TV9 Kannada News Live: ಲೋಕಸಭೆಯಲ್ಲಿ ‘ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026’ ಮಂಡನೆ, ಕರ್ನಾಟಕ ಸಂಪುಟ ವಿಸ್ತರಣೆ – Kannada News | TV9 Kannada Live Breaking News 27 July 2026 Parliament Monsoon Session, Pralhad Joshi DK Shivakumar, Weather, Rain Latest Updates Online

LIVE NEWS & UPDATES

  • 27 Jul 2026 12:19 PM (IST)

    ಲೋಕಸಭೆಯಲ್ಲಿ ‘ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026’ ಮಂಡನೆ

    ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು (ಜುಲೈ 27, ಸೋಮವಾರ) ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಈ ಕುರಿತು ಶೀಘ್ರವೇ ಕಾನೂನು ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ.

Breaking News Today Live Updates in Kannada: ದೇಶದಲ್ಲಿ ನಿರಂತರವಾಗಿ ವರದಿಯಾಗುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ (Question Paper Leak) ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು (ಜುಲೈ 27, ಸೋಮವಾರ) ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಈ ಕುರಿತು ಶೀಘ್ರವೇ ಕಾನೂನು ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯ ಕಾವು ಏರಿದೆ. ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಯಲಿದೆ. ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕರಾವಳಿ’ (Karavali) ಸಿನಿಮಾ ಪ್ರೇಕ್ಷಕರಿಂದ ಸಿಗುತ್ತಿರುವ ಧನಾತ್ಮಕ ವಿಮರ್ಶೆಗಳೊಂದಿಗೆ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ಮುಂದುವರಿಸಿದ್ದಾರೆ.

Published On – Jul 27,2026 12:18 PM

Source link

ಸಂಸತ್ತಿನಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ-2026’ ಮಂಡನೆ: ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾಗೆ 10 ವರ್ಷ ಜೈಲು, 10 ಕೋಟಿ ರೂ. ದಂಡ – Kannada News | Public Examinations Amendment Bill 2026: Centre Tables New Exam Reform Bill With Stricter Penalties for Question Paper Leak Syndicates

ನವದೆಹಲಿ,ಜುಲೈ 27: ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪರೀಕ್ಷಾ ಅಕ್ರಮ ಮತ್ತು ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಪ್ರಶ್ನೆ ಪತ್ರಿಕೆ ಸೋರಿಕೆ( Question Paper Leak)ಮಾಫಿಯಾವನ್ನು ಮಟ್ಟಹಾಕಲು ಕೇಂದ್ರ ಸರ್ಕಾರ ಪ್ರಮುಖ ಕ್ರಮ ಕೈಗೊಂಡಿತು. ‘ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ ಅನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಮಂಡಿಸಿದರು.

ಮಸೂದೆಯ ಕುರಿತು ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, “ಇದು ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕ ದಿನವಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಕೇಂದ್ರ ಸರ್ಕಾರ ಅತ್ಯಂತ ಕಠಿಣ ಕಾನೂನನ್ನು ತಂದಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಗದ್ದಲ ಎಬ್ಬಿಸದೆ ಚರ್ಚೆಯಲ್ಲಿ ಭಾಗವಹಿಸಬೇಕು” ಎಂದು  ಮನವಿ ಮಾಡಿದ್ದರು.

ಮಸೂದೆಯ ಪ್ರಮುಖ ಕಠಿಣ ನಿಬಂಧನೆಗಳು
ಪರೀಕ್ಷೆಗಳಲ್ಲಿ ಅಕ್ರಮ ಎಸಗುವ ವ್ಯಕ್ತಿಗಳಿಗೆ 5 ರಿಂದ 10 ವರ್ಷಗಳ ಜೈಲು ಶಿಕ್ಷೆ ಹಾಗೂ ಸಂಘಟಿತ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 10 ಕೋಟಿ ರೂ.ವರೆಗೆ ದಂಡ ವಿಧಿಸಲು ತಿದ್ದುಪಡಿ ತರಲಾಯಿತು. ಪತ್ರಿಕೆ ಸೋರಿಕೆಯಲ್ಲಿ ಯಾವುದೇ ಕೋಚಿಂಗ್ ಸೆಂಟರ್‌ಗಳು ಅಥವಾ ತರಬೇತಿ ಸಂಸ್ಥೆಗಳು ಭಾಗಿಯಾಗಿರುವುದು ಸಾಬೀತಾದರೆ ಅವುಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಯಿತು.

