ಗದಗ: ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಗಣರಾಜ್ಯೋತ್ಸವ ದಿನ ಭರ್ಜರಿ ಉಡುಗೊರೆ ನೀಡಿದ ಸರ್ಕಾರ – Kannada News | Republic Day in Gadag: Karnataka Government Rewards Lakkundi Family for Handing Over Gold Treasure
ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಭರ್ಜರಿ ಉಡುಗೊರೆ! ಗದಗ, ಜನವರಿ 26: ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಗಣರಾಜ್ಯೋತ್ಸವದ ದಿನವೇ ರಾಜ್ಯ ಸರ್ಕಾರ ಬಂಪರ್ ಉಡುಗೊರೆ ಘೋಷಿಸಿದೆ. ಗದಗ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ಬಳಿಕ ಸಚಿವ ಎಚ್ಕೆ ಪಾಟೀಲ್ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಜ್ವಲ್ ರಿತ್ತಿ ಕುಟುಂಬಕ್ಕೆ 30×40 ಅಳತೆಯ…