ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಬೆಂಗಳೂರು, ಮಾರ್ಚ್ 21: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು (Weather Forecast) ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್ವರೆಗೆ ಒಟ್ಟೂ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್? ಬೀದರ್, ಕಲಬುರ್ಗಿ, ಯಾದಗಿರಿ, ಬಿಜಾಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು,…