ಮತ್ತಷ್ಟು ಓದಿ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು; ಜುಲೈ 27ರಂದು ಲೋಕಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

ಪರೀಕ್ಷೆ ನಡೆಸುವ ಕಂಪನಿಗಳು ತಪ್ಪಿತಸ್ಥರೆಂದು ಕಂಡುಬಂದರೆ ಅವುಗಳನ್ನು 8 ವರ್ಷಗಳ ಕಾಲ ಕಪ್ಪುಪಟ್ಟಿಗೆ ಸೇರಿಸಲಾಗುವುದು ಹಾಗೂ ಕಂಪನಿಯ ಹಿರಿಯ ಆಡಳಿತ ಮಂಡಳಿ ಮತ್ತು ನಿರ್ದೇಶಕರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲು ನಿರ್ಧರಿಸಲಾಯಿತು. ಪ್ರಕರಣಗಳ ತನಿಖೆಯನ್ನು 2 ತಿಂಗಳೊಳಗೆ ಪೂರ್ಣಗೊಳಿಸುವುದು ಹಾಗೂ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ದೈನಂದಿನ ವಿಚಾರಣೆ ನಡೆಸಿ, ಆರೋಪಪಟ್ಟಿ ಸಲ್ಲಿಕೆಯಾದ 3 ತಿಂಗಳೊಳಗೆ ತೀರ್ಪು ನೀಡುವುದನ್ನು ಕಡ್ಡಾಯಗೊಳಿಸಲಾಯಿತು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದ ಕುರಿತು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ವಿರೋಧ ಪಕ್ಷದ ಸಂಸದರು ಸೋಮವಾರ ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು.

ಮಸೂದೆ ಮಂಡನೆಯ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೀಡಿಯೊ ಸಂದೇಶದ ಮೂಲಕ ಪರೀಕ್ಷಾ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಮತ್ತು ಪಾರದರ್ಶಕತೆ ತರಲು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಆರು ಸದಸ್ಯರ ‘ಉನ್ನತಾಧಿಕಾರದ ಕಾರ್ಯಪಡೆ’ ರಚನೆಯನ್ನು ಪ್ರಕಟಿಸಿದರು.

ಇನ್ನೊಂದೆಡೆ, ಸಚಿವರ ರಾಜೀನಾಮೆ ಹಾಗೂ ಪ್ರತಿಭಟನೆಗಳ ನಂತರ ಸೃಷ್ಟಿಯಾದ ರಾಜಕೀಯ ವಾತಾವರಣದ ನಡುವೆ, ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರದ ಈ ಮಸೂದೆಯನ್ನು ಎದುರಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ‘ಇಂಡಿ’ ಒಕ್ಕೂಟದ ನಾಯಕರು ಪ್ರತ್ಯೇಕ ಸಭೆ ನಡೆಸಿ ತಮ್ಮ ಜಂಟಿ ಕಾರ್ಯತಂತ್ರವನ್ನು ರೂಪಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:07 pm, Mon, 27 July 26

Source link

Karnataka Dam Water Level Today: ಆಲಮಟ್ಟಿ ಭರ್ತಿಯತ್ತ; ಏರಿಕೆಯಾಗುತ್ತಿಲ್ಲ ಕೆಆರ್‌ಎಸ್, ಕಬಿನಿ, ಹೇಮಾವತಿ ನೀರಿನ ಮಟ್ಟ – Kannada News | Karnataka Dam Water Level Today July 27: Almatti Near Full Level, Basavasagar Crosses FRL, KRS and Kabini Storage Remains Low

ಬೆಂಗಳೂರು, ಜುಲೈ 27: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ (Karnataka Dam Water Level) ಮಿಶ್ರ ಚಿತ್ರಣ ಕಂಡುಬಂದಿದೆ. ಉತ್ತರ ಕರ್ನಾಟಕದ ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳಲ್ಲಿ ನೀರಿನ ಸಂಗ್ರಹ ಉತ್ತಮವಾಗಿದ್ದು, ಕೃಷ್ಣಾ ನದಿ ಪಾತ್ರದಲ್ಲಿ ಒಳಹರಿವು ಹೆಚ್ಚುತ್ತಿರುವ ಲಕ್ಷಣಗಳಿವೆ. ಮತ್ತೊಂದೆಡೆ, ಕಾವೇರಿ ಜಲಾನಯನ ಪ್ರದೇಶದ ಕೆಆರ್‌ಎಸ್, ಕಬಿನಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ನೀರಿನ ಸಂಗ್ರಹ ಇನ್ನೂ ಕಡಿಮೆಯಾಗಿದೆ.

ಆಲಮಟ್ಟಿ ಡ್ಯಾಂ ಭರ್ತಿಯತ್ತ

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ನೀರಿನ ಮಟ್ಟ: 519.12 ಮೀಟರ್
  • ಒಳ ಹರಿವು: 73,461 ಕ್ಯೂಸೆಕ್
  • ಹೊರ ಹರಿವು: 28,438 ಕ್ಯೂಸೆಕ್

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯ ಭರ್ತಿಯತ್ತ ಸಾಗುತ್ತಿದೆ. ಗರಿಷ್ಠ ಮಟ್ಟ ತಲುಪಲು ಇನ್ನೂ ಕೇವಲ 0.48 ಮೀಟರ್ ಮಾತ್ರ ಬಾಕಿಯಿದೆ. ಜಲಾಶಯಕ್ಕೆ 73 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೆಳಭಾಗದ ನದಿಗೆ 28 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.

