಅಣೆಕಟ್ಟೆ ಜಾಗವೇ ಬಹಳ ಡೇಂಜರ್- ಸ್ವತಃ ಚೀನೀ ವಿಜ್ಞಾನಿಗಳಿಂದಲೇ ವರದಿ

ಮೂಲಸೌಕರ್ಯ ಯೋಜನೆಗಳು ಯಾವುದೇ ಜಾಗತಿಕ ಅಥವಾ ರಾಜಕೀಯ ಬಿಕ್ಕಟ್ಟುಗಳಿಂದ ಸ್ಥಗಿತಗೊಳ್ಳಬಾರದು ಮತ್ತು ಮುಂಬರುವ ದಶಕಗಳಲ್ಲಿ ದೇಶದ ಮೆಟ್ರೋ, ರೈಲ್ವೆ ಹಾಗೂ ರಕ್ಷಣಾತ್ಮಕ ಸುರಂಗ ನಿರ್ಮಾಣಗಳು’ಆತ್ಮನಿರ್ಭರ’ (ಸ್ವಾವಲಂಬಿ) ತಂತ್ರಜ್ಞಾನದ ಆಧಾರದ ಮೇಲೆ ನಡೆಯಬೇಕು ಎಂಬುದು ಭಾರತ ಸರ್ಕಾರದ ಮುಖ್ಯ ಗುರಿಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version