Headlines

ವಿಜಯ ಹಝಾರೆ ಟೂರ್ನಿಯ ಸೆಮಿ ಫೈನಲ್ ವೇಳಾಪಟ್ಟಿ ಪ್ರಕಟ

ವಿಜಯ ಹಝಾರೆ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ತೃತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 4 ತಂಡಗಳು. ಈ ನಾಲ್ಕು ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ… ಜನವರಿ 15 ರಂದು ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಮ್ಯಾಚ್ ಶುರುವಾಗುವುದು…

Read More

ಉಜ್ವಲ ಗ್ಯಾಸ್ ಯೋಜನೆಯಲ್ಲಿ ಸಬ್ಸಿಡಿಯುಕ್ತ ಸಿಲಿಂಡರ್ ಸಂಖ್ಯೆ ಕಡಿಮೆ ಮಾಡಲು ನಿಜವಾದ ಕಾರಣ ಇದಾ? – Kannada News

ನವದೆಹಲಿ, ಜೂನ್ 9: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY- PM Ujjwala Yojana) ಅಡಿಯಲ್ಲಿ ಫಲಾನುಭವಿಗಳಿಗೆ ಸಿಗುತ್ತಿದ್ದ ಸಬ್ಸಿಡಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸಂಖ್ಯೆಯನ್ನು ಕಡಿತಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರಬಲ ಕಾರಣವೊಂದು ಇದೆ ಎಂದು ಹೇಳಲಾಗುತ್ತಿದೆ. ಬಡವರಿಗೆಂದು ಇರುವ ಈ ಸ್ಕೀಮ್ ಅನ್ನು ಕೆಲ ದುರುಳರು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಅದಕ್ಕೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಿಎನ್​ಎನ್ ನ್ಯೂಸ್18 ವಾಹಿನಿ ವರದಿ ಮಾಡಿದೆ. ಪಿಎಂ ಉಜ್ವಲ ಯೋಜನೆಯಲ್ಲಿ…

Read More

Train Fare Hike: ಇಂದಿನಿಂದ ರೈಲು ಪ್ರಯಾಣ ದುಬಾರಿ, ಹೊಸ ಟಿಕೆಟ್ ದರಗಳ ಕುರಿತು ಇಲ್ಲಿದೆ ಮಾಹಿತಿ – Kannada News | New Train Fares Kick In: What Passengers Need to Know

ನವದೆಹಲಿ, ಡಿಸೆಂಬರ್ 26: ದೇಶಾದ್ಯಂತ ಇಂದಿನಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆ ಪ್ರಯಾಣ ದರ ಏರಿಕೆ ಮಾಡಲಾಗಿದೆ. ಈ ಮೂಲಕ ರೈಲು(Train) ಪ್ರಯಾಣ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುವಂತಾಗಿದ್ದು ರೈಲು ಪ್ರಯಾಣ ದುಬಾರಿಯಾಗಲಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ಗೆ 10 ರೂ. ಹೆಚ್ಚಳ ಮಾಡಲಾಗಿದೆ. ಡಿಸೆಂಬರ್ 21 ರಂದು ಸಚಿವಾಲಯವು ಪ್ರಯಾಣಿಕರ ದರದಲ್ಲಿ ಹೆಚ್ಚಳವನ್ನು ಘೋಷಿಸಿದ್ದು, ಇದು ಡಿಸೆಂಬರ್ 26 ರಿಂದ ಜಾರಿಗೆ…

Read More

ಹೈವೇಯಲ್ಲಿ ಸಿಸಿಟಿವಿ ಹಾಕಿ ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್​ – Kannada News | Punjab Man Accused of Sharing Military Movement Footage Across Border

ಪಠಾಣ್‌ಕೋಟ್, ಮೇ 22: ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯಲ್ಲಿ ಹಾದುಹೋಗುವ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳನ್ನು ಲೈವ್ ಆಗಿ ಮೇಲ್ವಿಚಾರಣೆ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಮತ್ತು…