ಬಸವಸಾಗರದಲ್ಲಿ ನೀರಿನ ಮಟ್ಟ ಗರಿಷ್ಠಕ್ಕಿಂತ ಹೆಚ್ಚು

  • ಗರಿಷ್ಠ ಮಟ್ಟ: 492.25 ಮೀಟರ್
  • ಇಂದಿನ ಮಟ್ಟ: 492.90 ಮೀಟರ್
  • ಒಳ ಹರಿವು: 31,500 ಕ್ಯೂಸೆಕ್
  • ಹೊರ ಹರಿವು: 6,000 ಕ್ಯೂಸೆಕ್

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯದಲ್ಲಿ ನೀರಿನ ಪ್ರಮಾಣ ಗರಿಷ್ಠ ಮಟ್ಟವನ್ನು ಮೀರಿದೆ. ಜಲಾಶಯಕ್ಕೆ ನಿರಂತರವಾಗಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 6 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.

ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಇನ್ನೂ 100 ಅಡಿಗಿಂತ ಕೆಳಗೆ

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ಮಟ್ಟ: 91.70 ಅಡಿ
  • ಒಳ ಹರಿವು: 2,118 ಕ್ಯೂಸೆಕ್
  • ಹೊರ ಹರಿವು: 1,743 ಕ್ಯೂಸೆಕ್
  • ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಸಂಗ್ರಹ: 16.977 ಟಿಎಂಸಿ

ಕಬಿನಿಯಲ್ಲಿ ಕಳೆದ ವರ್ಷಕ್ಕಿಂತ ಕಡಿಮೆ ಸಂಗ್ರಹ

  • ಇಂದಿನ ನೀರಿನ ಮಟ್ಟ: 74.77 ಅಡಿ
  • ಕಳೆದ ವರ್ಷ ಇದೇ ದಿನ: 83.14 ಅಡಿ
  • ಇಂದಿನ ಸಂಗ್ರಹ: 14.15 ಟಿಎಂಸಿ
  • ಕಳೆದ ವರ್ಷ: 18.95 ಟಿಎಂಸಿ
  • ಒಳ ಹರಿವು: 3,655 ಕ್ಯೂಸೆಕ್
  • ಹೊರ ಹರಿವು: 500 ಕ್ಯೂಸೆಕ್
  • ಕಳೆದ 24 ಗಂಟೆಗಳಲ್ಲಿ ಮಳೆ: 15 ಮಿ.ಮೀ.

ಹೇಮಾವತಿ ಜಲಾಶಯದಲ್ಲೂ ಸಂಗ್ರಹ ಕಡಿಮೆ

  • ಗರಿಷ್ಠ ಮಟ್ಟ: 2922.00 ಅಡಿ
  • ಇಂದಿನ ಮಟ್ಟ: 2905.26 ಅಡಿ
  • ಗರಿಷ್ಠ ಸಾಮರ್ಥ್ಯ: 37.103 ಟಿಎಂಸಿ
  • ಇಂದಿನ ಸಂಗ್ರಹ: 23.248 ಟಿಎಂಸಿ
  • ಒಳ ಹರಿವು: 1,854 ಕ್ಯೂಸೆಕ್
  • ಹೊರ ಹರಿವು: 500 ಕ್ಯೂಸೆಕ್

ಇದನ್ನೂ ಓದಿ: ಕರ್ನಾಟಕದ ಜಲಾಶಯಗಳ ನೀರಿನ ಮಟ್ಟದಲ್ಲಿ 6 ವರ್ಷಗಳಲ್ಲೇ ಎರಡನೇ ಕನಿಷ್ಠ ಸಂಗ್ರಹ! ಕಾವೇರಿ ಕಣಿವೆಯಲ್ಲಿ ಬರದ ಛಾಯೆ

ಒಟ್ಟಾರೆ, ಕೃಷ್ಣಾ ನದಿ ಪಾತ್ರದ ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಆಶಾಭಾವನೆ ಮೂಡಿದೆ. ಆದರೆ ಕಾವೇರಿ ಜಲಾನಯನ ಪ್ರದೇಶದ ಕೆಆರ್‌ಎಸ್, ಕಬಿನಿ ಹಾಗೂ ಹೇಮಾವತಿ ಜಲಾಶಯಗಳು ಇನ್ನೂ ಉತ್ತಮ ಮಳೆಯ ನಿರೀಕ್ಷೆಯಲ್ಲಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದ ಸಂಸದರ ಜೊತೆಗಿನ ಸಭೆಯಲ್ಲಿ ಏನೆಲ್ಲ ಚರ್ಚೆ?: ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಡಿಕೆ ಶಿವಕುಮಾರ್​​ – Kannada News | Karnataka CM DK Shivakumar to Meet State MPs in Delhi Today Over Pending Irrigation Projects and Drought Relief

ಬೆಂಗಳೂರು, ಜು. 27: ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಿರುವ ನಿಟ್ಟಿನಲ್ಲಿ ಕರ್ನಾಟಕದ (Karnataka) ಸಂಸತ್ ಸದಸ್ಯರನ್ನು ಇಂದು ಭೇಟಿ ಮಾಡುತ್ತಿರೋದಾಗಿ ಸಿಎಂ ಡಿಕೆ ಶಿವಕುಮಾರ್ (DK Shivakumar)​​ ತಿಳಿಸಿದ್ದಾರೆ. ತಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು ಎಂದವರು ತಿಳಿಸಿದ್ದಾರೆ.

