ಶಾರುಖ್ ಖಾನ್ ಅಲಭ್ಯತೆ; ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರವೇ ಡಿಲೀಟ್
ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ, 2026ರ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಜೈಲರ್ 2’ (Jailer 2) ಸದ್ಯ ಭಾರಿ ಚರ್ಚೆಯಲ್ಲಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಸೀಕ್ವೆಲ್‌ನಲ್ಲಿ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ಬಳಿಕ ಕೇಳಿಬಂದ ಮಾಹಿತಿ ಪ್ರಕಾರ, ಶಾರುಖ್ ಅವರು ಈ ಆಫರ್ ನಿರಾಕರಿಸಿದರು. ಬಳಿಕ ಬೇರೆ ನಟರನ್ನು ಚಿತ್ರತಂಡ ಸಂಪರ್ಕಿಸಿತ್ತು. ಆದರೆ ಈಗ ಆ ಪಾತ್ರವನ್ನೇ ಚಿತ್ರದಿಂದ ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಲಾಗಿದೆ…