ಬಿಎಸ್ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಅಮಿತ್ ಶಾ ಭಾಗಿ, ಕೇಸರಿಮಯವಾದ ನಗರ – Kannada News | BSY Abhimanostava in Chitradurga: Amit Shah to Attend Mega Event; City Turns Saffron for Yediyurappa’s Grand Celebration
ಚಿತ್ರದುರ್ಗ, ಮೇ 8: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ‘ಬಿಎಸ್ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಅದ್ದೂರಿಯಾಗಿ ಸಜ್ಜಾಗಿದೆ. ನಗರದ ಮಾದಾರ ಚನ್ನಯ್ಯ ಮಠದ ಸಮೀಪವಿರುವ ವಿಶಾಲವಾದ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಲಕ್ಷಾಂತರ ಅಭಿಮಾನಿಗಳು ಈ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ. ಅಭಿಮಾನೋತ್ಸವದ ಹಿನ್ನೆಲೆಯಲ್ಲಿ ಇಡೀ ಚಿತ್ರದುರ್ಗ ನಗರ ಕೇಸರಿಮಯವಾಗಿದ್ದು, ಎಲ್ಲೆಡೆ ಬಿಎಸ್ವೈ, ಅಮಿತ್ ಶಾ ಮತ್ತು ಪ್ರಧಾನಿ ಮೋದಿ…