ಕರ್ನಾಟಕ ಭವನದಲ್ಲಿ ನಡೆಯಲಿರುವ ಸಭೆ

ಸಂಸತ್ ಮುಂಗಾರು ಅಧಿವೇಶನ ಹಿನ್ನೆಲೆ ದೆಹಲಿಯಲ್ಲೇ ಇರುವ ರಾಜ್ಯದ ಸಂಸದರುಗಳ ಜೊತೆಗೆ ಸಂಜೆ 6.30ಕ್ಕೆ ಕರ್ನಾಟಕ ಭವನದಲ್ಲಿ ಸಿಎಂ ಡಿಕೆಶಿ ಸಭೆ ನಡೆಸಲಿದ್ದಾರೆ. ಈ ಸಂಬಂಧ ಕಾಂಗ್ರೆಸ್, ಬಿಜೆಪಿ, JDS ಸಂಸದರಿಗೆ ಮುಖ್ಯಮಂತ್ರಿಗಳು ಆಹ್ವಾನ ನೀಡಿದ್ದು, ರಾಜ್ಯದ ಬಾಕಿ ಉಳಿದಿರುವ ಯೋಜನೆಗಳ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಇದನ್ನೂ ಓದಿ: ಡಿಕೆಶಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಸಭೆ; 12ರಿಂದ 15 ಹೊಸ ಮುಖಗಳಿಗೆ ಮಣೆ?

ಸಚಿವ ಸಂಪುಟ ವಿಸ್ತರಣೆ ಯಾವಾಗ?

ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಸಚಿವ ಸಂಪುಟ ವಿಚಾರವಾಗಿಯೂ ಸಿಎಂ ಪ್ರತಿಕ್ರಿಯೆ ನೀಡಿದ್ದು, ಈ ವಾರದೊಳಗೆ ಕ್ಯಾಬಿನೆಟ್​​ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಅರ್ಚನಾ ಕೊಟ್ಟಿಗೆ ಬಿಗ್ ಬಾಸ್​​ಗೆ ಬರಲಿ’; ವೀಕ್ಷಕರ ಒತ್ತಾಯ – Kannada News | Fans Demand Actress Archana Kottige Entry in Bigg Boss Kannada Season 13 After Viral Interview

ನಟಿ ಅರ್ಚನಾ ಕೊಟ್ಟಿಗೆ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇಷ್ಟು ದಿನ ಅವರ ನಟನೆಯನ್ನು ಮಾತ್ರ ವೀಕ್ಷಕರು ಕಣ್ತುಂಬಿಕೊಂಡಿದ್ದರು. ಆದರೆ ಇತ್ತೀಚೆಗೆ ಅವರ ಸ್ವಭಾವ ಹೇಗೆ ಎಂಬುದನ್ನು ತಿಳಿದುಕೊಳ್ಳುವ ಅವಕಾಶ ಪ್ರೇಕ್ಷಕರಿಗೆ ಸಿಕ್ಕಿತ್ತು. ಅವರು ರಿಯಲ್ ಲೈಫ್​​ನಲ್ಲಿ ಹೇಗೆ ಎಂದು ತಿಳಿದ ಬಳಿಕ ಅವರು ಬಿಗ್ ಬಾಸ್​​ಗೆ (Bigg Boss) ಬರಲೇಬೇಕು ಎಂದು ವೀಕ್ಷಕರು ಒತ್ತಾಯ ಮಾಡುತ್ತಿದ್ದಾರೆ. ಅವರಿಗೆ ಈ ಬಾರಿ ಬಿಗ್ ಬಾಸ್ ಆಫರ್ ಹೋಗುತ್ತಾ ಎನ್ನುವ ಕುತೂಹಲ ಮೂಡಿದೆ.