Read More

Chanakya Niti: ಜೀವನದ ಈ ಪ್ರಮುಖ ವಿಷಯಗಳ ಬಗ್ಗೆ ಎಂದಿಗೂ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಜೀವನದಲ್ಲಿ ತಾಳ್ಮೆ ಎನ್ನುವಂತಹದ್ದು ತುಂಬಾನೇ ಮುಖ್ಯ. ಈ ತಾಳ್ಮೆ ಮತ್ತು ಸಹನೆ ಯಶಸ್ವಿ ಜೀವನಕ್ಕೆ ದಾರಿಮಾಡಿಕೊಡುತ್ತದೆ. ಹೀಗಿದ್ದರೂ ಸಹ ಅನೇಕರು ತಾಳ್ಮೆಯನ್ನು ಕಳೆದುಕೊಂಡು ಆತುರದ ನಿರ್ಧಾರಗಳನ್ನು (hasty decisions) ತೆಗೆದುಕೊಳ್ಳುತ್ತಾರೆ. ಈ ಆತುರದ ನಿರ್ಧಾರಗಳಿಂದ ಒಳ್ಳೆಯದಕ್ಕಿಂತ ಕೆಟ್ಟದ್ದು ಸಂಭವಿಸುವುದೇ ಹೆಚ್ಚು. ಹಾಗಾಗಿ ಯಾವುದೇ ವಿಚಾರದಲ್ಲೂ ಸಹ ಆತುರ ಪಡಬಾರದು ಎಂದು ಹಿರಿಯರು ಕಿವಿ ಮಾತು ಹೇಳುವುದು. ಅದರಲ್ಲೂ ಯಶಸ್ವಿ, ಸಮೃದ್ಧ ಜೀವನವನ್ನು ಬಯಸುವವರು ಜೀವನಕ್ಕೆ ಸಂಬಂಧಿಸಿದ ಈ ಐದು ವಿಚಾರಗಳ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗಲೂ ಆತುರ…

Read More

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಎಲ್‌ಪಿಜಿ ಬೆನ್ನಲ್ಲೇ ಈಗ ಡಾಂಬರು ಅಭಾವ, ಸ್ಥಗಿತಗೊಂಡ ರಸ್ತೆ ಕಾಮಗಾರಿಗಳು!

ಕಾರವಾರ, ಏಪ್ರಿಲ್ 4: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸತತ ಯುದ್ಧದ ಭೀತಿಯು ಇದೀಗ ಭಾರತದ (India) ಆರ್ಥಿಕತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಬಾರೀ ಹೊಡೆತ ನೀಡುತ್ತಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿ ಬಂದ್ ಆಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಮಾತ್ರವಲ್ಲದೆ ಕಚ್ಚಾ ಡಾಂಬರು ಬಿಟುಮಿನ್ (Bitumen) ಪೂರೈಕೆಯಲ್ಲೂ ತೀವ್ರ ವ್ಯತ್ಯಯ ಉಂಟಾಗಿದೆ. ಇದರೊಂದಿಗೆ, ಎಲ್​​ಪಿಜಿ ಹಾಗೂ ಆಟೋ ಗ್ಯಾಸ್ ಕೊರತೆ ಜತೆಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಬಿಕೋ ಎನ್ನುತ್ತಿದೆ ಕಾರವಾರ…

Read More

ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?

ಚಿತ್ರದುರ್ಗ, ಮಾರ್ಚ್​ 10: ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಯೋರ್ವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ. ಮಗುವಿನ ಆರೋಗ್ಯದ ಮಾಹಿತಿ ಕೂಡ ತಮಗೆ ನೀಡಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ…

Read More

ಪ್ರೀತಿಸಿ ಮದುವೆಯಾದ ಎಂಜಿನಿಯರ್ ದಾರುಣ ಅಂತ್ಯ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ? – Kannada News | Bengaluru Software Engineer’s Tragic End: Dowry Harassment Alleged in Death Case

ಬೆಂಗಳೂರು, ಏಪ್ರಿಲ್​​ 23: ಪತಿ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಸಾಫ್ಟ್‌ವೇರ್ ಎಂಜಿನಿಯರ್ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಆರೋಪ ಬೆಂಗಳೂರಲ್ಲಿ (Bengaluru) ಕೇಳಿಬಂದಿದೆ. ಭುವನೇಶ್ವರಿ (29) ಮೃತ ವಿವಾಹಿತೆಯಾಗಿದ್ದು, ತಾಯಿ ಮತ್ತು 18 ತಿಂಗಳ ಮಗುವಿನೊಂದಿಗೆ ಅವರು ವಾಸವಿದ್ದರು ಎನ್ನಲಾಗಿದೆ. ನಿರಂತರವಾಗಿ ಕರೆ ಮಾಡಿದರೂ ಭುವನೇಶ್ವರಿ ಸಂಪರ್ಕಕ್ಕೆ ಸಿಗದ ಕಾರಣ ಸ್ನೇಹಿತೆ ಅನುಮಾನಗೊಂಡು ವಿಷಯವನ್ನು ಅವರ ತಾಯಿಗೆ ತಿಳಿಸಿದ್ದಾರೆ. ಬಳಿಕ ತಾಯಿ ಹಾಗೂ ನೆರೆಹೊರೆಯವರು ಪರಿಶೀಲಿಸಿದಾಗ ಭುವನೇಶ್ವರಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಸೋಮವಾರವೇ ನಡೆದಿರುವ ಘಟನೆ ತಡವಾಗಿ…

