ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಪಲ್ಟಿ, ಆರು ಮಂದಿ ಸಾವು, ಹತ್ತಕ್ಕೂ ಹೆಚ್ಚು ಜನರಿಗೆ ಗಾಯ – Kannada News | Delhi Bihar Bus Overturns on Agra Lucknow Expressway, Multiple Dead and Injured
ಉನ್ನಾವೋ, ಮೇ 26: ದೆಹಲಿಯಿಂದ ಬಿಹಾರಕ್ಕೆ ಹೋಗುತ್ತಿದ್ದ ಬಸ್(Bus) ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕನಿಷ್ಠ 6 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಔರಾಸ್ ಪೊಲೀಸ್ ಠಾಣೆ ಪ್ರದೇಶದ ಆಗ್ರಾ ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಲಕ್ನೋದ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಔರಾಸ್ ಎಸ್‌ಒ ಸಂಜೀವ್ ಕುಶ್ವಾಹ ಅವರ ಪ್ರಕಾರ, ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ ಮತ್ತು ಕೈದಿ ಸೇರಿದ್ದಾರೆ….