ಅರ್ಚನಾ ಕೊಟ್ಟಿಗೆ ಅವರು ಮೊದಲು ನಟಿಸಿದ್ದು 2018ರಲ್ಲಿ. ‘ಅರಣ್ಯಕಾಂಡ’ ಅವರ ಮೊದಲ ಸಿನಿಮಾ. ಆ ಬಳಿಕ ‘ವಾಸು ನಾನ್ ಪಕ್ಕ ಕಮರ್ಷಿಯಲ್’, ‘ಡಿಯರ್ ಸತ್ಯ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದರು. ಅವರ ನಟನೆಯ ‘ಎಲ್ಲರ ಕಾಲೆಳೆಯುತ್ತೆ ಕಾಲ’ ಈ ವರ್ಷ ತೆರೆಗೆ ಬಂದಿದೆ. ಕಳೆದ ವರ್ಷ ಅವರ ವಿವಾಹ ಕೂಡ ಆಗಿದೆ. ಈಗ ಅರ್ಚನಾ ಬಿಗ್ ಬಾಸ್​​ಗೆ ಬರುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಅರ್ಚನಾ ಕೊಟ್ಟಿಗೆ ಅವರು ‘ಕೀರ್ತಿ ಇಎನ್​​ಟಿ ಕ್ಲೀನಿಕ್’ ಯೂಟ್ಯೂಬ್​ ಚಾನೆಲ್​ಗೆ ಅತಿಥಿಯಾಗಿ ಆಗಮಿಸಿದ್ದರು. ಅವರ ಜೊತೆ ಅಮೃತಾ ಅಯ್ಯಂಗಾರ್ ಹಾಗೂ ಖುಷಿ ರವಿ ಇದ್ದರು. ಎಲ್ಲರಿಗಿಂತ ಹೆಚ್ಚು ಮನರಂಜನೆಯನ್ನು ಅರ್ಚನಾ ಕೊಟ್ಟಿಗೆ ನೀಡಿದ್ದರು. ಅವರು ಮಾತನಾಡೋ ಶೈಲಿ ನೋಡಿ ಎಲ್ಲರೂ ಅಚ್ಚರಿಗೊಂಡಿದ್ದರು. ಅವರು ಮಾತಿನ ಮೂಲಕವೇ ಸಾಕಷ್ಟು ಮನರಂಜನೆ ನೀಡುತ್ತಾರೆ ಎಂಬ ಸ್ಪಷ್ಟತೆ ವೀಕ್ಷಕರಿಗೆ ಸಿಕ್ಕಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ನಿಂದ ಏಕಕಾಲದಲ್ಲಿ ಶುರುವಾಗಲಿದೆ 6 ಭಾಷೆಗಳ ‘ಬಿಗ್ ಬಾಸ್’ ಹೊಸ ಶೋ

‘ಬಿಗ್ ಬಾಸ್ ಕನ್ನಡ ಸೀಸನ್ 13’ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ ವೇಳೆಗೆ ಶೋ ಆರಂಭ ಆಗಲಿದೆ. ಈ ಬಾರಿ ಸೆಲೆಬ್ರಿಟಿಗಳ ಜೊತೆಗೆ ಜನ ಸಾಮಾನ್ಯರಿಗೂ ಅವಕಾಶ ನೀಡಲಾಗುತ್ತಿದೆ. ಈಗಾಗಲೇ ಈ ಶೋಗೆ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಕಲರ್ಸ್ ಕನ್ನಡ ವಾಹಿನಿಯವರು ಅರ್ಚನಾ ಅವರನ್ನು ಆಯ್ಕೆ ಮಾಡಲಿ ಎಂದು ಬೇಡಿಕೆ ಇಡುತ್ತಿದ್ದಾರೆ. ಅವರು ಬಂದರೆ ಮನರಂಜನೆಯ ರಸದೌತಣ ಸಿಗಲಿದೆ. ಕಳೆದ 12 ಸೀಸನ್​​ಗಳಲ್ಲಿ ಬಿಗ್ ಬಾಸ್​​​ನಲ್ಲಿ ಮಹಿಳೆಯರು ಗೆದ್ದಿದ್ದು ಒಮ್ಮೆ ಮಾತ್ರ. ಅದು ನಟಿ ಶ್ರುತಿ. ಒಂದೊಮ್ಮೆ ಅರ್ಚನಾ ಬಂದರೆ ಅವರಿಗೆ ಗೆಲ್ಲುವ ಅವಕಾಶವೂ ಇದೆ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 11:47 am, Mon, 27 July 26

Source link

Anti-paper leak Bill 2026 Live Video: ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ – Kannada News | New Law Against Exam Leaks: India’s Bill to End Cheating and Boost Transparency

ದೆಹಲಿ, ಜು.27: ದೇಶದಲ್ಲಿ ನಿರಂತರವಾಗಿ ವರದಿಯಾಗುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ (Question Paper Leak) ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು (ಜುಲೈ 27, ಸೋಮವಾರ) ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಕೆಶಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಸಭೆ: 12ರಿಂದ 15 ಹೊಸ ಮುಖಗಳಿಗೆ ಮಣೆ? – Kannada News | DK Shivakumar Cabinet Expansion: Crucial Meeting Today; 12–15 New Faces Likely to Be Inducted?

