ಇದು ಬಾಂಗ್ಲಾದೇಶದ 2ನೇ ವಿಮೋಚನೆ: 2024ರ ದಂಗೆಯನ್ನು ಹೊಗಳಿದ ಬಿಎನ್ಪಿ ನಾಯಕ ತಾರಿಖ್ ರಹಮಾನ್ – Kannada News | Ex Bangla PM Khaleda Zia’s son Tarique Rahman describes 2024 uprising as liberation
ಬಾಂಗ್ಲಾ ಹಂಗಾಮಿ ಪಿಎಂ ಜೊತೆ ತಾರಿಖ್ ರಹಮಾನ್ ಢಾಕಾ, ಡಿಸೆಂಬರ್ 25: ಹದಿನೇಳು ವರ್ಷದ ಹಿಂದೆ ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡು ಬಾಂಗ್ಲಾದೇಶ ಬಿಟ್ಟು ಹೊರದೇಶಕ್ಕೆ ಹೋಗಿದ್ದ ತಾರಿಖ್ ರಹಮಾನ್ ಇದೀಗ ತವರಿಗೆ ವಾಪಸ್ ಬಂದಿದ್ದು, ಚುನಾವಣೆಗೆ ರಹಕಹಳೆಗಳನ್ನು ಮೊಳಗಿಸುತ್ತಿದ್ದಾರೆ. 2024ರಲ್ಲಿ ಶೇಖ್ ಹಸೀನಾ (Sheikh Hasina) ಸರ್ಕಾರ ಪತನಗೊಳ್ಳಲು ಕಾರಣವಾದ ವಿದ್ಯಾರ್ಥಿ ನೇತೃತ್ವದ ಹೋರಾಟ ಹಾಗೂ ದಂಗೆಗಳನ್ನು ತಾರಿಖ್ ರಹಮಾನ್ (Tarique Rahman) ಹೊಗಳಿದ್ಧಾರೆ. ಮಾಜಿ ಬಾಂಗ್ಲಾ ಪ್ರಧಾನಿ ಖಾಲಿದಾ ಜಿಯಾ (Khaleda Zia) ಅವರ ಮಗನಾದ…