ಅರಮನೆ ಮೈದಾನದಲ್ಲಿ ರಿಸೆಪ್ಷನ್: ಶ್ರೀಲಂಕಾ ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ – Kannada News | Newly married Bengaluru Ganavi Suicide: Grandmother Alleged On Husband Family
ಬೆಂಗಳೂರು, (ಡಿಸೆಂಬರ್ 26): ಬೆಂಗಳೂರಿನ (Bengaluru) ಪ್ಯಾಲೆಸ್ ಗ್ರೌಂಡ್‌ನಲ್ಲಿ (Palace Ground) ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ಮನೆಗೆ ವಾಪಸ್ಸಾಗಿದ್ದು, ಬಳಿಕ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ (Ramamurthy Nagar) ಈ ಘಟನೆ ನಡೆದಿದ್ದು, 26 ವರ್ಷದ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟು, ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆಂದು ಹೋಗಿದ್ದರು. ಆದ್ರೆ,…