ನವದೆಹಲಿ, ಜುಲೈ 27: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರೊಂದಿಗೆ ಈ ಕುರಿತು ಮಹತ್ವದ ಸಭೆ ನಡೆಯಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯಲಿದೆ. ಈ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಯತ್ತ ಮುಖ ಮಾಡಿದ್ದರೆ, ಮುಖ್ಯಮಂತ್ರಿಗಳು ದೆಹಲಿಗೆ ತೆರಳುವ ಮುನ್ನ ಸಂತೋಷ್ ಲಾಡ್ ಮತ್ತು ಗಣೇಶ್ ಸೇರಿದಂತೆ ಹಲವು ಶಾಸಕರು ಅವರನ್ನು ಭೇಟಿಯಾಗಿ ತಮ್ಮ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಈ ಬಾರಿ ಸಂಪುಟದಲ್ಲಿ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಸಿಗುವ ಸಾಧ್ಯತೆ ಇದೆ. 20 ಸಚಿವ ಸ್ಥಾನಗಳ ಪೈಕಿ 12ರಿಂದ 15 ಮಂದಿ ಹೊಸಬರು ಸೇರ್ಪಡೆಯಾಗಬಹುದು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

SCO, BRICS, UNGA: ಒಂದೇ ತಿಂಗಳ ಅವಧಿಯಲ್ಲಿ ಮೂರು ಪ್ರಮುಖ ಜಾಗತಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮೋದಿ – Kannada News | Modi’s Global Diplomatic Push: SCO, BRICS, UNGA Summits in One Month

ನವದೆಹಲಿ, ಜುಲೈ 27: ಪ್ರಧಾನಿ ನರೇಂದ್ರ ಮೋದಿ(Narendra Modi) ಒಂದೇ ತಿಂಗಳ ಅವಧಿಯಲ್ಲಿ ಮೂರು ಪ್ರಮುಖ ಜಾಗತಿಕ ಬಹುಪಕ್ಷೀಯ ಶೃಂಗಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಕಿರ್ಗಿಸ್ತಾನ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯೊಂದಿಗೆ ಆರಂಭವಾಗುವ ಈ ರಾಜತಾಂತ್ರಿಕ ಪ್ರಯಾಣವು, ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ (BRICS) ಶೃಂಗಸಭೆಯ ಮೂಲಕ ಸಾಗಿ, ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ (UNGA) ಭಾಷಣ ಮಾಡುವ ಮೂಲಕ ಮುಕ್ತಾಯಗೊಳ್ಳಲಿದೆ.

SCO ಶೃಂಗಸಭೆ ಆಗಸ್ಟ್ 31 – ಸೆಪ್ಟೆಂಬರ್ 1, ಕಿರ್ಗಿಸ್ತಾನ್
ಮ್ಯಾರಥಾನ್ ರಾಜತಾಂತ್ರಿಕ ಕ್ಯಾಲೆಂಡರ್ ಕಿರ್ಗಿಸ್ತಾನ್‌ನ ಬಿಷ್ಕೆಕ್‌ನಲ್ಲಿ ನಡೆಯುವ ಎಸ್‌ಸಿಒ ಶೃಂಗಸಭೆಯೊಂದಿಗೆ ಪ್ರಾರಂಭವಾಗುತ್ತದೆ. ಚೀನಾ, ರಷ್ಯಾ, ಪಾಕಿಸ್ತಾನ ಹಾಗೂ ಯುರೇಷಿಯನ್ ರಾಷ್ಟ್ರಗಳನ್ನೊಳಗೊಂಡ ಈ ವೇದಿಕೆಯಲ್ಲಿ ಪ್ರಾದೇಶಿಕ ಭದ್ರತೆ, ಭಯೋತ್ಪಾದನೆ ತಡೆ ಹಾಗೂ ಇಂಧನ ಸಹಕಾರದ ಕುರಿತು ಚರ್ಚೆಗಳು ನಡೆಯಲಿವೆ. ಚೀನಾ ಮತ್ತು ಪಾಕಿಸ್ತಾನದಂತಹ ಸಂಕೀರ್ಣ ಸಂಬಂಧ ಹೊಂದಿರುವ ರಾಷ್ಟ್ರಗಳ ನಾಯಕರನ್ನು ಒಂದೇ ವೇದಿಕೆಯಲ್ಲಿ ಭೇಟಿಯಾಗಲು ಇದು ಭಾರತಕ್ಕೆ ಅವಕಾಶ ಕಲ್ಪಿಸಲಿದೆ.

18ನೇ ಬ್ರಿಕ್ಸ್ ಶೃಂಗಸಭೆ (ಸೆಪ್ಟೆಂಬರ್ 12 – 13, ನವದೆಹಲಿ)

ಭಾರತವು ಈ ವರ್ಷದ ಅಧ್ಯಕ್ಷತೆಯ ಭಾಗವಾಗಿ ರಾಜಧಾನಿ ನವದೆಹಲಿಯಲ್ಲಿ 18ನೇ ಬ್ರಿಕ್ಸ್ (BRICS) ಶೃಂಗಸಭೆಯನ್ನು ಆಯೋಜಿಸುತ್ತಿದೆ. ಈ ಸಭೆಯಲ್ಲಿ ಜಾಗತಿಕ ದಕ್ಷಿಣದ ಕಾಳಜಿಗಳು, ಪೂರೈಕೆ ಸರಪಳಿ ಸುಧಾರಣೆ ಹಾಗೂ ಡಿಜಿಟಲ್ ತಂತ್ರಜ್ಞಾನದ ಕುರಿತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ.

