ಬೀಡಿ, ಸಿಗರೇಟ್ ವಿಚಾರಕ್ಕೆ ಜೈಲಲ್ಲೇ ಡಿಶುಂ ಡಿಶುಂ: ಸಿಬ್ಬಂದಿ ಮೇಲೆ ಕೈದಿಗಳ ಅಟ್ಯಾಕ್
ಬಳ್ಳಾರಿ, ಏಪ್ರಿಲ್ 08: ಜೈಲು ಎಂದರೆ ಮಾಡಿದ ತಪ್ಪಿಗೆ ಅಪರಾಧಿಗಳು ಶಿಕ್ಷೆಯ ಅವಧಿಯನ್ನು ಕಳೆಯಬೇಕಾದ ಮತ್ತು ತಮ್ಮನ್ನು ತಾವು ತಿದ್ದುಕೊಳ್ಳಬೇಕಾದ ಜಾಗ. ಆದರೆ ಪ್ರಸ್ತುತವಾಗಿ ರಾಜ್ಯದ ಜೈಲುಗಳು ಇವಕ್ಕೆ ತದ್ವಿರುದ್ಧವಾಗಿವೆ. ಮನಃ ಪರಿವರ್ತನೆ ಮಾಡಿಕೊಳ್ಳುವ ಬದಲು ಕೈದಿಗಳು ಹೊರಗಿನಗಿಂತಲೂ ಬಂಧೀಖಾನೆಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಇರೋದು ಕಾರಗೃಹದಲ್ಲಿ ಅನ್ನೋದು ಒಂದನ್ನು ಹೊರತು ಪಡಿಸಿದರೆ ದುಡ್ಡು ಕೊಟ್ಟರೆ ಏನು ಬೇಕಾದರೂ ಇಲ್ಲಿ ಸಿಗುತ್ತೆ ಎಂಬ ಸ್ಥಿತಿ ಇದೆ. ರಾಜಾತಿಥ್ಯ ಪ್ರಕರಣಗಳ ಬಗ್ಗೆ ಸಾಲು ಸಾಲು ವರದಿಯಾಗುತ್ತಿದ್ದರೂ, ಕೈದಿಗಳ ಪುಂಡಾಟಕ್ಕೆ…