Read More

ರಾಮನವಮಿ, ಅಯೋಧ್ಯೆಯಲ್ಲಿ ಬಾಲರಾಮನ ಹಣೆಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 27: ಈ ವರ್ಷ, ಅಯೋಧ್ಯೆ(Ayodhya)ಯಲ್ಲಿ ರಾಮ ನವಮಿ ಕೇವಲ ಧಾರ್ಮಿಕ ಹಬ್ಬವಾಗಿರಲಿಲ್ಲ, ಜನರು ವರ್ಷಗಳ ಕಾಲ ನೆನಪಿನಲ್ಲಿಟ್ಟುಕೊಳ್ಳುವ ಕ್ಷಣವಾಗಿದೆ. ದೇವಾಲಯ ಸಂಕೀರ್ಣದಾದ್ಯಂತ ಜೈ ಶ್ರೀ ರಾಮ್ ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿದ್ದಂತೆ, ಬಾಲ ರಾಮನ ಹಣೆಗೆ ಸೂರ್ಯನ ರಶ್ಮಿ ತಿಲಕ ಇಟ್ಟಿತ್ತು. ಈ ಕ್ಷಣವನ್ನು ಪ್ರಧಾನಿ ಮೋದಿ ಕಣ್ತುಂಬಿಕೊಂಡರು. ಈ ಸಂಪೂರ್ಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ತಿಂಗಳುಗಳ ಸಂಶೋಧನೆ ಬೇಕಾಯಿತು. ಇದನ್ನು ರೂರ್ಕಿಯಲ್ಲಿರುವ ಕೇಂದ್ರ ಕಟ್ಟಡ ಸಂಶೋಧನಾ ಸಂಸ್ಥೆ (ಸಿಬಿಆರ್‌ಐ) ಮತ್ತು ಬೆಂಗಳೂರಿನ ತಜ್ಞರು ಜಂಟಿಯಾಗಿ ಅಭಿವೃದ್ಧಿಪಡಿಸಿದ್ದಾರೆ….

Read More

Video: ರೈಲಿನಿಂದ ಮಗು ಬಿದ್ದೇಬಿಡ್ತು, ಚೈನ್ ಎಳೆದರೂ ನಿಲ್ಲದ ರೈಲು, ಅಸಹಾಯಕಳಾಗಿ ಕಣ್ಣೀರಿಟ್ಟ ತಾಯಿ – Kannada News | Child Falls from Train, Emergency Chain Fails to Halt Service on Jalpaiguri Route

ಕೋಲ್ಕತ್ತಾ, ಏಪ್ರಿಲ್ 27: ಕೈಜಾರಿ ಮಗು ರೈಲಿನಿಂದ ಬಿದ್ದೇ ಬಿಟ್ಟಿತ್ತು, ರೈಲಿನ ತುರ್ತು ಸರಪಳಿಯನ್ನು ಎಳೆದರೂ ಕೂಡ ರೈಲು ನಿಲ್ಲದೆ ಚಲಿಸುತ್ತಲೇ ಇದ್ದ ಘಟನೆ ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಸಂಭವಿಸಿದೆ. ರೈಲಿನಿಂದ ಮಗು ಕೆಳಕ್ಕೆ ಬಿದ್ದ ತಕ್ಷಣವೇ ಗಾಬರಿಗೊಂಡ ತಾಯಿ, ಮಗುವನ್ನು ರಕ್ಷಿಸಲು ರೈಲನ್ನು ನಿಲ್ಲಿಸಲು ತುರ್ತು ಸರಪಳಿಯನ್ನು ಎಳೆದಿದ್ದಾರೆ. ಆದರೆ, ರೈಲು ನಿಲ್ಲಲೇ ಇಲ್ಲ. ಆಕೆಯ ಆಕ್ರಂದನ ಕಂಡು ಬೋಗಿಯಲ್ಲಿದ್ದ ಇತರ ಪ್ರಯಾಣಿಕರೂ ಸಹಕರಿಸಿ ಪದೇ ಪದೇ ಸರಪಳಿಯನ್ನು ಎಳೆದರೂ…

Read More