ವಿಶ್ವಸಂಸ್ಥೆಯ 81ನೇ ಮಹಾಸಭೆ (ಸೆಪ್ಟೆಂಬರ್, ನ್ಯೂಯಾರ್ಕ್)
ಅಂತಿಮ ಹಂತದಲ್ಲಿ ಪ್ರಧಾನಿ ಮೋದಿ ನ್ಯೂಯಾರ್ಕ್‌ಗೆ ತೆರಳಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಯುಎನ್‌ಎಸ್‌ಸಿ (UNSC) ಸುಧಾರಣೆಗಳನ್ನು ಪ್ರತಿಪಾದಿಸುವುದರ ಜೊತೆಗೆ 2028-29ರ ಅವಧಿಗೆ ಭದ್ರತಾ ಮಂಡಳಿಯಲ್ಲಿ ಭಾರತದ ಶಾಶ್ವತವಲ್ಲದ ಸದಸ್ಯತ್ವದ ಅಭಿಯಾನಕ್ಕೆ ಬೆಂಬಲ ಕೋರಲಿದ್ದಾರೆ.

ಮತ್ತಷ್ಟು ಓದಿ: “ಥ್ಯಾಂಕ್ಯೂ ಫ್ರೆಂಡ್ಸ್”: ಮತ್ತೊಂದು ಮಹತ್ವದ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಹೆಚ್ಚುವರಿ ಜಾಗತಿಕ ರಾಜತಾಂತ್ರಿಕ ಸುದ್ದಿಗಳು
ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ವರ್ಷಾಂತ್ಯಕ್ಕೆ ನಡೆಯಲಿರುವ ಜಿ20 ನಾಯಕರ ಶೃಂಗಸಭೆಗೆ ಸಂಬಂಧಿಸಿದಂತೆ ಶೇರ್ಪಾ ಹಂತದ ಪ್ರಾಥಮಿಕ ಸಭೆಗಳು ಚುರುಕುಗೊಂಡಿದ್ದು, ಆಫ್ರಿಕನ್ ಯೂನಿಯನ್‌ ಅನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಬಲಪಡಿಸುವ ಕುರಿತು ಭಾರತ ಸಕ್ರಿಯ ಬೆಂಬಲ ನೀಡುತ್ತಿದೆ. ಯುರೋಪಿಯನ್ ಯೂನಿಯನ್ ಹಾಗೂ ಭಾರತದ ನಡುವೆ ತಡೆಹಿಡಿಯಲಾಗಿದ್ದ ಉಚಿತ ವ್ಯಾಪಾರ ಒಪ್ಪಂದದ ಮುಂದಿನ ಹಂತದ ಮಾತುಕತೆಗಳು ನವದೆಹಲಿಯಲ್ಲಿ ಪುನರಾರಂಭಗೊಂಡಿದ್ದು, ಪೂರೈಕೆ ಸರಪಳಿ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:30 am, Mon, 27 July 26

Source link

Gold Rates 27 July: ಚಿನ್ನದ ಬೆಲೆ ಗ್ರಾಮ್​ಗೆ 85 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 27th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 27: ವಾರಾಂತ್ಯದಲ್ಲಿ ಮತ್ತೆ ಶುರುವಾದ ಚಿನ್ನದ ಬೆಲೆ (Gold Price) ಏರಿಕೆಯ ಟ್ರೆಂಡ್ ಸೋಮವಾರವೂ ಮುಂದುವರಿದಿದೆ. ಇಂದು ಬಂಗಾರದ ದರ 85 ರೂಗಳಷ್ಟು ಏರಿಕೆಯಾಗಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಕೆಯಾಗಿದೆ. ಇನ್ನೂ ಕೆಲವೆಡೆ ಕಡಿಮೆಗೊಂಡಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇವತ್ತು ಯಾವುದೇ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,33,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 27ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,586 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,370 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,939 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,586 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,370 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,370 ರೂ
  • ಚೆನ್ನೈ: 13,370 ರೂ
  • ಮುಂಬೈ: 13,370 ರೂ
  • ದೆಹಲಿ: 13,385 ರೂ
  • ಕೋಲ್ಕತಾ: 13,370 ರೂ
  • ಕೇರಳ: 13,370 ರೂ
  • ಅಹ್ಮದಾಬಾದ್: 13,375 ರೂ
  • ಜೈಪುರ್: 13,385 ರೂ
  • ಲಕ್ನೋ: 13,385 ರೂ
  • ಭುವನೇಶ್ವರ್: 13,370 ರೂ

ಇದನ್ನೂ ಓದಿ: ಸಿಇಒರಂಥ ಸಿಇಒರನ್ನೇ ದಾಸರನ್ನಾಗಿ ಮಾಡಿಕೊಳ್ಳುತ್ತೆ ರೀಲ್ಸ್… ಬೇಸ್ತುಬಿದ್ದ ಸ್ಯಾಮ್ ಟಿಕ್​ಟಾಕ್ ಆ್ಯಪನ್ನೇ ಡಿಲೀಟ್ ಮಾಡಿದ ಕಥೆ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 552 ರಿಂಗಿಟ್ (13,010 ರುಪಾಯಿ)
  • ದುಬೈ: 488.50 ಡಿರಾಮ್ (12,803 ರುಪಾಯಿ)
  • ಅಮೆರಿಕ: 133.50 ಡಾಲರ್ (12,851 ರುಪಾಯಿ)
  • ಸಿಂಗಾಪುರ: 179.90 ಸಿಂಗಾಪುರ್ ಡಾಲರ್ (13,424 ರುಪಾಯಿ)
  • ಕತಾರ್: 489.50 ಕತಾರಿ ರಿಯಾಲ್ (12,924 ರೂ)
  • ಸೌದಿ ಅರೇಬಿಯಾ: 503 ಸೌದಿ ರಿಯಾಲ್ (12,898 ರುಪಾಯಿ)
  • ಓಮನ್: 51.85 ಒಮಾನಿ ರಿಯಾಲ್ (12,962 ರುಪಾಯಿ)
  • ಕುವೇತ್: 40.98 ಕುವೇತಿ ದಿನಾರ್ (12,816 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 245 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 245 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮಂಡ್ಯ: ಹೈವೇಗೆ ಉರುಳಿ ಬಿದ್ದ ಬಾಯ್ಲರ್ ಟ್ಯಾಂಕ್, ಮೈಸೂರು – ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್ – Kannada News | Mandya Highway Blocked After Massive Boiler Tank Falls on Mysuru Channarayapatna State Highway

ಮಂಡ್ಯ, ಜುಲೈ 27: ಮಂಡ್ಯ ಜಿಲ್ಲೆಯ ಮುರುಕನಹಳ್ಳಿ ಸಮೀಪ ಮೈಸೂರು-ಚನ್ನರಾಯಪಟ್ಟಣ ಹೆದ್ದಾರಿಯಲ್ಲಿ ಬೃಹತ್ ಬಾಯ್ಲರ್ ಟ್ಯಾಂಕ್ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ರಾಜಸ್ಥಾನದಿಂದ ನಂಜನಗೂಡು ಕೈಗಾರಿಕಾ ಪ್ರದೇಶಕ್ಕೆ ಸಾಗಿಸಲಾಗುತ್ತಿದ್ದ ಈ ಬಾಯ್ಲರ್ ಟ್ಯಾಂಕ್ ಹೊತ್ತ ಲಾರಿಯು ಮರಕ್ಕೆ ತಗುಲಿ ರಸ್ತೆಗೆ ಉರುಳಿಬಿದ್ದಿದೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಹೆದ್ದಾರಿಯು ಸಂಪೂರ್ಣವಾಗಿ ಬಂದ್ ಆಗಿದ್ದು, ಸ್ಥಳದಲ್ಲಿ ವಾಹನಗಳ ದೊಡ್ಡ ಸರತಿ ಸಾಲು ಉಂಟಾಗಿದೆ.

ಘಟನೆಯ ನಂತರ ವಾಹನ ಸವಾರರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ರಸ್ತೆಯ ಮಧ್ಯೆ ನಡುರಸ್ತೆಯಲ್ಲೇ ಉರುಳಿಬಿದ್ದಿರುವ ಬಾಯ್ಲರ್ ಟ್ಯಾಂಕ್ ಅನ್ನು ತೆರವುಗೊಳಿಸಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಸದ್ಯಕ್ಕೆ, ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮಂಡ್ಯ ಪೊಲೀಸರು ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ. ಬೃಹತ್ ಟ್ಯಾಂಕ್ ತೆರವುಗೊಳಿಸಲು ವಿಶೇಷ ಉಪಕರಣಗಳ ಅಗತ್ಯವಿದ್ದು, ಕಾರ್ಯಾಚರಣೆ ಪೂರ್ಣಗೊಳ್ಳಲು ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ. ಟ್ಯಾಂಕ್ ಸಂಪೂರ್ಣವಾಗಿ ತೆರವುಗೊಳ್ಳುವವರೆಗೆ ಈ ಮಾರ್ಗದಲ್ಲಿ ಸಂಚಾರಕ್ಕೆ ತೊಂದರೆಯಾಗುವ ನಿರೀಕ್ಷೆಯಿದ್ದು, ರಸ್ತೆ ಸುಗಮ ಸಂಚಾರಕ್ಕಾಗಿ ಪ್ರಯತ್ನಗಳು ಮುಂದುವರಿದಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version